Breaking News

BigTv News

ಜಮ್ಮುಕಾಶ್ಮೀರದಲ್ಲಿ 6 ವರ್ಷಗಳ ನಂತರ ಮೊದಲ ವಿಧಾನಸಭೆ ಅಧಿವೇಶನ ಆರಂಭ

ಶ್ರೀನಗರ: 6 ವರ್ಷಗಳಲ್ಲಿ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಮೊದಲ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆರ್ಟಿಕಲ್ 370 ರದ್ದತಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ. ಪಿಡಿಪಿ ಶಾಸಕ ವಾಹಿದ್ ಪಾರಾ ಇಂದು (ನ.04 ರಂದು) ಆರ್ಟಿಕಲ್ 370 ರದ್ದತಿ ವಿರುದ್ಧ ನಿರ್ಣಯ ಮಂಡಿಸಿದ್ದು, ಜಮ್ಮು-ಕಾಶ್ಮೀರಕ್ಕೆ ಈ ಹಿಂದೆ ಇದ್ದ ರಾಜ್ಯದ ಸ್ಥಾನಮಾನಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಆರ್ಟಿಕಲ್ 370 ರದ್ದತಿ ವಿರುದ್ಧದ ನಿರ್ಣಯ ಕೈಗೊಂಡಿದ್ದರ ವಿರುದ್ಧ ವಿಪಕ್ಷ ಬಿಜೆಪಿ ಸದನದಲ್ಲಿ ಪ್ರತಿಭಟನೆ ನಡೆಸಿದೆ. …

Read More »

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: 9 ಜನರ ಸಾವು

ಇಂಡೋನೇಷ್ಯಾ: ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಹಲವಾರು ಮನೆಗಳು ಸುಟ್ಟು ಭಸ್ಮವಾಗಿದ್ದು, 9 ಜನರು ಸಾವನ್ನಪ್ಪಿರುವ ಘೋರ ಘಟನೆ ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ನಡೆದಿದೆ. ವಿಪತ್ತು ನಿರ್ವಹಣಾ ಸಂಸ್ಥೆ ಮಾಹಿತಿ ಪ್ರಕಾರ ಇಂಡೋನೇಷ್ಯಾದಲ್ಲಿ ಕಳೆದ ವಾರದಿಂದ ಮೌಂಟ್ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಉಕ್ಕಿ ಹರಿಯುತ್ತಿದ್ದು, ಸ್ಥಳೀಯ ಜನರಿಗೆ ಅಪಾಯದ ಮುನ್ಸೂಚನೆ ನೀಡಲಾಗಿದ್ದು, ಕಟ್ಟೆಚ್ಚರ ಸೂಚಿಸಲಾಗಿದೆ. ಇದೀಗ ಫ್ಲೋರ್ಸ್ ದ್ವೀಪದಲ್ಲಿ ಜ್ವಾಲಾ ಮುಖಿ ಆಗಾಗಾ ಸ್ಫೋತಗೊಳ್ಳುತ್ತಿದ್ದು, ಹಲವು ಮನೆಗಳು ನಾಶವಾಗಿವೆ. ಈವರೆಗೆ …

Read More »

ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ಮಠಾಧೀಶರ ನೇತೃತ್ವದಲ್ಲಿ ಹೋರಾಟ

ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ.ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ ಗುರು …

Read More »

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್: 36 ಜನರ ಸಾವು

ಉತ್ತರಾಖಂಡ್: ಉತ್ತರಾಖಂಡದ ಅಲ್ಮೋರಾದಲ್ಲಿ ಇಂದು ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 36 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 19 ಮಂದಿ ಗಾಯಗೊಂಡಿದ್ದಾರೆ. ಪೌರಿ ಜಿಲ್ಲೆಯ ನೈನಿದಂಡಾದಿಂದ ನೈನಿತಾಲ್ನ ರಾಮ್ನಗರಕ್ಕೆ ತೆರಳುತ್ತಿದ್ದ ಬಸ್ ಕಮರಿಗೆ ಬಿದ್ದಿದೆ. ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್‌ಎಫ್) ತಂಡಗಳು ಮಾರ್ಚುಲಾದ ಸಾಲ್ಟ್ ಪ್ರದೇಶದಲ್ಲಿ ಅಪಘಾತದ ಸ್ಥಳದಲ್ಲಿವೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವಿನ ಸಂಖ್ಯೆ …

