Breaking News

BigTv News

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳು ಹಂತ ಹಂತವಾಗಿ ಭರ್ತಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ …

Read More »

ರಾಜ್ಯದಲ್ಲಿ ಮಳೆ ಹಾನಿ ಕುರಿತು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಳೆ ಹಾನಿ, ಸಮಸ್ಯೆಗಳ ಕುರಿತಾಗಿ ಮಾಹಿತಿ ಪಡೆದು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಲಿದ್ದಾರೆ. ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ …

Read More »

ರಾಜ್ಯದಲ್ಲಿ ಬೆಳೆ ಸಮೀಕ್ಷೆ ನಡೆಸಿ 15 ದಿನಗಳೊಳಗೆ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

ದಾವಣಗೆರೆ : ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಜಗಳೂರು …

Read More »

ಅ.27 ರಿಂದ 3 ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿರುವ ಸ್ಪೇನ್ ರಾಷ್ಟ್ರಪತಿ ಪೆಟ್ರೊ ಸ್ಯಾಂಷೆಝ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ರಾಷ್ಟ್ರಪತಿ ಪೆಟ್ರೊ ಸ್ಯಾಂಷೆಝ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಪತ್ನಿ ಬೆಗೋನಾ ಗೋಮೆಝ್ ಜತೆಗೂಡಿ ಪೆಟ್ರೊ ಅವರು ಅ.27ರಿಂದ 29ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಸ್ಪೇನ್ ರಾಷ್ಟ್ರಪತಿಯೊಬ್ಬರು 18 ವರ್ಷ ಬಳಿಕ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದೇ ವೇಳೆ, ಗುಜರಾತ್‌ನ ವಡೋದರಾದಲ್ಲಿ ಸ್ಥಾಪನೆ ಆಗಿರುವ ಸಿ295 ವಿಮಾನ ಜೋಡಣಾ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಆತ್ಮನಿರ್ಭರ ಭಾರತದ …

Read More »

ದಾವಣಗೆರೆ: ಹಳ್ಳ ದಾಟುವ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಸಾವು

ದಾವಣಗೆರೆ: ಹಳ್ಳ ದಾಟಲು ಹೋಗಿದ್ದ ವ್ಯಕ್ತಿಯೊಬ್ಬ ನೀರು ಪಾಲಾದ ಘಟನೆ ಜಗಳೂರು ತಾಲೂಕಿನ ಸಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ ಅರಳಿಕಟ್ಟೆ ಗ್ರಾಮದ ಜಯಣ್ಣ (45) ಮೃತಪಟ್ಟ ವ್ಯಕ್ತಿ. ಈ ಬಾರಿ ಭಾರೀ ಮಳೆ ಸುರಿದಿದ್ದು, ಜಗಳೂರು ತಾಲೂಕಿನ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದವು. ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಈ ನಡುವೆ ಸಂಗೇನಹಳ್ಳಿ ಗ್ರಾಮದಲ್ಲಿರುವ ತನ್ನ ಸೊಸೆಯ ಮನೆಗೆ ಬಂದಿದ್ದ ಜಯಣ್ಣ ಅವರು, ಹಳ್ಳ ದಾಟುವ ವೇಳೆ …

Read More »

ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56, 993 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು, ಇಂದು ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ನಾಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಯಲಿದೆ. ಜಂಟಿ ಸಮೀಕ್ಷಾ ವರದಿಗಳ ಪರಿಶೀಲನೆಯ ನಂತರ …

Read More »

