ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಂತರ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಶಾಸಕ ಬಿ ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಎಂಎಲ್ ಸಿ ಸಿ ಟಿ ರವಿ ಅವರು ರಾಜ್ಯದಲ್ಲಿ ರಾವಣನ ದರ್ಬಾರು ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕುಡುತೀನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ …
Read More »ರಾಜ್ಯದ ಅಭಿವೃದ್ದಿಗೆ ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿ ಆಯುಕ್ತರುಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಸೂಚನೆ ನೀಡಿದರು. 2024-25 ನೇ ಸಾಲಿನಲ್ಲಿ ಒಟ್ಟು ಗುರಿ ರೂ.1,10,000 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ ಅಂತ್ಯದವರೆಗೆ …
Read More »ರಕ್ಷಣಾ ಉಪಕರಣಗಳ ರಫ್ತಿನಲ್ಲಿ ಹೊಸ ದಾಖಲೆ ನಿರ್ಮಿಸಿದ ಭಾರತ
ನವದೆಹಲಿ: ಇಂಡೋ ಪೆಸಿಫಿಕ್ನಲ್ಲಿ ಪ್ರಮುಖ ರಾಷ್ಟ್ರವಾದ ಭಾರತ ಎರಡು ಶತ್ರುಗಳ ರಾಷ್ಟ್ರಗಳ ಜೊತೆ ಗಡಿಭಾಗವನ್ನು ಹಂಚಿಕೊಂಡಿದ್ದು, ಹಾಗಾಗಿ ರಕ್ಷಣಾ ವಿಚಾರದಲ್ಲಿ ಭಾರತವು ಹೆಚ್ಚಿನ ಶಕ್ತಿಯಾಗಿ ಹೊರಹೊಮ್ಮುವುದು ಸದ್ಯದ ಅತ್ಯಗತ್ಯವಾಗಿದೆ. ಈಗಾಗಲೇ ಪಾಕಿಸ್ತಾನ ಹಾಗೂ ಚೀನಾ ಜೊತೆ ಯುದ್ದ ನಡೆಸಿರುವ ಭಾರತವು ಸದ್ಯ ಪಾಶ್ಚಿಮಾತ್ಯ ದೇಶಗಳ ಅಚ್ಚುಮೆಚ್ಚಿನ ರಾಷ್ಟ್ರವಾಗಿದ್ದರೂ ರಕ್ಷಣಾ ಕ್ಷೇತ್ರದಲ್ಲಿ ಭಾರತವು ಇತರೆ ರಾಷ್ಟ್ರಗಳನ್ನು ಅವಲಂಬಿಸುವುದನ್ನು ಕಡಿಮೆ ಮಾಡಬೇಕಿದೆ. ಒಂದು ಕಾಲದಲ್ಲಿ ರಕ್ಷಣಾ ವಿಚಾರದಲ್ಲಿ ಬಹುತೇಕ ಎಲ್ಲಾ ವಸ್ತುಗಳನ್ನು ಭಾರತವು …
Read More »ಭಾರತೀಯ ರೈಲ್ವೆಯನ್ನು ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ: ಕೇಂದ್ರ ಸಚಿವ ಸೋಮಣ್ಣ
ಹಾಸನ: ವಿಶ್ವದ ಭೂಪಟದಲ್ಲಿ ಭಾರತೀಯ ರೈಲ್ವೆ ಇಲಾಖೆಯನ್ನು ಐದನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 7 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಹಾಸನದಲ್ಲಿ ಇಂದು ಕುಟುಂಬ ಸಮೇತ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, 44 ಸಾವಿರ ರೈಲ್ವೆ …
Read More »ವಕ್ಫ್ ಆಸ್ತಿಯೆಂದು ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುತ್ತೇವೆ: ಸಿಎಂ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆ ರೈತರಿಗೆ ಮತ್ತು ಮಠ, ಮಂದಿರಗಳಿಗೆ ವಕ್ಫ್ ಆಸ್ತಿಯೆಂದು ನೋಟೀಸ್ ನೀಡಲಾಗಿದ್ದರೆ, ಎಲ್ಲ ನೊಟೀಸ್ಗಳನ್ನು ವಾಪಸ್ ಪಡೆದುಕೊಳ್ಳುತ್ತೇವೆ ಎಂದು ಮುಖ್ಯಮತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ರೈತರಿಗೆ ನೊಟೀಸ್ ನೀಡುವ ಮೂಲಕ ಯಾವುದೇ ರೈತರನ್ನು ಒಕ್ಕಲೆಬ್ಬಿಸಲ್ಲ. ನಿನ್ನೆ ಈ ಬಗ್ಗೆ ಕಂದಾಯ ಸಚಿವರು ಸ್ಪಷ್ಟಪಡಿಸಿದ್ದಾರೆ. …
Read More »ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಉತ್ತರಾಖಂಡ್ ವಕ್ಫ್ ಮಂಡಳಿಯಿಂದ ಬೆಂಬಲ
