Breaking News

BigTv News

ವಿಶ್ವವಿಖ್ಯಾತ ಮೈಸೂರು ಅರಮನೆ ಪ್ರವೇಶ ಶುಲ್ಕ ಹೆಚ್ಚಳ

ಮೈಸೂರು: ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ, ಟಿಕೆಟ್​ ದರದ ಮೇಲೆ ಜಿಎಸ್​ಟಿ ಸೇರಿಸಿ ಹೆಚ್ಚಿಸಲಾಗಿದೆ. ವಿದೇಶಿ ಪ್ರವಾಸಿಗರಿಗೆ ಪ್ರವೇಶ ಶುಲ್ಕ ಬರೋಬ್ಬರಿ 900 ರೂ. ಹೆಚ್ಚಳ ಮಾಡಿದ್ದರೆ, ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕ 120 ರೂಪಾಯಿ ಏರಿಕೆ ಮಾಡಲಾಗಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಇನ್ನು ಒಳ ಆವರಣದಲ್ಲಿ ಚಪ್ಪಲಿ ಸ್ಟ್ಯಾಂಡ್, ಲಗ್ಗೇಜ್ ಕೊಠಡಿ ಹಾಗೂ ಶೌಚಾಲಯ ಸೇವಾ ಶುಲ್ಕವನ್ನ ರದ್ದುಪಡಿಸಲಾಗಿದೆ. ಈಚೆಗೆ ನಡೆದ ಅರಮನೆ …

Read More »

ಭಾರತೀಯರ ತಲಾ ಆದಾಯ ತುಂಬಾ ಕಡಿಮೆ ಇದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಭಾರತೀಯರ ತಲಾ ಆದಾಯ ತುಂಬಾ ಕಡಿಮೆ ಇದೆ, ಪಾವತಿಸುವ ಸಾಮರ್ಥ್ಯ ಇಲ್ಲ ಆದ್ದರಿಂದ ಯಾವುದೇ ಯೋಜನೆ ಮಾಡಬೇಕಾದರೆ ಜಂಟಿಯಾಗಿ ಮಾಡಿ ಕಡಿಮೆ ಶುಲ್ಕ ವಿಧಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜರ್ಮನಿ, ಆಸ್ಟ್ರೀಯಾ ಮತ್ತು ಸ್ವಿಜರ್ ಲೆಂಡ್ ದೇಶಗಳಿಂದ ಬಂಡವಾಳ ಹೂಡಿಕೆ ಮಾಡಿಕೊಳ್ಳಿ ಇದರಿಂದ ಕಡಿಮೆ ವೆಚ್ಚದಲ್ಲಿ ಮಾಡಿ ಜನರಿಂದ ಕಡಿಮೆ ಶುಲ್ಕ ಪಡೆಯಬಹುದು ಎಂದರು. ದೇಶದಲ್ಲಿ …

Read More »

ಸಿಂಗರೇಣಿ ಕಲ್ಲಿದ್ದಲು ಗಣಿ ಕಾರ್ಮಿಕರಿಗೆ 93 ಸಾವಿರ ರೂ.ಬೋನಸ್ ಘೋಷಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್​: ಸಿಂಗರೇಣಿ ಕಲ್ಲಿದ್ದಲು ಗಣಿ ಕಾರ್ಮಿಕರಿಗೆ ತೆಲಂಗಾಣ ಸರ್ಕಾರ ದೀಪಾವಳಿ ಪ್ರಯುಕ್ತ ಭರ್ಜರಿ ಬೋನಸ್​ ನೀಡಿದೆ. ಪ್ರತಿವರ್ಷ ಆಡಳಿತ ಮಂಡಳಿಯು ಕಾರ್ಮಿಕರಿಗೆ ಪರ್ಫಾರ್ಮೆನ್ಸ್ ಲಿಂಕ್ಡ್ ರಿವಾರ್ಡ್ (ಪಿಎಲ್ ಆರ್) ಅಡಿಯಲ್ಲಿ ಬೋನಸ್ ನೀಡುತ್ತಿದ್ದು, ಈ ವರ್ಷ ಪ್ರತಿ ಕಾರ್ಮಿಕನಿಗೆ ಕನಿಷ್ಠ 93,750 ರೂ.ನೀಡಿದೆ. ಈ ನಿಟ್ಟಿನಲ್ಲಿ ರೇವಂತ್​ ರೆಡ್ಡಿ ಸರ್ಕಾರ 358 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದೇ ಶುಕ್ರವಾರ (ಅಕ್ಟೋಬರ್ 25) ಕಾರ್ಮಿಕರ ಖಾತೆಗೆ ಹಣ ಜಮೆಯಾಗಲಿದೆ ಸಂಸ್ಥೆಯ …