Read More »

ವಕ್ಫ್ ವಿಷಯ ಬಳಸಿಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ: ವಿನಯ್ ಕುಲಕರ್ಣಿ

ಹಾವೇರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೇಹಾ ಹತ್ಯೆ ಕೇಸ್ ಬಳಸಿಕೊಂಡರು ಈಗ ವಕ್ಫ್‌ ವಿಷಯ ಬಳಿಸಿಕೊಂಡು ಚುನಾವಣೆ ಎದುರಿಸ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ವಿನಯ್ ಕುಲಕರ್ಣಿ ಕಿಡಿ ಕಾರಿದ್ದಾರೆ. ಇಂದು(ಭಾನುವಾರ) ಜಿಲ್ಲೆಯ ಶಿಗ್ಗಾವಿ ತಾಲೂಕಿನ‌ ಬಂಕಾಪುರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ವಕ್ಫ್‌ ವಿವಾದ ಚುನಾವಣೆ ಮೇಲೆ ಪರಿಣಾಮ ಬೀರೋಕೆ ಸಾಧ್ಯವಿಲ್ಲ. ನೋಟಿಸ್ಹಿಂ ಪಡೆಯುವ ಕೆಲಸ ಈಗಾಗಲೇ ಆಗಿದೆ ನಾವೂ ರೈತರೇ, ರೈತರಿಗೆ …

Read More »

ವಕ್ಫ್ ಆಸ್ತಿ ಕುರಿತು ಬಿಜೆಪಿಯಿಂದ ವದಂತಿ ಹಬ್ಬಿಸುವ ಯತ್ನ: ಸಚಿವ ಝಮೀರ್ ಅಹ್ಮದ್

ಕಲಬುರಗಿ : ವಕ್ಫ್ ಆಸ್ತಿ ಕುರಿತು ಬಿಜೆಪಿ ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸುವ ಪ್ರಯತ್ನ ಮಾಡುತ್ತಿದೆ ಇದರಿಂದ ಬಿಜೆಪಿಗೆ ಯಾವುದೇ ರೀತಿಯ ಲಾಭ ಆಗುವುದಿಲ್ಲ ಎಂದು ಸಚಿವ ಝಮೀರ್ ಅಹ್ಮದ್ ಖಾನ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಸ್ವಾತಂತ್ರ್ಯ ಬರುವುದಕ್ಕಿಂತ ಮುಂಚೆಯಿಂದಲೂ ಇದೆ ವಕ್ಫ್ ಬಳಿ ಇರುವುದು ಸರಕಾರ ಕೊಟ್ಟಿರುವ ಜಮೀನಲ್ಲ, ಬದಲಿಗೆ ದಾನಿಗಳು ಕೊಟ್ಟಿರುವ ಜಮೀನಾಗಿದೆ. ಅದೀಗ ಮಂಡಳಿ ಬಳಿಯಿದೆ ಇಷ್ಟಾದರೂ ಕೇಂದ್ರ …

Read More »

ದೇಶದಾದ್ಯಂತ 2026ರ ವೇಳೆಗೆ ನಕ್ಸಲಿಸಂ ನಿರ್ನಾಮ ಮಾಡಲಾಗುವುದು: ಕೇಂದ್ರ ಸಚಿವ ಅಮಿತ್ ಶಾ

ರಾಂಚಿ: ಹೇಮಂತ್‌ ಸೊರೇನ್‌ ನೇತೃತ್ವದ ಜೆಎಂಎಂ ಒಕ್ಕೂಟ ನಕ್ಸಲಿಸಂಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದ ಗೃಹ ಸಚಿವ ಅಮಿತ್‌ ಶಾ, 2026ರ ಮಾರ್ಚ್‌ ವೇಳೆ ದೇಶದಾದ್ಯಂತ ನಕ್ಸಲಿಸಂ ಅನ್ನು ನಿರ್ನಾಮ ಮಾಡಲಾಗುವುದು ಎಂದು ಹೇಳಿದರು. ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿ ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಕ್ಸಲ್‌ ಬೆದರಿಕೆಗಳಿಂದ ದೇಶವನ್ನು ಮುಕ್ತ ಮಾಡಲಿದೆ. ಕ್ಷುಲ್ಲಕ ರಾಜಕೀಯ ಲಾಭಕ್ಕಾಗಿ ನಕ್ಸಲಿಸಂಗೆ ಉತ್ತೇಜನ ನೀಡುತ್ತಿರುವ ದಲಿತ …

