ಬೆಂಗಳೂರು: ಕೃಷಿ ಸಂಬಂಧಿತ ಚಟುವಟಿಕೆಗಳಾದ ಹೈನುಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆಮುಂತಾದವು ಗಳಿಗೆ ವಿಶೇಷ ಗಮನ ಹರಿಸಿ ಹೆಚ್ಚಿನ ಸಾಲ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನಿರ್ದೇಶನ ನೀಡಿದರು. ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳನ್ನು ಒಳಗೊಂಡ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮುದ್ರಾ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ …
Read More »ನವೆಂಬರ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಸಿಎಂ ಮಹತ್ವದ ಮಾಹಿತಿ
ಬಳ್ಳಾರಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್ ತಿಂಗಳ ಹಣ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ವಕ್ಫ್ …
Read More »ವಿಶ್ವದ ಮಹಾಶಕ್ತಿಗಳ ಪಟ್ಟಿಯಲ್ಲಿ ಭಾರತ ಸೇರ್ಪಡೆಯಾಗಬೇಕು: ರಷ್ಯಾ ಅಧ್ಯಕ್ಷ ಪುಟಿನ್
ಮಾಸ್ಕೋ: ನಾವು ವಿವಿಧ ಕ್ಷೇತ್ರಗಳಲ್ಲಿ ಭಾರತದೊಂದಿಗಿನ ಸಂಬಂಧಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ, ಭಾರತ ಒಂದು ಶ್ರೇಷ್ಠ ದೇಶವಾಗಿದೆ. ಆರ್ಥಿಕ ಬೆಳವಣಿಗೆಯ ವಿಷಯದಲ್ಲಿಯೂ, ಇದು ದೊಡ್ಡ ಅರ್ಥವ್ಯವಸ್ಥೆಯಲ್ಲಿ ಪ್ರಮುಖವಾಗಿದೆ. ಇದರ ಅಭಿವೃದ್ಧಿ ದರ ಶೇ.7.4ರಷ್ಟಿದೆ. ರಷ್ಯಾ ಮತ್ತು ಭಾರತದ ನಡುವಿನ ಸಹಕಾರ ಪ್ರತಿ ವರ್ಷ ಹೆಚ್ಚುತ್ತಿದೆ. ವಿಶ್ವದ ಮಹಾಶಕ್ತಿಗಳ ಪಟ್ಟಿಯಲ್ಲಿ ಭಾರತ ಸೇರ್ಪಡೆಯಾಗಬೇಕು ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಭಾರತವನ್ನು ಶ್ಲಾಘಿಸಿದ್ದಾರೆ. ಅವರು ರಷ್ಯಾದ ಸೊಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು. ಭಾರತವು …
Read More »ಮಂಡ್ಯದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರದಿಂದ 25 ಕೋಟಿ ರೂ. ಮಂಜೂರು
ಬೆಂಗಳೂರು: ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಮಂಜೂರು ಮಾಡಿದೆ. ಕಾರ್ಯಕ್ರಮ ಆಯೋಜಿಸಲು ಕೆಎಸ್ಎಂಸಿ ಎಂಡ್ ಎ ಸಂಸ್ಥೆಯ ಸೇವೆಯನ್ನು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದಡಿ ಪ್ರದತ್ತವಾದ ಅಧಿಕಾರ ಚಲಾಯಿತಿ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ. ಉತ್ತಮ ಗುಣಮಟ್ಟದ ಸರಕು, ಸೇವೆ ಸಮಂಜಸ ದರದಲ್ಲಿ ಪಡೆದುಕೊಳ್ಳುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಂಡ್ಯದ ಜನ …
Read More »ಬೆಂಗಳೂರಿನಲ್ಲಿ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳ ಕಾರ್ಯಕ್ಷಮತೆ ಪರಿಶೀಲಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಬೆಂಗಳೂರಿನಲ್ಲಿ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ (ಆರ್ಆರ್ಬಿ) ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶಗಳ ಆರ್ಆರ್ಬಿಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲಿಸಿದ್ದಾರೆ. ಇಂದು ನಡೆದ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಸೇವೆಗಳ ಇಲಾಖೆ (ಡಿಎಫ್ಎಸ್) ಕಾರ್ಯದರ್ಶಿ, ಡಿಎಫ್ಎಸ್ನ ಹಿರಿಯ …
