Breaking News

BigTv News

ಮುಂಗಾರು ಹಂಗಾಮಿನಲ್ಲಿ 33 ಸಾವಿರ ರೈತರಿಗೆ 13.02 ಕೋಟಿ ರೂ. ಇನ್ಪುಟ್ ಸಬ್ಸಿಡಿ ಬಿಡುಗಡೆಗೆ ಡಿ.ಸಿ ಅನುಮೋದನೆ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪೈಕಿ ಪರಿಹಾರ ತಂತ್ರಾಂಶದ ಮೂಲಕ ನಮೂದಿಸಿದ ರೈತರಿಗೆ ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಮೊದಲನೇ ಹಂತದಲ್ಲಿ 33,718 ರೈತ ಫಲಾನುಭವಿಗಳಿಗೆ 13.02 ಕೋಟಿ ರೂ.ಇನ್ಪುಟ್ ಸಬ್ಸಿಡಿ ಬಿಡುಗಡೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅನುಮೋದನೆ ನೀಡಿದ್ದಾರೆ. ಇನ್ ಪುಟ್ ಸಬ್ಸಿಡಿ ಹಣ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ …

Read More »

ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಬೀದರ್ ನಲ್ಲಿ ನಾಳೆ(ನ.6) ರಂದು ಅರೆಬೆತ್ತಲೆ ಮೆರವಣಿಗೆ

ಬೀದರ: ಕೇಂದ್ರ ಬಿಜೆಪಿ ಸರಕಾರ ಸಂವಿಧಾನ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಮುಡಾ ಹಗರಣ ಆರೋಪವನ್ನು ಹೊರೆಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರಕಾರವನ್ನು ದುರ್ಬಲಗೊಳಿಸಲು ನಡೆಸಿರುವ ಷಡ್ಯಂತ್ರ ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಜಿಲ್ಲಾ ಸಮಿತಿ ವತಿಯಿಂದ ನಾಳೆ (ನ.6 ರಂದು) ಅರೆ ಬೆತ್ತಲೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 11:30 ಗಂಟೆಗೆ …

Read More »

ಕಾಂಗ್ರೆಸ್ ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕವಾಗಿ ವಿನಾಶವಾಗಿದೆ: ಪ್ರಧಾನಿ ಮೋದಿ

ರಾಂಚಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ ಎಂದರು. ಕಾಂಗ್ರೆಸ್‌ನ ಕಾರ್ಯಸಾಧುವಲ್ಲದ ಚುನಾವಣಾ ಗ್ಯಾರಂಟಿಗಳು ಹೇಗೆ ರಾಜ್ಯಗಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಖರ್ಗೆ ಹೇಗೆ ಬಹಿರಂಗವಾಗಿ ಹೇಳಿದರು ಎಂದು ನನಗೆ ಅಚ್ಚರಿಯಾಗುತ್ತಿದೆ. ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾಗಿಯೇ ಇಂದು ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂಥ ರಾಜ್ಯಗಳು …

Read More »

ಕಲಬುರಗಿಯಲ್ಲಿ 57 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಗಳ ರದ್ದು

ಕಲಬುರಗಿ: ಕಟ್ಟಡ ನಿರ್ಮಾಣ ಕಾರ್ಮಿಕರ ಹೆಸರಿನಲ್ಲಿ ಕಾರ್ಡ್ ಪಡೆದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲಭ್ಯ ದೋಚುತ್ತಿದ್ದ ನಕಲಿ ಕಾರ್ಮಿಕರ ವಿರುದ್ಧದ ಕಾರ್ಯಾಚರಣೆಯನ್ನು ಕಾರ್ಮಿಕ ಇಲಾಖೆ ಚುರುಕುಗೊಳಿಸಿದೆ. ಕಲಬುರಗಿ ಪ್ರಾದೇಶಿಕ ವಿಭಾಗದ ಜಿಲ್ಲೆಗಳಲ್ಲಿ ಕಳೆದೊಂದು ವರ್ಷದಲ್ಲಿ ಒಟ್ಟು 57,840 ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಕಾರ್ಮಿಕ ಇಲಾಖೆಯ ಕಲಬುರಗಿ ಪ್ರಾದೇಶಿಕ ವಿಭಾಗವು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ದಾವಣಗೆರೆ ಸೇರಿ ಒಂಬತ್ತು ಜಿಲ್ಲೆಗಳ …

Read More »

ರೈತರು ಹತ್ತಿ ಖರೀದಿ ಕೇಂದ್ರದ ಸದುಪಯೋಗ ಪಡಿಸಿಕೊಳ್ಳಬೇಕು: ಸಚಿವ ಬೋಸರಾಜು

ರಾಯಚೂರು: ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿ ಮಾರಾಟ ಮಾಡಲು ತಾಲೂಕ ಕೇಂದ್ರದಲ್ಲಿ ಖರೀದಿ ಕೇಂದ್ರವನ್ನು ತೆರೆಯಲಾಗಿದ್ದು, ಈ ಭಾಗದ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಎನ್ ಎಸ್ ಬೋಸರಾಜು ಅವರು ತಿಳಿಸಿದರು. ಮಾನ್ವಿ ಪಟ್ಟಣದಲ್ಲಿ ಭಾರತೀಯ ಹತ್ತಿ ನಿಗಮ ನಿಯಮಿತ ವತಿಯಿಂದ ನೂತನ ಹತ್ತಿ ಖರೀದಿ ಕೇಂದ್ರವನ್ನು ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಅಧಿಕೃತವಾಗಿ …

Read More »

