ಕಲಬುರಗಿ : ಅಫಜಲಪುರ ತಾಲೂಕಿನ ಗೊಬ್ಬರ ಬಿ.ಗ್ರಾಮದ ಜಮೀನೊಂದರ ಮೇಲೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು, ಅಕ್ರಮವಾಗಿ ಕಬ್ಬಿನ ಬೆಳೆ ಮಧ್ಯೆ ಬೆಳೆದಿರುವ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು, ಒಟ್ಟು 57.7.ಕೆ.ಜಿ. ಒಣ ಗಾಂಜಾ ಮತ್ತು 15 ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜಮೀನಿನ ಮಾಲೀಕರ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆ-1985ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. …
Read More »ಯೋಧರೊಂದಿಗೆ ದೀಪಾವಳಿ ಆಚರಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು
ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅರುಣಾಚಲ ಪ್ರದೇಶದ ಬುಮ್ಲಾ ವಾಸ್ ಗಡಿ ಪ್ರದೇಶದಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಇದೇ ವೇಳೆ ಚೀನಾದ ಪಿಎಲ್ಎ ಸೈನಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಕಿರಣ್ ರಿಜಿಜು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಹಾಗೂ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಗಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆಯೂ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ಈಗ ಭಾರತದ ಗಡಿ ಅಭಿವೃದ್ಧಿ ಬಗ್ಗೆ ಹೆಮ್ಮೆಪಡುತ್ತಾರೆ. ಅರುಣಾಚಲ ಪ್ರದೇಶದ …
Read More »ಕಲಬುರಗಿಯಲ್ಲಿ ಸಚಿವ ಜಮೀರ್ ಅಹಮದ್ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ಮುಖಂಡರು
ಕಲಬುರಗಿ : ರಾಜ್ಯಾದ್ಯಂತ ಓಡಾಡಿ ದೇವಸ್ಥಾನ, ದರ್ಗಾ, ಚರ್ಚ್ಗಳ ಆಸ್ತಿಗಳನ್ನು ವಕ್ಫ್ಗೆ ಬರೆಸಿಕೊಳ್ಳುವ ಮೂಲಕ ರಾಜ್ಯದ ಜನರ ಆಸ್ತಿಯನ್ನು ಲೂಟಿ ಮಾಡುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕೆಂದು ಸೇಡಂನ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಆಗ್ರಹಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಕ್ಫ್ ಬೋರ್ಡ್ನಿಂದ ಸಮುದಾಯಕ್ಕೆ ಯಾವುದೇ ಲಾಭ ಸಿಗುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಸೇರಿಸಲಾಗಿರುವ ಕಾಂಗ್ರೆಸ್ …
Read More »ಸಂಡೂರು ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ
ಸಂಡೂರು: ಸಂಡೂರು ಕ್ಷೇತ್ರದ ವಿಧಾನ ಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, ಇಂದು ಕ್ಷೇತ್ರದ ವಿವಿಧೆಡೆ ಪ್ರಚಾರ ಆರಂಭಿಸಿದರು. ಪತಿ ಇ ತುಕಾರಾಂ ಅವರೊಂದಿಗೆ ಯಶವಂತ ನಗರ, ಸೋಮಲಾಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಪ್ರಚಾರದ ವೇಳೆ ಮಾತನಾಡಿದ ಅನ್ನಪೂರ್ಣ ಅವರು, ಯಶವಂತ ನಗರದಲ್ಲಿ ನಾವು ಬದುಕು ಕಟ್ಟಿಕೊಂಡಿದ್ದು ಇಲ್ಲಿನ ಜನ ಪ್ರತಿ ಬಾರಿಯೂ ನಮಗೆ ಹೆಚ್ಚಿನ ಮತ ನೀಡಿ ಗೆಲುವಿನಲ್ಲಿ ಪ್ರಮುಖ …
Read More »ದಾವಣಗೆರೆಯಲ್ಲಿ ₹ 7 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ
ದಾವಣಗೆರೆ: ನಗರದಲ್ಲಿ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಸಂಸ್ಕರಿಸಿ ಮರುಬಳಕೆ ಮಾಡುವ ಘಟಕವನ್ನು ₹ 7 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದೆ. ಇದು ಕಾರ್ಯರೂಪಕ್ಕೆ ಬಂದರೆ ಕಟ್ಟಡದ ಭಗ್ನಾವಶೇಷಗಳಿಂದ ತಯಾರಿಸಿದ ಇಟ್ಟಿಗೆ, ಜಲ್ಲಿಕಲ್ಲು, ಎಂ-ಸ್ಯಾಂಡ್ ಮಾರುಕಟ್ಟೆಗೆ ಬರಲಿವೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಈ ಘಟಕ ನಿರ್ಮಾಣಕ್ಕೆ ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಸಮೀಪದ ಹೊಸಹಳ್ಳಿಯಲ್ಲಿ 3 ಎಕರೆ ಗುರುತಿಸಲಾಗಿದೆ. ಪ್ರತಿ ನಿತ್ಯ 50 ಟನ್ ಕಟ್ಟಡ ತ್ಯಾಜ್ಯವನ್ನು ಸಂಸ್ಕರಿಸುವ …
