ನವದೆಹಲಿ: ರೈತ ಸಮುದಾಯವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2027ರೊಳಗೆ 11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದೆ. ಇದು ಆಧಾರ್ ಕಾರ್ಡ್ ನಂತೆಯೇ ಇರುತ್ತದೆ. ರೈತರಿಗೆ ಪ್ರಮುಖ ಸೇವೆಗಳು ಮತ್ತು ಯೋಜನೆಗಳನ್ನು ತಲುಪಿಸುವ ರೈತ ಕೇಂದ್ರಿತ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಒದಗಿಸುತ್ತದೆ. ಆಧಾರ್ ಕಾರ್ಡ್ ನಂತೆಯೇ ರೈತರಿಗೆ ರೈತ ಗುರುತಿನ ಚೀಟಿ ಪರಿಚಯಿಸುವುದು ಅಗ್ರಿಸ್ಟ್ಯಾಕ್ನ ಪ್ರಮುಖ ವೈಶಿಷ್ಟ್ಯವಾಗಿದೆ. 2024-25ರ ಹಣಕಾಸು ವರ್ಷದಲ್ಲಿ 6 ಕೋಟಿ, …
Read More »ಆಂಧ್ರದಲ್ಲಿ ತುಂಗಭದ್ರಾ ಪೈಪ್ ಲೈನ್ ಸೋರಿಕೆ: 50 ಎಕರೆ ಬೆಳೆ ಮುಳುಗಡೆ
ಕರ್ನೂಲ್: ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದ್ದು, ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ ಇದರಿಂದ ರೈತರು ಕಂಗಾಲಾಗಿದ್ದಾರೆ. ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ ಪುಲಿಕನುಮ ಪಂಪ್ ಹೌಸ್ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೈಪ್ …
Read More »ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ಕಲಬುರಗಿಯ ಗಡಿ ಗ್ರಾಮಗಳಲ್ಲಿ ಚೆಕ್ ಪೋಸ್ಟ್ ಸ್ಥಾಪನೆ: ಜಿಲ್ಲಾಧಿಕಾರಿ
ಕಲಬುರಗಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆಯಾದ ಕಾರಣ ಆಳಂದ ಹಾಗೂ ಅಫಜಲಪುರ ತಾಲ್ಲೂಕುಗಳ ಗಡಿ ಗ್ರಾಮಗಳಲ್ಲಿ ಚೆಕ್ಪೋಸ್ಟ್ ಸ್ಥಾಪಿಸಿ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ತಿಳಿಸಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಚುವಲ್ ಮೂಲಕ ನಡೆದ ಅಂತರರಾಜ್ಯ ಸಹಕಾರ ಸಭೆಯಲ್ಲಿ ಮಾತನಾಡಿದರು. ಆಳಂದ ತಾಲ್ಲೂಕಿನ 17 ಮತ್ತು ಅಫಜಲಪುರ ತಾಲ್ಲೂಕಿನ 5 ಗ್ರಾಮಗಳು ಮಹಾರಾಷ್ಟ್ರದ ಸೋಲಾಪುರ ಹಾಗೂ ಧಾರಾಶಿವ ಜಿಲ್ಲೆಯ ಗಡಿ ಭಾಗದಲ್ಲಿವೆ. ಮಾದರಿ ನೀತಿ ಸಂಹಿತೆ …
Read More »ಬೆಂಗಳೂರು: ನೀರು ನುಗ್ಗಿದ ಮನೆಗಳಿಗೆ 10 ಸಾವಿರ ಪರಿಹಾರ ಘೋಷಿಸಿದ ಡಿಸಿಎಂ ಡಿಕೆಶಿ
ಬೆಂಗಳೂರು : ನಗರದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ಹಲವು ಏರಿಯಾಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಸಂಭವಿಸಿತ್ತು. ಹೀಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸದ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಳೆಯಿಂದ ಉಂಟಾಗಿರುವ ಹಾನಿಗೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ …
