ಸಂಡೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿದ್ದು, ಅಧಿಕಾರದಲ್ಲಿ ಮುಂದುವರಿಯಲು ಅವರು ಅರ್ಹರಲ್ಲ. 15 ರಿಂದ 20 ದಿನಗಳಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಹೇಳಿದರು. ಸಂಡೂರು ಕ್ಷೇತ್ರದ ಬೊಮ್ಮಘಟ್ಟ, ಚೋರನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಡಾ ಹಗರಣ ಆರೋಪ ಸಾಬೀತಾಗುತ್ತದೆ. ಇ.ಡಿ, ಸಿಬಿಐ ವಿರುದ್ಧ ಸಿದ್ದರಾಮಯ್ಯ ವಿನಾ ಕಾರಣ ಅಪಪ್ರಚಾರ …
Read More »ಲಿಂಗಾಯತರ ಅಸ್ಮಿತೆ ಜೊತೆ ಆಟ ಆಡುವುದು ಬೇಡ: ಸಚಿವ ಎಂ.ಬಿ.ಪಾಟೀಲ್
ವಿಜಯಪುರ: ಸಂಘ ಪರಿವಾರದವರು ವಚನ ದರ್ಶನ ಪುಸ್ತಕದ ಮೂಲಕ ನಮ್ಮ ವಚನಗಳನ್ನು ತಿದ್ದಲು ಹೊರಟಿದ್ದಾರೆ. ವಚನಗಳು ನಮ್ಮ(ಲಿಂಗಾಯತ) ಅಸ್ಮಿತೆ. ನಮ್ಮ ಅಸ್ಮಿತೆ ಜೊತೆ ಆಟ ಆಡುವುದು ಬೇಡ ಎಂದು ಸಚಿವ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದರು. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಅವರು ನಮ್ಮ ಅಸ್ಮಿತೆಗಳಾದ ವಚನಗಳ ಬಗ್ಗೆ ಹಸ್ತಕ್ಷೇಪ ಮಾಡುವುದನ್ನು ಬಿಡಬೇಕು. ಇಲ್ಲವಾದರೆ ನಾವು ನಿಮ್ಮ ಸುಳ್ಳು ಅಸ್ಮಿತೆ ಬಿಚ್ಚಿಡುತ್ತೇವೆ. ವೇದ, ಉಪನಿಷತ್ತುಗಳ ಸುಳ್ಳಿನ …
Read More »ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ: ಪಲ್ಲವಿ ಜಿ.
ರಾಯಚೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ಎಲ್ಲ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಜಾರಿಗೊಳಿಸಿರುವ ವಿವಿಧ ಯೋಜನಗಳ …
Read More »ಬಳ್ಳಾರಿಯ ನಾರಿಹಳ್ಳ ಜಲಾಶಯದ ಬಳಿ ಜೆ ಎಸ್ ಡಬ್ಲ್ಯೂ ಜಲವಿದ್ಯುತ್ ಯೋಜನೆ ಅನುಷ್ಠಾನ
ಬಳ್ಳಾರಿ: ಸಂಡೂರು ತಾಲ್ಲೂಕಿನ ನಾರಿಹಳ್ಳ ಜಲಾಶಯದ ಬಳಿಯಿರುವ 104 ಎಕರೆ ದಟ್ಟ ಅರಣ್ಯ ಪ್ರದೇಶದಲ್ಲಿ ಜೆಎಸ್ಡಬ್ಲ್ಯು ಎನರ್ಜಿ ಲಿಮಿಟೆಡ್ ಸಂಸ್ಥೆಯು 300 ಮೆಗಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಇದರಿಂದ ಒಂದೆಡೆ ಅರಣ್ಯ ನಾಶದ ಆತಂಕವಿದ್ದರೆ, ಇನ್ನೊಂದೆಡೆ ಸರ್ಕಾರಿ ಸಂಸ್ಥೆಗೆ ಸಿಗಬೇಕಿದ್ದ ಯೋಜನೆಯನ್ನು ಹಿಂದಿನ ಸರ್ಕಾರವು ಮುಂದೆ ನಿಂತು ಖಾಸಗಿ ಸಂಸ್ಥೆಗೆ ನೀಡಿದ್ದು ಬಹಿರಂಗವಾಗಿದೆ. ಸಂಡೂರಿನ ತಾರಾನಗರದ ಬಳಿ ಇರುವ ನಾರಿಹಳ್ಳ ಜಲಾಶಯಕ್ಕೆ ಹೊಂದಿಕೊಂಡಿರುವ 412.41 ಎಕರೆ ಪ್ರದೇಶದಲ್ಲಿ …
