ಲೆಬನಾನ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಇನ್ನೂ ಮುಂದುವರೆದಿದ್ದು, ಇಸ್ರೇಲ್ ಮತ್ತೊಮ್ಮೆ ಲೆಬನಾನ್ ಮೇಲೆ ದಾಳಿ ಮಾಡಿದೆ. ದಾಳಿಯಲ್ಲಿ 40 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬೆಕಾ ಕಣಿವೆಯಲ್ಲಿ ಬಾಲ್ಬೆಕ್ ನಗರದ ಅಪಾರ್ಟ್ ಮೆಂಟ್ ವೊಂದನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಲಾಗಿದ್ದು, ಈ ವೈಮಾನಿಕ ದಾಳಿಯಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 53 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ. ಸತ್ತವರಲ್ಲಿ ಆರು ವೈದ್ಯರು ಇದ್ದಾರೆ ಎಂದು …
Read More »ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ 12 ಲಕ್ಷ ಬಿಪಿಎಲ್ ಕಾರ್ಡ್ ಗಳ ರದ್ದು: ಸಂಸದ ಕೋಟ ಶ್ರೀನಿವಾಸ ಪೂಜಾರಿ
ರಾಮನಗರ: ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಆಗ್ತಿವೆ. ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 12 ಲಕ್ಷ ಪಡಿತರ ಚೀಟಿಯನ್ನು ರದ್ದು ಮಾಡಲು ಮುಂದಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಆರೋಪಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ವಿರುಪಸಂದ್ರ ಗ್ರಾಮದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಮತಯಾಚನೆ ಮಾಡಿದ ಅವರು, ಸಿದ್ದರಾಮಯ್ಯನವರೇ 12 …
Read More »ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ: ಸಚಿವ ತಿಮ್ಮಾಪುರ
ಹಾವೇರಿ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಇದು ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ಶಿಗ್ಗಾಂವಿ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಬಂದಿರುವ ಆರೋಪ ರಾಜಕೀಯ ಷಡ್ಯಂತ್ರ. ನಮ್ಮ ಇಲಾಖೆಯಲ್ಲಿ ಈ ರೀತಿಯ ಯಾವುದೇ ಅವ್ಯವಹಾರ ನಡೆದಿಲ್ಲ. ಯಾವುದೇ ನೇಮಕಾತಿ ನಡೆದಿಲ್ಲ, ಯಾವುದೇ ವರ್ಗಾವಣೆ ನಡೆದಿಲ್ಲ ಯಾವುದೇ …
Read More »ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುವ ಎಸ್ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹಧನ
ಬೆಂಗಳೂರು: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಪಿಯುಸಿಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ …
Read More »16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಸರ್ಕಾರದಿಂದ ಮಹತ್ವದ ಆದೇಶ
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ಗೆ ದಾಸರಾಗುತ್ತಿದ್ದಾರೆ. ಮಲಗುವಾಗ, ಎದ್ದಾಗ, ಊಟ ಮಾಡುವಾಗ, ಆಟವಾಡುವಾಗ ನಿತ್ಯವೂ ಮೊಬೈಲ್ ನೋಡುತ್ತಿರುತ್ತಾರೆ. ಎಷ್ಟರಮಟ್ಟಿಗೆ ಎಂದರೆ ಮೊಬೈಲ್ ಇಲ್ಲದೇ ಕೆಲವು ಮಕ್ಕಳು ಊಟವನ್ನೂ ಮಾಡಲಾರರು. ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ಶಿಕ್ಷಣ, ದೈಹಿಕ ಚಟುವಟಿಕೆಯಿಂದ ದೂರ ಸರಿಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ಕೆಟ್ಟ ಪ್ರಭಾವ ಬೀರಿವೆ. ಆದರೆ ಈಗ ಇದನ್ನು ತಡೆಯಲು ಸರ್ಕಾರ ದೊಡ್ಡ ಕ್ರಮಕ್ಕೆ ಮುಂದಾಗಿದೆ. ಹೌದು, ಈಗ 16 …