Read More »ವಕ್ಫ್ ಬೋರ್ಡ್ ವಿವಾದ: ರೈತರ ಹೆಸರು ದುರ್ಬಳಕೆ ಖಂಡಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು : ವಕ್ಫ್ ಬೋರ್ಡ್ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ರೈತರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ವತಿಯಿಂದ ಇಂದು ಸಂಸದ ತೇಜಸ್ವಿ ಸೂರ್ಯ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಲಾಯಿತು. ನಗರದ ಕಾಂಗ್ರೆಸ್ ಭವನದ ರೇಸ್ ಕೋರ್ಸ್ ರಸ್ತೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಕೈನಾಯಕರು ಕಿಡಿಕಾರಿದರು. ವಕ್ಫ್ …
Read More »ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಭಾರೀ ಬಾಂಬ್ ಸ್ಫೋಟ: 25 ಜನ ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಇಂದು ಸಂಭವಿಸಿದ ಭಾರಿ ಬಾಂಬ್ ಸ್ಫೋಟದ್ದು ಎನ್ನಲಾದ ಸಿಸಿಟಿವ ದೃಶ್ಯಾವಳಿಯೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬಾಂಬ್ ಸ್ಫೋಟ ಸಂಭವಿಸಿದ ಕ್ಷಣ, ಸ್ಫೋಟದ ತೀವ್ರತೆಗೆ ರೈಲು ನಿಲ್ದಾಣ ಛಿದ್ರಗೊಂಡಿರುವ ಸಿಸಿಟಿವಿ ದೃಶ್ಯ ಎಂದು ಸ್ಪುಟ್ನಿಕ್ ಇಂಡಿಯಾ ತಾಣ ವಿಡಿಯೋವೊಂದನ್ನು ಪೋಸ್ಟ್ ಮಾಡಿದೆ. ಆ ವಿಡಿಯೋ ಇಲ್ಲಿದೆ. ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ 25 ಮಂದಿ …
Read More »ಯತ್ನಾಳ ಪ್ರಕರಣಗಳ ವಿಚಾರಣೆಗೆ ಒಂದು ದಿನವನ್ನೇ ಮೀಸಲಿಡಬೇಕು: ಹೈಕೋರ್ಟ್
ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಪ್ರಕರಣಗಳನ್ನು ವಿಚಾರಣೆ ಮಾಡಬೇಕಾದರೆ ಕನಿಷ್ಠ ಒಂದು ದಿನವನ್ನೇ ಆ ಪ್ರಕರಣಗಳಿಗಾಗಿ ಮೀಸಲಿಡಬೇಕು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದೂಗಳ ಕೊಲೆ ಮಾಡಿದ್ದಾನೆ. ಅವನು ಹರಾಮ್ಕೋರ ಎಂದು ಮೇ.1ರಂದು (2023) ಯತ್ನಾಳ್ ಚುನಾವಣೆಯ ಪ್ರಚಾರದ ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಂದು ಯತ್ನಾಳ್ ಧಾರವಾಡದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ಪ್ರಚಾರದಲ್ಲಿ ಈ ಮಾತನ್ನು ಆಡಿದ್ದರು. ಈ …
Read More »₹214 ಕೋಟಿ ವೆಚ್ಚದ 3,811 ಕಾಮಗಾರಿಗಳಿಗೆ ಅನುಮೋದನೆ: ಸಚಿವ ಪರಮೇಶ್ವರ್
ಕೊರಟಗೆರೆ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ₹214 ಕೋಟಿ ವೆಚ್ಚದ 3,811 ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಗೃಹಸಚಿವ ಜಿ. ಪರಮೇಶ್ವರ ತಿಳಿಸಿದರು. ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಹುತೇಕ ಈ ಕಾಮಗಾರಿಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಿಎಸ್ಆರ್ ಅನುದಾನದಲ್ಲಿ ₹27 ಕೋಟಿ ಕೊಠಡಿಗಳ ದುರಸ್ತಿ, ನೂತನ ಕಟ್ಟಡ ನಿರ್ಮಾಣದ ಜೊತೆಗೆ ಆಟದ ಮೈದಾನ, ಶೌಚಾಲಯ ನಿರ್ಮಾಣ ಆರೋಗ್ಯ …
Read More »ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹಾವೇರಿ: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಜಮೀನು ವಕ್ಫ್ ಆಸ್ತಿ ಆಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ರೈತ ರುದ್ರಪ್ಪ ಅವರ ಹಾನಗಲ್ ತಾಲ್ಲೂಕಿನ ಹರನಗಿರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ವಕ್ಫ್ ಮೂಲಕ ರಾಜ್ಯ ಸರ್ಕಾರ, 9 ಲಕ್ಷ ಎಕರೆ ಜಮೀನು ಕಬಳಿಸಲು ಹೊರಟಿದೆ ಎಂದರು. ಬೆಂಗಳೂರಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





