Breaking News

BigTv News

ಜಿಂದಾಲ್ ಸಂಸ್ಥೆಗೆ 35 ಟನ್ ನಂದಿನಿ ಮೈಸೂರು ಪಾಕ್ ಪೂರೈಕೆ

ಬಳ್ಳಾರಿ: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌) ಮೂಲಕ ಜಿಲ್ಲೆಯ ತೋರಣಗಲ್‌ನ ಜಿಂದಾಲ್‌ ಸಂಸ್ಥೆಗೆ 35 ಟನ್‌ ನಂದಿನಿ ‌ಮೈಸೂರು ಪಾಕ್‌ ಅನ್ನು ಪೂರೈಕೆ ಮಾಡಲಾಗಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟದ (ರಾಬಕೊವಿ) ಮಧ್ಯಸ್ಥಿಕೆಯಲ್ಲಿ ಈ ವ್ಯಾಪಾರ ನಡೆದಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪೀರ್ಯ ನಾಯಕ್‌ ಅವರು ತಿಳಿಸಿದರು. ಅರ್ಧ ಕೆ.ಜಿ ತೂಕದ ಒಟ್ಟು 70 ಸಾವಿರ ಪ್ಯಾಕೆಟ್‌ಗಳಲ್ಲಿ ಸಿಹಿ ಉತ್ಪನ್ನವನ್ನು ಪೂರೈಕೆ ಮಾಡಲಾಗಿದೆ. …

Read More »

ಶಾಂತಿ ನೆಲೆಸಲು ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸುವುದು ಅತ್ಯಗತ್ಯ: ಕೇಂದ್ರ ಸಚಿವ ಅಮಿತ್ ಶಾ

ಕೋಲ್ಕತಾ: ಒಳನುಸುಳುವಿಕೆ ತಡೆಯಿಂದ ಮಾತ್ರ ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸುವಂತೆ ಮಾಡಲು ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್‌ ಅನ್ನು ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಗಡಿಗಳಲ್ಲಿ ನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸುವುದು ಅತ್ಯಗತ್ಯವಾಗಿದೆ. 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಯಲಾಗುವುದು ಎಂದು ತಿಳಿಸಿದರು. …

Read More »

ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕಟಿಸುವರ ಮೇಲೆ ಕಾನೂನು ಕ್ರಮ: ಸಚಿವ ಪರಮೇಶ್ವರ್

ಶಿವಮೊಗ್ಗ : ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪೊಲೀಸರಿಗೆ ತಾಕೀತು ಮಾಡಿದರು. ನಗರದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿದ ಬಳಿಕ ಶಿವಮೊಗ್ಗ ಜಿಲ್ಲಾ ವಿಮರ್ಶನಾ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮಕ್ಕಳ ಓದಿಗಾಗಿ ಗ್ರಂಥಾಲಯಗಳಲ್ಲಿ ಹೆಚ್ಚಿನ …

Read More »

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ಕುರಿತು ಸಭೆ

ಬೆಂಗಳೂರು: ಮಹಾತಗಾಂಧೀಜಿಯವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯ ಕ್ರಮವನ್ನು ಆಯೋಜಿಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಎಲ್ಲಾ ಶಾಸಕರು, ಸಂಸದರು, ಸಚಿವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಭಾನುವಾರ ರಜಾ ದಿನವೂ ಕೂಡ ಇಂದು ಬಿಡುವಿಲ್ಲದಂತೆ ಚಟುವಟಿಕೆಯಲ್ಲಿ ತೊಡಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಗೃಹಕಚೇರಿ ಕೃಷ್ಣಾದಿಂದಲೇ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ. ಬಿಜೆಪಿ …

Read More »

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಪುನರಾಯ್ಕೆ

ಚಿತ್ರದುರ್ಗ: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷರಾಗಿ ಚಾಮರಸ ಮಾಲಿಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ರವಿಕಿರಣ್‌ ಪೂಣಚ್ಚ ಹಾಗೂ ಉಪಾಧ್ಯಕ್ಷರಾಗಿ ಕೆ.ಪಿ.ಭೂತಯ್ಯ ಪುನರಾಯ್ಕೆಯಾದರು. ಇಲ್ಲಿ ನಡೆದ ಸಂಘದ ರಾಜ್ಯ ಘಟಕದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್‌.ಡಿ.ವಸಂತಕುಮಾರ್‌, ಕಾರ್ಯಾಧ್ಯಕ್ಷರಾಗಿ ಜೆ.ಎಂ.ವೀರಸಂಗಯ್ಯ, ಎ.ಗೋವಿಂದರಾಜು ಮತ್ತು ಎ.ಎಂ.ಮಹೇಶ್‌ಪ್ರಭು ಆಯ್ಕೆಯಾದರು. ಖಜಾಂಚಿಯಾಗಿ ಪ್ರಸನ್ನ ಎನ್‌.ಗೌಡ, ಕಾರ್ಯದರ್ಶಿಗಳಾಗಿ ಗೋಪಾಲ ಪಾಪೇಗೌಡ, ಅರುಣ್‌ಕುಮಾರ್‌ ಕುರುಡಿ, ಸೂಗೂರಯ್ಯ …

