ಮೈಸೂರು: ವಿಶ್ವ ರೈತ ದಿನದ ಅಂಗವಾಗಿ ಡಿ.23ರಂದು ಮೈಸೂರಿನಲ್ಲಿ ರಾಷ್ಟ್ರೀಯ ರೈತ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳ ನೂರಾರು ರೈತ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಎಲ್ಲ ಸರ್ಕಾರಗಳೂ ರೈತರಿಗೆ ಮೋಸ ಮಾಡಿವೆ, ಮಾಡುತ್ತಿವೆ. ಇದರಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ ಕಾರ್ಪೊರೇಟ್ ಕಂಪನಿಗಳು ಕೃಷಿ ವಲಯವನ್ನು ವಶಪಡಿಸಿಕೊಳ್ಳಲು …
Read More »ಜಮ್ಮುವಿಗೆ ಪ್ರತ್ಯೇಕ ರೈಲ್ವೆ ವಿಭಾಗ ಸ್ಥಾಪನೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
ನವದೆಹಲಿ: ಜಮ್ಮುವಿಗೆ ಪ್ರತ್ಯೇಕ ರೈಲ್ವೆ ವಿಭಾಗವನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿನ ರೈಲ್ವೆ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಆಸಕ್ತಿ ವಹಿಸಿ ಗಮನಿಸುತ್ತಿದ್ದಾರೆ. ಇತ್ತೀಚೆಗೆ ಜಮ್ಮುವಿನ ಕೈಗಾರಿಕೋದ್ಯಮಿಗಳು ಜಮ್ಮುವಿಗೆ ಪ್ರತ್ಯೇಕ ರೈಲ್ವೆ ವಿಭಾಗ ಬೇಕು ಎಂದು ಪ್ರಧಾನಿ ಅವರನ್ನು ಭೇಟಿಯಾಗಿದ್ದರು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಜಮ್ಮುವಿಗೆ ಪ್ರತ್ಯೇಕ ರೈಲ್ವೆ ವಿಭಾಗ ಸ್ಥಾಪನೆ ಬಗ್ಗೆ …
Read More »ಬೆಂಗಳೂರಿನ ಹೆಬ್ಬಾಳದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ ಸ್ಥಾಪನೆ: ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು : ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರಿಗೆ, ಮಾರುಕಟ್ಟೆದಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಸಂಪರ್ಕವನ್ನು ವಿಸ್ತರಿಸಲು ಮತ್ತು ಆರೋಗ್ಯವನ್ನು ಸುಧಾರಿಸಲು ಸಾವಯವ ಮತ್ತು ಸಿರಿಧಾನ್ಯ ಹಬ್ ಅನ್ನು 20 ಕೋಟಿ ರೂ.ಅನುದಾನದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಬ್ಬಾಳದಲ್ಲಿ …
Read More »ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಸೋಮಣ್ಣ
ಬೆಳಗಾವಿ: ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 600 ಎಕರೆ, ಧಾರವಾಡ ಜಿಲ್ಲೆಯಲ್ಲಿ 288 ಎಕರೆ ಭೂಮಿ ಅಗತ್ಯವಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬೆಳಗಾವಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯು ಪ್ರಗತಿಯಲ್ಲಿದೆ, ಅಗತ್ಯವಿರುವ 80% ಭೂಮಿಯನ್ನು ಡಿಸೆಂಬರ್ 2024 ರೊಳಗೆ ಸ್ವಾಧೀನಪಡಿಸಿಕೊಳ್ಳುವ ನಿರೀಕ್ಷೆಯಿದೆ …
Read More »ರಾಜ್ಯ ಸರ್ಕಾರ: ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ. ಬೆಳೆ ವಿಮೆ ಪಾವತಿ
ಬೆಂಗಳೂರು: ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಜಿಕೆವಿಕೆ ಆವರಣದಲ್ಲಿ ಬೆಂಗಳೂರು ಕೃಷಿ ವಿವಿ ವತಿಯಿಂದ ಏರ್ಪಡಿಸಲಾಗಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನ ಜೊತೆಗೆ ಸಮಗ್ರ ಬೇಸಾಯ ಅಳವಡಿಕೆಯಿಂದ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ. ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದರು, ಈ …