Read More »

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಸರ್ಕಾರಿ ಬಸ್: ಮಹಿಳೆ ಸಾವು

ಅರಸೀಕೆರೆ: ಹೋಬಳಿಯ ಸತ್ತೂರು ಕೆರೆ ಬಳಿ ಇಂದು ಸಂಜೆ ಕೆಕೆಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಮಹಿಳೆ ಮೃತಪಟ್ಟಿದ್ದಾರೆ, 20 ಮಂದಿ ಗಾಯಗೊಂಡಿದ್ದಾರೆ. ಬಸ್‌ ದಾವಣಗೆರೆಯಿಂದ ಹರಪನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸತ್ತೂರು ಗ್ರಾಮದ ಹನುಮಕ್ಕ (52) ಸ್ಥಳದಲ್ಲೇ ಮೃತಪಟ್ಟವರು, ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಚಾಲಕನ ಅತಿವೇಗ …

Read More »

ಕೊಪ್ಪಳದ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ 5 ವರ್ಷ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು (ಅ.24) ಮಹತ್ವದ ಆದೇಶ ಹೊರಡಿಸಿದೆ. ಅಸ್ಪೃಶ್ಯತೆ ಆಚರಣೆ, ದಲಿತರ ಮೇಲಿನ ದೌರ್ಜನ್ಯ ಕಾರಣ ಪ್ರಕರಣ ದೇಶದ ಗಮನ ಸೆಳೆದಿತ್ತು. ಗಲಭೆಗೆ ಕಾರಣರಾದ 101 ಜನರ ವಿರುದ್ಧದ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಅಪರಾಧಿಗಳೆಂದು ತಿಳಿಸಿದೆ, 98 ಅಪರಾಧಿಗಳಿಗೆ …

Read More »

ರಾಜ್ಯದ ಬೀಚ್ ಗಳಲ್ಲಿ ಗೋವಾ ಮಾದರಿಯ ಮದ್ಯ ಮಾರಾಟ ಅವಕಾಶಕ್ಕೆ ರಾಜ್ಯ ಸರ್ಕಾರ ಚಿಂತನೆ

ಮಂಗಳೂರು: ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್​​ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ಕನೆಕ್ಟ್ 2024ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್​ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ …

Read More »

ಕೇಂದ್ರ ಸರ್ಕಾರದಿಂದ ಎಂ ಆರ್ ಪಿ ದರದಲ್ಲಿ ಗ್ರಾಹಕರಿಗೆ ಆಹಾರ ಧಾನ್ಯ ವಿತರಣೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯಗಳ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರಕಾರ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್‌ ಅಕ್ಕಿ, ಬೇಳೆ ಕಾಳನ್ನು ವಾಹನಗಳ ಮೂಲಕ ವಿತರಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ದಿಲ್ಲಿಯ ಕೃಷಿ ಭವನದಲ್ಲಿ ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಸರಕಾರ ಗ್ರಾಹಕರಿಗೆ ಎಂಆರ್‌ಪಿ ದರದಲ್ಲಿ …

Read More »

