Breaking News

BigTv News

ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರು

ಮೈಸೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳಿಗ್ಗೆ 10.10ಕ್ಕೆ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸಾಥ್​ ನೀಡಿದರು. ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸಿದೆ. ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ …

Read More »

ಸಂಸತ್ತಿನ ಚಳಿಗಾಲದ ಅಧಿವೇಶನ ನ.25 ರಿಂದ ಆರಂಭ: ಕೇಂದ್ರ ಸಚಿವ ಕಿರಣ್ ರಿಜಿಜು

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ. ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರಕಟಿಸಿದ್ದು, ನವೆಂಬರ್ 26ರಂದು ಸಂವಿಧಾನ್ ಸದನದ ಸೆಂಟ್ರಲ್ ಹಾಲ್ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದರು. ಅಂದ್ಹಾಗೆ, ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭಾ ಚುನಾವಣೆಯ ನಂತರ ಇದು ಮೊದಲ ಚಳಿಗಾಲದ ಅಧಿವೇಶನವಾಗಿದೆ.

Read More »

ಮಹಾರಾಷ್ಟ್ರದ ನೂತನ ಡಿಜಿಪಿಯಾಗಿ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ನೇಮಕ

ಮುಂಬೈ: 1990 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ಅವರು ಮಹಾರಾಷ್ಟ್ರದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಇಂದು ನೇಮಕಗೊಂಡಿದ್ದಾರೆ. ಈ ಹಿಂದೆ ಇದ್ದ ಪೊಲೀಸ್‌ ವರಿಷ್ಠಾಧಿಕಾರಿ ರಶ್ಮಿ ಶುಕ್ಲಾ ಅವರನ್ನು ಚುನಾವಣಾ ಆಯೋಗ ಪದಚ್ಯುತಗೊಳಿಸಿದ ಒಂದು ದಿನದ ಬಳಿಕ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ಅವರನ್ನು ನೂತನ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ವಿಪಕ್ಷಗಳ ದೂರವಾಣಿ ಕದ್ದಾಲಿಕೆ ಆರೋಪದ ಮೇಲೆ …

Read More »

ಕೇಂದ್ರ ಸರ್ಕಾರದಿಂದ ಭಾರತ್ ಬ್ರ್ಯಾಂಡ್ ನಡಿ ಕೆ.ಜಿ ಗೆ 34 ರಂತೆ ಅಕ್ಕಿ ಮಾರಾಟಕ್ಕೆ ಚಾಲನೆ

ನವದೆಹಲಿ: ಕೇಂದ್ರ ಸರ್ಕಾರವು ಭಾರತ್‌ ಬ್ರ್ಯಾಂಡ್‌ನಡಿ ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಮತ್ತು ಅಕ್ಕಿ ಮಾರಾಟದ ಎರಡನೇ ಹಂತಕ್ಕೆ ಇಂದು ಚಾಲನೆ ನೀಡಿದೆ. ಪ್ರಸ್ತುತ ಗೋಧಿ ಹಿಟ್ಟು ಪ್ರತಿ ಕೆ.ಜಿಗೆ ₹30 ದರ ಇದ್ದರೆ, ಅಕ್ಕಿ ದರ ಕೆ.ಜಿಗೆ ₹34ರಂತೆ ಮಾರಾಟ ಮಾಡಲಿದೆ. ಆದರೆ, ಮೊದಲನೇ ಹಂತದಲ್ಲಿ ಗೋಧಿ ಹಿಟ್ಟು ಕೆ.ಜಿ ₹27 ಮತ್ತು ಅಕ್ಕಿ ಕೆ.ಜಿ ₹29 ಇತ್ತು. ಇದಕ್ಕೆ ಹೋಲಿಸಿದರೆ ಎರಡನೇ ಹಂತದಲ್ಲಿ ಬೆಲೆಯು ಏರಿಕೆಯಾಗಿದೆ. ಪ್ರಸ್ತುತ …

Read More »

ಆಸ್ತಿಗಳನ್ನು ಡಿಜಿಟಲ್ ಸ್ವರೂಪಕ್ಕೆ ತರಲು ಜನವರಿ ಅಂತ್ಯಕ್ಕೆ ಪ್ರತಿ ಮನೆಗೆ ಇ-ಸ್ವತ್ತು ಕಾರ್ಯಕ್ರಮ: ಸಂಸದೆ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಹಳ್ಳಿಯ ಆಸ್ತಿಗಳನ್ನು ಡಿಜಿಟಲ್‌ ಸ್ವರೂಪಕ್ಕೆ ತರಲು ಜನವರಿ ಅಂತ್ಯಕ್ಕೆ ಪ್ರತಿ ಮನೆಗೆ ಇ-ಸ್ವತ್ತು ತಲುಪಿಸುವ ಕಾರ್ಯವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮಾಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ದಾವಣಗೆರೆ ತಾಲ್ಲೂಕಿನ 42 ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭೂಮಿ, ನಿವೇಶನ, ಮನೆಗಳಿಗೆ ಸಂಬಂಧಿಸಿದ ಆಸ್ತಿ ಕಲಹ ಗ್ರಾಮೀಣ …

