ಚಿತ್ರದುರ್ಗ: ಜಿಲ್ಲೆಯಲ್ಲಿ ಆಸ್ಪತ್ರೆಯ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಂತ ನರ್ಸ್ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಪಿವಿಎಸ್ ಖಾಸಗಿ ಆಸ್ಪತ್ರೆಯ 2ನೇ ಮಹಡಿಯಿಂದ ನರ್ಸ್ ಇಂದ್ರಮ್ಮ(36) ಕೆಳಗೆ ಬಿದ್ದಾಗ ತಲೆಗೆ ಬಲವಾದ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬಸವೇಶ್ವರ ಮೆಡಿಕಲ್ ಆಸ್ಪತ್ರೆ ಮತ್ತು ಕಾಲೇಜಿಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ನರ್ಸ್ ಇಂದ್ರಮ್ಮ ಅವರು 2ನೇ ಮಹಡಿಯಲ್ಲಿ …
Read More »ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ: ಮೆರವಣಿಗೆಗೆ ಅದ್ದೂರಿ ಚಾಲನೆ
ಚನ್ನಮ್ಮನ ಕಿತ್ತೂರು: ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಇಂದು ನಡೆದ ಜಾನಪದ ಕಲಾವಾಹಿನಿ ಮೆರವಣಿಗೆ, ಕ್ರಾಂತಿ ನೆಲದ ಹಿರಿಮೆ ಎತ್ತಿ ಹಿಡಿಯಿತು ರಾಜಬೀದಿಯಲ್ಲಿ ಎಲ್ಲಿ ನೋಡಿದರೂ ಜನವೋ ಜನ, ಎತ್ತ ನೋಡಿದರೂ ಸಂಭ್ರಮವೋ ಸಂಭ್ರಮ. ಕಲಾವಿದರು, ವಾದ್ಯಗಾರರು, ನೃತ್ಯಪಟುಗಳು, ಮಕ್ಕಳು, ಹಿರಿಯರು, ಮಹಿಳೆಯರೆಲ್ಲ ಸೇರಿ ನೂಪುರ ಲೋಕವನ್ನೇ ಸೃಷ್ಟಿಮಾಡಿದರು. ರಾಜ್ಯದಾದ್ಯಂತ ಸಂಚರಿಸಿ ಬಂದ ವಿಜಯ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ …
Read More »ವಿಜಯನಗರದ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಚಿವ ದಿನೇಶ್ ಗುಂಡೂರಾವ್
ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಆರ್. ಗುಂಡೂರಾವ್ ಅವರು ವಿಜಯನಗರ ಹೊಸಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶಾಸಕರೊಂದಿಗೆ ಪರಿಶೀಲನೆ ನಡೆಸಿದರು. ನೂತನ ಜಿಲ್ಲೆಯಾದ ನಂತರ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ, ಸುಸಜ್ಜಿತ ಆಸ್ಪತ್ರೆ ಇಲ್ಲದೆ ಅಕ್ಕಪಕ್ಕದ ಜಿಲ್ಲೆಗಳಿಗೆ ಉನ್ನತ ಚಿಕಿತ್ಸೆಗಾಗಿ ತೆರಳಬೇಕಾಗಿದೆ ಆದಷ್ಟು ಬೇಗ ಜಿಲ್ಲಾಸ್ಪತ್ರೆ 300 ಹಾಸಿಗೆ ಸಾಮಥ್ರ್ಯದ ಜಿಲ್ಲಾ ಆಸ್ಪತ್ರೆ ನಿರ್ಮಾಣದವಾದರೆ ಇಲ್ಲಿಯೇ ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ …
Read More »ಭಾರತದಲ್ಲಿ ಮೊದಲ ಬಾರಿಗೆ ಕಾರ್ಬನ್ ಕ್ರೆಡಿಟ್ ಪ್ರಯೋಗ: ಎಂಟು ರಾಜ್ಯಗಳ ರೈತರಿಗೆ ಅವಕಾಶ