Read More »ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಯಲ್ಲಿ ವಿಫಲ: 98 ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ನೊಟೀಸ್
ಬೆಂಗಳೂರು: ಶಾಲಾ ಮಕ್ಕಳಿಗೆ ವಾರಕ್ಕೆ ಆರು ದಿನ ಬೇಯಿಸಿದ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ವಿಫಲರಾದ 98 ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಪಿ.ಎಂ. ಪೋಷಣ್ ಯೋಜನೆ ಅಡಿ ರಾಜ್ಯ ಸರ್ಕಾರ ಎರಡು ಹಾಗೂ ಅಜೀಂ ಪ್ರೇಮ್ಜಿ ಫೌಂಡೇಷನ್ನಿಂದ ನಾಲ್ಕು ಸೇರಿ ವಾರಕ್ಕೆ ಆರು ಮೊಟ್ಟೆಗಳನ್ನು 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನುವುದಿಲ್ಲ ಎಂದು ಬೇಡಿಕೆ ಸಲ್ಲಿಸುವ ಮಕ್ಕಳಿಗೆ ನಿಯಮದಂತೆ …
Read More »ಗ್ಯಾರಂಟಿಯಿಂದ ಆರ್ಥಿಕ ಸಂಕಷ್ಟ: ಯೋಜನೆಗಳ ಮರುಪರಿಶೀಲನೆಗೆ ಬಜೆಟ್ ನಲ್ಲಿ ಅನುದಾನ ಕಡಿತಗೊಳಿಸಲು ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಹೆಚ್ಚಾಗ ತೊಡಗಿದ್ದು, ಈ ಹಿನ್ನೆಲೆಯಲ್ಲಿ ಯೋಜನೆಗಳ ಮರುಪರಿಶೀಲನೆ ನಡೆಸಿ, ಮುಂಬರುವ ಬಜೆಟ್ ನಲ್ಲಿ ಅನುದಾನ ಕಡಿತಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಕಳೆದ ಬಜೆಟ್ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ 57 ಸಾವಿರ ರೂ.ಮೀಸಲಿಟ್ಟಿತ್ತು. ಈ ಅನುದಾನ ಈ ಬಾರಿಯ ಬಜೆಟ್ ನಲ್ಲಿ 52,000 ಕೋಟಿ ರೂ.ಗೆ ಇಳಿಕೆ …
Read More »ಯಾದಗಿರಿ: ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ನಾಶ
ಯಾದಗಿರಿ : ಇಲ್ಲಿನ ಮುಂಡರಗಿ ಗ್ರಾಮದ ಹೊರವಲಯದಲ್ಲಿರುವ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ನಾಶವಾಗಿರುವ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ. ಅವಘಡದ ವೇಳೆ ಸ್ಥಳದಲ್ಲೇ ಇದ್ದ ರೈತರಿಂದ ಬೆಂಕಿ ನಂದಿಸುವ ಕಾರ್ಯ ಬರದಿಂದ ಜರುಗಿತ್ತಾದರೂ ಕೂಡ ಕ್ಷಣಾರ್ಧದಲ್ಲೇ ಲಕ್ಷಾಂತರ ರೂ.ಮೌಲ್ಯದ ಹತ್ತಿ ಬೆಂಕಿಗೆ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಯಾದಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
Read More »ಬ್ರೆಜಿಲ್ ನಿಂದ ಪ್ರಸಕ್ತ ಸಾಲಿನಲ್ಲಿ 22 ಟನ್ ಉದ್ದು ಆಮದು: ಕೇಂದ್ರ ಸಚಿವಾಲಯ
