Breaking News

BigTv News

ನೂತನ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ನೂತನ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಸಾಹಸ, ಕೃಷಿ, ಕರಾವಳಿ, ಬೀಚ್ ಪ್ರವಾಸೋದ್ಯಮ, ಪಾರಂಪರಿಕ, ಪರಿಸರ, ಶೈಕ್ಷಣಿಕ ಪ್ರವಾಸೋದ್ಯಮ, ಒಳನಾಡು, ಸಾಹಿತ್ಯ, ಕಡಲು, ವೈದ್ಯಕಿಯ, ಗಣಿಗಾರಿಕೆ, ರಾಜಕೀಯ, ಆಧ್ಯಾತ್ಮ, ಧಾರ್ಮಿಕ, ಬುಡಕಟ್ಟು, ವಿವಾಹ ಪ್ರವಾಸೋದ್ಯಮಗಳು ಬರಲಿವೆ. ಸಮಾಜದ ಎಲ್ಲಾ ಸ್ಥರಗಳ ಬಡ, ಮಧ್ಯಮ ವರ್ಗದ ಮತ್ತು ಮೇಲ್ಮಧ್ಯಮ ವರ್ಗದ ಹಾಗೂ ಗಣ್ಯ ವರ್ಗದ ಪ್ರವಾಸಿ ಅವಶ್ಯಕತೆಗಳನ್ನು ಗಮನದಲ್ಲಿರಿಸಿಕೊಂಡು ಹೊಸ ನೀತಿಯನ್ನು ರಚಿಸಲಾಗಿದೆ. ಸಾಹಸ, ಕೃಷಿ, …

Read More »

ಸಂಸತ್ತಿನ ಜಲಶಕ್ತಿ ಸಂಸದೀಯ ಸಲಹಾ ಸಮಿತಿ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ನೇಮಕ

ಚಿತ್ರದುರ್ಗ: 18ನೇ ಲೋಕಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳರವರನ್ನು ಸಂಸತ್ತಿನ ಜಲ ಶಕ್ತಿ ಸಂಸದೀಯ ಸಲಹಾ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರ್ ರಾದ ಓಂ ಬಿರ್ಲಾರವರು ನೇಮಕ ಮಾಡಿರುತ್ತಾರೆ. ಈ ಸಲಹಾ ಸಮಿತಿಯಲ್ಲಿ ಒಬ್ಬರು ರಾಜ್ಯ ಸಭಾ ಸದಸ್ಯರು ಹಾಗೂ 15 ಜನ ಲೋಕಸಭಾ ಸದಸ್ಯರುಗಳು ಹಾಗೂ ಇಬ್ಬರು ಪದನಿಮಿತ್ತ ಸದಸ್ಯರು ಕಾರ್ಯನಿರ್ವಹಿಸಲಿದ್ದು, ಈ ಸಲಹಾ ಸಮಿತಿಯ ಅಧ್ಯಕ್ಷರುಗಳನ್ನಾಗಿ ಸಿ.ಆರ್.ಪಾಟೀಲ್, ವಿ. ಸೋಮಣ್ಣ ಹಾಗೂ ರಾಜ್ ಭೂಷಣ್ …

Read More »

ಕೋಲಾರ ಜಿಲ್ಲೆಯಲ್ಲಿ ಎಲ್ಲ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿದ ಮುಜರಾಯಿ ಇಲಾಖೆ

ಕೋಲಾರ: ಜಿಲ್ಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಿದ್ದು, ಭಕ್ತರು ಕಡ್ಡಾಯವಾಗಿ ಸಾಂಪ್ರಾಯಿಕ ಹಾಗೂ ಸಭ್ಯ ಉಡುಗೆ ತೊಟ್ಟು ದೇಗುಲ ಪ್ರವೇಶಿಸಬೇಕಿದೆ. ಕೋಲಾರ ನಗರದ ಶಕ್ತಿದೇವತೆ ಕೋಲಾರಮ್ಮ ದೇಗುಲ ಸೇರಿದಂತೆ ಎಲ್ಲಾ ದೇಗುಲಗಳಲ್ಲಿ ಈ ಸಂಬಂಧ ಇಲಾಖೆಯಿಂದ ಸೂಚನೆ ಇರುವ ಬ್ಯಾನರ್‌, ಪೋಸ್ಟರ್‌, ಫಲಕ ಅಳವಡಿಸಲಾಗುತ್ತಿದೆ. ಯಾವ ರೀತಿ ಉಡುಪು ಧರಿಸಬೇಕು, ಯಾವ ರೀತಿಯ ಉಡುಪು ಧರಿಸಬಾರದೆಂಬ ಸೂಚನೆಯನ್ನೂ ನೀಡಲಾಗಿದೆ. ದೇವಾಲಯಕ್ಕೆ ಬರುವ ಪುರುಷರು …

Read More »

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಯಲಹಂಕ ಪ್ರಥಮ: 2.13 ಲಕ್ಷ ನೂತನ ಸದಸ್ಯರ ನೋಂದಣಿ

