ಬೆಂಗಳೂರು: ಇತ್ತೀಚಿನ ದಿನಗಳ ರಾಜಕೀಯದಲ್ಲಿ ಒಂದೆ ಪಕ್ಷಕ್ಕೆ ನಿಷ್ಠರಾಗಿರುವುದು ಕಷ್ಟದ ವಿಚಾರ ಎಂದು ಹೇಳುವ ಮೂಲಕ ಗೃಹಸಚಿವ ಡಾ.ಜಿ.ಪರಮೇಶ್ವರ್ ಕುತೂಹಲ ಕೆರಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಹಿತೈಶಿಗಳೂ ಅಲ್ಲ. ಇದು ಹರಿಯಾಣ, ಮಹಾರಾಷ್ಟ್ರದಲ್ಲಿ ನಡೆದಿದೆ ಒಂದೇ ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಷ್ಟ ಕೆಲವರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ. ಆದರೆ ಕಾನೂನಿನಲ್ಲಿ ಪಕ್ಷಾಂತರಕ್ಕೆ ಅವಕಾಶವಿದೆ. ಇದನ್ನು ನಿಷೇಧ ಮಾಡಿದರೆ ನಿಂತು ಹೋಗಬಹುದು ಎಂದು …
Read More »ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ನಗರದಲ್ಲಿ ನಿಯಮಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಪ್ಪಣೆ ಮಾಡಿದ್ದಾರೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಗಳು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಅನಧಿಕೃತ ಕಟ್ಟಡಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದರು. ಈ ನಿಟ್ಟಿನಲ್ಲಿ ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ …
Read More »ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಿದ್ದರು. ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ಮುಖಾಂತರ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರು …
Read More »ಶಿಗ್ಗಾಂವಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಹಾವೇರಿ: ನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾತನಾಡಿದ ಅವರು, ತಂದೆ ತಾಯಿಯವರ ಆಶೀರ್ವಾದ, ಹಿರಿಯರ ಆಶೀರ್ವಾದ, ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಳೆ ಪಕ್ಷದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು …
Read More »ವಿಶ್ವದ ಯಾವುದೇ ದೇಶಗಳು ಭಾರತದ ಆರ್ಥಿಕತೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ವಾಷಿಂಗ್ಟನ್ : ಪ್ರತಿ ಆರು ಜನರಲ್ಲಿ ಒಬ್ಬರು ಭಾರತೀಯರಿರುವುದರಿಂದ ಭಾರತವು ವಿಶ್ವದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಲು ಬಯಸುತ್ತದೆ ಮತ್ತು ಜಗತ್ತು ಭಾರತದ ಆರ್ಥಿಕತೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಿಶ್ವಬ್ಯಾಂಕ್ ಮತ್ತು ಅಂತರರಾಷ್ಟ್ರೀಯ ವಾರ್ಷಿಕ ಸಭೆಗಳು 2024 ರ ಹಿನ್ನೆಲೆಯಲ್ಲಿ ಗ್ಲೋಬಲ್ ಡೆವಲಪ್ಮೆಂಟ್ ಕೇಂದ್ರವು ವಾಷಿಂಗ್ಟನ್ ಡಿಸಿಯಲ್ಲಿ ಆಯೋಜಿಸಿದ್ದ ಬ್ರೆಟನ್ ವುಡ್ಸ್ ಇನ್ಸ್ಟಿಟ್ಯೂಷನ್ಸ್ ಅಟ್ 80 ಮುಂದಿನ ದಶಕದ ಆದ್ಯತೆಗಳು ಎಂಬ ಪ್ಯಾನೆಲ್ …
Read More »ಇಂದಿನಿಂದ ನ.3 ರವರೆಗೆ ಹಾಸನಾಂಬ ದೇವಿಯ ದರ್ಶನ ಭಾಗ್ಯ
ಹಾಸನ: ವರ್ಷಕ್ಕೊಮೆ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ನಗರದ ಅಧಿದೇವತೆ ಹಾಗೂ ಶಕ್ತಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಶಾಸೊತ್ರೕಕ್ತವಾಗಿ ಇಂದು ತೆರೆಯಲಾಯಿತು. ಅರಸು ವಂಶಸ್ಥರು ಬಾಳೆಕಂಬವನ್ನು ಕಡಿಯುವ ಮೂಲಕ 12.10ಕ್ಕೆ ಸರಿಯಾಗಿ ಗರ್ಭಗುಡಿಯ ಬಾಗಿಲನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ಎಚ್.ಪಿ.ಸ್ವರೂಪ್ ಪ್ರಕಾಶ್, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ, ಎಸ್ಪಿ ಮಹಮದ್ ಸುಜೇತ …
Read More »ಬ್ರಿಕ್ಸ್ ನ ಸದಸ್ಯ ರಾಷ್ಟ್ರಗಳು ಶಾಂತಿ ಕಾಪಾಡಬೇಕು, ಯುದ್ಧ ಬೆಂಬಲಿಸಬಾರದು: ಪ್ರಧಾನಿ ಮೋದಿ
ಮಾಸ್ಕೋ: ರಷ್ಯಾ ಹಾಗೂ ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ರಷ್ಯಾದ ಕಜಾನ್ನಲ್ಲಿ ನಡೆಯುತ್ತಿರುವ 16 ನೇ ಶೃಂಗಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಸಭೆ ಆಯೋಜನೆ ಮಾಡಿದ ರಷ್ಯಾದ ಅಧ್ಯಕ್ಷ ಪುಟಿನ್ಗೆ ಅಭಿನಂದನೆ ತಿಳಿಸಿದರು. ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ, ಯುದ್ಧವನ್ನಲ್ಲ ಎಂದು ಅಭಿಪ್ರಾಯಪಟ್ಟರು. ಕೋವಿಡ್ನಂತಹ ಸವಾಲುಗಳನ್ನು ನಾವು ಒಟ್ಟಾಗಿ ಜಯಿಸಿದ್ದೇವೆ. ಮುಂದಿನ …
Read More »ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಡಾ.ಅಜಯಸಿಂಗ್
ಕೊಪ್ಪಳ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಯಾವುದೇ ನೆಪ ಹೇಳದೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಅವರು ಹೇಳಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕೊಪ್ಪಳ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದ ಅವರು 2018-19, 2019-20 ಮತ್ತು 2020-21ರಲ್ಲಿ ಕಾಮಗಾರಿಗಳು ಯಾಕೆ ಬಾಕಿ ಇವೆ …
Read More »ಬೆಂಗಳೂರಿನ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು ಅಮಾನತು ಮಾಡಿದರೆ ಸಾಲದು, ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್ ಅವರಿಗೂ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ …
Read More »ಬೆಂಗಳೂರು ಕಟ್ಟಡ ದುರಂತ ಪ್ರಕರಣ: ಮೃತರಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟಕ್ಕೆ ನಿನ್ನೆ ಮತ್ತೊಂದು ಅವಘಡ ನಡೆದಿತ್ತು. ಹೆಣ್ಣೂರು ಬಳಿಯ ಬಾಬುಸಾ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಇದೀಗ ಈ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಪ್ರಾಣಹಾನಿಯಾಗಿರುವುದು ಬೇಸರ ನನಗೆ ತುಂಬಾನೆ ತಂದಿದೆ. ತಮ್ಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