Read More »ಮಹಿಳೆಯರ ಮೀಸಲಾತಿ ಪ್ರಮಾಣ 35% ಏರಿಕೆ: ಕೇಂದ್ರ ಸರ್ಕಾರ ಘೋಷಣೆ
ಭೋಪಾಲ್: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯಿಂದ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ. ಚುನಾವಣೆಯ ಜೊತೆಗೆ, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಅದರಂತೆ ಮಧ್ಯಪ್ರದೇಶ ಕ್ಯಾಬಿನೆಟ್ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ …
Read More »ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಪ್ರತಿಕ್ರಿಯೆ
ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ …
Read More »ಹಿಂದುಳಿದ ವರ್ಗಗಳ ಬೆನ್ನಿಗೆ ನಿಂತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ: ಸಚಿವ ಮಂಕಾಳ ವೈದ್ಯ
ಚನ್ನಪಟ್ಟಣ: ಹಿಂದುಳಿದ ವರ್ಗಗಳ ಬೆನ್ನಿಗೆ ನಿಂತಿರುವ ಕಾಂಗ್ರೆಸ್ ಪಕ್ಷವನ್ನು ತಾಲ್ಲೂಕಿನ ಗಂಗಾಮತಸ್ಥ ಸಮುದಾಯ ಬೆಂಬಲಿಸಬೇಕು ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಮನವಿ ಮಾಡಿದರು. ನಗರದಲ್ಲಿ ಗಂಗಾಮತಸ್ಥ ಸಮುದಾಯದ ಸಭೆ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಈ ಸಮುದಾಯ ಹಿಂದಿನಿಂದಲೂ ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದೆ. ಈ ಬಾರಿ ಸಿ.ಪಿ.ಯೋಗೇಶ್ವರ್ ಅವರನ್ನು ಬೆಂಬಲಿಸಬೇಕು. ಕ್ಷೇತ್ರದಲ್ಲಿ ಸಮುದಾಯದ 17 ಸಾವಿರಕ್ಕೂ ಹೆಚ್ಚು ಮತಗಳಿದ್ದು, ಸಮುದಾಯವು ಕಾಂಗ್ರೆಸ್ ಅನ್ನು ಬೆಂಬಲಿಸುವ ಮೂಲಕ ಸರ್ಕಾರಕ್ಕೆ ಶಕ್ತಿ …
Read More »ವಾಹನ ಸವಾರರಿಗೆ ಭರ್ಜರಿ ಸಿಹಿಸುದ್ದಿ: ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 10 ರೂ. ಇಳಿಕೆ
ನವದೆಹಲಿ : ವಾಹನ ಸವಾರರಿಗೆ ಸರ್ಕಾರಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪೆಟ್ರೋಲ್, ಡೀಸೆಲ್ 10 ರೂ. ಇಳಿಕೆಯಾಗುವ ಸಾಧ್ಯತೆ ಇದೆ. ಹೌದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲು ಸರ್ಕಾರ ಒಂದು ಮಾರ್ಗವನ್ನು ಕಂಡುಕೊಂಡಿದೆ. ಆದರೆ, ಅದನ್ನು ಆರಂಭಿಸಲು ಸರ್ಕಾರ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿದೆ. ಆದರೆ ಕ್ರಮೇಣ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆ ನಿವಾರಣೆಯಾಗುತ್ತಿದೆ. ಇದರಿಂದ ಪೆಟ್ರೋಲ್ ಬೆಲೆಯನ್ನು ನಿಯಂತ್ರಿಸಬಹುದು ಆದ್ದರಿಂದ, ಮಿಶ್ರ ಇಂಧನದಿಂದ ಚಲಿಸುವ …
Read More »ಸಂವಿಧಾನದ 370 ನೇ ವಿಧಿ ಮರುಸ್ಥಾಪಿಸುವ ನಿರ್ಣಯ ಅಂಗೀಕರಿಸಿದ ಜಮ್ಮುಕಾಶ್ಮೀರ ವಿಧಾನಸಭೆ
ಶ್ರೀನಗರ: ಪ್ರಮುಖ ಬೆಳವಗೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಇಂದು ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ. ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಸಾಂವಿಧಾನಿಕ ಖಾತರಿಯನ್ನು ಮರುಸ್ಥಾಪಿಸಲು ಮತ್ತು ಈ ನಿಬಂಧನೆಗಳನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





