ನವದೆಹಲಿ: ನವೆಂಬರ್ 25 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ತಿಳಿದುಬಂದಿದೆ. ಈ ಚಳಿಗಾಲದ ಅಧಿವೇಶನದಲ್ಲಿ, ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆ ಮತ್ತು ವಕ್ಫ್(ತಿದ್ದುಪಡಿ) ಮಸೂದೆ – 2024 ಬಗ್ಗೆ ಚರ್ಚೆಯಾಗಲಿದೆ. ಗೃಹ ಸಚಿವ ಅಮಿತ್ ಶಾ ಅವರು ವಕ್ಫ್(ತಿದ್ದುಪಡಿ) ಮಸೂದೆ, 2024 ಕುರಿತು ಮಾತನಾಡುತ್ತಾ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಈ ಮೊದಲೇ ಪ್ರಸ್ತಾಪಿಸಿದ್ದಾರೆ. ಗುರ್ಗಾಂವ್ನ ಬಾದ್ಶಾಹ್ಪುರ …
Read More »ಮತಾಂತರಗೊಂಡವರಿಗೆ ಎಸ್ ಸಿ ಸ್ಥಾನಮಾನ ಕುರಿತ ಆಯೋಗದ ಅವಧಿ ಒಂದು ವರ್ಷ ವಿಸ್ತರಣೆ
ನವದೆಹಲಿ: ಸಿಖ್ ಮತ್ತು ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಗಳಿಗೆ ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನ ನೀಡಬಹುದೇ ಎಂದು ಪರಿಶೀಲಿಸಲು ಸ್ಥಾಪಿಸಲಾದ ಆಯೋಗದ ಅವಧಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಒಂದು ವರ್ಷ ವಿಸ್ತರಿಸಿದೆ. ನವೆಂಬರ್ 1 ರ ಅಧಿಸೂಚನೆಯ ಮೂಲಕ ಔಪಚಾರಿಕವಾಗಿರುವ ಈ ನಿರ್ಧಾರವು, ಆಯೋಗವು ತನ್ನ ಕೆಲಸವನ್ನು ಅಕ್ಟೋಬರ್ 10 ರಂದು ಮುಕ್ತಾಯಗೊಳಿಸಲು ಪ್ರಾರಂಭಿಸಿದಾಗ ತನ್ನ ವರದಿಯನ್ನು ಅಂತಿಮಗೊಳಿಸಲು ಹೆಚ್ಚುವರಿ ಸಮಯವನ್ನು ಕೋರಿದ್ದರಿಂದ …
Read More »ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ವಹಣೆಗೆ ಚಿಂತನೆ: ಸಚಿವ ಬೋಸರಾಜು
ಬೆಂಗಳೂರು: ಸೇವಾ ಮನೋಭಾವನೆಯಿಂದ ಉಚಿತವಾಗಿ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುತ್ತಿರುವ ಸತ್ಯಸಾಯಿ ಟ್ರಸ್ಟ್ ಜೊತೆಗೂಡಿ ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು. ಇತ್ತೀಚೆಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಸುಜಾತಾ ರಾಥೋಡ್, ರಾಯಚೂರು ಜಿಲ್ಲಾಧಿಕಾರಿಗಳಾದ ನಿತೇಶ್ ಕೆ, ಸತ್ಯಸಾಯಿ ಟ್ರಸ್ಟ್ ನ ಪದಾಧಿಕಾರಿಗಳಾದ ಗೋವಿಂದ ರೆಡ್ಡಿ ಸೇರಿದಂತೆ …
Read More »ದೇಶವು 2029-30 ರ ವೇಳೆಗೆ 50 ಸಾವಿರ ಕೋಟಿ ರೂ. ರಕ್ಷಣಾ ವಸ್ತುಗಳನ್ನು ರಫ್ತು ಮಾಡಲಿದೆ: ಕೇಂದ್ರ ಸಚಿವ ರಾಜನಾಥ್ ಸಿಂಗ್
ನವದೆಹಲಿ: 2029-30ರ ವೇಳೆಗೆ ದೇಶವು 50,000 ಕೋಟಿ ರೂ.ಗಿಂತ ಹೆಚ್ಚು ರಕ್ಷಣಾ ವಸ್ತುಗಳನ್ನು ರಫ್ತು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಲ್ಲಿ ನಡೆದ 65 ನೇ ಸಂಸ್ಥಾಪನಾ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರ ವಿಕ್ಷಿತ್ ಭಾರತ್ ದೃಷ್ಟಿಕೋನವನ್ನು ಸಾಕಾರಗೊಳಿಸಲು ದೇಶವು ಆಮದು ಮಾಡಿಕೊಳ್ಳುವ ಉನ್ನತ ಮಟ್ಟದ ತಂತ್ರಜ್ಞಾನಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸುವಂತೆ ಭಾರತೀಯ …
Read More »ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ : ಲಕ್ಷ್ಮೀ ಹೆಬ್ಬಾಳ್ಳರ್
ಉಡುಪಿ: ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನೋ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಉತ್ತರಿಸಿದರು. ವಕ್ಸ್ ಮಂಡಳಿಗೆ ಜಮೀನು ಬಿಟ್ಟು ಕೊಡುವಂತೆ ರೈತರಿಗೆ …
Read More »ಅತಿವೃಷ್ಟಿಯಿಂದ ಆದ ಬೆಳೆ ಹಾನಿಗೆ ಪರಿಹಾರ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1 ಕೋಟಿ 42 ಲಕ್ಷ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.
