Breaking News

BigTv News

ನ.14 ರಿಂದ ಬೆಂಗಳೂರಿನ ಜಿಕೆವಿಕೆಯಲ್ಲಿ ವಾರ್ಷಿಕ ಕೃಷಿ ಮೇಳ ಆಯೋಜನೆ

ಬೆಂಗಳೂರು: ಸುಸ್ಥಿರ ಕೃಷಿಯಲ್ಲಿ ಅತ್ಯಾಧುನಿಕ ಕ್ರಮಗಳನ್ನು ಗುರುತಿಸಲು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತನ್ನ ವಾರ್ಷಿಕ ಕೃಷಿ ಮೇಳವನ್ನು ನವೆಂಬರ್ 14 ರಿಂದ 17 ರವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಿದೆ. ಸರ್ಕಾರದ ಪ್ರಮುಖ ಇಲಾಖೆಗಳೊಂದಿಗೆ ಜಂಟಿಯಾಗಿ ಆಯೋಜಿಸಲಾಗುವ ಈ ವರ್ಷದ ಕಾರ್ಯಕ್ರಮ ಹವಾಮಾನ ಸ್ಮಾರ್ಟ್ ಡಿಜಿಟಲ್ ಕೃಷಿ ಎಂಬ ವಿಷಯದ ಅಡಿಯಲ್ಲಿ ಆಯೋಜಿಸಲಾಗುವುದು. ಹೊಸದಾಗಿ ಅಭಿವೃದ್ಧಿಪಡಿಸಿದ ನಾಲ್ಕು ಬೆಳೆ ಪ್ರಬೇಧಗಳು, ಪ್ರಾತ್ಯಕ್ಷಿಕೆಗಳು ಮತ್ತು ಹವಾಮಾನ-ಸ್ಥಿತಿಸ್ಥಾಪಕ ಕೃಷಿಯನ್ನು ಬೆಂಬಲಿಸಲು ತಜ್ಞರ …

Read More »

ಎಐಟಿಯುಸಿ ಬಿಸಿಯೂಟ ತಯಾರಕರ ಎಲ್ಲಾ ಬೇಡಿಕೆ ಈಡೇರಿಕೆಗೆ ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು: ಎಐಟಿಯುಸಿ ಬಿಸಿಯೂಟ ತಯಾರಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವೇತನ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು. ಬೆಂಗಳೂರಿನ ಸಮಗ್ರ ಶಿಕ್ಷಣ ಯೋಜನಾಧಿಕಾರಿಗಳ ಸಭಾಂಗಣದಲ್ಲಿ ಎಐಟಿಯುಸಿ ಬಿಸಿಯೂಟ ತಯಾರಕರ ಮತ್ತು ಮಧ್ಯಾಹ್ನ ಉಪಹಾರ ಯೋಜನೆ ರಾಜ್ಯಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಸಿಯೂಟ ತಯಾರಕರ …

Read More »

ಅಮೆರಿಕದಲ್ಲಿ ಆತಂಕ ಸೃಷ್ಟಿಸಿದ ಮೆಕ್ ಡೊನಾಲ್ಡ್: ಹಲವಾರು ಜನರಿಗೆ ಆರೋಗ್ಯ ಸಮಸ್ಯೆ

ವಾಷಿಂಗ್ಟನ್: ಅಮೆರಿಕದಲ್ಲಿ ಮೆಕ್‌ಡೊನಾಲ್ಡ್ ಬರ್ಗರ್ ಸೇವಿದ ಹಲವಾರು ಜನರಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು, ತನ್ನ ಕ್ವಾರ್ಟರ್ ಪೌಂಡರ್ ಬರ್ಗರ್‌ಗಳು ಅಮೆರಿಕದ ಸುಮಾರು 10 ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದೆ. ಈಗಾಗಲೆ ಒಬ್ಬರು ಸಾವನ್ನಪ್ಪಿದ್ದು,ಹಲವಾರು ಮಂದಿ ಅನೇಕ ಕಾಯಿಲೆಗಳಿಗೆ ಒಳಗಾಗಿದ್ದು, ಅಧಿಕಾರಿಗಳು ಈಗ ಆಹಾರ ಸುರಕ್ಷತೆ ಎಚ್ಚರಿಕೆಯನ್ನು ನೀಡಿದ್ದಾರೆ. ಇದರ ನಡುವೆ ಸಿಡಿಸಿ ತನಿಖೆಗೆ ಸರ್ಕಾರ ಆದೇಶ ನೀಡಿದೆ. ಈರುಳ್ಳಿ, ದನದ ಕೊಬ್ಬು ಸೇರಿ ಕೆಲವು ಹಾನಿಕಾರಕ ಪದಾರ್ಥಗಳು ಮೆಕ್‌ಡೊನಾಲ್ಡ್ ಬರ್ಗರ್‌ನಲ್ಲಿ ಕಂಡುಬಂದಿದ್ದು, …

Read More »

ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ, ನಾಳೆ ರಸ್ತೆಯು ಮಾಯ: ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಆರ್.ಅಶೋಕ್

ಬೆಂಗಳೂರು: ಝಣ-ಝಣಾ ಕಾಂಚಾಣದ ಕಾಂಗ್ರೆಸ್ ಸರ್ಕಾರದಲ್ಲಿ ರಸ್ತೆ ಗುಂಡಿ ಮುಚ್ಚುವ ಹಣವೂ ಮಾಯ ನಾಳೆ ರಸ್ತೆಯೂ ಮಾಯ ಎಲ್ಲಾ ಮಾಯಾ ನಾಳೆ ನಾವೂ ಮಾಯ ಎಂದು ರಾಜ್ಯ ಸರ್ಕಾರದ ವಿರುದ್ದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರೇ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು …

Read More »

ಎಐಸಿಸಿ ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಳಿಸಿದ ಮಲ್ಲಿಕಾರ್ಜುನ ಖರ್ಗೆ: ಶುಭ ಕೋರಿದ ಪಕ್ಷದ ನಾಯಕರು

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ಎರಡು ವರ್ಷ ಪೂರ್ಣಗೊಳಿಸಿದ್ದು, ಪಕ್ಷದ ಬಲವರ್ಧನೆಗಾಗಿ ಅವರ ಕೊಡುಗೆಯನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿನ ಪಕ್ಷದ ನಾಯಕರು ಗುಣಗಾನ ಮಾಡಿದ್ದಾರೆ. ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಕ್ಟೋಬರ್ 26, 2022 ರಂದು ಅಧಿಕಾರ ಸ್ವೀಕರಿಸಿದ್ದರು. ಅವರು 24 ವರ್ಷಗಳಲ್ಲಿ ಈ ಹುದ್ದೆಗೆ ಆಯ್ಕೆಯಾದ ಮೊದಲ ಗಾಂಧಿಯೇತರ ನಾಯಕರಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸುವ ಮೂಲಕ 82 ವರ್ಷದ ಖರ್ಗೆ ಅವರು …

Read More »

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಿವಾಸಕ್ಕೆ ಭೇಟಿ

ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪತ್ನಿ ಸುದೇಶ್ ಧನಕರ್ ಅವರೊಂದಿಗೆ ಇಂದು ಬೆಳಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು. ಒಂದು ಗಂಟೆಗೂ ಹೆಚ್ಚು ಕಾಲ ಇದ್ದು, ಚನ್ನಮ್ಮಅವರ ಆರೋಗ್ಯದ ಬಗ್ಗೆ ದೇವೇಗೌಡರಲ್ಲಿ ವಿಚಾರಿಸಿದರು. ಚನ್ನಮ್ಮ ಅವರು ಆದಷ್ಟು ಬೇಗ ಗುಣಮಖರಾಗಲಿ, ಆ ನಂತರ ಅವರನ್ನು ತಾವು ದೆಹಲಿಗೆ ಕರೆದುಕೊಂಡು ಬನ್ನಿ ಎಂದು ತಿಳಿಸಿದರು. ಇದಕ್ಕೆ ಮಾಜಿ ಪ್ರಧಾನಿಗಳು ಸಮ್ಮತಿಸಿ, ತಮ್ಮ ಮೇಲೆ ತಾವು …

Read More »

ಜಮ್ಮುಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಸ್ಕಿಡ್ ಆಗಿ ಸೇನಾ ವಾಹನ ಪಲ್ಟಿ: ಒರ್ವ ಯೋಧ ಸಾವು

ಕುಲ್ಗಾಮ್‌: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ. ಕುಲ್ಗಾಮ್‌ನ ಡಿ ಎಚ್ ಪೋರಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಕಾರ್ಯಾಚರಣೆ ನಡೆಸುವಾಗ ಈ ಅಪಘಾತ ಸಂಭವಿಸಿದೆ ಎಂದು ಸೇನೆಯ ಶ್ರೀನಗರ ಮೂಲದ ಚಿನಾರ್ …

Read More »

ಚಿತ್ತಾಪುರದಲ್ಲಿ ವಿವಿಧ ಯೋಜನೆಗಳಡಿ ₹63 ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಕಾಮಗಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಚಿತ್ತಾಪುರ: ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ₹ 63 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡಿಗಲ್ಲು ನೆರವೇರಿಸಿದರು. ಲೋಕೋಪಯೋಗಿ ಇಲಾಖೆಯ 2023-24ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಯೋಜನೆಯಡಿ ₹ 4.50 ಕೋಟಿ ವೆಚ್ಚದಲ್ಲಿ ಚಿತ್ತಾಪುರ ಪಟ್ಟಣದಲ್ಲಿ ಸರ್ಕಾರಿ ಪ್ರೌಢಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ, ₹ 4 ಕೋಟಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಪ್ರಿಯಾಂಕ್ ಅಡಿಗಲ್ಲು ನೆರವೇರಿಸಿದರು. …

Read More »

ರಾಜ್ಯದಲ್ಲಿ ಮಳೆಯಿಂದ ಪೂರ್ತಿ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ 1.20 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ ನಲ್ಲಿ ಭಾರಿ ಮಳೆಯಾಗಿದ್ದು ಈ ಒಂದು ಮಳೆಯ ಅವಾಂತರದಿಂದ ಅನೇಕ ಪ್ರದೇಶಗಳಲ್ಲಿ ಬೆಳೆಹಾನಿ ಸೇರಿದಂತೆ ಅನೇಕರು ಮನೆಗಳನ್ನು ಕಳೆದುಕೊಂಡಿದ್ದಾರೆ. ಇದೀಗ ಪೂರ್ತಿಯಾಗಿ ಮನೆ ಕಳೆದುಕೊಂಡವರಿಗೆ 1.20 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಗೃಹಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಹಾನಿಯ ಬಗ್ಗೆ ಡಿಸಿ ಸಿಇಓಗಳ ಹಾಗೂ ಎಸ್ ಪಿ ಗಳ ಸಭೆ ಮಾಡಿದ್ದೇನೆ. ಬೆಂಗಳೂರು …

Read More »

ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ: ಕೇಂದ್ರ ಸಚಿವ ಎಚ್ಡಿಕೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಸೇರಿದ್ದರು ಎನ್ ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು ಇದು ಐತಿಹಾಸಿಕ ಸಭೆ ಆಗಿತ್ತು, ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ …

Read More »