Breaking News

BigTv News

ಹುಬ್ಬಳ್ಳಿ ಧಾರವಾಡದಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಕ್ರಮ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಭಾರತ್ ಬ್ರ್ಯಾಂಡ್ ಅಡಿ ನೇರ ಗ್ರಾಹಕರಿಗೆ ಆಹಾರೋತ್ಪನ್ನ ವಿತರಿಸಲು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಕ್ರಮ ಕೈಗೊಂಡಿದ್ದಾರೆ. ಅದರಂತೆ, ಕಡಿಮೆ ದರದಲ್ಲಿ ಭಾರತ್‌ ಅಕ್ಕಿಯನ್ನು ಗ್ರಾಹಕರಿಗೆ ವಿತರಿಸಲಾಗುತ್ತಿದೆ. ಹುಬ್ಬಳ್ಳಿ ಮೂರುಸಾವಿರ ಮಠದ ಶಾಲಾ ಆವರಣದಲ್ಲಿ ಇಂದು ಬೆಳಗ್ಗೆ ಕಡಿಮೆ ಬೆಲೆಯಲ್ಲಿ ಪೂರೈಸುವ ಭಾರತ್ ಬ್ರ್ಯಾಂಡ್ ಆಹಾರ ಉತ್ಪನ್ನಗಳ ವಿತರಣೆಗೆ ಚಾಲನೆ ನೀಡಲಾಗುತ್ತಿದ್ದು, ಜನಸಾಮಾನ್ಯರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಚಿವ ಪ್ರಲ್ಹಾದ್ ಜೋಶಿ …

Read More »

ರಾಜ್ಯದ ಸೌಹಾರ್ದ ಸಹಕಾರ ಸಂಸ್ಥೆಗಳಲ್ಲಿ ₹2,650 ಕೋಟಿ ಅವ್ಯವಹಾರ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದ ಸೌಹಾರ್ದ ಸಹಕಾರ ಸಂಸ್ಥೆಗಳಲ್ಲಿ ಸುಮಾರು ₹2,650 ಕೋಟಿ ಅವ್ಯವಹಾರವಾಗಿದೆ. ಸುಮಾರು 45 ಸೌಹಾರ್ದ ಸಹಕಾರ ಸಂಸ್ಥೆಗಳು ಗ್ರಾಹಕರ ಹಣ ಮರಳಿಸದ ಸ್ಥಿತಿಯಲ್ಲಿವೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ. ನಗರದಲ್ಲಿ ನಡೆದ ವೈಶ್ಯ ಕೋ-ಆಪರೇಟಿವ್‌ ಬ್ಯಾಂಕ್‌ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅನಗತ್ಯ ಸ್ಪರ್ಧೆಯಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಹಲವಾರು ಬ್ಯಾಂಕ್‌ ವಿಲೀನವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಸಹಕಾರ ಸಂಸ್ಥೆಗಳ ಅಸ್ತಿತ್ವ ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ …

Read More »

ಬೆಳಗಾವಿಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ: ಯುವಕ ಸಾವು

ಖಾನಾಪುರ: ಖಾನಾಪುರ ತಾಲ್ಲೂಕಿನ ಐತಿಹಾಸಿಕ ಹಲಸಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ಅಪರಿಚಿತರು ಗುಂಡು ಹಾರಿಸಿದ್ದು ಯುವಕ ಮೃತಪಟ್ಟಿದ್ದಾನೆ. ಹಲಸಿ ನಿವಾಸಿ ಅಲ್ತಾಫ್‌ ಮಕಾನದಾರ (30) ಸಾವಿಗೀಡಾದವರು. ಕಾಡಂಚಿಗೆ ಇರುವ ರಸ್ತೆ ಪಕ್ಕದ ಮರಳು ತೆಗೆಯುವ ಸ್ಥಳದಲ್ಲಿ ಘಟನೆ ನಡೆದಿದೆ. ಗುಂಡು ನೇರವಾಗಿ ಯುವಕನ ಎದೆಭಾಗದ ಕೆಳಗೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ಪೊಲೀಸರಿಗೆ ಸ್ಪಷ್ಟವಾಗಿ ಗೊತ್ತಾಗಿಲ್ಲ. ಬೆಳಿಗ್ಗೆ ಯುವಕನ ಶವ ನೋಡಿದ ಮೇಲೆಯೇ …

Read More »

ಸಿಎಂ ನಾಯ್ಡು ಅವರಿಂದ ಜನರನ್ನು ವಂಚಿಸಲು ಹಲವು ಅವತಾರ: ಜಗನ್ ಆರೋಪ

ಅಮರಾವತಿ: ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ಜನರನ್ನು ವಂಚಿಸುವ ಸಲುವಾಗಿ ಹಲವು ಅವತಾರಗಳನ್ನು ತಾಳಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರು ಆರೋಪಿಸಿದ್ದಾರೆ. ಮೊಬೈಲ್‌ ಫೋನ್‌ಗಳು ಮತ್ತು ಕಂಪ್ಯೂಟರ್‌ಗಳನ್ನು ತಾವೇ ಆವಿಷ್ಕರಿಸಿದ್ದಾಗಿ ನಾಯ್ಡು ಅವರು ಎರಡು ದಶಕಗಳಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ. ಎಕ್ಸ್‌/ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಜಗನ್‌, ಚಂದ್ರಬಾಬು ನಾಯ್ಡು ಅವರು ಜನರನ್ನು ವಂಚಿಸುವುದಕ್ಕಾಗಿ ಕಣ್ಣಿಗೆ ಕಟ್ಟುವಂತೆ ತಂತ್ರಗಳನ್ನು ಮಾಡಲಿದ್ದಾರೆ. …

Read More »

