ಬೆಂಗಳೂರು: ರೇಷನ್ ನಲ್ಲಿ ಹಣ ನೀಡುವ ಬದಲು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿದಾರರಿಗೆ ರೇಷನ್ ನಲ್ಲಿ ಹಣ ನೀಡುವ ಬದಲು ಅಡುಗೆ ಎಣ್ಣೆ, ಸಕ್ಕರೆ, ಬೇಳೆ ನೀಡುವ ಚಿಂತನೆ ನಡೆಸಿದ್ದು, ಪಡಿತರ ಚೀಟಿದಾರರಿಗೆ ಬಾಕಿ ಇರುವ ಹಣವನ್ನು ವಾರದಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ …
Read More »ವಕ್ಫ್ ಆಸ್ತಿ ವಿವಾದ: ನ.25 ರಿಂದ ಡಿ.25 ರವರೆಗೆ ರಾಜ್ಯಾದ್ಯಂತ ಜನಾಂದೋಲನಕ್ಕೆ ಯತ್ನಾಳ ಕರೆ
ಮೈಸೂರು: ವಕ್ಫ್ ಆಸ್ತಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಜನಾಂದೋಲನಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ. ಇಂದು ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಈ ರೆಬೆಲ್ ಟೀಂ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಕ್ಫ್ನವರು ವಿಧಾನಸೌಧವು ನಮ್ಮದೇ, ಮೆಜೆಸ್ಟಿಕ್ ಸಹ ನಮ್ಮದೇ. ಅಲ್ಲದೇ ಹೊಯ್ಸಳರ ಕಾಲದ ದೇವಾಲಯವು ನಮ್ಮದೇ ಅನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ಡಿ.15 ರವರೆಗೆ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ್
ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ ರೂ 8,682 ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, …
Read More »ಭಾರತದಿಂದ ನೈಜೀರಿಯಾಕ್ಕೆ 15 ಟನ್ ಗಳಷ್ಟು ಮಾನವೀಯ ನೆರವು
ನವದೆಹಲಿ: ನೂರಾರು ಜನರ ಸಾವಿಗೆ ಕಾರಣವಾದ ಭೀಕರ ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು ಪಶ್ಚಿಮ ಆಫ್ರಿಕಾದ ದೇಶವಾದ ನೈಜೀರಿಯಾಕ್ಕೆ ಭಾರತ 15 ಟನ್ಗಳಷ್ಟು ಮಾನವೀಯ ನೆರವನ್ನು ಕಳುಹಿಸಿಕೊಟ್ಟಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೈಜೀರಿಯಾದಲ್ಲಿ ಸಂಭವಿಸಿದ ಪ್ರವಾಹದಿಂದ ಸಂತ್ರಸ್ತರಾದವರಿಗೆ ಸಹಾಯ ನೀಡಲು ಭಾರತ 15 ಟನ್ಗಳ ನೆರವನ್ನು ರವಾನಿಸಿದೆ. ಮುಂದಿನ ದಿನಗಳಲ್ಲಿ 60 ಟನ್ಗಳ ನೆರವನ್ನು ಕಳುಹಿಸಲಾಗುವುದು. ಇದರಲ್ಲಿ ಆಹಾರ, ಮಲಗುವ ಚಾಪೆಗಳು, ಹೊದಿಕೆಗಳು …
Read More »ಬಗರ್ ಹುಕುಂ ಅರ್ಜಿಗಳನ್ನು ನ.25 ರೊಳಗೆ ತೆರವುಗೊಳಿಸಲು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು: ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನ.25ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಖಡಕ್ ಸೂಚನೆ ನೀಡಿದ್ದಾರೆ. ಬಗರ್ ಹುಕುಂ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ತಹಶೀಲ್ದಾರ್ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬಗರ್ ಹುಕುಂ ಬಡವರ ಕೆಲಸ, ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು …
Read More »ಬೆಂಬಲ ಬೆಲೆ ಯೋಜನೆಯಡಿ ಶೀಘ್ರ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ತೀರ್ಮಾನ: ಸಚಿವ ಬೋಸರಾಜು
ಬೆಂಗಳೂರು: ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜನವರಿ 01- 2025 ರಂದು ಕರ್ನಾಟಕದಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ ತುಂಗಭದ್ರಾ ಅಚ್ಚುಕಟ್ಟು …
Read More »ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತವಾಗಿದೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬೆಳ್ತಂಗಡಿ: ಮಹಿಳೆಯರ ಸಶಕ್ತೀಕರಣ ಜತೆಗೆ ಸ್ವಯಂ ಉದ್ಯೋಗ ಕಲ್ಪಿಸಿ, ತಾವು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಇಂದು ಗ್ರಾಮೀಣ ಜನರ ನಾಡಿಮಿಡಿತ ವಾಗಿದೆ. ಕೇಂದ್ರ ಸರಕಾರ ಸಹಿತ ದೇಶದೆಲ್ಲೆಡೆ ನೂತನ ಯೋಜನೆಗಳನ್ನು ಆರಂಭಿಸುವ ಮುನ್ನ ಧರ್ಮಸ್ಥಳದ ಯೋಜನೆಗಳನ್ನು ಪ್ರಾಯೋಗಿಕವಾಗಿ ಅಧ್ಯಯನ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ …
Read More »ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಿಮರ್ಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ …
Read More »ಎಸ್ ಕೆ ಡಿ ಆರ್ ಡಿ ಪಿ ಟ್ರಸ್ಟ್ ವತಿಯಿಂದ ಸ್ವಸಹಾಯ ಸಂಘಗಳಿಗೆ ₹607 ಕೋಟಿ ಲಾಭಾಂಶ
ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ಎಸ್ಕೆಡಿಆರ್ಡಿಪಿ) ಬಿ.ಸಿ. ಟ್ರಸ್ಟ್ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಟ್ಟು ₹ 607.71 ಕೋಟಿ ಲಾಭಾಂಶವನ್ನು ಧರ್ಮಸ್ಥಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾಂಕೇತಿಕವಾಗಿ ಬೆಳ್ತಂಗಡಿಯ ಧನ್ಯಶ್ರೀ ಸಂಘ, ಕುಂದಾಪುರದ ಶ್ರೀನಿಧಿ ಸಂಘ, ಹೊಸಪೇಟೆಯ ಶ್ರೀಶಂಕರ ಸಂಘ, ಆನೇಕಲ್ನ ಅಪೂರ್ವ ಸಂಘ, ಖಾನಾಪುರದ ಅಹದ್ ಸಂಘ, ಹಾಸನದ ರೌಷನ್ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಿಸಿದರು. …
Read More »ಶೀಘ್ರದಲ್ಲೇ 10 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದ್ದು, ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು. ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಅವರು ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





