ಚಿತ್ರದುರ್ಗ : ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಒದಗಿಸಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದ್ದಾರೆ. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಲ್ಮಿಡಿ ಶಾಸನ ಉದ್ಘಾಟನೆ ನೆರವೇರಿಸಿದ ನಂತರ ಕಸಾಪ ಪದಾಧಿಕಾರಿಗಳ ಜೊತೆ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಕನ್ನಡ ಭವನ ಜಿಲ್ಲೆಯ ಸಾಹಿತ್ಯಾಸಕ್ತರ ದಶಕಗಳ ಕನಸಾಗಿದೆ. ಪರಿಷತ್ತಿಗೆ ಪಿಳ್ಳೇಕೇರನಹಳ್ಳಿಯ ಬಾಪೂಜಿ ಕಾಲೇಜಿನ …
Read More »ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿದ ಹೈಮಾಸ್ ದೀಪಗಳಿಗೆ ಸಚಿವ ಬೋಸರಾಜು ಚಾಲನೆ
ರಾಯಚೂರು: ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡವಾಟಿ ಬಿಜಿನೆಗೆರಾ, ಮಲಿಯಾಬಾದನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ ಹೈಮಾಸ್ ದೀಪಗಳನ್ನು ಸಚಿವ ಎನ್ ಎಸ್ ಬೋಸರಾಜು ಅವರು ಹಿಮಾಸ್ ದೀಪದ ಬಟನ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು. ವಡವಾಟಿ, ಬಿಜನಗೆರ, ಮಲೆಯಾಬಾದ್ ನಲ್ಲಿ ನಿರ್ಮಿಸಿದ ಹೈಮಸ್ ದೀಪಗಳಿಗೆ ಚಾಲನೆ ನೀಡಿ ಮಾತನಾಡಿ ರಾಯಚೂರು ನಗರ ಪ್ರದೇಶದಲ್ಲಿ ಈಗಾಗಲೇ ವಿವಿಧ ಬಡಾವಣೆಗಳಲ್ಲಿ 100 ವ್ಯಾಟ್ ನ ಎಲ್ಇಡಿ …
Read More »ಬಳ್ಳಾರಿಯಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ: ಸಚಿವ ಕೃಷ್ಣ ಬೈರೇಗೌಡ ಧ್ವಜಾರೋಹಣ
ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮೊದಲಿಗೆ ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ, ಬಳಿಕ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆಯಿಂದ ಗೌರವಂದನೆ ಸ್ವೀಕರಿಸಿದರು. ಹಂಪಿಯಿಂದ ಕನ್ನಡ ಸಂಘಟನೆಗಳು ತಂದಿದ್ದ ಕನ್ನಡ ಜ್ಯೋತಿ ಹಸ್ತಾಂತರ ಮಾಡಲಾಯಿತು. ಬಳಿಕ ಸಚಿವ ಬೈರೇಗೌಡ ರಾಜ್ಯೋತ್ಸವದ ಶುಭಾಶಯ ಕೋರಿದರು. ನಾನು ಕೋಲಾರ ಮೂಲದವನು ಬಳ್ಳಾರಿಗೆ ಬಂದು …
Read More »ವಕ್ಫ್ ಮಸೂದೆ ತಿದ್ದುಪಡಿ: ಕೇಂದ್ರ ಜಂಟಿ ಸಮಿತಿಯಿಂದ ಪರಿಶೀಲನೆ
ನವದೆಹಲಿ: ವಕ್ಫ್ ಮಸೂದೆ, 2024 ರ ಜಂಟಿ ಸಮಿತಿಯು ಭಾರತದ ಐದು ನಗರಗಳಲ್ಲಿ ಅಧ್ಯಯನ ಪ್ರವಾಸವನ್ನು ನಡೆಸಲಿದೆ ಎಂದು ಲೋಕಸಭೆಯ ಸೆಕ್ರೆಟರಿಯೇಟ್ ಪ್ರಕಟಿಸಿದೆ. ವಕ್ಫ್ ಮಸೂದೆ 2024 ರ ಪರಿಶೀಲನೆಯ ಭಾಗವಾಗಿ ನವೆಂಬರ್ 9 ರಿಂದ ನವೆಂಬರ್ 14 ರವರೆಗೆ ಸಮಿತಿಯು ಗೌಹಾಟಿ, ಭುವನೇಶ್ವರ, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ಕೋಗೆ ಭೇಟಿ ನೀಡಲಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಪ್ರವಾಸಕ್ಕೆ ಸೇರಲು ಆಸಕ್ತಿ ಇರುವವರು ಇಂದು ನಿರ್ದಿಷ್ಟ ಫಾರ್ಮ್ ಅನ್ನು …
Read More »ಕನ್ನಡವನ್ನು ಆದ್ಯತೆ ಭಾಷೆಯಾಗಿ ಬಳಸಿದರೆ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಕನ್ನಡಿಗರೆಲ್ಲರೂ ಕನ್ನಡವನ್ನು ಆದ್ಯತೆ ಭಾಷೆಯಾಗಿ ಬಳಸಿದರೆ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಉಳಿಸಿ ಹಾಗೂ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜ್ಯ …