ಪ್ರಧಾನಮಂತ್ರಿ ಮುದ್ರಾ ಯೋಜನೆಯ ಸಾಲದ ಮಿತಿ ₹20 ಲಕ್ಷಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ನೀಡುವ ಸಾಲದ ಮಿತಿಯನ್ನು ₹ 20 ಲಕ್ಷಕ್ಕೆ ಹೆಚ್ಚಿಸಿದ್ದು, ದೇಶದಾದ್ಯಂತ ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ. ಕಾರ್ಪೊರೇಟ್‌ ಅಲ್ಲದ ಕೃಷಿಯೇತರ ಸಣ್ಣ ಮತ್ತು ಅತಿಸಣ್ಣ ಉದ್ಯಮಿಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. ಯೋಜನೆಯ ಆಶಯವನ್ನು ಮತ್ತಷ್ಟು ವಿಸ್ತರಿಸಲು ಸಾಲದ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ …

Read More »

ಬೆಳೆ ಸಮೀಕ್ಷೆ ನಡೆಸಿ ರೈತರಿಗೆ 15 ದಿನಗಳೊಳಗೆ ಬೆಳೆ ನಷ್ಟ ಪರಿಹಾರ: ಸಚಿವ ಕೃಷ್ಣ ಬೈರೇಗೌಡ ಸೂಚನೆ

ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು, ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ 15 ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಇಂದು ಜಗಳೂರು …

Read More »

ಕೇಂದ್ರದ ಶಿಕ್ಷಣ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ

ದಾವಣಗೆರೆ: ಕೇಂದ್ರ ಸರಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚನೆ ಮಾಡಿದ್ದು, ಈ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಲೋಕಸಭಾ ಸದಸ್ಯರ ಪೈಕಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಗೆ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್, ಶಿಕ್ಷಣ ಸಚಿವಾಲಯದ ರಾಜ್ಯ ಸಚಿವರಾದ ಜಯಂತ್ ಚೌಧರಿ ಹಾಗೂ ಕೌಶಲ್ಯ ಅಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ರಾಜ್ಯ ಸಚಿವರಾದ ಮಜುಂದಾರ್ ಅವರುಗಳು ಅಧ್ಯಕ್ಷರಾಗಿದ್ದಾರೆ. ಈ ಸಮಿತಿಯಲ್ಲಿ 8 ಲೋಕಸಭಾ ಸದಸ್ಯರು …

Read More »

ಚಿಕ್ಕಬಳ್ಳಾಪುರ: ಬಿಸಿಯೂಟ ಸಿಬ್ಬಂದಿಗೆ ಬಾರದ ಗೌರವಧನ

ಚಿಕ್ಕಬಳ್ಳಾಪುರ: ಸರ್ಕಾರವು ಈ ಬಾರಿ ಬರಗಾಲದ ಕಾರಣ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬರಗಾಲದಲ್ಲಿಯೂ ಬಿಸಿಯೂಟ ನೀಡಿತ್ತು, ವಿದ್ಯಾರ್ಥಿಗಳು ರಜೆ ಇದ್ದರೂ ಬಿಸಿಯೂಟಕ್ಕಾಗಿ ಶಾಲೆಗೆ ಬರುತ್ತಿದ್ದರು. ಹೀಗೆ ಬರದಲ್ಲಿಯೂ ಬಿಸಿಯೂಟವನ್ನು ತಯಾರಿಸಿದ ಸಿಬ್ಬಂದಿಗೆ ಮಾತ್ರ ಇಲ್ಲಿಯವರೆಗೂ ಆ ಎರಡು ತಿಂಗಳ ಗೌರವಧನವನ್ನು ಸರ್ಕಾರ ಪಾವತಿಸಿಲ್ಲ. ಏಪ್ರಿಲ್ ಮತ್ತು ಮೇ ತಿಂಗಳ ಗೌರವಧನ ಈ ಬಾರಿ ಬರುತ್ತದೆ ಮುಂದಿನ ಬಾರಿ ಬರುತ್ತದೆ ಎಂದು ಪ್ರತಿ ತಿಂಗಳೂ ಜಿಲ್ಲೆಯ ಬಿಸಿಯೂಟ ಸಿಬ್ಬಂದಿ ಕಾಯುತ್ತಲೇ ಇದ್ದಾರೆ. …

Read More »