Breaking News

BigTv News

ದೇಶದಲ್ಲಿ ವಕ್ಫ್ ಕಾಯ್ದೆಯ ನಿರಂಕುಶ, ಅಪರಿಮಿತ ಅಧಿಕಾರ ಶೀಘ್ರ ರದ್ದು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯಪುರ: ‘ದೇಶದಲ್ಲಿ ವಕ್ಫ್‌ ಕಾಯ್ದೆಗೆ ಇರುವ ನಿರಂಕುಶ, ಅಪರಿಮಿತ ಅಧಿಕಾರವನ್ನು ಕೇಂದ್ರ ಸರ್ಕಾರ ಶೀಘ್ರವೇ ರದ್ದು ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ವಕ್ಪ್‌ ಆಸ್ತಿ ವಿವಾದ ಸಂಬಂಧಿಸಿದಂತೆ ಜಿಲ್ಲೆಯ ರೈತರು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಮುಂದಿನ ಅಧಿವೇಶನದಲ್ಲಿ ವಕ್ಪ್‌ ಕಾಯ್ದೆಗೆ ತಿದ್ದುಪಡಿ ತರುಲು ಕೇಂದ್ರ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ …

Read More »

ಮುಂದಿನ ದಿನಗಳಲ್ಲಿ ಶಕ್ತಿ ಯೋಜನೆ ಸ್ಥಗಿತ: ಮುನ್ಸೂಚನೆ ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು, ರಾಜ್ಯಾದ್ಯಂತ ಈ ಯೋಜನೆಗೆ ಭರ್ಜರಿ ರೆಸ್ಪಾನ್ಸ್​ ದೊರೆಯುತ್ತಿದೆ. ಯೋಜನೆ ಜಾರಿಯಾಗಿ ಒಂದು ವರ್ಷಕ್ಕೂ ಅಧಿಕ ಕಾಲಗಳಾಗಿದ್ದು, ಮಹಿಳೆಯರು ಉಚಿತ ಪ್ರಯಾಣದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆದರೆ, ಇದೀಗ ಮಹಿಳೆಯರಿಗಾಗಿ ಜಾರಿಗೆ ತಂದಿದ್ದ ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳಲಿದೆ ಎಂಬ ಅನುಮಾನ ಮೂಡಲು ಶುರುವಾಗಿದ್ದು, ಡಿಸಿಎಂ ಡಿ.ಕೆ. …

Read More »

ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜು ಆರಂಭಿಸಲು ಸರ್ಕಾರ ತೀರ್ಮಾನ: ಸಚಿವ ಶರಣಪ್ರಕಾಶ ಪಾಟೀಲ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದ್ದು ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ. ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ ಆದ್ದರಿಂದ ಸರ್ಕಾರ ಹೊಸ ವೈದ್ಯಕೀಯ ಕಾಲೇಜುಗಳನ್ನು …

Read More »

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಕ್ರಮ: ಸಚಿವ ಶರಣಪ್ರಕಾಶ ಪಾಟೀಲ್‌

ಬೀದರ್: ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್) ಸಮಗ್ರ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಆಶ್ವಾಸನೆ ನೀಡಿದರು. ನಗರದ ಬ್ರಿಮ್ಸ್ ನಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರವೇಶಾತಿಗೆ ತಕ್ಕಂತೆ ಬೋಧಕರ ನೇಮಕಾತಿ, ಹೊರಗುತ್ತಿಗೆ ವೈದ್ಯರ ಹಾಗೂ ಸಿಬ್ಬಂದಿ ವೇತನ ಪಾವತಿ, ಕಟ್ಟಡ ದುರಸ್ತಿ, ಸುರಕ್ಷತೆ ಹಾಗೂ ಭದ್ರತೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು …

Read More »

ಪಿಎಂ ಫಸಲ್ ಬೀಮಾ ಯೋಜನೆ: ರೈತರು ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅವಕಾಶ

ಬೆಂಗಳೂರು: ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ …

Read More »

ಮುಂದಿನ ವರ್ಷದಿಂದ ಕಲಾವಿದರ ಮಾಸಾಶನ ಮೊತ್ತ 3 ಸಾವಿರ ರೂ.ಗೆ ಹೆಚ್ಚಳ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕನ್ನಡ ಭಾಷೆ ನೆಲ ಜಲ, ಸಂಸ್ಕೃತಿ, ಆಚಾರ-ವಿಚಾರ, ಸಂರಕ್ಷಣೆಯ ವಿಚಾರದಲ್ಲಿ ಸರಕಾರ ವಿಶೇಷ ಕಾಳಜಿ ತೋರಿದೆ. ನಾಡಿನ ಕಲಾವಿದರು ಮತ್ತು ಕಲೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರಿಗೆ ನೀಡಲಾಗುವ ಮಾಸಾಶನದ ಮೊತ್ತವನ್ನು 3 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದರು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ ಕರ್ನಾಟಕ …

Read More »