ಯಾದಗಿರಿಯಲ್ಲಿ ಬೆಂಬಲ ಬೆಲೆಯಡಿ 21 ಹತ್ತಿ ಖರೀದಿ ಕೇಂದ್ರಗಳ ಸ್ಥಾಪನೆ

ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಹೆಚ್ಚಿನ ಕ್ಷೇತ್ರದಲ್ಲಿ ವಾಣಿಜ್ಯ ಬೆಳೆಯಾಗಿರುವ ಹತ್ತಿ ಬೆಲೆ ಕುಸಿತದಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಹೀಗಾಗಿ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸಲು ಜಿಲ್ಲೆಯಲ್ಲಿ 21 ಖರೀದಿ ಕೇಂದ್ರಗಳನ್ನು ಸ್ಥಾ‍ಪಿಸಲು ಮುಂದಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಲು 2024-25ನೇ ಸಾಲಿನ ಭಾರತೀಯ ಹತ್ತಿ ನಿಗಮ ಹುಬ್ಬಳ್ಳಿ ಘಟಕದಿಂದ ನವೆಂಬರ್ ಮೊದಲ ವಾರದಲ್ಲೇ ಖರೀದಿ ಆರಂಭವಾಗುವ ಸಾಧ್ಯತೆ ಇದೆ. ಕಳೆದ ಎರಡ್ಮೂರು ವರ್ಷಗಳಿಂದ ಹತ್ತಿಗೆ ಸೂಕ್ತ ಬೆಲೆ ಇಲ್ಲದೇ …

Read More »

ಬೀದರ್ ನಲ್ಲಿ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ: 73 ಜನರ ವಿರುದ್ದ ಎಫ್ಐಆರ್‌ ದಾಖಲು

ಬೀದರ್ : ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಎಸ್/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೌದು ಕಟಕ ಚಿಂಚೋಳಿ ಠಾಣೆಯಲ್ಲಿ 73 ಜನರ ವಿರುದ್ಧ ದಾಖಲಾಗಿದೆ. ಬೀದರ್ …

Read More »

ವಿವಿಧ ಯೋಜನೆಗಳಿಗೆ ಸಾಲ ನೀಡಲು ವಿಳಂಬ ಮಾಡುವುದು ಸರಿಯಲ್ಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೇಂದ್ರ ಸರ್ಕಾರದ ಯೋಜನೆಗಳಾದ ವಿಶ್ವಕರ್ಮ, ಸ್ವನಿಧಿ, ಮುದ್ರಾ ಯೋಜನೆ, ಸ್ಟಾರ್ಟ್‌ಅಪ್ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಲ ನೀಡಲು ಯಾವುದೇ ವಿಳಂಬ ಮಾಡುವುದು ಸರಿಯಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಕಚೇರಿಯ ಡಾ.ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಸಾಲ ಸೌಲಭ್ಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ 4,465 ಮಂದಿ ಸ್ವನಿಧಿಯ ಮೊದಲ ಹಂತದ …

Read More »

ರಾಜ್ಯದ 10 ಜಿಲ್ಲೆಗಳಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಬೆಂಗಳೂರು: ಜೀತ ಪದ್ಧತಿ ನಿಷೇಧಿಸಿ 48 ವರ್ಷಗಳು ಕಳೆದರೂ ಬೆಂಗಳೂರು ಮತ್ತು ರಾಜ್ಯದ ಇತರ 10 ಜಿಲ್ಲೆಗಳಲ್ಲಿ ಈ ಪದ್ಧತಿ ಇನ್ನೂ ಜೀವಂತವಾಗಿದೆ. ಜೀತ ಕಾರ್ಮಿಕ ಪದ್ಧತಿಯನ್ನು ಪತ್ತೆ ಮಾಡಿ ಅದನ್ನು ಕೊನೆಗಾಣಿಸಲೆಂದು ರಾಜ್ಯ ಸರ್ಕಾರ ಹೊಸದಾಗಿ 52 ಅಧಿಕಾರಿಗಳನ್ನು ನೇಮಿಸಿದ್ದು, ಜೀತ ನಿಗ್ರಹ ಅಧಿಕಾರಿಗಳು ಎಂದು ಅವರನ್ನು ಕರೆಯಲಾಗಿದೆ. ಎಲ್ಲೆಲ್ಲಿ ಜೀತ ಕಾರ್ಮಿಕ ಪದ್ಧತಿ ಇದೆ ಎಂಬುದನ್ನು ಪತ್ತೆ ಮಾಡಿ, ಅದಕ್ಕೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಆಪಾದಿತರನ್ನು ಶಿಕ್ಷೆಗೆ ಗುರಿಪಡಿಸುವುದು …

Read More »

ಬೆಳಗಾವಿ ಜಂಟಿ ಅಧಿವೇಶನಕ್ಕೆ ಬರುವಂತೆ ಬರಾಕ್ ಒಬಾಮಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಗದಗ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 39ನೇ ಎಐಸಿಸಿ ಅಧಿವೇಶನಕ್ಕೆ ಈಗ ಶತಮಾನೋತ್ಸವ ಸಂಭ್ರಮ. ಆ ನೆನಪನ್ನು ಮೆಲುಕು ಹಾಕುವ ಸಲುವಾಗಿ 2024ರ ಅ.2ರಿಂದ 2025ರ ಅ.2ರವರೆಗೆ ಶತಮಾನೋತ್ಸವ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು. ಈ ಅವಧಿಯಲ್ಲಿ ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಜತೆಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಕ್ಕೆ ಬರಬೇಕು …

Read More »