ಪ್ರತಿ ತಿಂಗಳ ಮೂರನೇ ಶನಿವಾರ ಕುಂದುಕೊರತೆ ಸಭೆ ನಡೆಸಲು ತೀರ್ಮಾನ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯ ಕೊಂದುಕೊರತೆ ಕುರಿತಾಗಿ ಚರ್ಚೆ ನಡೆಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ ನಡೆಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ತಿಂಗಳ ಮೂರನೇ ಶನಿವಾರ ಕೊಂದು ಕೊರತೆ ಸಭೆ ನಡೆಸಲು …

Read More »

ಯುರೋಪ್ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದ ಭಾರತ

ನವದೆಹಲಿ: ತನ್ನ ಬಹುತೇಕ ತೈಲ ಅಗತ್ಯತೆಗಳಿಗೆ ವಿದೇಶಗಳನ್ನೇ ಅವಲಂಬಿಸಿರುವ ಭಾರತ ಈಗ, ಯುರೋಪ್ ದೇಶಗಳಿಗೆ ಅತಿದೊಡ್ಡ ತೈಲ ರಫ್ತು ದೇಶವಾಗಿ ಹೊರಹೊಮ್ಮಿದೆ. 2024ನೇ ಹಣಕಾಸು ವರ್ಷದ ಮೊದಲ 3 ತಿಂಗಳಲ್ಲಿ ಯುರೋಪ್ ದೇಶಗಳಿಗೆ ಭಾರತದ ತೈಲ ರಪ್ತಿನಲ್ಲಿ ಶೇ.58ರಷ್ಟು ಭಾರೀ ಏರಿಕೆ ಕಂಡುಬಂದಿದೆ. ಇದು ಹೇಗೆ ಸಾಧ್ಯ, ಭಾರತದಲ್ಲಿ ಎಲ್ಲಿ ತೈಲ ಉತ್ಪಾದನೆಯಾಗುತ್ತಿದೆ ಎಂದು ನೋಡಿದಾಗ ಉಕ್ರೇನ್ ಮೇಲಿನ ಯುದ್ಧದ ಬಳಿಕ ರಷ್ಯಾದಿಂದ ತೈಲ ಆಮದನ್ನು ಯುರೋಪ್ ದೇಶಗಳು ನಿಷೇಧಿಸಿವೆ. …

Read More »

ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಜಸ್ಟಿಸ್ ಚಂದ್ರಚೂಡ್ ನಿವೃತ್ತಿಯಾಗುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಗೆ ನೂತನ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಸಂಜೀವ್ ಖನ್ನಾ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸುಪ್ರೀಂಕೋರ್ಟ್ ನ 51 ನೇ ಮುಖ್ಯ ನ್ಯಾಯಾಧೀಶರಾಗಿ ಸಂಜೀವ್ ಖನ್ನಾ ಇಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ಅವರ ಅಧಿಕಾರಾವಧಿ ಒಟ್ಟು ಆರು ತಿಂಗಳು ಇರಲಿದೆ. ಸುಪ್ರೀಂಕೋರ್ಟ್ ನ ಎರಡನೇ …

Read More »

ನಾಳೆ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ರದ್ದುಪಡಿಸುವುದು ಮತ್ತು 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿಯುವುದು ಮುಂತಾದ ಹಲವಾರು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನಾಳೆ(ಸೋಮವಾರ) ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಜಸ್ಟಿಸ್ ಖನ್ನಾ ಅವರು ಭಾನುವಾರ ನಿವೃತ್ತರಾದ ನ್ಯಾಯಮೂರ್ತಿ ಡಿ.ವೈ. …

Read More »

ಕೆಎಂಎಫ್ ನಿಂದ ಅಕ್ಟೋಬರ್ ನಲ್ಲಿ 722 ಟನ್ ನಂದಿನಿ ಸಿಹಿ ತಿನಿಸು ಮಾರಾಟ

ಬೆಂಗಳೂರು: ಮಾರಾಟದಲ್ಲಿ ಹೊಸ ಪ್ರಯತ್ನ, ಸಿಬ್ಬಂದಿ ಪರಿಶ್ರಮ, ದಸರಾ, ದೀಪಾವಳಿ ಹಬ್ಬಗಳ ಪರಿಣಾಮವಾಗಿ ಅಕ್ಟೋಬರ್‌ ತಿಂಗಳೊಂದರಲ್ಲೇ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ನ ಸಿಹಿ ಉತ್ಪನ್ನಗಳು ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿವೆ. ಈ ವರ್ಷಾರಂಭದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಸಮಯದಲ್ಲಿ, ಕೆಎಂಎಫ್ 16.5 ಲಕ್ಷ ಲೀಟರ್ ಮೊಸರು ಮತ್ತು 51 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಿ ದಾಖಲೆ ನಿರ್ಮಿಸಿತ್ತು. ಈಗ ದಸರಾ-ದೀಪಾವಳಿ ಸಮಯದಲ್ಲಿ ಸಿಹಿ ಉತ್ಪನ್ನಗಳೂ ದಾಖಲೆ …

Read More »

ಬೆಂಬಲ ಬೆಲೆ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ರೈತರಿಂದ ಭತ್ತ ಖರೀದಿ

ಧಾರವಾಡ: ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆದ ರೈತರಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಧಾರವಾಡ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡಲು ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. ಎಫ್‌ಎಕ್ಯೂ ಗುಣಮಟ್ಟದ ಭತ್ತವನ್ನು ರೈತರಿಂದ ಪ್ರತಿ ಕ್ವಿಂಟಾಲ್‌ಗೆ ರೂ.2,300 ಮತ್ತು ಬಿಳಿಜೋಳವನ್ನು ರೂ. 3,371 ದರದಲ್ಲಿ ಖರೀದಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಈ …

Read More »