ಬೆಂಗಳೂರಿನಲ್ಲಿ 20 ನೂತನ ವೋಲ್ವೋ ಐರಾವತ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ …

Read More »

ಗೃಹಲಕ್ಷ್ಮಿ ಯೋಜನೆಯಡಿ ಅಗಸ್ಟ್ 2023 ರಿಂದ ಈವರೆಗೆ 1.25 ಕೋಟಿ ಫಲಾನುಭವಿಗಳ ನೋಂದಣಿ

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ 1.25 ಕೋಟಿ ಫ‌ಲಾನುಭವಿಗಳು ನೋಂದಣಿಯಾಗಿದ್ದು, 2023ರ ಆಗಸ್ಟ್‌ನಿಂದ 2024ರ ಜೂನ್‌ ವರೆಗೆ ಪ್ರತಿಯೊಬ್ಬರಿಗೂ ಮಾಸಿಕ ತಲಾ 2 ಸಾವಿರ ರೂ.ಗಳಂತೆ 22 ಸಾವಿರ ರೂ.ಪಾವತಿಸಲಾಗಿದೆ. ಜುಲೈ ಹಾಗೂ ಆಗಸ್ಟ್‌ ತಿಂಗಳ ಧನ ಸಹಾಯವನ್ನು ಅರ್ಹ ಫ‌ಲಾನುಭವಿಗಳ ಖಾತೆಗಳಿಗೆ ಪಾವತಿಸಲು ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದ್ದು, ಸಂಬಂಧಿಸಿದ ಬಿಲ್‌ಗ‌ಳನ್ನು ಸಿದ್ಧಪಡಿಸಿ ಖಜಾನೆಗೆ ಸಲ್ಲಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಮಹಿಳಾ ಮತ್ತು ಮಕ್ಕಳ …

Read More »

ರಾಜ್ಯಾದ್ಯಂತ 50 ಅಕ್ಕ ಕೆಫೆಗಳ ಸ್ಥಾಪನೆಗೆ ಸರ್ಕಾರ ಚಿಂತನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದ ಅಕ್ಕ ಕೆಫೆ ಯೋಜನೆಯನ್ನು ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಎನ್‌ಎಲ್‌ಎಂ ಜೊತೆಗೂಡಿ ಅನುಷ್ಠಾನಕ್ಕೆ ತಂದಿದೆ. ಅಕ್ಕ ಕೆಫೆಗಳು ದುಡಿಯುವ ಮಹಿಳೆಯರ ಕೈಗಳಿಗೆ ಕೆಲಸ ನೀಡುವುದರ ಜೊತೆಯಲ್ಲೇ ಕಡಿಮೆ ದರದಲ್ಲಿ ಶುಚಿ, ರುಚಿಯಾದ ಊಟ ಉಪಾಹಾರ ಒದಗಿಸುತ್ತಿವೆ. ಮೊದಲ ಹಂತದಲ್ಲಿ, ಗ್ರಾಮೀಣ, ನಗರ ಸ್ಥಳಗಳನ್ನು ಆಯ್ಕೆ ಮಾಡಿ ರಾಜ್ಯಾದ್ಯಂತ 50 ಕೆಫೆಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ. ಸ್ವ …

Read More »

ದೆಹಲಿಯಲ್ಲಿ ರಾತ್ರಿ ವೇಳೆ ಮಹಿಳೆಗೆ ಬಸ್ ಪ್ರಯಾಣ ಅಸುರಕ್ಷಿತ: ವರದಿ

ನವದೆಹಲಿ: ದೆಹಲಿ ಸರ್ಕಾರ ಮಹಿಳೆಯರಿಗಾಗಿ ಪಿಂಕ್ ಟಿಕೆಟ್ ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಒದಗಿಸಿದ್ದು, 100 ಕೋಟಿ ಟಿಕೆಟ್‌ಗಳ ಬಳಕೆಯಾಗಿ ದಾಖಲೆ ಸೃಷ್ಟಿಸಿದರೂ ಮಹಿಳಾ ಸುರಕ್ಷತೆ ಇಲ್ಲ ಎಂದು ವರದಿಯೊಂದು ಹೇಳಿದೆ. ಗ್ರೀನ್‌ಪೀಸ್ ಇಂಡಿಯಾ ಬಿಡುಗಡೆ ಮಾಡಿರುವ ರೈಡಿಂಗ್ ದಿ ಜಸ್ಟೀಸ್ ರೂಟ್ ವರದಿಯಲ್ಲಿ ಈ ಅಂಶ ಗಮನಸೆಳೆದಿದೆ. ಶೇ 77ರಷ್ಟು ಮಹಿಳೆಯರು ಕತ್ತಲಾದ ನಂತರ ಬಸ್‌ಗಳಲ್ಲಿ ಪ್ರಯಾಣಿಸುವಾಗ ಅಸುರಕ್ಷಿತ ಭಾವನೆಯನ್ನು ಅನುಭವಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಸಮೀಕ್ಷೆಗೆ …

Read More »