ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನ …
Read More »ಬೀದರ್ ವಿಮಾನಯಾನ ಪುನರಾರಂಭಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ: ಸಚಿವ ಈಶ್ವರ ಖಂಡ್ರೆ
ಬೀದರ್: ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ಬಳಿಕ ವಿವರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ ಯಾನ ಸೇವೆ ಸ್ಥಗಿತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ಬೀದರ್ ಗೆ ವಾಯುಯಾನ ಕಲ್ಪಿಸಲು ನಿರ್ಧರಿಸಿದೆ …
Read More »ಅಮೆರಿಕದ ಶ್ವೇತವನದಲ್ಲಿ ದೀಪಾವಳಿ ಸಂಭ್ರಮ: ಅಧ್ಯಕ್ಷ ಜೋ ಬೈಡನ್ ಭಾಗಿ
ವಾಷಿಂಗ್ಟನ್: ಸೋಮವಾರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ದೀಪಾವಳಿ ಆಚರಣೆಯನ್ನು ಆಯೋಜಿಸಿದ್ದರು. ಶ್ವೇತಭವನದಲ್ಲಿ ನಡೆದ ದೀಪಾವಳಿ ಆಚರಣೆಯಲ್ಲಿ ದೇಶದಾದ್ಯಂತದ ಕಾಂಗ್ರೆಸ್ ಸದಸ್ಯರು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಅಧಿಕಾರಿಗಳು ಸೇರಿದಂತೆ 600 ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು ಭಾಗವಹಿಸಿದ್ದರು. ಅಧ್ಯಕ್ಷನಾಗಿ ಶ್ವೇತಭವನದಲ್ಲಿ ಇದುವರೆಗೆ ಅತಿದೊಡ್ಡ ದೀಪಾವಳಿ ಆಯೋಜಿಸಲು ನನಗೆ ಗೌರವ ಹೆಮ್ಮೆ ಇದೆ. ಸೆನೆಟರ್, ಉಪಾಧ್ಯಕ್ಷ ಮತ್ತು ಅಧ್ಯಕ್ಷರಾಗಿ ದೀಪಾವಳಿ ಆಚರಣೆಯಲ್ಲಿ ಭಾಗವಹಿಸಿದ್ದೇನೆ. ದಕ್ಷಿಣ ಏಷ್ಯಾದ ಅಮೆರಿಕನ್ನರು ನನ್ನ ಸಿಬ್ಬಂದಿಯ …
Read More »ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಕೇಂದ್ರಗಳ ಸ್ಥಾಪನೆ: ಜಿಲ್ಲಾಧಿಕಾರಿ
ರಾಯಚೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ರೈತರು ಸದುಪಯೋಗಪಡೆಯಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ತಿಳಿಸಿದ್ದಾರೆ. ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರಿಗೆ 3.00 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ಗೆ 6,783 ರೂ.ಗಳ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು. ಆಸಕ್ತರ ರೈತರು ರಾಯಚೂರು …
Read More »ನರೇಗಾ ಯೋಜನೆಯ ಮಾಹಿತಿ ಹಂಚಿಕೆಗೆ ಡಿಜಿಟಲ್ ತಂತ್ರಜ್ಞಾನ ಬಳಕೆ
ಕಾರವಾರ: ನರೇಗಾ ಯೋಜನೆಯ ಮಾಹಿತಿಯನ್ನು ಜನರಿಗೆ ಸುಲಭವಾಗಿ ತಲುಪಿಸಲು ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ. ಯೋಜನೆಯ ಸೌಲಭ್ಯವನ್ನು ಜನರು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ನರೇಗಾ ಯೋಜನೆ ವಿಭಾಗದ ಸಹಾಯಕ ನಿರ್ದೇಶಕ ಸಂದೀಪ್ ಕೋಠಾರಕರ ಹೇಳಿದರು. ತಾಲ್ಲೂಕಿನ ಚೆಂಡಿಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ಸಿದ್ದಪಡಿಸುವ ಸಲುವಾಗಿ ಐಇಸಿ ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಉದ್ಯೋಗ ಖಾತರಿ ನಡಿಗೆ …
Read More »ಪ್ರವಾಸೋದ್ಯಮ ಅಭಿವೃದ್ಧಿಗೆ 47 ಸಾವಿರ ನೇರ ಉದ್ಯೋಗ ಕಲ್ಪಿಸುವ ಗುರಿ: ಸಂಪುಟ ಒಪ್ಪಿಗೆ