ನವದೆಹಲಿ: ಪ್ರಸ್ತಾವಿತ ವಕ್ಫ್(ತಿದ್ದುಪಡಿ) ಮಸೂದೆ, 2024ಕ್ಕೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಉತ್ತರಾಖಂಡ ವಕ್ಫ್ ಮಂಡಳಿಯು ಸಂಪೂರ್ಣ ಬೆಂಬಲ ಘೋಷಿಸಿದೆ. ಪಂಜಾಬ್ ವಕ್ಫ್ ಬೋರ್ಡ್, ಹರಿಯಾಣ ವಕ್ಫ್ ಬೋರ್ಡ್ ಮತ್ತು ಉತ್ತರಾಖಂಡ್ ವಕ್ಫ್ ಬೋರ್ಡ್ ಸೇರಿದಂತೆ ಹಲವಾರು ರಾಜ್ಯ ವಕ್ಫ್ ಮಂಡಳಿಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಜೆಪಿಸಿಗೆ ಸಲ್ಲಿಸಲು ಸಭೆಯಲ್ಲಿ ಭಾಗವಹಿಸಿದ್ದವು. ಮೂಲಗಳ ಪ್ರಕಾರ, ಉತ್ತರಾಖಂಡ ವಕ್ಫ್ ಮಂಡಳಿಯ ಪ್ರತಿನಿಧಿಗಳು ಸಮಿತಿಗೆ, ವಿಶಿಷ್ಟವಾದ ವಿನಂತಿಯನ್ನು ಮಾಡಿದ್ದು, ವಕ್ಫ್ …
Read More »ರೋಜ್ ಗಾರ್ ಮೇಳದಡಿ ಪ್ರಧಾನಿ ಮೋದಿಯಿಂದ ಯುವಕರಿಗೆ 51 ಸಾವಿರ ನೇಮಕಾತಿ ಪತ್ರಗಳ ವಿತರಣೆ
ನವದೆಹಲಿ: ರೋಜ್ ಗಾರ್ ಮೇಳದಡಿ ಪ್ರಧಾನಿ ಮೋದಿ ಇಂದು ಯುವಕರಿಗೆ 51,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್ಗಾರ್ ಮೇಳದ ಭಾಗವಾಗಿ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹಿಂದಿನ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ನಮ್ಮ ದೇಶದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು …
Read More »ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರ ಚಟುವಟಿಕೆಗೆ ₹1 ಕೋಟಿ ಅನುದಾನ: ಸಚಿವ ಶಿವರಾಜ ತಂಗಡಗಿ
ಬೆಂಗಳೂರು: ಪ್ರತಿಯೊಂದು ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೂ ಚಟುವಟಿಕೆ ನಡೆಸುವ ಸಲುವಾಗಿ ₹1 ಕೋಟಿವರೆಗೂ ಅನುದಾನ ಒದಗಿಸಲಾಗುತ್ತಿದೆ. ಕಾರ್ಯಕ್ರಮದ ಕುರಿತು ಪ್ರಸ್ತಾವ ಸಲ್ಲಿಸಿದರೆ, ಅದಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ನವೆಂಬರ್ 1ರಂದು ನಡೆಯಲಿರುವ …
Read More »ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರದಿಂದ ₹3 ಲಕ್ಷ ಕೋಟಿ ರೂ. ಹಣ ಮೀಸಲು: ಕೇಂದ್ರ ಸಚಿವ ಎಚ್ಡಿಕೆ
ಬೆಂಗಳೂರು: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ …
Read More »ಕೊಪ್ಪಳದಲ್ಲಿ ಆರೋಗ್ಯ ಸೌಲಭ್ಯವನ್ನು ಮೇಲ್ದರ್ಜೆಗೇರಿಸಲು ಹೊಸ ಕೇಂದ್ರಗಳ ಸ್ಥಾಪನೆಗೆ ನಿರ್ಧಾರ
ಕೊಪ್ಪಳ: ಕಲ್ಯಾಣ ಕರ್ನಾಟಕ ಸಂಪೂರ್ಣ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಹಲವು ಆರೋಗ್ಯ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಹೊಸ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇದರ ಭಾಗವಾಗಿ ಕೊಪ್ಪಳ ನಗರಕ್ಕೆ ಹೊಸ ಆರೋಗ್ಯ ಕೇಂದ್ರ ಮಂಜೂರಾಗಿದೆ. ನಗರ ವ್ಯಾಪ್ತಿಯಲ್ಲಿ ಈಗಾಗಲೇ ತಾಲ್ಲೂಕು ಆಸ್ಪತ್ರೆಯೂ ಇದ್ದು, ಹೊಸ ನಗರ ಆರೋಗ್ಯ ಕೇಂದ್ರವನ್ನು ಭಾಗ್ಯನಗರ ಭಾಗದಲ್ಲಿ ಆರಂಭಿಸುವ ಬಗ್ಗೆಯೂ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಿಂದುಳಿದಿದ್ದು, ಭಾರತೀಯ ಸಾರ್ವಜನಿಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