ನವದೆಹಲಿ: ಪರಿಸರಸ್ನೇಹಿ ಕೃಷಿ ವಿಧಾನಗಳನ್ನು ಅನುಸರಿಸಲು ರೈತರಿಗೆ ಪ್ರೇರಣೆ ನೀಡಬಲ್ಲಂತಹ ಕಾರ್ಬನ್ ಕ್ರೆಡಿಟ್ ಪ್ರಯೋಗ ಭಾರತದಲ್ಲಿ ಮೊದಲ ಬಾರಿಗೆ ಆರಂಭವಾಗುತ್ತಿದೆ. ಭಾರತದ ಪ್ರಮುಖ ಬೀಜ ಕಂಪನಿ ಮಹಿಕೋ ಮತ್ತು ಅಮೆರಿಕದ ಇಂಡಿಗೋ ಜಂಟಿಯಾಗಿ ಸ್ಥಾಪಿಸಿರುವ ಗ್ರೋ ಇಂಡಿಗೋ ಸಂಸ್ಥೆ ಇಂಥದ್ದೊಂದು ಪ್ರಯೋಗ ನಡೆಸುತ್ತಿದೆ. ಮೊದಲಿಗೆ ದೇಶದ ಎಂಟು ರಾಜ್ಯಗಳ 80,000 ಸಣ್ಣ ರೈತರನ್ನು ಈ ಸ್ಕೀಮ್ಗೆ ಆಯ್ದುಕೊಳ್ಳಲಾಗಿದೆ. ಪರಿಸರಸ್ನೇಹಿ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವ ರೈತರಿಗೆ ಕಾರ್ಬನ್ ಕ್ರೆಡಿಟ್ ರೂಪದಲ್ಲಿ ಹಣ …
Read More »ಕಲಬುರಗಿಯ ಜಯದೇವ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ
ಕಲಬುರಗಿ : ನಗರದ ಹೃದಯ ಭಾಗದಲ್ಲಿ ಕೆ.ಕೆ.ಆರ್.ಡಿ.ಬಿ.ಯ ಸುಮಾರು 222 ಕೋಟಿ ರೂ. ಅನುದಾನದಿಂದ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಆಸ್ಪತ್ರೆಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು. ರಾಜ್ಯದ ಮುಖ್ಯಮಂತ್ರಿಗಳಿಂದ ಈ ಐತಿಹಾಸಿಕ 371 ಹಾಸಿಗೆಯ ಆಸ್ಪತ್ರೆ ಲೋಕಾರ್ಪಣೆ ಮಾಡಲು ನಿರ್ಧರಿಸಿದ್ದು, ಕೂಡಲೇ ಅಂತಿಮ ಹಂತದ ಕೆಲಸ ಕಾರ್ಯಗಳನ್ನು ಮುಗಿಸುವಂತೆ ಸಂಸ್ಥೆಯ ಇಂಜಿನೀಯರ್ ಮತ್ತು ನಿರ್ಮಾಣದ ಜವಾಬ್ದಾರಿ ಹೊತ್ತಿರುವ ಗುತ್ತಿಗೆದಾರರಿಗೆ …
Read More »ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಬ್ಯಾಡಗಿ: ಬೆಳೆವಿಮೆ ಮತ್ತು ಬೆಳೆನಷ್ಟ ಪರಿಹಾರಕ್ಕೆ ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಎತ್ತು, ಬಂಡಿಗಳೊಂದಿಗೆ ಆಗಮಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಿಂದ ಸ್ಟೇಷನ್ ರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಳಿಕ ತಹಶೀಲ್ದಾರ್ ಎಫ್.ಎ.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾ ಘಟಕದ …
Read More »ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ: ಸಚಿವ ಭೋಸರಾಜು
ಬೆಂಗಳೂರು : ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರಕಾರ ಹಸಿರು ನಿಶಾನೆ ತೋರಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ಇಂದು ಕೇಂದ್ರ ಸರಕಾರದಿಂದ ವಿಮಾನ ನಿಲ್ದಾಣಕ್ಕೆ ಹಸಿರು ನಿಶಾನೆ ದೊರೆತಿರುವ ಬಗ್ಗೆ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್ ಸರಕಾರ …