ಬೆಂಗಳೂರು: ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರು ಬಿಜೆಪಿಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಈ ಸಾಧನೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು 2 ಲಕ್ಷಕ್ಕೂ ಅಧಿಕ ನೂತನ …

Read More »

ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್​ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್​ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ. ಪರಿಶಿಷ್ಟ ಜಾತಿಗೆ ಒಳ …

Read More »

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು ಭಾಗವಹಿಸುವದಿಲ್ಲ.ಆದರೆ ನಮ್ಮ ಎನ್ ಡಿಎ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದರು. ಸಿ.ಪಿ.ಯೋಗೇಶ್ವರ ಒಳ್ಳೆಯ ಮನುಷ್ಯ ಇಲ್ಲಿ ಅವರಿಗೆ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಹೋಗಿದ್ದಾರೆ. ಸೋಲುತ್ತಾರೋ ಅಥವಾ ಗೆಲ್ಲುತ್ತಾರೋ ಗೊತ್ತಿಲ್ಲ ಎಂದರು. ಮಹಾರಾಷ್ಟ್ರ ಚುನಾವಣೆಯಲ್ಲಿ …

Read More »

ಬೆಳಗಾವಿ: ಸವರ್ಣಿಯರಿಂದ ದಲಿತ ಕುಟುಂಬದ ಮನೆಗಳಿಗೆ ಬೆಂಕಿ

ಬೆಳಗಾವಿ: ಸರ್ಕಾರಿ ಗೋಮಾಳ ಜಾಗಕ್ಕಾಗಿ ನಡೆದ ಘರ್ಷಣೆ ವೇಳೆ ಸವರ್ಣೀಯ ಕುಟುಂಬದ ಸದಸ್ಯರು ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಮುಗಳಖೋಡ ಗ್ರಾಮದಲ್ಲಿ ಸರ್ಕಾರಿ ಗೋಮಾಳ‌ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳವಿತ್ತು. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿತ್ತು. ಈ ಗುಡಿಸಲುಗಳಿಗೆ ಮಹಾವೀರ ಕುರಾಡೆ …

Read More »

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 450 ಹುದ್ದೆಗಳ ಭರ್ತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಮಹದೇವಪ್ಪ ಅವರು 22 ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ದೌರ್ಜನ್ಯ ಪ್ರಕರಣಗಳ ತುರ್ತು ವಿಲೇವಾರಿಗಾಗಿ ಠಾಣೆಗಳ ಸ್ಥಾಪನೆ ಮಾಡಲಾಗುತ್ತಿದೆ. …

Read More »

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 2025 ರ ಮಹಾಕುಂಭಕ್ಕೆ ಸಿದ್ಧತೆ ಆರಂಭ

ನವದೆಹಲಿ: 2025 ರ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾಕುಂಭಕ್ಕೆ ಸಿದ್ಧತೆ ಜೋರಾಗಿದ್ದು, ಈ ಸಮಯದಲ್ಲಿ ಯಾವುದೇ ಯಾತ್ರಿಕರು ಬಾಯಾರಿಕೆಯಾಗದಂತೆ ನೋಡಿಕೊಳ್ಳಲು, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಜಾಗ್ರತೆ ವಹಿಸಿದೆ. ಸಂಪರ್ಕವಿರುವ ಹೊರ ಭಾಗದಲ್ಲಿ ಸಂಪರ್ಕಿಸುವ ಎಲ್ಲಾ ಅರಸ್ತೆಗಳು ಮತ್ತು ತೆರೆದ ಮೈದಾನಗಳ ಉದ್ದಕ್ಕೂ 200 ನೀರಿನ ಎಟಿಎಂಗಳು ಮತ್ತು 6,500 ಟ್ಯಾಪ್ ಸ್ಟ್ಯಾಂಡ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಆರಂಭಿಕ ಹಂತವು ಈಗಾಗಲೇ ನಡೆಯುತ್ತಿದೆ ಇದರ ಜವಾಬ್ದಾರಿಯನ್ನು …

Read More »

ವಕ್ಫ್‌ ಆಸ್ತಿ ವಿವಾದ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚನೆಗೆ ಸಚಿವ ಎಂ.ಬಿ.ಪಾಟೀಲ್‌ ಸೂಚನೆ

ವಿಜಯಪುರ: ಜಿಲ್ಲೆಯ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್‌ ಪೋರ್ಸ್ ಸಮಿತಿಯೊಂದನ್ನು ರಚಿಸಿ, 1964 ರಿಂದ 1974ರವರೆಗಿನ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸಚಿವ ಡಾ.ಎಂ.ಬಿ.ಪಾಟೀಲ್‌ ಸೂಚಿಸಿದರು. ನಗರದ ಸೋಲಾಪುರ ರಸ್ತೆಯಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಹಶೀಲ್ದಾರರು, ವಕ್ಫ್ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಜಯಪುರ ಜಿಲ್ಲೆಯಾದ್ಯಂತ ರೈತರು ಸೇರಿದಂತೆ ಖಾಸಗಿ ಜಮೀನುಗಳ ಪೈಕಿ ಒಂದು ಎಕರೆಯೂ ಸಹ ವಕ್ಪ್‌ಗೆ …

Read More »