Read More »ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 8,433 ಕೋಟಿ ರೂ. ಹಣ ವರ್ಗಾವಣೆ: ಸಚಿವ ಮುನಿಯಪ್ಪ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 2023 ರ ಜುಲೈನಿಂದ ಇಲ್ಲಿಯವರೆಗೆ 51.39 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ 8,433 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ …
Read More »ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿ: ಕರ್ನಾಟಕಕ್ಕೆ 12 ಪೈಸೆ ಮಾತ್ರ; ಪ್ರಿಯಾಂಕ್ ಖರ್ಗೆ
ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ₹ 100 ತೆರಿಗೆ ಕಟ್ಟುವ ಪ್ರದೇಶಕ್ಕೆ ವಾಪಸ್ ₹ 333 ಹೋಗುತ್ತಿದೆ. ಕರ್ನಾಟಕಕ್ಕೆ 12 ಪೈಸೆ ಮಾತ್ರ ವಾಪಸ್ ಬರುತ್ತಿದೆ. ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಾದರಂತೂ ದಕ್ಷಿಣದ ರಾಜ್ಯಗಳು ತಮ್ಮ ಧ್ವನಿಯನ್ನೇ ಕಳೆದುಕೊಳ್ಳಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದರು. ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನಗರೇಶ್ವರ ಶಾಲೆಯ ಆವರಣದಲ್ಲಿ ಇಂದು ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವ …
Read More »ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ: ಕಾರ್ಯಕರ್ತರ ಬಂಧನ
ಕಲಬುರಗಿ: ನಗರದಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನವಾದ ಇಂದು ತಮಗೆ ಪ್ರತ್ಯೇಕ ರಾಜ್ಯ ಬೇಕೆಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಭಾಗದ ಜನರು ಪ್ರತಿಭಟನೆ ನಡೆಸುತ್ತಿದ್ದರು. ಕಳೆದೊಂದು ವರ್ಷದಿಂದ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರನ್ನು ಪೊಲೀಸರು …
Read More »ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ
ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಬ್ಸಿಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಯ ನಮೂನೆಗಳನ್ನ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನ ಸಲ್ಲಿಸಬಹುದು. ಈ ಯೋಜನೆಯನ್ನು ರೈತರ ಅವಶ್ಯಕತೆಗನುಗುಣವಾಗಿ ಅಚ್ಚು ಕಟ್ಟು ಪ್ರದೇಶವನ್ನು ಒಳಗೊಂಡಂತೆ ಅನುಷ್ಠಾನಗೊಳಿಸಲಾಗುವುದು. ಯಾವೆಲ್ಲಾ ಘಟಕಗಳಿಗೆ ಎಷ್ಟು ಸಬ್ಸಿಡಿ …
Read More »ಸುವರ್ಣ ಮಹೋತ್ಸವದ ಪ್ರಶಸ್ತಿ ಮೊತ್ತ 50 ಸಾವಿರದಿಂದ 1 ಲಕ್ಷಕ್ಕೆ ಏರಿಕೆ: ಸಚಿವ ಶಿವರಾಜ ತಂಗಡಗಿ
ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ಏರಿಕೆ ಮಾಡುವುದಾಗಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಐವತ್ತು ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು ಪ್ರಶಸ್ತಿ ಮೊತ್ತವನ್ನು 50,000 ಎಂದು ತಿಳಿಸಲಾಗಿತ್ತು ಎಂದಿದ್ದಾರೆ. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





