Breaking News

BigTv News

ಇರಾನ್‌ ಮನವಿ ಮೇರೆಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ

ನ್ಯೂಯಾರ್ಕ್: ತನ್ನ ವಿರುದ್ಧ ಇಸ್ರೇಲ್‌ ನಡೆಸಿದ ದಾಳಿ ಸಂಬಂಧ ತುರ್ತು ಸಭೆ ನಡೆಸುವಂತೆ ಇರಾನ್‌ ಮಾಡಿದ್ದ ಮನವಿಯ ಅನುಸಾರ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು (ಸೋಮವಾರ) ಮಧ್ಯಾಹ್ನ ಸಭೆ ಕರೆದಿದೆ. ಯುಎನ್‌ಎಸ್‌ಸಿ ಅಧ್ಯಕ್ಷತೆ ವಹಿಸಿಕೊಂಡಿರುವ ಸ್ವಿಟ್ಜರ್‌ಲ್ಯಾಂಡ್‌, ತುರ್ತು ಸಭೆ ಆಯೋಜನೆ ಬಗ್ಗೆ ಭಾನುವಾರ ಹೇಳಿಕೆ ನೀಡಿದೆ. ಇರಾನ್‌ ಮನವಿಯನ್ನು ರಷ್ಯಾ, ಚೀನಾ ಮತ್ತು ಅಲ್ಜೀರಿಯಾ ಬೆಂಬಲಿಸಿವೆ ಎಂದು ತಿಳಿಸಿದೆ. ಇದೇ ತಿಂಗಳ ಆರಂಭದಲ್ಲಿ ಇಸ್ರೇಲ್‌ ವಿರುದ್ಧ ಇರಾನ್‌ ಕ್ಷಿಪಣಿ ದಾಳಿ …

Read More »

ಅಕ್ಕಿ ಗಿರಣಿಗಾರರ ಕುಂದುಕೊರತೆ ನಿವಾರಣೆಗೆ ಆನ್ ಲೈನ್ ಆಯಪ್​ ಘೋಷಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಅಕ್ಕಿ ಗಿರಣಿಗಾರರ ಕುಂದುಕೊರತೆ ನಿವಾರಣೆಗೆ ಕೇಂದ್ರ ಸರ್ಕಾರ ಹೊಸ ಆಯಪ್ ರೂಪಿಸಿದ್ದು, ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ಆನ್ಲೈನ್ ಪೋರ್ಟಲ್ ಅನ್ನು ಘೋಷಿಸಿದ್ದಾರೆ. ಅಕ್ಕಿ ಗಿರಣಿಗಾರರು ಎದುರಿಸುವ ಸಮಸ್ಯೆಗಳಿಗೆ ಈ ಪೋರ್ಟಲ್​ನಲ್ಲಿ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗಿದೆ. ಅಕ್ಕಿ ಗಿರಣಿಗಾರರಿಗೆ ಸಾರಿಗೆ ವೆಚ್ಚ, ಅಕ್ಕಿ ಖರೀದಿಸುವ ಪ್ರಕ್ರಿಯೆಯಲ್ಲಿ ಆಗುವ ವಿಳಂಬ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಈ ಪೋರ್ಟಲ್​ನ ಉದ್ದೇಶವಾಗಿದೆ. ರೈಸ್ ಮಿಲ್ …

Read More »

ಕಪ್ಪತ್ತಗುಡ್ಡದಲ್ಲಿನ ಗಣಿಗಾರಿಕೆ ಪ್ರಸ್ತಾವನೆ ತಿರಸ್ಕರಿಸಲು ಸಿಎಂ ಸಿದ್ದರಾಮಯ್ಯಗೆ ಬಸವರಾಜ ಹೊರಟ್ಟಿ ಪತ್ರ

