Breaking News

BigTv News

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಗಣನೀಯ ಹೆಚ್ಚಳ

ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಗಣನೀಯವಾಗಿ ಹೆಚ್ಚುತ್ತಿದ್ದು, ಎಂಟು ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ದಾಖಲಾಗಿದೆ. ಬೆಳಿಗ್ಗೆ 9ರ ವೇಳೆಗೆ ಗಾಳಿಯ ಗುಣಮಟ್ಟದ ಸೂಚ್ಯಂಕ(ಎಕ್ಯೂಐ) 278 ದಾಖಲಾಗಿದೆ. ಉತ್ತಮ ಹವಾಮಾನದ ಪರಿಸ್ಥಿತಿಯಿಂದಾಗಿ ಮಂಗಳವಾರ ಗಾಳಿಯ ಗುಣಮಟ್ಟ ತುಸು ಸುಧಾರಿಸಿದ್ದು, ಎಐಕ್ಯೂ 304ರಿಂದ 268ಕ್ಕೆ ಇಳಿದಿತ್ತು. 36 ವಾಯುಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳ ಪೈಕಿ ಆನಂದ್ ವಿಹಾರ್, ಅಶೋಕ್ ವಿಹಾರ್, ಅಯಾ ನಗರ, …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ನಟ ದರ್ಶನ್ ಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ನಟ ದರ್ಶನ್‌ಗೆ ಚಿಕಿತ್ಸೆ ಪಡೆಯಲು ಹೈಕೋರ್ಟ್‌ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂ.11ರಂದು ಮೈಸೂರಿನಲ್ಲಿ ಬಂಧನಕ್ಕೊಳಪಟ್ಟಿದ್ದ ದರ್ಶನ್‌ ಅಲ್ಲಿಂದ ಈವರೆಗೆ ಅಂದರೆ 131 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್‌ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಬಹುತೇಕ ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾದ-ವಿವಾದ ಆಲಿಸಿ ಕಾಯ್ದಿರಿಸಿದ್ದ …

Read More »

ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣ: ಕೇಂದ್ರ ಸಚಿವ ಸೋಮಣ್ಣ

ಹಾಸನ: ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು. ಕುಟುಂಬ ಸಮೇತರಾಗಿ ಇಂದು ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ. …

Read More »

ವಕ್ಫ್‌ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರ ಧರಣಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬೆಂಬಲ

ವಿಜಯಪುರ: ವಕ್ಫ್ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರು ಹಮ್ಮಿಕೊಂಡಿರುವ ಹೋರಾಟದಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದು, ಧರಣಿ ನಿರತ ರೈತರನ್ನು ಭೇಟಿ ಮಾಡಿ ಸಚಿವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

Read More »

ಭ್ರಷ್ಟಾಚಾರ ನಿರ್ಮೂಲನೆಗೆ ಕಾನೂನು ಅರಿವು ಮತ್ತು ಜಾಗೃತಿ ಅತ್ಯಗತ್ಯ: ಡಿಸಿ ಮೊಹಮ್ಮದ್ ರೋಷನ್

ಬೆಳಗಾವಿ: ವಿವಿಧ ಕ್ಷೇತ್ರದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನು ಅರಿವು ಮತ್ತು ಜಾಗೃತಿ ಅತ್ಯಗತ್ಯವಾಗಿದೆ. ಭ್ರಷ್ಟಾಚಾರ ವಿರುದ್ಧ ಪ್ರಕರಣ ದಾಖಲಾದರೂ ನ್ಯಾಯ ನೀಡಿಕೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಭ್ರಷ್ಟಾಚಾರ ನಿಯಂತ್ರಣ ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ …

Read More »

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು 2400 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಸಾಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ …

Read More »

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ: ಕಾಂಗ್ರೆಸ್ ನಿಂದ ಪ್ರಚಾರ ಉಸ್ತುವಾರಿಗಳ ನೇಮಕ