ನವದೆಹಲಿ: ಭಾರತದ ಬೇಡಿಕೆಗೆ ಅನುಗುಣವಾಗಿ ಅಗತ್ಯವಿರುವ ಉದ್ದು ಮತ್ತು ತೊಗರಿ ಬೇಳೆ ಪೂರೈಕೆಯಲ್ಲಿ ಬ್ರೆಜಿಲ್ ಪ್ರಮುಖ ದೇಶವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬ್ರೆಜಿಲ್ನ ಕೃಷಿ ಸಚಿವಾಲಯದ ಹಿರಿಯ ಅಧಿಕಾರಿ ಜೂಲಿಯೊ ಸೀಸರ್ ರಾಮೋಸ್ ನೇತೃತ್ವದ ನಿಯೋಗವು ಗುರುವಾರ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ನಿಧಿ ಖರೆ ಅವರನ್ನು ಭೇಟಿ ಮಾಡಿ, ಆಮದು ಕುರಿತಂತೆ ಚರ್ಚಿಸಿತು. ಕಳೆದ ವರ್ಷ ಬ್ರೆಜಿಲ್ನಿಂದ 4,102 ಟನ್ನಷ್ಟು ಉದ್ದು ಆಮದು ಮಾಡಿಕೊಳ್ಳಲಾಗಿತ್ತು. ಪ್ರಸಕ್ತ …
Read More »ಇಂಡಿಯಾ ಮೈತ್ರಿಕೂಟ ಜಮ್ಮು-ಕಾಶ್ಮೀರದಿಂದ ಭಾರತದ ಸಂವಿಧಾನವನ್ನು ತೆಗೆದುಹಾಕಲು ಬಯಸುತ್ತಿದೆ: ಪ್ರಧಾನಿ ಮೋದಿ
ಮುಂಬೈ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಜಮ್ಮು-ಕಾಶ್ಮೀರದಿಂದ ಭಾರತದ ಸಂವಿಧಾನವನ್ನು ತೆಗೆದುಹಾಕಲು ಬಯಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, ಜಗತ್ತಿನ ಯಾವುದೇ ಶಕ್ತಿಯಿಂದಲೂ ಆರ್ಟಿಕಲ್ 370 ಮರುಸ್ಥಾಪನೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನ. 20 ರಂದು ಮತದಾನ ನಡೆಯಲಿರುವ ಮಹಾರಾಷ್ಟ್ರದ ವಿಧಾನಸಭಾ ಕ್ಷೇತ್ರಗಳಲ್ಲಿ ನ.08 ರಂದು ಪ್ರಚಾರ ನಡೆಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿಯನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು …
Read More »ಕರ್ನಾಟಕದಲ್ಲಿ ಕೆರೆ ತುಂಬಿಸುವ ಯೋಜನೆ ಮೊದಲು ಆರಂಭಿಸಿದ್ದೆ ನಾನು: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ : ಕರ್ನಾಟಕದಲ್ಲಿ ಕೆರೆ ತುಂಬಿಸುವ ಯೋಜನೆ ಮೊದಲು ಆರಂಭಿಸಿದವನೇ ನಾನು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ತಿಮ್ಮಾಪುರ, ಹಿರೇಬೆಂಡಿಗೇರಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡಿದ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶಿಗ್ಗಾವಿಯಲ್ಲಿ ಬೊಮ್ಮಾಯಿಯವರು ಯಾವುದಾದರು ಒಂದು ಯೋಜನೆ ತಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ತಿಳಿಸಲು ಬಯಸುತ್ತೇನೆ. ಇಡಿ ರಾಜ್ಯದಲ್ಲಿ ಕೆರೆ ತುಂಬಿಸುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