ಬೆಂಗಳೂರು: ರಾಜ್ಯ ಸರಕಾರದ ಮಹತ್ವದ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, 2024-29ರ ವರೆಗೆ ಈ ನೀತಿ ಜಾರಿಯಲ್ಲಿರುತ್ತದೆ. 9 ಪ್ರಮುಖ ಕೇಂದ್ರೀಕೃತ ಪ್ರದೇಶಗಳನ್ನು ಗುರುತಿಸಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದಕ್ಕೆ ಯೋಜಿಸಲಾಗಿದೆ. ಕನಿಷ್ಟ 47 ಸಾವಿರ ಜನರಿಗೆ ನೇರ ಉದ್ಯೋಗ ಕಲ್ಪಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಪ್ರವಾಸೋದ್ಯಮ ಸಚಿವರೂ ಆಗಿರುವ ಎಚ್.ಕೆ. ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, 25 ವಿಷಯಾಧಾರಿತ ಕ್ಷೇತ್ರಗಳ 44 …
Read More »ಕಟ್ಟಡ ಕಾರ್ಮಿಕರ ವೈದ್ಯಕೀಯ ವೆಚ್ಚ ಸಹಾಯಧನ 2 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ: ಕಾರ್ಮಿಕರ ಸಭೆ ಮಂಡಳಿ ತೀರ್ಮಾನ
ಬೆಂಗಳೂರು: ಕಟ್ಟಡ ಕಾರ್ಮಿಕರು ಕ್ಯಾನ್ಸರ್, ಹೃದ್ರೋಗ ಚಿಕಿತ್ಸೆ ಪಡೆಯಲು ವೈದ್ಯಕೀಯ ವೆಚ್ಚ ಸಹಾಯಧನವನ್ನು 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಹೆಚ್ಚಿಸಲು ಕಾರ್ಮಿಕ ಮಂಡಳಿ ಸಭೆ ತೀರ್ಮಾನಿಸಿತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 43ನೇ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಆಯುಷ್ಮಾನ್ ಯೋಜನೆಯ 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚದ …
Read More »ಸತತ 5 ದಿನಗಳ ಕುಸಿತದ ಹಾದಿಯಲ್ಲಿದ್ದ ಷೇರು ಮಾರುಕಟ್ಟೆ: ಸೆನ್ಸೆಕ್ಸ್ 602.75 ಅಂಕ ಏರಿಕೆ
ಮುಂಬೈ: ಸತತ ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರುಮಾರುಕಟ್ಟೆ ಸತತ 5 ದಿನಗಳ ಕುಸಿತ ಬಳಿಕ ಇಂದು ಅಂದರೆ ವಾರದ ಮೊದಲ ದಿನವೇ ಭರ್ಜರಿ ಚೇತರಿಕೆ ಕಂಡಿದೆ. ಕಳೆದ ವಾರವಿಡೀ ಕುಸಿತದಲ್ಲೇ ವಹಿವಾಟು ಅಂತ್ಯಗೊಳಿಸಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 602.75 ಅಂಕಗಳ ಏರಿಕೆಯೊಂದಿಗೆ 80,005.04 ಅಂಕಗಳಿಗೆ ಏರಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಅಂತೆಯೇ ನಿಫ್ಟಿ ಕೂಡ 158.35 ಅಂಕಗಳ ಏರಿಕೆಯೊಂದಿಗೆ 24,339.15 ಅಂಕಗಳಿಗೆ ಏರಿಕೆಯಾಗಿ …
Read More »ದೀಪಾವಳಿ ಪ್ರಯುಕ್ತ ಸಿಎಂ ಸಿದ್ದರಾಮಯ್ಯರಿಗೆ ಗೃಹ ಉತ್ಪನ್ನಗಳನ್ನು ನೀಡಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು. ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಅವರ ಜೀವನ ಮಟ್ಟ ಸುಧಾರಿಸುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಸ್ವ ಸಹಾಯ ಗುಂಪುಗಳ ಪರವಾಗಿ ಗೃಹ …
Read More »ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ: ಬಂದೋಬಸ್ತ್ ಗಾಗಿ 18 ಕಂಪನಿ ಕೇಂದ್ರಪಡೆಗಳ ಆಯೋಜನೆ
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಂದೋಬಸ್ತ್ ಗಾಗಿ 18 ಕಂಪನಿ ಕೇಂದ್ರಪಡೆಗಳು ರಾಜ್ಯಕ್ಕೆ ಆಗಮಿಸಿವೆ. ಸಿಆರ್ಪಿಎಫ್, ಸಿಐಎಸ್ಎಫ್ ಹಾಗೂ ಬಿಎಸ್ಎಫ್ ಪಡೆಗಳು, ಮೂರೂ ಕ್ಷೇತ್ರಗಳಲ್ಲೂ ಸ್ಥಳೀಯ ಪೊಲೀಸರ ಜೊತೆ ಪಥಸಂಚಲನ ನಡೆಸಿವೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 5 ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ 5 ಕಂಪನಿ ಕೇಂದ್ರಪಡೆಗಳನ್ನು ಸ್ಥಳೀಯ ಪೊಲೀಸರ ಜೊತೆ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ತೀವ್ರ ರಾಜಕೀಯ ಜಿದ್ದಾಜಿದ್ದಿನ ಕ್ಷೇತ್ರವೆಂದೇ ಹೇಳಲಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