Read More »ವಕ್ಫ್ ಮಂಡಳಿ ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ: ಸಚಿವ ಪರಮೇಶ್ವರ್
ಬೆಂಗಳೂರು: ವಕ್ಫ್ ಮಂಡಳಿ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ವಕ್ಫ್ ಮಂಡಳಿ ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತದೆಯೊ ಗೊತ್ತಿಲ್ಲ ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ …
Read More »ಜಮ್ಮು-ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರ ಎನ್ ಕೌಂಟರ್
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸೇನೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಈ ಕುರಿತು ಮಾತನಾಡಿದ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಅನಂತನಾಗ್ ಜಿಲ್ಲೆಯ ಶಾಂಗಸ್ನ ಲಾರ್ನೂ ಅರಣ್ಯ ಪ್ರದೇಶದಲ್ಲಿ ಇಂದು ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಗಿದ ನಂತರ ಹತರಾದ ಉಗ್ರರ ನಿಖರ ಗುರುತು ಪತ್ತೆಯಾಗಲಿದೆ ಎಂದು ತಿಳಿಸಿದ್ದಾರೆ. ಏತನ್ಮಧ್ಯೆ, ಜಮ್ಮು-ಕಾಶ್ಮೀರದ ಶ್ರೀನಗರದ ಭಾಗದಲ್ಲಿ …
Read More »ನಮೋ ಡ್ರೋನ್ ದೀದಿ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ
ನವದೆಹಲಿ: ದೇಶದ 14,500 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ ಒದಗಿಸಲಿರುವ ಕೇಂದ್ರದ ಮಹತ್ವಾಕಾಂಕ್ಷೆಯ ನಮೋ ಡ್ರೋನ್ ದೀದಿ ಯೋಜನೆಗೆ ಚಾಲನೆ ದೊರೆತಿದೆ. ಯೋಜನೆ ಜಾರಿ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನೂ ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಕೇಂದ್ರ ಕೃಷಿ, ಗ್ರಾಮೀಣಾಭಿವೃದ್ಧಿ, ರಸಗೊಬ್ಬರ, ವಿಮಾನಯಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳ ಸಮಿತಿ ಇದರ ಮೇಲ್ವಿಚಾರಣೆ ನಡೆಸಲಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸ್ವ-ಸಹಾಯ ಸಂಘಗಳಿಗೆ ಡ್ರೋನ್ ಮತ್ತು ಅದರ …
Read More »ರಾಯಚೂರು ವಿಮಾನ ನಿಲ್ದಾಣಕ್ಕೆ ಶೀಘ್ರವೇ ಕಾಮಗಾರಿ ಆರಂಭ: ಸಚಿವ ಶರಣಪ್ರಕಾಶ್ ಪಾಟೀಲ್
ರಾಯಚೂರು : ಜಿಲ್ಲೆಯ ಜನರ ಬಹುದಿನಗಳ ಕನಸಾದ ರಾಯಚೂರು ವಿಮಾನ ನಿಲ್ದಾಣ ನನಸಾಗುವ ಹಂತಕ್ಕೆ ಬಂದಿದೆ. ಕೇಂದ್ರ ಸರಕಾರ ಸೈಟ್ ಕ್ಲಿಯರೆನ್ಸ್ ನೀಡಿರುವುದರಿಂದ ಶೀಘ್ರವೇ ಕಾಮಗಾರಿ ಆರಂಭವಾಗಲಿದ್ದು, ಯೋಜನಾ ವರದಿ ಸಿದ್ಧವಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಮಾತನಾಡಿದರು. ನಗರದ …
Read More »ಶಕ್ತಿ ಯೋಜನೆ ಇನ್ನೂ 8.5 ವರ್ಷ ಜಾರಿಯಲ್ಲಿರುತ್ತೆ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಯನ್ನು ಪರಿಷ್ಕರಿಸುವ ವಿಷಯಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದು ಯಾರಿಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿ ಇದೆಯೋ ಅವರು ಡಿ.ಕೆ ಶಿವಕುಮಾರ್ ಅವರಿಗೆ ಹೇಳಿದ್ದಾರೆ. ಅದನ್ನು ಡಿ.ಕೆ ಶಿವಕುಮಾರ್ ಪ್ರಸ್ತಾಪ ಮಾಡಿದರು ಎಂದು ಹೇಳಿದರು. ಮುಂದುವರಿದು ಮಾತನಾಡಿದ ರಾಮಲಿಂಗರೆಡ್ಡಿ ಶಕ್ತಿ ಕಾರ್ಯಕ್ರಮ ಇನ್ನೂ 8.5 ವರ್ಷ ಇರುತ್ತದೆ. ಈ ಅವಧಿಯ 3.5 ಹಾಗೂ ಮುಂದಿನ ಅವಧಿ 5 ವರ್ಷ ಜಾರಿಯಲ್ಲಿ ಇರುತ್ತದೆ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





