ಚಿತ್ರದುರ್ಗ: ಬಿಜೆಪಿ – ಜೆಡಿಎಸ್ ನಾಯಕರಿಗೆ ರಾಜ್ಯದ ರೈತರ ಪರ ನಿಜವಾದ ಕಾಳಜಿ ಇದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಳ ಮಾಡಿಸಲಿ, ಓಬಿರಾಯನ ಮಾನದಂಡ ಇಟ್ಟುಕೊಂಡು ಬಿಡಿಗಾಸು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅಸಮಧಾನ ವ್ಯಕ್ತಪಡಿಸಿದರು. ಇಂದು (ಅ.25) ಚಿತ್ರದುರ್ಗ ಜಿಲ್ಲೆಗೆ ಮಳೆಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು ರಾಜ್ಯ ಸರ್ಕಾರ ರೈತರ ಪರವಾಗಿಲ್ಲ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ …
Read More »ಬೀದರ್ ನಲ್ಲಿ ಸಾಲ ಬಾಧೆಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ರೈತರು
ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ ತಾಲೂಕಿನಲ್ಲಿ ನಡೆದಿದೆ. ಕಪಲಾಪುರ ಗ್ರಾಮದ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ …
Read More »ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ದುರ್ಮರಣ
ರಾಯಚೂರು: ಜಿಲ್ಲೆಯ ಸಿಂಧನೂರಿನ ಸಿಎಸ್ಎಫ್ ಚರ್ಚ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರರು ಸವಾರರು ಮೃತಪಟ್ಟ ಘಟನೆ ಇಂದು (ಅ.25) ನಡೆದಿದೆ. ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಶೆಕ್ಷಾವಲಿ (19) ಮೃತಪಟ್ಟಿದ್ದು, ಮತ್ತೋರ್ವ ಮೃತ ಬೈಕ್ ಸವಾರನ ಹೆಸರು ತಿಳಿದು ಬಂದಿಲ್ಲ. ತಾಲೂಕಿನ ದುಮುತಿ ಗ್ರಾಮದಿಂದ ಸಿಂಧನೂರಿನ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ, ಜವಳಗೆರಾದಿಂದ ಜಮೀನಿಗೆ ಹೊರಟಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಎರಡೂ ಬೈಕುಗಳ ಮುಂಭಾಗ ನಜ್ಜುಗುಜ್ಜಾಗಿದೆ. …
Read More »ಕಾರ್ಮಿಕರ ಕನಿಷ್ಟ ವೇತನ ಶೀಘ್ರ ಹೆಚ್ಚಳ: ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ
ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದರು. ಇಲ್ಲಿನ ವಿದ್ಯಾರಣ್ಯಪುರಂನ ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಕಾರ್ಮಿಕ ಕಾಯ್ದೆಗಳು ಹಾಗೂ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಇಂದು ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೇತನ ಪರಿಷ್ಕರಣೆಯು 5 ವರ್ಷಗಳ ಹಿಂದೆ ನಡೆದಿತ್ತು ಈಗ ವೈಜ್ಞಾನಿಕವಾಗಿ ನಿಗದಿಪಡಿಸಲಾಗುವುದು. …