ಬೆಂಗಳೂರು: ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಕ್ಷೇತ್ರಗಳಿಗೆ ಪ್ರಚಾರ ಉಸ್ತುವಾರಿಗಳನ್ನು ನೇಮಕಗೊಳಿಸಿದ್ದು, ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಿದೆ. ಶಿಗ್ಗಾವಿ ಕ್ಷೇತ್ರಕ್ಕೆ ಸಚಿವರಾದ ಈಶ್ವರ್‌ ಖಂಡ್ರೆ, ಎಚ್‌.ಕೆ ಪಾಟೀಲ್‌, ಜಮೀರ್‌ ಅಹಮ್ಮದ್‌ ಖಾನ್‌, ಲಕ್ಷ್ಮಿ ಹೆಬ್ಬಾಳಕರ, ತಿಮ್ಮಾಪುರ, ಎಸ್‌.ಎಸ್‌ ಮಲ್ಲಿಕಾರ್ಜುನ, ಬೈರತಿ ಸುರೇಶ್‌ ಮತ್ತು ಶಿವರಾಜ್‌ ತಂಗಡಗಿ ಅವರನ್ನೊಳಗೊಂಡ ತಂಡವನ್ನು ಪಕ್ಷ ನೇಮಿಸಿದೆ. ಸಂಡೂರು ಕ್ಷೇತ್ರಕ್ಕೆ ಸಚಿವರಾದ ಎಚ್‌. ಮುನಿಯಪ್ಪ, ಕೆ.ಜೆ …

Read More »

ಬೆಂಗಳೂರಿನಲ್ಲಿ 160 ಪ್ರಶಿಕ್ಷಣಾರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಇಡೀ ದೇಶದಲ್ಲಿ ನಡೆದ ಉದ್ಯೋಗ ಮೇಳದಲ್ಲಿ 50 ಸಾವಿರ ಮಂದಿಗೆ ನೇಮಕಾತಿ ಪತ್ರ ನೀಡಲಾಗಿದ್ದು, ಇವರಲ್ಲಿ 20 ಸಾವಿರ ಮಂದಿಗೆ ಅಂಚೆ ಇಲಾಖೆ ಉದ್ಯೋಗ ನೀಡಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅಂಚೆ ಇಲಾಖೆ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ರೋಜ್‌ಗಾರ್ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಉದ್ಯೋಗಿಗಳನ್ನು ಕರ್ಮಯೋಗಿಗಳು ಎಂದು ಪ್ರಧಾನಿ ಕರೆದಿರುವುದು ಅವರ ಹೊಸ ಚಿಂತನೆಯಾಗಿದೆ …

Read More »

ಬೆಂಗಳೂರಿನಲ್ಲಿ 2 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ: ವಿದೇಶಿ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಮೆಡಿಕಲ್‌ ವೀಸಾದಡಿ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿ ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಡ್ರಗ್‌ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ 2.36 ಕೋಟಿ ರೂ.ಮೌಲ್ಯದ 1 ಕೆಜಿ 577 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ ವಶಪಡಿಸಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಶ್ರೀನಿಧಿ ಲೇಔಟ್‌, ದೊಡ್ಡನಾಗಮಂಗಲದ ಮನೆಯೊಂದರಲ್ಲಿ ಈ ಡ್ರಗ್ಸ್ ಪೆಡ್ಲರ್‌ ವಾಸವಾಗಿದ್ದು, ಮಾದಕವಸ್ತು ಸಂಗ್ರಹಿಸಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಾ ಅಕ್ರಮ ಹಣ ಸಂಪಾದನೆಯಲ್ಲಿ …

Read More »

ಮುಂಬೈನಲ್ಲಿ 30 ದಿನಗಳವರೆಗೆ ಡ್ರೋನ್‌, ಪ್ಯಾರಾಗ್ಲೈಡರ್ ಏರ್ ಬಲೂನ್ ಗಳ ಹಾರಾಟ ನಿಷೇಧ

ಮುಂಬೈ: ನಗರದಲ್ಲಿ ಡ್ರೋನ್‌ಗಳು, ರಿಮೋಟ್ ಕಂಟ್ರೋಲ್ ಮೈಕ್ರೋಲೈಟ್ ಏರ್‌ಕ್ರಾಫ್ಟ್‌ಗಳು, ಪ್ಯಾರಾಗ್ಲೈಡರ್‌ಗಳು ಮತ್ತು ಹಾಟ್ ಏರ್ ಬಲೂನ್‌ಗಳ ಹಾರಾಟವನ್ನು 30 ದಿನಗಳವರೆಗೆ ಮುಂಬೈ ಪೊಲೀಸರು ನಿಷೇಧಿಸಿದ್ದಾರೆ. ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಅಕ್ಟೋಬರ್ 31ರಿಂದ ನವೆಂಬರ್ 29ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರು ಮತ್ತು ಸಮಾಜವಿರೋಧಿ ಶಕ್ತಿಗಳು ವಿವಿಐಪಿಗಳನ್ನು ಗುರಿಯಾಗಿಸಲು, ಪ್ರಾಣಕ್ಕೆ ಅಪಾಯವನ್ನುಂಟು ಮಾಡಲು …

Read More »