Read More »

ರೈತರ 15 ಸಾವಿರ ಎಕರೆ ಭೂಮಿ ಕಬಳಿಸಲು ಕಾಂಗ್ರೆಸ್​ ಸರ್ಕಾರ ಹುನ್ನಾರ ನಡೆಸಿದೆ: ಸಂಸದ ಕಾರಜೋಳ ವಾಗ್ದಾಳಿ

ಬೆಂಗಳೂರು: ವಕ್ಫ್ ಬೋರ್ಡ್ ಜೊತೆ ಸೇರಿಕೊಂಡು ರೈತರ 15 ಸಾವಿರ ಎಕರೆ ಭೂಮಿಯನ್ನು ಕಬಳಿಸಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ರೈತರಿಗೆ ವಕ್ಫ್‌ ಬೋರ್ಡ್‌ನಿಂದ ನೋಟಿಸ್‌ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಕ್ಫ್‌ ಹೆಸರಲ್ಲಿ ರೈತರ ಭೂಮಿಯನ್ನು ಸರ್ಕಾರ ಕಿತ್ತುಕೊಳ್ಳಲು ಮುಂದಾಗಿದೆ. ಹರಿಜನರಿಗೆ ನೋಟಿಸ್‌ ಕೊಟ್ಟು ಅವರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ದೂರಿದರು. ಲೋಕಸಭೆಯಲ್ಲಿ …

Read More »

ಪಿ ಎಸ್ ಜಿ ಎಂ ಬಿ ವೈ ಜಾಗೃತಿ ಮತ್ತು ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು: ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ (ಪಿಎಸ್‌ಜಿಎಂಬಿವೈ)ಯಡಿ ಮನೆ ಚಾವಣಿ ಮೇಲೆ ಸೌರ ಫಲಕ ಅಳವಡಿಸಿಕೊಂಡ ಫಲಾನುಭವಿಗಳಿಗೆ ಉತ್ತೇಜಿಸಲು ಕೇಂದ್ರ ಸರ್ಕಾರ ಇನ್ನೊಂದು ದಿಟ್ಟ ಹೆಜ್ಜೆಯಿಡುತ್ತಿದೆ. ಸೂರಿನ ಮೇಲೆ ಸೌರಶಕ್ತಿಯಿಂದ ಉತ್ಪಾದಿತ ಮನೆಗೆ ಬಳಸಿಕೊಂಡ ನಂತರವೂ ಹೆಚ್ಚುವರಿಯಾಗಿ ಲಭ್ಯ ವಿದ್ಯುತ್‌ನ್ನು ಎಸ್ಕಾಂಗಳು ಖರೀದಿಸುವುದು ಶೀಘ್ರ ಕಡ್ಡಾಯವಾಗಲಿದೆ. ಇದಕ್ಕಾಗಿ ಅಧಿಕಾರಿ ವರ್ಗದಮಟ್ಟದಲ್ಲಿ ಚರ್ಚೆಗಳು ನಡೆದಿವೆ. ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲು ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ಕರಡು ಸಿದ್ಧವಾಗುತ್ತಿದೆ. ಇಷ್ಟರಲ್ಲೇ ಅಂತಿಮವಾಗಲಿದೆ ಎಂದು …

Read More »

16.73 ಕೋಟಿ ರೂ. ವೆಚ್ಚದಲ್ಲಿ ಗುಬ್ಬಿ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣವನ್ನು 16.73 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ಗುಬ್ಬಿ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಬ್ಬಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಈಗಾಗಲೇ ನೀಲಿ ನಕ್ಷೆ ಸಿದ್ಧಪಡಿಸಲಾಗಿದೆ. ರೈಲ್ವೆ ನಿಲ್ದಾಣದ ಕಾಮಗಾರಿ ಪೂರ್ಣಗೊಂಡ ಬಳಿಕ ನಿಲ್ದಾಣಕ್ಕೆ ಶ್ರೀ ಚನ್ನಬಸವೇಶ್ವರ ಸ್ವಾಮಿಗಳ ಹೆಸರನ್ನು ನಾಮಕರಣ …

Read More »

70 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 70 ವರ್ಷ ದಾಟಿದವರಿಗೆ ವಿಶೇಷ ಆರೋಗ್ಯ ವಿಮೆ ಘೋಷಣೆ ಮಾಡಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಅವರ ಆದಾಯದ ಸ್ಥಿತಿಯನ್ನು ಲೆಕ್ಕಿಸದೆ ಆರೋಗ್ಯ ರಕ್ಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಬಿಡುಗಡೆ ಮಾಡುವ …

Read More »

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ 7 ಅಭ್ಯರ್ಥಿಗಳಿಂದ ಒಟ್ಟು 13 ನಾಮಪತ್ರ ಸಲ್ಲಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-2024ಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು 7 ಅಭ್ಯರ್ಥಿಗಳು ಒಟ್ಟು 13 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್ ಹೆಚ್. ಡಿ. …

Read More »