Read More »ಭಾರತ ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆ ಹೊರತು ಯುದ್ಧವನ್ನಲ್ಲ: ಪ್ರಧಾನಿ ಮೋದಿ
ಕಝನ್: ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆಯೇ ಹೊರತು ಯುದ್ಧವನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಬ್ರಿಕ್ಸ್ ಸಮಾವೇಶದಲ್ಲಿ ಪ್ರತಿಪಾದಿಸಿದ್ದಾರೆ. ಆ ಮೂಲಕ ರಷ್ಯಾ-ಉಕ್ರೇನ್ ಸಂಘರ್ಷವನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎನ್ನುವ ಕರೆ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ಯುದ್ಧ, ಆರ್ಥಿಕ ಅನಿಶ್ಚಿತತೆ, ಹವಾಮಾನ ಬದಲಾವಣೆ ಹಾಗೂ ಉಗ್ರವಾದದ ಸವಾಲುಗಳ ಬಗ್ಗೆ ಮಾತನಾಡಿದ ಅವರು, ಜಗತ್ತನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಬ್ರಿಕ್ಸ್ ಸಕಾರಾತ್ಮಕ ಪಾತ್ರವನ್ನು ವಹಿಸಬಹುದು ಎಂದು ಹೇಳಿದ್ದಾರೆ. ಕೋವಿಡ್ …
Read More »ಕಲಬುರಗಿಯಲ್ಲಿ ಸುಗಮ ಸುರಕ್ಷತೆಯ ಸಂಚಾರ ವ್ಯವಸ್ಥೆಗೆ ಕ್ರಮ: ಪೊಲೀಸ್ ಆಯುಕ್ತ ಡಾ.ಶರಣಪ್ಪ
ಕಲಬುರಗಿ : ನಗರದಲ್ಲಿ ಸುಗಮ ಮತ್ತು ಸುರಕ್ಷತೆಯ ಸಂಚಾರ ವ್ಯವಸ್ಥೆ ಕೈಗೊಳ್ಳುವುದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವಾದ ಸಮಗ್ರ ಸಂಚಾರ ನಿರ್ವಹಣೆ ವ್ಯವಸ್ಥೆ (ಐಟಿಎಂಎಸ್) ಮೂಲಕ ಇ – ಚಲನ್ ಮುಂದಿನ 10 ದಿನಗಳಲ್ಲಿ ಜಾರಿ ಮಾಡುವ ಉದ್ದೇಶ ಇದೆ ಎಂದು ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಹೇಳಿದರು. ಕಲಬುರಗಿ ಆಕಾಶವಾಣಿಯಲ್ಲಿ ಇಂದು ನಡೆಸಿದ ಫೋನ್-ಇನ್ ಕಾರ್ಯಕ್ರಮದಲ್ಲಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಗ್ನಲ್ ವ್ಯವಸ್ಥೆ ಇದ್ದರೂ ನಿಯಮ ಉಲ್ಲಂಘನೆ ಮಾಡಿ ಸಂಚರಿಸುತ್ತಿರುವ …
Read More »ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಬೆಳೆಸುವ ಗುರಿ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ (ರೂ 85 ಲಕ್ಷ ಕೋಟಿ) ಆರ್ಥಿಕತೆಯಾಗಿ ಬೆಳೆಸುವ ಗುರಿಯೊಂದಿಗೆ ಉದ್ಯಮ ಪರಿಣಿತರ ಅಭಿಪ್ರಾಯ ಆಧರಿಸಿ 2025-30ರ ಅವಧಿಗೆ ಪ್ರಗತಿ ಕೇಂದ್ರಿತ ಕೈಗಾರಿಕಾ ನೀತಿ ರೂಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು. ಅಮೆರಿಕ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಆಮ್ ಚಾಮ್) ಇಲ್ಲಿನ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಪರಿವರ್ತನೆಯಾಗುತ್ತಿರುವ ಕರ್ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಗತ್ಯಕ್ಕೆ …