Read More »

ಪಂಜಾಬ್ ನಲ್ಲಿ ಇಲ್ಲಿಯವರೆಗೆ 85.41 ಲಕ್ಷ ಟನ್ ಭತ್ತ ಖರೀದಿ

ನವದೆಹಲಿ: 2024-25ನೇ ಸಾಲಿನ ಮಾರುಕಟ್ಟೆ ವರ್ಷದಲ್ಲಿ ಪಂಜಾಬ್‌ನಲ್ಲಿ ಇಲ್ಲಿಯವರೆಗೆ 85.41 ಲಕ್ಷ ಟನ್‌ ಭತ್ತ ಖರೀದಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯ ಇಂದು ತಿಳಿಸಿದೆ. ಭಾರತೀಯ ಆಹಾರ ನಿಗಮದ ರಾಜ್ಯ ಘಟಕದಿಂದ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. 4 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್‌ ಖಾತೆಗಳಿಗೆ ₹19,800 ಕೋಟಿ ಪಾವತಿಸಲಾಗಿದೆ’ ಎಂದು ತಿಳಿಸಿದೆ. ಈ ಋತುವಿನಲ್ಲಿ ಪಂಜಾಬ್‌ನಿಂದ 185 ಲಕ್ಷ ಟನ್‌ ಭತ್ತ ಖರೀದಿಸುವ ಗುರಿ ಹೊಂದಲಾಗಿದೆ. ಎ ಗ್ರೇಡ್‌ ಭತ್ತಕ್ಕೆ …

Read More »

ರಾಜ್ಯ ಸರ್ಕಾರದ ಜಾತಿಗಣತಿ ಕುರಿತು ನ.5 ರಂದು ತೆಲಂಗಾಣ ಕಾಂಗ್ರೆಸ್​ ಸಭೆ

ಹೈದರಾಬಾದ್‌: ರಾಜ್ಯ ಸರ್ಕಾರದ ಜಾತಿಗಣತಿಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್‌ ಪಕ್ಷವು ನವೆಂಬರ್‌ 5ರಂದು ಆಯೋಜಿಸಲಿರುವ ಸಭೆಗೆ ರಾಹುಲ್‌ ಗಾಂಧಿ ಅವರು ಹಾಜರಾಗಲಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಬಿ. ಮಹೇಶ್‌ ಕುಮಾರ್‌ ಗೌಡ್‌ ಅವರು, ಜಾತಿಗಣತಿ ಕುರಿತು ಸಲಹೆಗಳನ್ನು ಸ್ವೀಕರಿಸುವ ಸಲುವಾಗಿ ರಾಜ್ಯ ಘಟಕವು ಸಭೆ ನಡೆಸಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಿರುವುದಾಗಿ ಗೌಡ್‌ ತಿಳಿಸಿದ್ದಾರೆ. ಕಳೆದ ವರ್ಷ ವಿಧಾನಸಭೆ ಚುನಾವಣೆ …

Read More »

ನ್ಯಾಯಮೂರ್ತಿ ಸಂಜೀವ್ ಖನ್ನಾ ನ.11 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ನ. 11 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಅಧಿಕಾರಾವಧಿಯು ನವೆಂಬರ್ 10 ರಂದು ಕೊನೆಗೊಳ್ಳಲಿದೆ. ಸಿಜೆಐ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ ಕೆಲವು ದಿನಗಳ ನಂತರ ರಾಷ್ಟ್ರಪತಿಗಳು ನೇಮಿಸಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನವೆಂಬರ್ 10, 2024 …

Read More »