Read More »ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿಲ್ಲ: ಸಚಿವ ಚಲುವರಾಯಸ್ವಾಮಿ
ಮಂಡ್ಯ : ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಯೂ ಇಲ್ಲ ಅವುಗಳನ್ನು ನಿಲ್ಲಿಸುವ ಪ್ರಶ್ನೆಯೂ ಸರ್ಕಾರದ ಮುಂದಿಲ್ಲ ಎಂದು ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಕೆಲ ಮಹಿಳೆಯರು ಟಿಕೆಟ್ ಬೇಡ ಎನ್ನುತ್ತಿದ್ದಾರೆ ಆ ಬಗ್ಗೆ ಚರ್ಚೆ ನಡೆಸುವುದಾಗಷ್ಟೇ ಹೇಳಿದ್ದಾರೆ. ಸಿಎಂ ಕೂಡ ಯೋಜನೆ ನಿಲ್ಲಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಹಾಗಾಗಿ ರಾಜಕೀಯವಾಗಿ ಈ ವಿಷಯವನ್ನು ಚರ್ಚಿಸುವುದು ಬೇಡ …
Read More »ನವದೆಹಲಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನವದೆಹಲಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಕುರಿತು ಪರಿಶೀಲಿಸಿದರು. ಪ್ರಯಾಣಿಕರ ಸೌಲಭ್ಯಗಳ ಬಗ್ಗೆ ಖುದ್ದಾಗಿ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, ಕಳೆದ ವರ್ಷ ದೀಪಾವಳಿ ಹಾಗೂ ಇತರ ಹಬ್ಬಗಳ ಸಂದರ್ಭಗಳಲ್ಲಿ 4 ಸಾವಿರ 500 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಪ್ರಯಾಣಿಕರ ಸೌಲಭ್ಯಕ್ಕಾಗಿ ಈ ಬಾರಿ 7 ಸಾವಿರದ 435 …
Read More »ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ಚನ್ನಪಟ್ಟಣ ಹಾಗೂ ರಾಮನಗರ ಅಭಿವೃದ್ದಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಚನ್ನಪಟ್ಟಣ: ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ಚನ್ನಪಟ್ಟಣ ಹಾಗೂ ರಾಮನಗರ ಅಭಿವೃದ್ಧಿ ಮಾಡಲಾಗುವುದು ಮತ್ತು ಇವೆರಡೂ ಪಟ್ಟಣಗಳ ನಡುವೆ ಸುಮಾರು ಹತ್ತು ಸಾವಿರ ಜನರಿಗೆ ನೇರ ಉದ್ಯೋಗ ಸಿಗುವಂತಹ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಕುಮಾರಸ್ವಾಮಿ ಅವರು, ಚನ್ನಪಟ್ಟಣ ಹಾಗೂ ರಾಮನಗರಗಳ ಅಭಿವೃದ್ಧಿಗೆ …
Read More »ಶಿವಮೊಗ್ಗದಲ್ಲಿ ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶ
ಶಿವಮೊಗ್ಗ: ಶಿವಮೊಗ್ಗ ಸಮೀಪದ ಗುಡ್ಡದ ಅರಕೆರೆ ಗ್ರಾಮಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, 1200 ಬಾಳೆ ಗಿಡ, 200 ಅಡಿಕೆ ಗಿಡ ನಾಶ ಮಾಡಿವೆ. ನಿನ್ನೆ ರಾತ್ರಿಯಿಂದ ಬೆಳಗಿನ ಜಾವದವರೆಗೆ ಸುಮಾರು ಆರು ಆನೆಗಳು ತೋಟದಲ್ಲೇ ಬಿಡು ಬಿಟ್ಟಿದ್ದು, ಬೆಳಗ್ಗೆ ಕೆಲಸಗಾರರು ಬಂದಾಗ ಜಾಗ ಖಾಲಿ ಮಾಡಿವೆ. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಬಂದು ಕಚೇರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





