Breaking News

BigTv News

ಚಿತ್ರದುರ್ಗದಲ್ಲಿ ಮಳೆಯಿಂದ ಬೆಳೆ ಜಲಾವೃತ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ

ಚಿತ್ರದುರ್ಗ: ನಗರದಲ್ಲಿ ಕಳೆದ ಒಂದು ವಾರದ ಹಿಂದೆ ಸುರಿದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣವಾಗಿ ಜಲಾವೃತಗೊಂಡಿತು ಈ ವಿಚಾರವನ್ನು ತಿಳಿದ ಕೂಡಲೇ ಕೃಷಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಚಿತ್ರದುರ್ಗ ತಾಲೂಕಿನ ಬೆಳಗಟ್ಟ, ವಿಜಾಪುರ, ಲಕ್ಷ್ಮಿಸಾಗರ ಗ್ರಾಮಗಳಲ್ಲಿ ಬೆಳೆ ಸಂಪೂರ್ಣವಾಗಿ ಕಣ್ಣೀರಿನಲ್ಲಿ ಕೊಚ್ಚು ಹೋಗಿದ್ದು ನನ್ನ ಸ್ಥಳಕ್ಕೆ ಧಾವಿಸಿದ ಸಚಿವ ಕೃಷ್ಣ ಬೈರೇಗೌಡ ರೈತರೊಂದಿಗೆ ಸಮಾಲೋಚಿಸಿ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ.

Read More »

ಕುಂಬಾರ ಅಭಿವೃದ್ದಿ ನಿಗಮಕ್ಕೆ ಹೆಚ್ಚು ಅನುದಾನ ನೀಡಲು ಎಮ್ ವೈ ಪಾಟೀಲ್ ನೇತೃತ್ವದಲ್ಲಿ ಸಿಎಂ ಗೆ ಮನವಿ

ಬೆಂಗಳೂರು: ಬೆಂಗಳೂರ ನಗರದ ಕಾವೇರಿ ಗೆಸ್ಟ್ ಹೌಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಫಜಲಪುರ ಕ್ಷೇತ್ರದ ಶಾಸಕ ಎಮ್. ವೈ ಪಾಟೀಲ್ ಮತ್ತು ಹೆಚ್ ಕೆ ಇ ಸಂಸ್ಥೆಯ ನಿರ್ದೇಶಕ ಅರುಣ್ ಕುಮಾರ್ ಪಾಟೀಲ್ ಅವರ ನೇತೃತ್ವದಲ್ಲಿ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಿ, ಕೂಡಲೇ ನಿಗಮದ ಅಧ್ಯಕ್ಷರು ಮತ್ತು ನಿರ್ದೇಶಕರನ್ನು ನೇಮಕ ಮಾಡಬೇಕೆಂದು ಸಮಾಜದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಕುಂಬಾರ ಸಮುದಾಯವು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ …

Read More »

ಡೆಪ್ಸಾಂಗ್-ಡೆಮ್ ಚೋಕ್ ದಲ್ಲಿ ಭಾರತ ಮತ್ತು ಚೀನಾ ಸೇನೆಯ ವಾಪಸ್ ಪ್ರಕ್ರಿಯೆ ಆರಂಭ

ನವದೆಹಲಿ: ಪೂರ್ವ ಲಡಾಖ್ ಸೆಕ್ಟರ್‌ನ ಡೆಪ್ಸಾಂಗ್ -ಡೆಮ್‌ಚೋಕ್ ಪ್ರದೇಶದಲ್ಲಿ ಭಾರತ ಮತ್ತು ಚೀನಾದ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಎರಡು ದೇಶಗಳ ಒಪ್ಪಂದದ ಪ್ರಕಾರ ಭಾರತೀಯ ಸೇನಾಪಡೆಗಳು ರಕ್ಷಣಾ ಉಪಕರಣಗಳ ಸಹಿತ ಹಿಂಬದಿಯ ಸ್ಥಳಗಳಿಗೆ ತೆರಳುವ ಪ್ರಕ್ರಿಯೆ ಆರಂಭಿಸಿವೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ನಾಲ್ಕು ವರ್ಷಗಳ ಸುದೀರ್ಘ ಸೇನಾ ಬಿಕ್ಕಟ್ಟನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಪೂರ್ವ …