Read More »

ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯ ತಿಮ್ಮಾಪುರದಲ್ಲಿ ಸಂಭವಿಸಿದೆ. ಸೋಮನಾಥ ನಿಂಗಪ್ಪ (40) ಸಾವನ್ನಪ್ಪಿರುವ ರೈತ. ಇವರು ಮಹಿಬೂಬ್ ಸುಭಾನಿ ದರ್ಗಾದ ಹಿಂಬದಿಯಲ್ಲಿನ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಆಘಾತದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಶ್ರೀಮಂತ ಜನರ ಕಲ್ಯಾಣಕ್ಕೆ ಕೆಲಸ ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ರಾಂಚಿ: ಜಾರ್ಖಂಡ್‌ ಜನರ ಕಲ್ಯಾಣವನ್ನು ಖಾತ್ರಿಪಡಿಸುವ ಉದ್ದೇಶ ಬಿಜೆಪಿಗೆ ಇಲ್ಲ, ಬದಲಿಗೆ ರಾಜ್ಯದ ಕಲ್ಲಿದ್ದಲು, ಇತರ ಖನಿಜ ಸಂಪನ್ಮೂಲಗಳನ್ನು ಲೂಟಿ ಮಾಡುವ ಸಲುವಾಗಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು. ಇಲ್ಲಿ ಬಿಜೆಪಿ ಅಭ್ಯರ್ಥಿಗಳಿಗಿಂತ ನಾಯಕರೇ ಹೆಚ್ಚಾಗಿದ್ದು, ಬುಡಕಟ್ಟು ಮುಖ್ಯಮಂತ್ರಿಯಿಂದ ಅಧಿಕಾರ ಕಸಿದುಕೊಳ್ಳಲು …

Read More »

ವಿಜಯಪುರದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ 14 ಸಾವಿರ ಎಕರೆ ಜಮೀನು ಕಬಳಿಕೆ: ಗೋವಿಂದ ಕಾರಜೋಳ

ಬಳ್ಳಾರಿ: ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಪಕ್ಷದ ರಾಜ್ಯಾಧ್ಯಕ್ಷರಿಗೆ ನಗರದಲ್ಲಿ ವರದಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, …

Read More »

ಕಲಬುರಗಿಯಲ್ಲಿ ನ.17 ರಿಂದ 24 ರವರೆಗೆ ಐ.ಟಿ.ಎಫ್ ಕ್ರೀಡಾಕೂಟ

ಕಲಬುರಗಿ : ಜಿಲ್ಲೆಯಲ್ಲಿ ನವೆಂಬರ್ 17 ರಿಂದ 24ರಂದು ನಡೆಯುವ ಪ್ರತಿಷ್ಠತ ಐ.ಟಿ.ಎಫ್. ಕ್ರೀಡಾಕೂಟವನ್ನು ಯಾವುದೇ ಲೋಪದೋಷವಿಲ್ಲದಂತೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಲವಾರು ಸಮಿತಿಗಳನ್ನು ರಚಿಸಿದ್ದು. ಸಮಿತಿಯ ಕೆಲಸಗಳ ಪೂರ್ವ ಸಿದ್ಧತೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕೆಲಸ ಮಾಡುವಂತೆ ಸೂಚನೆ ನೀಡಿದರು. ಮೈದಾನದ ಸ್ವಚ್ಫತೆ, ಉಪ ವೇದಿಕೆಗಳ ಸಿದ್ಧತೆ, ಗ್ರೀನ್ ಮ್ಯಾಟ್ಗಳ ಅಳವಡಿಕೆ ಮೈಕ್ ಬ್ಯಾರಿಕೇಡ್ …

Read More »

ಐವತ್ತು ವರ್ಷ ಮೀರಿದ ರಾಜ್ಯದ ಎಲ್ಲ ಜಲಾಶಯಗಳ ದುರಸ್ತಿಗೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ಐವತ್ತು ವರ್ಷ ಮೀರಿದ ರಾಜ್ಯದ ಎಲ್ಲ ಜಲಾಶಯಗಳ ದುರಸ್ತಿ ಕಾರ್ಯಕ್ಕೆ ರಾಜ್ಯ ಸರಕಾರ ಚಿಂತನೆ ನಡೆಸಿದೆ. ಇದಕ್ಕೆ ಅಂದಾಜು 9ರಿಂದ 10 ಸಾವಿರ ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆ ಇದೆ. ಈ ಸಂಬಂಧ ಅನುದಾನ ಕೋರಿ ಕೇಂದ್ರ ಸರಕಾರಕ್ಕೆ ವಿಸ್ತೃತ ಮನವಿ ಸಲ್ಲಿಸಲು ಜಲಸಂಪನ್ಮೂಲ ಇಲಾಖೆ ನಿರ್ಧರಿಸಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಜಲಸಂಪನ್ಮೂಲ ಇಲಾಖೆ ಹಿರಿಯ ಅಧಿಕಾರಿಗಳ ನಿಯೋಗ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ನಿರ್ಧರಿಸಿದೆ. …

Read More »