ರಾಜ್ಯ ಸರ್ಕಾರದಿಂದ ಗೃಹ ಆರೋಗ್ಯ ಯೋಜನೆ ಜಾರಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು, ಸದ್ಯಕ್ಕೆ ಗೃಹಲಕ್ಷ್ಮೀ, ಗೃಹ ಜ್ಯೋತಿ ಎನ್ನುವ ಯೋಜನೆ ಸೇರಿ ಹಲವು ಯೋಜನೆ ಜಾರಿಗೆ ತಂದಿದ್ದಾರೆ. ಅದರೊಂದಿಗೆ ಹೊಸ ಯೋಜನೆ ಕೂಡ ಅಕ್ಟೋಬರ್ 24ರಿಂದ ಜಾರಿಯಾಗುತ್ತಿದ್ದು, ಇದು ಗೃಹ ಆರೋಗ್ಯ ಯೋಜನೆಯಾಗಿದೆ. ಇದು ಮನೆಗೆ ಬಂದು ಆರೋಗ್ಯ ಸೇವೆ ಒದಗಿಸುವ ವಿನೂತನ ಯೋಜನೆಯಾಗಿದೆ. ಮನೆ ಬಾಗಿಲಿಗೆ ಬರುವ ವೈದ್ಯರು, ಮನೆ ಜನರ ಆರೋಗ್ಯ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ …

Read More »

2,245 ಕೋಟಿ ರೂ.ಗಳ ವೆಚ್ಚದಲ್ಲಿ ಅಮರಾವತಿ ರೈಲು ಮಾರ್ಗಕ್ಕೆ ಕೇಂದ್ರದಿಂದ ಅನುಮೋದನೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: 2,245 ಕೋಟಿ ರೂ.ಗಳ ವೆಚ್ಚದಲ್ಲಿ ಅಮರಾವತಿ ರೈಲ್ವೆ ಮಾರ್ಗವನ್ನು ಕೇಂದ್ರವು ಅನುಮೋದಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದು ಕೃಷ್ಣಾ ನದಿಗೆ ಅಡ್ಡಲಾಗಿ 3 ಕಿ.ಮೀ ಸೇತುವೆಯನ್ನು ಹೊಂದಿರುತ್ತದೆ. ಇದು ಹೈದರಾಬಾದ್, ಚೆನ್ನೈ ಮತ್ತು ಕೋಲ್ಕತ್ತಾದೊಂದಿಗೆ ಅಮರಾವತಿಯಿಂದ ನೇರ ರೈಲು ಸಂಪರ್ಕವನ್ನು ಹೊಂದಿರುತ್ತದೆ. ಇದು ಮಧ್ಯ ಮತ್ತು ಉತ್ತರ ಭಾರತದ ದಕ್ಷಿಣ ಭಾರತದ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇದು 19 ಲಕ್ಷ …

Read More »

ಬಾಹ್ಯಾಕಾಶ ಕ್ಷೇತ್ರಕ್ಕೆ 1000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿ ಸ್ಥಾಪನೆಗೆ ಕೇಂದ್ರ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಇನ್-ಸ್ಪಾಸ್ ಆಶ್ರಯದಲ್ಲಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮೀಸಲಾಗಿರುವ 1000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿ ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಉದ್ದೇಶಿತ 1,000 ಕೋಟಿ ರೂ.ಗಳ ವಿಸಿ ನಿಧಿಯ ನಿಯೋಜನೆ ಅವಧಿಯನ್ನು ನಿಧಿ ಕಾರ್ಯಾಚರಣೆಗಳ ಪ್ರಾರಂಭದ ನಿಜವಾದ ದಿನಾಂಕದಿಂದ ಐದು ವರ್ಷಗಳವರೆಗೆ ಯೋಜಿಸಲಾಗಿದೆ. ಹೂಡಿಕೆಯ ಅವಕಾಶಗಳು ಮತ್ತು ನಿಧಿಯ ಅವಶ್ಯಕತೆಗಳನ್ನು ಅವಲಂಬಿಸಿ ಸರಾಸರಿ ನಿಯೋಜನೆ …

Read More »