Read More »ಡಾನಾ ಚಂಡಮಾರುತ ಪ್ರಭಾವ: ಜನರ ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿದ ಒಡಿಶಾ ಸರ್ಕಾರ
ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಪರಿಣಾಮ ಇಂದು ಬೆಳಗ್ಗೆ ಡಾನಾ ಚಂಡಮಾರುತ ತೀವ್ರಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ಒಡಿಶಾ ಕರಾವಳಿಯ ಭಿತರ್ಕಾನಿಕಾ ಮತ್ತು ಧಮ್ರಾ ಸಮೀಪ ದಾಟುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕರಾವಳಿ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ರಾಜ್ಯ ಸರ್ಕಾರ ಚುರುಕುಗೊಳಿಸಿದೆ. ಒಡಿಶಾ ರಾಜ್ಯಕ್ಕೆ ವಿಶೇಷವಾಗಿ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಪ್ರಭಾವ ಬೀರುವ ಸಾಧ್ಯತೆಯಿರುವುದರಿಂದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತದೊಂದಿಗೆ ಸಮನ್ವಯ …
Read More »ರಾಜಕೀಯದಲ್ಲಿ ನನಗೆ 35 ವರ್ಷಗಳ ಅನುಭವಿದೆ: ಪ್ರಿಯಾಂಕಾ ಗಾಂಧಿ
ವಯನಾಡ್: 17ನೇ ವಯಸ್ಸಿನಿಂದಲೇ ರಾಜಕೀಯ ಪ್ರಚಾರಗಳಲ್ಲಿ ಭಾಗವಹಿಸುತ್ತಾ ಬಂದಿದ್ದು, ರಾಜಕೀಯದಲ್ಲಿ ನನಗೆ 35 ವರ್ಷಗಳ ಅನುಭವವಿದೆ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಪ್ರತಿಸ್ಪರ್ಧಿ ಬಿಜೆಪಿಯ ನವ್ಯಾ ಹರಿದಾಸ್ ಅವರಿಗೆ ಪರೋಕ್ಷವಾಗಿ ಕುಟುಕಿದ್ದಾರೆ. ಜನರನ್ನು ಪ್ರತಿನಿಧಿಸುವ ವಿಚಾರದಲ್ಲಿ ಪ್ರಿಯಾಂಕಾ ಗಾಂಧಿಗಿಂತ ಹೆಚ್ಚಿನ ಅನುಭವ ನನಗಿದೆ ಎಂದು ನವ್ಯಾ ಹರಿದಾಸ್ ಮಂಗಳವಾರ ಹೇಳಿದ್ದರು. ನಾಮಪತ್ರ ಸಲ್ಲಿಸುವ ಮುನ್ನ ಕಲ್ಪೇಟಾದಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದ …
Read More »ಭಾರತವು ವಿಶ್ವದ ಅತಿದೊಡ್ಡ ಬೆಳೆಯುತ್ತಿರುವ ಆರ್ಥಿಕತೆಯಾಗಿಯೇ ಉಳಿದಿದೆ: ಐಎಂಎಫ್
ವಾಷಿಂಗ್ಟನ್: ಭಾರತವು ವಿಶ್ವದ ಅತಿದೊಡ್ಡ ಬೆಳೆಯುತ್ತಿರುವ ಆರ್ಥಿಕತೆಯಾಗಿಯೇ ಉಳಿದಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ(ಐಎಂಎಫ್) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಶದ ಸ್ಥೂಲ ಆರ್ಥಿಕತೆಯ ಮೂಲಭೂತ ಅಂಶಗಳು ಉತ್ತಮವಾಗಿವೆ, ಭಾರತವು ವಿಶ್ವದ ಅತಿದೊಡ್ಡ ಬೆಳೆಯುತ್ತಿರುವ ಆರ್ಥಿಕತೆಯಾಗಿಯೇ ಉಳಿದಿದೆ. 2024-25ರ ಆರ್ಥಿಕ ವರ್ಷದಲ್ಲಿ ದೇಶದ ಬೆಳವಣಿಗೆ ದರ ಶೇ 7ರಷ್ಟು ಇರುತ್ತದೆ ಎಂದು ನಾವು ಅಂದಾಜಿಸಿದ್ದೇವೆ ಗ್ರಾಮೀಣ ಅನುಭೋಗಿತನದ ಸುಧಾರಣೆ ಇದಕ್ಕೆ ಸಹಕಾರಿಯಾಗಿದೆ. ದೇಶದಲ್ಲಿ ಉತ್ತಮ ಬೆಳೆ ಆಗುತ್ತಿದೆ ಆಹಾರೋತ್ಪನ್ನಗಳ ಉತ್ಪಾದನೆ ಉತ್ತಮವಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