Read More »ಕೋಲಾರ ಅಥವಾ ಚಿಕ್ಕಬಳ್ಳಾಪುರದಲ್ಲಿ ಫಾರ್ಮಾಸುಟಿಕಲ್ ಪಾರ್ಕ್ ಸ್ಥಾಪಿಸಲು ತೀರ್ಮಾನ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಹತ್ತಿರವಿರುವ ಕೋಲಾರ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫಾರ್ಮಾಸುಟಿಕಲ್ ಪಾರ್ಕ್ ಸ್ಥಾಪಿಸಲು ತೀರ್ಮಾನಿಸಿದ್ದು, ಇದಕ್ಕೆ ಔಷಧ ತಯಾರಿಕಾ ಕ್ಷೇತ್ರದಲ್ಲಿರುವ ಪರಿಣಿತ ಉದ್ಯಮಿಗಳು ಮತ್ತು ವಿಜ್ಞಾನಿಗಳ ಸಲಹೆಗಳನ್ನು ಪಡೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಖನಿಜ ಭವನದಲ್ಲಿ ನಡೆದ ಇಂಡಸ್ಟ್ರಿ 5.0 ಮತ್ತು ಫಾರ್ಮಾಸುಟಿಕಲ್ಸ್ ವಿಷನ್ ಗ್ರೂಪ್ಗಳ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ವಿವಿಧ ಔಷಧ ತಯಾರಿಕಾ ಕಂಪನಿಗಳ ಪ್ರಮುಖರೊಂದಿಗೆ ಅವರು ಮಾತನಾಡಿದರು. …
Read More »ಬೆಂಗಳೂರಿನಲ್ಲಿ ಅತಿವೃಷ್ಟಿಯಿಂದ ಉದ್ಭವಿಸುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವುದು, ಅಪಾಯಕಾರಿ, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ, ಇವಿಷ್ಟು ಬೆಂಗಳೂರು ನಗರದಲ್ಲಿ ಅತಿವೃಷ್ಠಿಯಿಂದ ಉದ್ಭವಿಸುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳಿಗೆ ಸೂಚನೆ …
Read More »ಸೋಲಾರ್ ದೀಪ, ಹೈಮಾಸ್ಕ್ ದೀಪಗಳಿಗೆ ಅನವಶ್ಯಕ ಹಣ ಖರ್ಚು ಬೇಡ: ಜಿಲ್ಲಾಧಿಕಾರಿ
ಹೊಸಪೇಟೆ: ಸೋಲಾರ್ ದೀಪ, ಹೈಮಾಸ್ಕ್ ದೀಪಗಳಿಗೆ ಅನವಶ್ಯಕವಾಗಿ ಹಣ ಖರ್ಚು ಮಾಡಬೇಡಿ ಅಗತ್ಯ ಕಾರ್ಯಗಳಿಗೆ ಹಣ ಬಳಸಿ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸೋಲಾರ್ ದೀಪ, ಹೈಮಾಸ್ಕ್ ದೀಪ ಅಳವಡಿಸುವುದು ಬೇಡ, ಈಗಾಗಲೇ ಇರುವ ವಿದ್ಯುತ್ ಕಂಬಳಿಗೆ ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿಯಾಗಿ ದೀಪಗಳನ್ನು ಅಳವಡಿಸಿ, …
Read More »ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸರ್ಕಾರ ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ. 3500 ಕಾನ್ಸ್ ಟೇಬಲ್ ಹಾಗೂ 615 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ …
Read More »ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಜೊತೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ
ನವದೆಹಲಿ: ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವ ಕುರಿತು ವ್ಯಾಪಕ ಚರ್ಚೆ ನಡೆಸಿದರು. ಭಾರತಕ್ಕೆ ಮೂರು ದಿನಗಳ ಅಧಿಕೃತ ಭೇಟಿಯ ಭಾಗವಾಗಿ ಸ್ಕೋಲ್ಜ್ ತಡರಾತ್ರಿ ದೆಹಲಿಗೆ ಆಗಮಿಸಿದರು. ಕೇಂದ್ರ ಗಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರನ್ನು ಬರಮಾಡಿಕೊಂಡರು. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಕೋಲ್ಜ್ ಅವರನ್ನು ಜರ್ಮನ್ ಭಾಷೆಯಲ್ಲಿ ಸ್ವಾಗತಿಸಲಾಯಿತು. ಮೋದಿಯವರ …
Read More »ಗೃಹ ಆರೋಗ್ಯ, ಆರೋಗ್ಯ ಸೇವೆ ಮನೆ ಬಾಗಿಲಿಗೆ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ಗೃಹ ಆರೋಗ್ಯ, ಆರೋಗ್ಯ ಸೇವೆ ಮನೆ ಬಾಗಿಲಿಗೆ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಮನೆ ಬಾಗಿಲಿಗೆ ಬರಲಿದೆ ಗೃಹ ಆರೋಗ್ಯ, ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