Read More »

ಕೇಂದ್ರ ಸರ್ಕಾರದ ಎನ್ ಡಿ ಎ ಮಿತ್ರ ಪಕ್ಷಗಳಿರುವ ರಾಜ್ಯಗಳಿಗೆ ಬಂಪರ್ ಗಿಫ್ಟ್: 2 ರೈಲ್ವೆ ಯೋಜನೆಗಳಿಗೆ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರದ ಎನ್ ಡಿಎ ಮಿತ್ರ ಪಕ್ಷಗಳಿರುವ ರಾಜ್ಯಗಳಿಗೆ ಬಂಪರ್ ಗಿಫ್ಟ್ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್‌ ಬಿಹಾರ ಮತ್ತು ಆಂಧ್ರ ಪ್ರದೇಶದ 2 ರೈಲ್ವೆ ಯೋಜನೆಗಳಿಗೆ ಅನುಮೋದನೆ ಕೊಟ್ಟಿದೆ. ಅಮರಾವತಿ ರೈಲ್ವೆ ಯೋಜನೆಯು 87 ಕಿಮೀ ರೈಲುಮಾರ್ಗ ನಿರ್ಮಿಸುವ ಯೋಜನೆ ಹೊಂದಿದೆ. ಸುಮಾರು 2,245 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. 2ನೇ ಯೋಜನೆಯು ಉತ್ತರ ಬಿಹಾರ ಮತ್ತು ಈಶಾನ್ಯ ರಾಜ್ಯಗಳ ನಡುವಿನ …

Read More »

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ: ರೈತರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸಚಿವ ಶಿವಾನಂದ ಪಾಟೀಲ್ ಸೂಚನೆ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಟ್‌ಗೆ ₹6,783 ನಿಗದಿಪಡಿಸಿದ್ದು, ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ,ಗದಗ ಮತ್ತು ಬಾಗಲಕೋಟ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ ಎಂದು ಸಚಿವರು ತಿಳಿಸಿದ್ದಾರೆ. …

Read More »

ಬೀದರ್ ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸೇವೆ ಪ್ರಾರಂಭಿಸಲು ಸಂಸದ ಸಾಗರ್ ಖಂಡ್ರೆ ಆಗ್ರಹ

ಬೀದರ್‌: ಬೀದರ್‌-ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸೇವೆ ಪ್ರಾರಂಭಿಸಬೇಕು ಎಂದು ಸಂಸದ ಸಾಗರ್‌ ಖಂಡ್ರೆ ಆಗ್ರಹಿಸಿದರು. ತೆಲಂಗಾಣದ ಸಿಕಿಂದ್ರಾಬಾದ್‌ನಲ್ಲಿ ನಡೆದ ದಕ್ಷಿಣ ಮಧ್ಯ ರೈಲ್ವೆಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬೀದರ್ ಮತ್ತು ಇತರ ಪ್ರಮುಖ ನಗರಗಳ ನಡುವಿನ ರೈಲು ಸಂಚಾರವನ್ನು ಹೆಚ್ಚಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಬೇಕು. ಬೀದರ್-ಯಶವಂತಪುರ ರೈಲು ವಾರದಲ್ಲಿ ನಾಲ್ಕು ಬಾರಿ ಬೀದರ್‌ನಿಂದ ಹಾಗೂ ಮೂರು ಬಾರಿ ಲಾತೂರಿನಿಂದ ಸಂಚರಿಸುತ್ತಿದೆ. ನಿತ್ಯ ಸಾವಿರಾರು ಜನ …

Read More »