ಗದಗ: ಕಪ್ಪತಗುಡ್ಡದಲ್ಲಿನ ಎಲ್ಲಾ 28 ಗಣಿಗಾರಿಕೆ ಪ್ರಸ್ತಾವನೆಗಳನ್ನು ತಿರಸ್ಕರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾರಿಯಿದ್ದಾರೆ. ಇತ್ತೀಚೇಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಗಣಿಗಾರಿಕೆ ಪ್ರಸ್ತಾವನೆಗಳನ್ನು ಮುಂದೂಡಿದ್ದರು. ಇದೀಗ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಗಣಿಗಾರಿಕೆ ಪ್ರಸ್ತಾವನೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ವಾರ ತೋಂಟದಾರ್ಯ ಮಠಾಧೀಶರು, ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಡಿಸಿ ಮೂಲಕ ಸಿಎಂಗೆ …

Read More »

ಭಾರತದಲ್ಲಿ ಕಳೆದ ಐದಾರು ವರ್ಷದಲ್ಲಿ 1 ಸಾವಿರ ಹೊಸ ಸ್ಟಾರ್ಟಪ್ ಗಳು ಆರಂಭ: ಪ್ರಧಾನಿ ಮೋದಿ

ವಡೋದರಾ: ಕಳೆದ ಒಂದು ದಶಕದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಪರಿಣಾಮವಾಗಿ ಭಾರತದಲ್ಲಿ ರಕ್ಷಣಾ ಕ್ಷೇತ್ರ ಹುಲುಸಾಗಿ ಬೆಳೆಯುತ್ತಿದೆ. ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆ ಹೆಚ್ಚುತ್ತಿದೆ. ಕಳೆದ ಐದಾರು ವರ್ಷದಲ್ಲಿ 1,000 ಹೊಸ ಸ್ಟಾರ್ಟಪ್​ಗಳು ಆರಂಭವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್​ನ ವಡೋದರಾ ನಗರದಲ್ಲಿ ಟಾಟಾ ಏರ್​ಕ್ರಾಫ್ಟ್ ಕಾಂಪ್ಲೆಕ್ಸ್​ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಮೋದಿ, ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಬಗ್ಗೆ ಮಾಹಿತಿ …

Read More »

ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ: ಮುಂದಿನ ವರ್ಷ ದೇಶದಲ್ಲಿ ಜನಗಣತಿ ಆರಂಭ

ನವದೆಹಲಿ: ಕಳೆದ ಕೆಲ ವರ್ಷಗಳಿಂದ ಸಾವಿರಾರು ಮಂದಿ ದೇಶಾದ್ಯಂತ ಜನಗಣತಿ ಯಾವಾಗ ನಡೆಯುತ್ತೆ ಅನ್ನೋದನ್ನು ಕಾಯುತ್ತಿದ್ದಾರೆ. 2011ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಕೊನೆಯದಾಗಿ ಜನಗಣತಿ ಮಾಡಿತ್ತು. ಇದೀಗ ಕೇಂದ್ರದ ಎನ್‌ಡಿಎ ಸರ್ಕಾರ ಜನಗಣತಿ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರ ನಡೆಸುವ ಜನಗಣತಿಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಮುಂದಿನ ವರ್ಷದಿಂದ ದೇಶದಲ್ಲಿ ಜನಗಣತಿ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿದ್ದು, ಜನಗಣತಿಯು ಮುಂದಿನ ವರ್ಷ …

Read More »

ಗ್ರಾಮ ಆಡಳಿತ ಅಧಿಕಾರಿ ಲಿಖಿತ ಪರೀಕ್ಷೆ: ಶೇ.80 ರಷ್ಟು ಮಂದಿ ಹಾಜರು

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಯ(ವಿಎಒ) ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆದಿದ್ದು, ಶೇ.80ರಷ್ಟು ಮಂದಿ ಹಾಜರಾಗಿದ್ದಾರೆ. ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆದಿದೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ.80ರಷ್ಟು ಮಂದಿ ಪರೀಕ್ಷೆಗೆ …

Read More »

