Breaking News

BigTv News

ಪದಾತಿ ದಳದ ಅದಮ್ಯ ಮನೋಭಾವ ಮತ್ತು ಧೈರ್ಯವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರಮೋದಿ ಅವರು ಪದಾತಿ ದಳದ ಎಲ್ಲಾ ಶ್ರೇಣಿಗಳು ಮತ್ತು ಅನುಭವಿಗಳ ಅದಮ್ಯ ಮನೋಭಾವ ಮತ್ತು ಧೈರ್ಯವನ್ನು ಶ್ಲಾಘೀಸಿದ್ದಾರೆ. ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಯಾವುದೇ ಪ್ರತಿಕೂಲತೆಯನ್ನು ಎದುರಿಸಲು ಯಾವಾಗಲೂ ದೃಢವಾಗಿ ನಿಲ್ಲುತ್ತಾರೆ, ರಾಷ್ಟದ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುತ್ತಾರೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಸೇನೆಯ ನೆರವಿನಿಂದ ಜಮ್ಮು ಮತ್ತು ಕಾಶ್ಮೀರದ ಜನರನ್ನು ಪಾಕಿಸ್ತಾನಿ ಕಬೈಲಿ ರೈಡರ್‌ಗಳ ವಿನ್ಯಾಸದಿಂದ ರಕ್ಷಿಸಲು ಅಕ್ಟೋಬರ್ 27, 1947ರಂದು ಸಿಖ್ ರೆಜಿಮೆಂಟ್‌ನ 1ನೇ …

Read More »

ಹಳ್ಳಿಕಾರ ಸಮುದಾಯದ ಸಮಾವೇಶ, ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ,ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, …

Read More »

ಬೆಂಗಳೂರು ಭಾಗದ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದ್ದಂತೆ ಇದೀಗ ಬೆಂಗಳೂರು ಭಾಗದ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಂಗಳೂರು ಭಾಗದ ಕ್ಷೇತ್ರಗಳಿಗೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನೆಯಲ್ಲಿರುವ ಅನುದಾನ ಬಳಸಿಕೊಂಡು ಅನುದಾನ ನೀಡುವಂತೆ ಸೂಚನೆ ನೀಡಿರುವ ಡಿ.ಕೆ.ಶಿವಕುಮಾರ್, ಈ ಅನುದಾನವನ್ನು ತುರ್ತು ಕಾಮಗಾರಿಗಳಿಗೆ ಶಾಸಕರೊಂದಿಗೆ ಚರ್ಚಿಸಿ ಕ್ರಿಯಾ ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ. …

Read More »

ರೈತರ ಒಂದಿಂಚು ಜಮೀನು ತಪ್ಪಾಗಿ ವಕ್ಫ್ ಗೆ ಹೋಗುವುದಿಲ್ಲ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ ಇದು ಯಾವುದು ವಕ್ಫ್ ಜಮೀನಲ್ಲ ರೈತರ ಜಮೀನು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಬಹಳಷ್ಟು ಚರ್ಚೆ ಆಗುತ್ತಿದೆ. ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿದ್ದಾರೆ ತಹಶೀಲ್ದಾರ್ ಜೊತೆ ರೈತರ ಜೊತೆಗೆ ಚರ್ಚೆ ಮಾಡಿ, ರೈತರ ಒಂದಿಂಚು ಜಮೀನು ತಪ್ಪಾಗಿ ವಕ್ಫ್‌ಗೆ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದ್ದೆ. ಇದಾದ …

Read More »

ರಾಜ್ಯದಲ್ಲಿ ರಸ್ತೆಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ನೆರವು ನೀಡಲು ಒಪ್ಪಿದ ವಿಶ್ವಬ್ಯಾಂಕ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ 25 ಮಂದಿ ಸಾವನ್ನಪ್ಪಿದ್ದಾರೆ, 2,077 ಮನೆ ಹಾನಿಗೀಡಾಗಿವೆ 1 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿ ಸಂಭವಿಸಿದೆ ಶೀಘ್ರ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ರಾಜಕಾಲುವೆಗಳ ಅಭಿವೃದ್ಧಿಗೆ 2,000 ಕೋಟಿ ಮತ್ತು ರಸ್ತೆಗಳ ಅಭಿವೃದ್ಧಿಗೆ 5,000 ಕೋಟಿ ನೆರವು ನೀಡಲು ವಿಶ್ವಬ್ಯಾಂಕ್ ಒಪ್ಪಿದೆ. ನವೆಂಬರ್, ಡಿಸೆಂಬರ್‌ನಲ್ಲಿಯೂ ಹೆಚ್ಚು ಮಳೆ ಆಗುವ ನಿರೀಕ್ಷೆ ಇದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಡಿಸಿಗಳಿಗೆ ಸಿಎಂ …

Read More »

ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಇಬ್ಬರ ಸ್ಥಿತಿ ಚಿಂತಾಜನಕ, 9 ಜನರಿಗೆ ಗಂಭೀರ ಗಾಯ

ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಂದ್ರಾದ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಬಾಂದ್ರಾ-ಗೋರಖ್ ಪುರ ಮಾರ್ಗದ ರೈಲು ಹತ್ತಲೆಂದು ಏಕಾಏಕಿ ಜನರು ನುಗ್ಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಮುಂಬೈನ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More »

ಬೆಂಗಳೂರಿನಲ್ಲಿ 2 ಸಾವಿರ ಕೋಟಿ ವೆಚ್ಚದಲ್ಲಿ ರಾಜಕಾಲುವೆ ತಡೆಗೊಡೆ ಮರು ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರಿ ಮಳೆಯಿಂದ ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಕಲಿಸಲು 2,000 ಕೋಟಿ ವೆಚ್ಚದಲ್ಲಿ 253 ಕಿ.ಮೀ. ರಾಜಕಾಲುವೆ ತಡೆಗೋಡೆ ಮರು ನಿರ್ಮಾಣ ಮಾಡಲು ಯೋಜನಾ ವರದಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರ ಜತೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿದರು. …

Read More »

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ: ಓರ್ವ ವ್ಯಕ್ತಿ ಸಜೀವ ದಹನ

ಮಹರಾಷ್ಟ್ರ:ರಾಜ್ಯದ ಕೊಲ್ಲಾಪುರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾರೆ. ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಬಸ್ ನಲ್ಲಿ ಈ ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರದ ಬಳಿ ತಡರಾತ್ರಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ, ಬಹುತೇಕ ಎಲ್ಲಾ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದಿದ್ದಾರೆ. ಆದರೆ ಓರ್ವ ಪ್ರಯಾಣಿಕ ಬಸ್ ನಲ್ಲಿ …

Read More »

ಉತ್ತರ ಪ್ರದೇಶ ರಾಜ್ಯದ 56 ಲಕ್ಷ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ: ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ರಾಜ್ಯದ 56 ಲಕ್ಷ ಅರ್ಹ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಡೇರಿಸಿದ್ದಾರೆ. 2024-25ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ, 56 ಲಕ್ಷ ಫಲಾನುಭವಿಗಳ ಖಾತೆಗಳಿಗೆ ತಿಂಗಳಿಗೆ 1 ಸಾವಿರ ರೂ.ಗಳನ್ನು ಜಮಾ ಮಾಡಲಾಗಿದ್ದು, ಈ ಉಪಕ್ರಮಕ್ಕಾಗಿ ಸರ್ಕಾರವು 1,67,975 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ. ತಮ್ಮ ಜನಪರ ನೀತಿಗಳಿಂದ ಪ್ರೇರಿತರಾಗಿ, ಸಿಎಂ ಯೋಗಿ ಸಮಾಜದ ಪ್ರತಿಯೊಂದು ವರ್ಗದ ಪ್ರಗತಿಗೆ ಸಮಗ್ರ …

Read More »

ನವೆಂಬರ್‌ ಅಂತ್ಯದೊಳಗೆ ತೆಲಂಗಾಣದಲ್ಲಿ ಜಾತಿ ಸಮೀಕ್ಷೆ ಪೂರ್ಣ: ಸಚಿವ ಪೊನ್ನಂ ಪ್ರಭಾಕರ್

ಹೈದರಾಬಾದ್‌: ತೆಲಂಗಾಣ ಸರ್ಕಾರವು ನವೆಂಬರ್ ಮೊದಲ ವಾರದಲ್ಲಿ ಜಾತಿ ಸಮೀಕ್ಷೆ ಪ್ರಾರಂಭಿಸುವ ನಿರೀಕ್ಷೆಯಿದ್ದು ತಿಂಗಳ ಅಂತ್ಯದೊಳಗೆ ಅದನ್ನು ಪೂರ್ಣಗೊಳಿಸುವ ಸಾಧ್ಯತೆಯಿದೆ ಎಂದು ಸಚಿವ ಪೊನ್ನಂ ಪ್ರಭಾಕರ್ ಹೇಳಿದರು. ಸಚಿವ ಸಂಪುಟ ಸಭೆ ನಂತರ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರದಾದ್ಯಂತ ಜಾತಿ ಸಮೀಕ್ಷೆ ನಡೆಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬದ್ಧತೆಗೆ ಅನುಗುಣವಾಗಿ ಜಾತಿ ಸಮೀಕ್ಷೆ ನಡೆಸಲಾಗುತ್ತದೆ ಎಂದರು. ಸಮೀಕ್ಷೆ ನಡೆಸಲು 80 ಸಾವಿರ ಸರ್ಕಾರಿ ನೌಕರರನ್ನು ನಿಯೋಜಿಸಲಾಗುವುದು …

Read More »