Read More »ಪಿಎಂ ಆವಾಸ್ ಯೋಜನೆಯಡಿ ಅನುದಾನ ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ
ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಅಡಿಯಲ್ಲಿ ಕೇಂದ್ರ ಸರ್ಕಾರದ ಪಾಲಿನ ಅನುದಾನವನ್ನು ಹೆಚ್ಚಿಸುವಂತೆ ಒತ್ತಾಯಿಸಿ ಪ್ರಧಾನಿಯವರಿಗೆ ಪತ್ರ ಬರೆಯಲು ಗುರುವಾರ ನಡೆದ ಸಂಪುಟ ಸಭೆ ನಿರ್ಧರಿಸಿದೆ. ಸಭೆಯ ಬಳಿಕ ವಿವರ ನೀಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ, ಪಿ.ಎಂ. ಆವಾಸ್ ಯೋಜನೆಯ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರವು ₹ 1.5 ಲಕ್ಷ ಅನುದಾನವನ್ನು ಮಾತ್ರ ಒದಗಿಸುತ್ತಿದೆ. ಇದರಿಂದ ಯೋಜನೆ ಅನುಷ್ಠಾನ ಕಷ್ಟವಾಗುತ್ತಿದೆ. ಕೇಂದ್ರದ ಪಾಲಿನ ಅನುದಾನ …
Read More »ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಭಿವೃದ್ಧಿಗೆ ಹಣದ ಕೊರತೆ ಇಲ್ಲ, ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಮ್ಮ ರಾಜ್ಯದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ ಇದ್ದು, ಇದರಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳಿಗೆ 55 ಸಾವಿರ ಕೋಟಿಯನ್ನು ಬಳಕೆ ಮಾಡಲಾಗುತ್ತಿದೆ. ಉಳಿದ ಹಣವನ್ನು ಯೋಜನಾ, ಯೋಜನೇತರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದರು. ನಾವು 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಕರ್ನಾಟಕದ …
Read More »ದೇಶದ ಪ್ರತಿಗಾಮಿ ಸರ್ಕಾರಗಳಿಗೆ ಅದಾನಿ ನೆರವು: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ
ಕಲಬುರಗಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ದಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ ದೇಶದ ಸಂಪತ್ತನ್ನು ಲೂಟಿ ಮಾಡುತ್ತಿದ್ದು, ಧರ್ಮದ ಆಧಾರದ ಮೇಲೆ ಒಗ್ಗಟ್ಟಾಗುವ ಶಕ್ತಿಗಳನ್ನು ಬೆಂಬಲಿಸುತ್ತಿದ್ದಾರೆ. ನರೇಂದ್ರ ಮೋದಿ-ಅಮಿತ್ ಶಾ ಅದಾನಿಯಂತಹ ಭಾರಿ ಬಂಡವಾಳಗಾರರಿಂದ …
Read More »ಮುಸ್ಲಿಂ ಗುತ್ತಿಗೆದಾರರ ಕಾಮಗಾರಿ ಮೀಸಲಾತಿ ಕುರಿತು ಇನ್ನು ನಿರ್ಣಯ ಮಾಡಿಲ್ಲ: ಸಚಿವ ಎಚ್.ಕೆ.ಪಾಟೀಲ್
ಗದಗ: ಮುಸ್ಲಿಂ ಗುತ್ತಿಗೆದಾರರಿಗೆ ಸರ್ಕಾರಿ ಕಾಮಗಾರಿಯಲ್ಲಿ ಮೀಸಲಾತಿ ವಿಚಾರವಾಗಿ ಮನವಿಗಳು ಬಂದಿದೆ. ಆದರೆ ಈ ಬಗ್ಗೆ ಇನ್ನು ನಿರ್ಣಯ ಮಾಡಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಮುಸ್ಲಿಂ ಸಮುದಾಯದಿಂದ ಮಾತ್ರವಲ್ಲ, ಬೇರೆ ಸಮುದಾಯದಿಂದಲೂ ಬೇಡಿಕೆ ಇವೆ ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಎಸ್ಸಿ-ಎಸ್ಟಿ ಅವರಿಗೆ ಮೀಸಲಾತಿ ಕೊಡಬೇಕು ಅಂತಾ ಸರ್ಕಾರದ ನಿಲುವಿತ್ತು, ಕೊಟ್ಟಿದ್ದೀವಿ, ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗೆ ರಿಸರ್ವೇಶನ್ ಮಾಡಲಾಗಿದೆ. …
Read More »ಒಳ ಮೀಸಲಾತಿ ಕುರಿತು ನ್ಯಾ.ನಾಗಮೋಹನ್ ದಾಸ್ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ವರದಿ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಅಗತ್ಯ ದತ್ತಾಂಶವನ್ನು ಎಲ್ಲಿಂದ ಸಂಗ್ರಹ ಮಾಡಬೇಕು ಎಂಬುವುದನ್ನು ಪರಿಶೀಲನೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