ಮುಂದಿನ 15 ದಿನಗಳಲ್ಲಿ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಈ ಬಾರಿ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಸುರಿದ ವಾಡಿಕೆಗಿಂತ ಹೆಚ್ಚು ಮಳೆಯ ಕಾರಣ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಮಳೆಯಿಂದಾಗಿ ಮನೆಗಳು ಸಹ ಹಾನಿಯಾಗಿವೆ ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳ್ಳಲಿದ್ದು, ಮುಂದಿನ 15 ದಿನಗಳಲ್ಲಿ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮೆಯಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಗಳೂರು ತಾಲೂಕಿನ ಸಂಗೇನಹಳ್ಳಿ ಕೆರೆ ಕೋಡಿ ವೀಕ್ಷಣೆ ಮಾಡಿದರು, ಹಿರೇಮಲ್ಲನಹೊಳೆಯಲ್ಲಿ …

Read More »

ವಿಜಯಪುರ: ವಕ್ಫ್‌ ಬೋರ್ಡ್ ನಿಂದ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕಾರಕ್ಕೆ ರಾಜ್ಯ ಬಿಜೆಪಿಯಿಂದ ತಂಡ ರಚನೆ

ವಿಜಯಪುರ: ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್‌ನಿಂದ ನೋಟಿಸ್‌ ನೀಡಿರುವ ವಿಚಾರವು ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದು, ಮತ್ತೊಂದೆಡೆ ಇದೇ ವಿಚಾರ ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ದೇಶನದಂತೆ ಒಂದು ತಂಡ ಕೂಡ ರಚನೆಯಾಗಿದೆ. ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿ ವತಿಯಿಂದ ತಂಡ ರಚಿಸಲಾಗಿದೆ. ಈ ತಂಡವು ಅಕ್ಟೋಬರ್‌ 29ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದೆ. …

Read More »

ಕೇಂದ್ರ ಸರ್ಕಾರದಿಂದ ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ 2300 ರೂ.ಗೆ ಹೆಚ್ಚಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಎಂ ಎಸ್ ಪಿ ಅನ್ನು 2013-14 ರಲ್ಲಿ ಭತ್ತಕ್ಕೆ(ಸಾಮಾನ್ಯ) ಕ್ವಿಂಟಾಲ್ ಗೆ 1310 ರೂ. ನಿಂದ 2024-25 ರಲ್ಲಿ 2300 ರೂ. ಗೆ ಹೆಚ್ಚಿಸಲಾಗಿದೆ. ಪಂಜಾಬ್ ರಾಜ್ಯದಲ್ಲಿ ಭತ್ತ ಮತ್ತು ಕಸ್ಟಮ್ ಮಿಲ್ಡ್ ರೈಸ್(ಸಿಎಂಆರ್) ಖರೀದಿ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸಕಾಲದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಪ್ರತಿಭಟನಾ …

Read More »

ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಟಿಸಲು ಹೆಚ್ಚಿನ ಒತ್ತು ನೀಡಬೇಕು: ಸಚಿವ ಎಚ್.ಕೆ.ಪಾಟೀಲ್

ಬೀದರ್‌: ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಟಿಸಲು ಹೆಚ್ಚಿನ ಒತ್ತು ಕೊಡಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. ಪಾಟೀಲ ತಿಳಿಸಿದರು. ನಗರದ ಸಿಂದೋಲ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ದಿ ಗಾಂಧಿ ಗಂಜ್‌ ಕೋ ಆಪರೇಟಿವ್‌ ಬ್ಯಾಂಕಿನ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕಾರು ಖರೀದಿ, ನಿವೇಶನ ಮತ್ತು ಮನೆ ನಿರ್ಮಾಣಕ್ಕೆ, ಲಗ್ನಕ್ಕೆ ಸಹಕಾರಿ ಬ್ಯಾಂಕುಗಳು ಸಾಲ ಕೊಡುತ್ತವೆ ಆದರೆ, ಕೈಗಾರಿಕೆಗಳ ಸ್ಥಾಪನೆಗೆ ಸಾಲ ಕೊಡುವುದಿಲ್ಲ. …

Read More »