Breaking News

BigTv News

ಪಂಚಾಯತಿ ಅಭಿವೃದ್ದಿ ಅಧಿಕಾರಿಗಳ ಬೇಡಿಕೆ ಪರಿಶೀಲನೆಗೆ ಸಭೆ

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗ್ರೂಪ್-ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳ ಬೇಡಿಕೆಗಳನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಈ ಸಭೆ ನಡೆಯಿತು. ನೌಕರರ ಬೇಡಿಕೆಗಳ ಪರಿಶೀಲನೆಗಾಗಿಯೇ ಇತ್ತೀಚೆಗೆ ಸರ್ಕಾರ …

Read More »

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್ …

Read More »

ಏಕಗವಾಕ್ಷಿ ಯೋಜನೆಯಡಿ ಉಮಾ ತಂತ್ರಾಂಶ ಅಭಿವೃದ್ದಿ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗೆ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ಮೈಕ್ರೋಸಾಫ್ಟ್ ಕಂಪನಿಯ ನೆರವಿನಿಂದ ಉಮಾ (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಫೆಬ್ರುವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ತಿಳಿಸಿದ್ದಾರೆ. ಏಕಗವಾಕ್ಷಿ ಯೋಜನೆ ಜಾರಿ ಸಂಬಂಧ ಮೈಕ್ರೋಸಾಫ್ಟ್ ಸಂಸ್ಥೆಯ ಪ್ರತಿನಿಧಿಗಳು ನೀಡಿದ ಪ್ರಾತ್ಯಕ್ಷಿಕೆ‌ …

Read More »

ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳ ಸ್ಥಾಪನೆ: ಸಚಿವ ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿರುವ ಸದ್ಯ 22 ವೈದ್ಯ ಕಾಲೇಜುಗಳಿದ್ದು, ಕನಕಪುರ ಮತ್ತು ರಾಮನಗರ ವೈದ್ಯ ಕಾಲೇಜು ಈ ವರ್ಷ ಪ್ರಾರಂಭವಾಗುವ ನಿರೀಕ್ಷೆ ಇದೆ. ಇದಲ್ಲದೆ, ಬಾಗಲಕೋಟೆ, ತುಮಕೂರು, ಕೋಲಾರ, ದಾವಣಗೆರೆ ಮತ್ತು ಬಿಜಾಪುರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಎಲ್ಲಾ …

Read More »

ಬೆಂಬಲ ಬೆಲೆಯಡಿ ರೈತರಿಗೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯಲು ಸಚಿವ ಶರಣಪ್ರಕಾಶ್ ಪಾಟೀಲ ಸೂಚನೆ

ರಾಯಚೂರು: ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಬೆಳೆ ಕಟಾವು ಹಂತದಲ್ಲೇ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು …

Read More »

ಸಾಂಬ್ರಾ ವಿಮಾನ ನಿಲ್ದಾಣದ ಟರ್ಮಿನಲ್ ಅಭಿವೃದ್ದಿ ಕಾಮಗಾರಿಯನ್ನು ಪರಿಶೀಲಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ವಿಮಾನ ನಿಲ್ದಾಣ ವಿಕ್ಷೀಸಿ, ನೂತನವಾಗಿ ನಿರ್ಮಾಣವಾಗುತ್ತಿರುವ ಟರ್ಮಿನಲ್ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಟರ್ಮಿನಲ್ ಕಟ್ಟಡ, ರನ್‌ವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಗಳೂ ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಂತರಾಷ್ಟ್ರೀಯ ಮಟ್ಟಕ್ಕೆ ವಿಮಾನ ನಿಲ್ದಾಣ …

Read More »

ಹೆಚ್ಚು ತೆರಿಗೆ ಕೊಟ್ಟರೂ ರಾಜ್ಯಕ್ಕೆ ಮಾತ್ರ ಅಲ್ಪ ಪಾಲು: ಕೇಂದ್ರದ ವಿರುದ್ಧ ಸಚಿವ ಜಾರ್ಜ್ ಆಕ್ರೋಶ

ಸಂಡೂರು: ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದರು. ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಇಂದು ಪ್ರಚಾರ ಕೈಗೊಂಡರು. ಓ ಮೇಘ ಬಿಲಿವರ್ಸ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ …

Read More »

ಹಿಂದೂಗಳ ಭೂಮಿ ಕಬಳಿಸಲು ಕಾಂಗ್ರೆಸ್ ನಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ಮೂಲಕ ಮತಾಂತರ ಮಾಡಿದಂತೆ ಈಗ ಸಚಿವ ಜಮೀರ್ ಅಹಮದ್ ಖಾನ್ ಅವರು ವಕ್ಫ್ ಮೂಲಕ ಹಿಂದೂಗಳ ಭೂಮಿ ಕಬಳಿಸಲು ಕಾಂಗ್ರೆಸ್ ಲ್ಯಾಂಡ್ ಜಿಹಾದ್ ನಡೆಸುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಕೆ.ಆರ್.ಪುರಂನ ತಹಸೀಲ್ದಾರ್ ಕಚೇರಿ ಎದುರು ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಲವ್ ಜಿಹಾದ್ ತುಂಬಿ ನಮ್ಮ ಮುಗ್ದ ಹೆಣ್ಣು …

Read More »

ಶಿಗ್ಗಾಂವಿಯಲ್ಲಿ ಸಾಮಾನ್ಯ ಕುಟುಂಬದ ಪಠಾಣ್ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಶಿಗ್ಗಾಂವಿ: ಇಂದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಮನವಿ ಮಾಡುತ್ತೇನೆ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರು …

Read More »

ಕೆನಡಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರವನ್ನು ಖಂಡಿಸಿದ ಭಾರತ

ನವದೆಹಲಿ : ಕೆನಡಾದ ಬ್ರಾಂಪ್ಟನ್ನಲ್ಲಿ ನಡೆದ ಹಿಂಸಾಚಾರವನ್ನ ಕೇಂದ್ರ ಸರ್ಕಾರ ಖಂಡಿಸಿದ್ದು, ಕೆನಡಾದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಒಂಟಾರಿಯೊದ ಬ್ರಾಂಪ್ಟನ್ನಲ್ಲಿರುವ ಹಿಂದೂ ಸಭಾ ದೇವಸ್ಥಾನದಲ್ಲಿ ನಿನ್ನೆ ಉಗ್ರಗಾಮಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರದ ಕೃತ್ಯಗಳನ್ನ ನಾವು ಖಂಡಿಸುತ್ತೇವೆ. ಎಲ್ಲಾ ಪೂಜಾ ಸ್ಥಳಗಳನ್ನು ಇಂತಹ ದಾಳಿಗಳಿಂದ ರಕ್ಷಿಸಲಾಗಿದೆ ಎಂದು …

Read More »