ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ, ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 2000 ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ 02.11.2024ರಂದು ಬಲಿಪಾಡ್ಯಮಿ ಹಬ್ಬದ …
Read More »ಇಸ್ರೇಲ್ ವೈಮಾನಿಕ ದಾಳಿ: ಇರಾನ್ ನ ಇಬ್ಬರು ಸೈನಿಕರು ಸಾವು
ಇರಾನ್: ಇರಾನ್ ಆಡಳಿತದ ತಿಂಗಳುಗಳ ನಿರಂತರ ದಾಳಿಗಳಿಗೆ ಪ್ರತೀಕಾರವಾಗಿ ಇಸ್ರೇಲ್ ಇರಾನ್ ಮೇಲೆ ನೇರ ವೈಮಾನಿಕ ದಾಳಿ ನಡೆಸಿದ್ದರಿಂದ ಇಬ್ಬರು ಇರಾನಿನ ಸೈನಿಕರು ಇಂದು ಸಾವನ್ನಪ್ಪಿದ್ದಾರೆ. ಇರಾನಿನ ರಾಜಧಾನಿ ಟೆಹ್ರಾನ್ ಮತ್ತು ಹತ್ತಿರದ ಪ್ರದೇಶಗಳ ಮೇಲೆ ಕನಿಷ್ಠ ಮೂರು ಸುತ್ತಿನ ದಾಳಿಗಳನ್ನು ನಡೆಸಲಾಯಿತು. ಇಸ್ರೇಲ್ ನಡೆಸಿರುವ ಸೇಡಿನ ದಾಳಿಯಲ್ಲಿ ಉಂಟಾಗಿರುವ ಹಾನಿ ಸೀಮಿತವಾಗಿದೆ ಎಂದು ಇರಾನ್ ಹೇಳಿಕೊಂಡಿದೆ. ಆದರೆ ಇರಾನ್ ವಾಯು ಪ್ರದೇಶದಲ್ಲಿ ತನಗೆ ಈಗ ವ್ಯಾಪಕ ಸ್ವಾತಂತ್ರ್ಯ ದೊರಕಿದೆ …
Read More »ಹಿಂಗಾರು ಮಳೆ, ಅತಿವೃಷ್ಟಿಯಿಂದ ರಾಜ್ಯದಲ್ಲಿ ಉಂಟಾದ ಹಾನಿಗೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹಿಂಗಾರು ಮಳೆ, ಅತಿವೃಷ್ಟಿಯಿಂದ ರಾಜ್ಯದಲ್ಲಿ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಈ ವೇಳೆ ಅತಿವೃಷ್ಟಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ಸೂಚಿಸಿದರು. …
Read More »ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಗೆ ಮಾತ್ರ ಅವಕಾಶ, ನಿಯಮ ಉಲ್ಲಂಘಸಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದ್ದು, ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ …
Read More »ಶಿವಮೊಗ್ಗದಲ್ಲಿ ನೂತನ ಪೊಲೀಸ್ ಸಮುದಾಯ ಭವನ ಉದ್ಘಾಟಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಶಿವಮೊಗ್ಗ: ನಗರದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಇಂದು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ. 500 ಸೀಟಿಂಗ್ ಸಾಮರ್ಥ್ಯ, ಊಟದ ಹಾಲ್ ಸೇರಿದಂತೆ ಸುಸಜ್ಜಿತವಾಗಿ ಭವನವನ್ನು ನಿರ್ಮಿಸಲಾಗಿದೆ. ನಂತರ ಡಿಎಆರ್ ಸಭಾಂಗಣದಲ್ಲಿ ಗೃಹ ಸಚಿವರು ಪೂರ್ವ ವಯಲದ ಉಪ ಪೊಲೀಸ್ ಮಹಾ ನಿರೀಕ್ಷಕರಾದ …
Read More »ರಾಜ್ಯದಲ್ಲಿ ಆಗಿರುವ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಬೆಂಗಳೂರು: ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ವಿಡಿಯೊ ಸಂವಾದ ನಡೆಸಿದರು. ಮಳೆಯಿಂದಾಗಿ ಉಂಟಾಗಿರುವ ನಷ್ಟದ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಸಂವಾದ ನಡೆಸಿ ಮಾಹಿತಿ ಪಡೆದರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವರ …
Read More »ಗ್ಯಾರಂಟಿ ಯೋಜನೆಗಳ ಲಾಭ ಶೇ.95 ರಷ್ಟು ಜನರಿಗೆ ಲಭಿಸಿದೆ: ಸಂಸದ ಸಾಗರ್ ಖಂಡ್ರೆ
ಔರಾದ್: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಲಾಭ ಶೇ 95ರಷ್ಟು ಜನರಿಗೆ ತಲುಪಿದೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಯಿಂದ ಮಹಿಳೆಯರು ತುಂಬಾ ಖುಷಿಯಲ್ಲಿದ್ದಾರೆ ಇದು ಅವರ ಸ್ವಾವಲಂಬಿ ಬದುಕಿಗೆ ಪೂರಕವಾಗಿದೆ ಇಡೀ ದೇಶದಲ್ಲೇ ಈ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು …
Read More »ತುಮಕೂರು: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಯೋಜನೆಯಡಿ ಕೊಳಚೆ ನೀರು ಸಂಸ್ಕರಣೆಗೆ ₹135 ಕೋಟಿ ಮಂಜೂರು
ತುಮಕೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಶುದ್ಧಿ ಅಭಿಯಾನದಡಿ ಕೊಳಚೆ ನೀರಿನ ಸಂಸ್ಕರಣೆ, ಸ್ವಚ್ಛ ಭಾರತ್ ಮಿಷನ್, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಯೋಜನೆಯಲ್ಲಿ ₹135.23 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (ಕೆಯುಐಡಿಎಫ್ಸಿ) ವ್ಯವಸ್ಥಾಪಕ ನಿರ್ದೇಶಕ ಶರತ್ ತಿಳಿಸಿದರು. ನಗರದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಈ ಮಾಹಿತಿ ನೀಡಿದರು. ತುಮಕೂರು ಮಹಾನಗರ ಪಾಲಿಕೆಗೆ ₹50 ಕೋಟಿ …
Read More »ಉಪಚುನಾವಣೆ ನಂತರ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಬಿ.ವೈ ವಿಜಯೇಂದ್ರ
ಕೊಟ್ಟೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆ ಯಲಾರದು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಡಾ ಹಗರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ …
Read More »ಹರಿಯಾಣದಲ್ಲಿ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ
ಹರಿಯಾಣ: ಹರಿಯಾಣದ ಗುರುಗ್ರಾಮದ ಸರಸ್ವತಿ ಎನ್ಕ್ಲೇವ್ನಲ್ಲಿರುವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಎಲ್ಲರೂ ಮೂಲತಃ ಬಿಹಾರ ಮೂಲದವರು. ಇಂದು ಮುಂಜಾನೆ 12:15 ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ನೊಂದಿಗೆ ತಕ್ಷಣ ಸ್ಥಳಕ್ಕೆ ಆಗಮಿಸಿದರು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಕೌನ್ಸಿಲರ್ ಬ್ರಹ್ಮ ಯಾದವ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಆರ್ಥಿಕ ನೆರವು ಸೇರಿದಂತೆ ಸಾಧ್ಯವಿರುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