ಇಂಜನಿಯರಿಂಗ್ ಪದವಿಗೆ ಕಡಿಮೆಯಾದ ಬೇಡಿಕೆ: ರಾಜ್ಯಾದ್ಯಂತ 13 ಸಾವಿರಕ್ಕೂ ಅಧಿಕ ಸೀಟುಗಳು ಖಾಲಿ

ಬೆಂಗಳೂರು: ಬಹಳ ಬೇಡಿಕೆಯಲ್ಲಿದ್ದ ಇಂಜಿನಿಯರಿಂಗ್ ಪದವಿ ಯಾರಿಗೂ ಬೇಡವಾಗಿದ್ದು, ದಶಕಗಳ ಹಿಂದಿನಿಂದಲೂ ಲಕ್ಷ ರೂಪಾಯಿ ಹಣ ನೀಡಿದರೂ ರಾಜ್ಯದಲ್ಲಿ ಇಂಜಿನಿಯರಿಂಗ್ ಸೀಟುಗಳು ಸಿಗುತ್ತಿರಲಿಲ್ಲ. ಆದರೆ, ಇದೀಗ ರಾಜ್ಯದಲ್ಲಿ 13 ಸಾವಿರಕ್ಕೂ ಅಧಿಕ ಸೀಟುಗಳು ಖಾಲಿ ಉಳಿದಿರುವುದು ತಿಳಿದುಬಂದಿದೆ. ರಾಜ್ಯ ಸರಕಾರವು ಇಂಜಿನಿಯರಿಂಗ್ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆದರೆ ಖಾಸಗಿ ಕಾಲೇಜುಗಳ ಶೇ.30, ಸರಕಾರಿ ಕಾಲೇಜುಗಳ ಶೇ.25ರಷ್ಟು ಸೀಟುಗಳು ಹಂಚಿಕೆಯಾಗದೇ ಹಾಗೆ ಉಳಿದಿದೆ. ಈ ನಡುವೆ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿಯೂ …

Read More »

ಅ.27 ರಂದು ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ: ಬಿಗಿ ಭದ್ರತೆಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟೆಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಚ್ಚರಿಸಿದ ಅವರು, ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ …

Read More »

ಭಾರತದ ಬಲವನ್ನು ಮತ್ತಷ್ಟು ಹೆಚ್ಚು ಮಾಡುವ ಜೊತೆಗೆ ಪಾಶ್ಚಿಮಾತ್ಯರಿಗೆ ದೊಡ್ಡ ಸಂದೇಶ ರವಾನಿಸಿದ ಬ್ರಿಕ್ಸ್ ಶೃಂಗಸಭೆ

ಮಾಸ್ಕೋ: ಪ್ರಪಂಚದ ಪ್ರತಿಯೊಂದು ದೇಶಕ್ಕೂ ಭಾರತ ಬೇಕೆ ಬೇಕು, ಭಾರತ ಇಲ್ಲದೆ ಬಹುಶಃ ಜಗತ್ತು ಬದುಕಿ ಉಳಿಯಲು ಸಾಧ್ಯವೇ ಇಲ್ಲ ಅಂತಾ ಕಾಣುತ್ತದೆ. ಯಾಕಂದ್ರೆ ಔಷಧ, ಆಹಾರ, ಅದಿರುಗಳು ಹೀಗೆ, ಕಚ್ಚಾ ವಸ್ತುಗಳಿಂದ ಹಿಡಿದು ಸಿದ್ಧ ವಸ್ತುಗಳ ತನಕ ಭಾರತ ಎಲ್ಲವನ್ನೂ ಜಗತ್ತಿಗೆ ನೀಡುತ್ತದೆ. ಇದೇ ಕಾರಣಕ್ಕೆ ಜಗತ್ತಿನ ಪ್ರತಿಯೊಂದು ದೇಶ ಕೂಡ ಭಾರತದ ಜೊತೆಗೆ ವ್ಯಾಪಾರ ಸಂಬಂಧ ಇಟ್ಟುಕೊಂಡು ಬಂದಿವೆ. ಹೀಗಿದ್ದಾಗ ಬ್ರಿಕ್ಸ್ ಶೃಂಗಸಭೆ ಭಾರತದ ಬಲವನ್ನು ಮತ್ತಷ್ಟು …

Read More »

ಮರಕುಂಬಿ ಜಾತಿ ಸಂಘರ್ಷ ಪ್ರಕರಣ: ಅಸ್ವಸ್ಥಗೊಂಡಿದ್ದ ಅಪರಾಧಿ ಸಾವು

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ಅಪರಾಧಿಯಾಗಿದ್ದ ರಾಮಣ್ಣ ಲಕ್ಷ್ಮಣ ಭೋವಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 101 ಜನ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ. ಇನ್ನುಳಿದ ಮೂವರಿಗೆ ಐದು ವರ್ಷ ಜೈಲು ಹಾಗೂ ತಲಾ ₹2,000 ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು …

Read More »