Read More »ಚಿತ್ರದುರ್ಗದಲ್ಲಿ ವರುಣಾರ್ಭಟ: ಹಳ್ಳದಲ್ಲಿ ಕೊಚ್ಚಿಹೋದ ಟ್ರ್ಯಾಕ್ಟರ್
ಚಿತ್ರದುರ್ಗ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರಿದ್ದು, ಇತ್ತ ಜಿಲ್ಲೆಯಲ್ಲೂ ರಣ-ರಣ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಳ್ಳಕೆರೆ ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ, ಗಜ್ಜುಗಾನಹಳ್ಳಿ ಹಳ್ಳವು ತುಂಬಿ ಹರಿಯುತ್ತಿದೆ ರಭಸದಿಂದ ಹರಿಯುತ್ತಿರುವ ಹಳ್ಳದ ನೀರಿನ ಹೊಡೆತಕ್ಕೆ ರಸ್ತೆ ದಾಟುತ್ತಿದ್ದ ಟ್ರ್ಯಾಕ್ಟರ್ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಚಾಲಕ ಬಚಾವ್ ಆಗಿದ್ದಾನೆ. ನಿರಂತರ ಮಳೆಗೆ ತುಂಬಿ ಹರಿಯುತ್ತಿರುವ ಗಜ್ಜುಗಾನಹಳ್ಳಿ ಹಳ್ಳವು ಸರ್ವಕಾಲಿಕ ದಾಖಲೆ ಮೀರಿ ತುಂಬಿ …
Read More »ದೇಶದಲ್ಲಿರುವ ಸಿ ಆರ್ ಪಿ ಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ಕಳೆದ ಒಂದು ವಾರದಿಂದ ವಿಮಾನಗಳಿಗೆ ಬೆದರಿಕೆ ಕರೆ ಬರುತ್ತಿರುವ ಬೆನ್ನಲ್ಲೇ, ರಾಷ್ಟ್ರ ರಾಜಧಾನಿ ನವದೆಹಲಿ, ಹೈದರಾಬಾದ್ ಸೇರಿ ದೇಶದ ವಿವಿಧೆಡೆ ಇರುವ ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಇಮೇಲ್ ಮಾಡಿರುವವರು ಭಯಭೀತರಾಗಲು ಯಾರೋ ಮಾಡಿದ ಕೃತ್ಯ ಎಂದು ಶಂಕಿಸಲಾಗಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್ನಲ್ಲಿವೆ. ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ …
Read More »ಹೊಸ ಬೆಳವಣಿಗೆಯ ಅವಕಾಶ ಬಳಸಿಕೊಳ್ಳಲು ಭಾರತ ಬದ್ಧ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನ್ಯೂಯಾರ್ಕ್: ಜಾಗತಿಕ ಆರ್ಥಿಕ ವಾತಾವರಣವು ಸವಾಲುಗಳನ್ನು ಎದುರಿಸಬಹುದು ಆದರೆ ಹೊಸ ಬೆಳವಣಿಗೆಯ ಅವಕಾಶಗಳನ್ನು ಬಳಸಿಕೊಳ್ಳಲು ಭಾರತವು ಉತ್ತಮ ಸ್ಥಾನದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಲ್ಲಿನ ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಭಾರತದ ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಸವಾಲು ಮತ್ತು ಅನಿಶ್ಚಿತ ಜಾಗತಿಕ ಪರಿಸರದ ನಡುವೆ ಭವಿಷ್ಯ ಕುರಿತು ವಿಶೇಷ ಉಪನ್ಯಾಸ ನೀಡುವಾಗ ಸೀತಾರಾಮನ್ ಈ ಹೇಳಿಕೆಗಳನ್ನು ನೀಡಿದರು. ಭಾರತವು ದೇಶೀಯ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ಬಾಹ್ಯ ಆಘಾತಗಳ ವಿರುದ್ಧ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





