Breaking News

BigTv News

ಭಾರತ ಚೀನಾ ಗಡಿಯಲ್ಲಿ ವಿಶ್ವಾಸ ಮರುಸ್ಥಾಪಿಸಲು ಯತ್ನ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ನವದೆಹಲಿ: ಭಾರತ -ಚೀನಾ ಗಡಿಯಲ್ಲಿ ವಿಶ್ವಾಸವನ್ನು ಮರುಸ್ಥಾಪಿಸಲು ನಾವು ಯತ್ನಿಸುತ್ತಿದ್ದೇವೆ, ಈ ಗುರಿ ಸಾಧಿಸಲು ಉಭಯ ರಾಷ್ಟ್ರಗಳು ಪರಸ್ಪರ ಭರವಸೆ ನೀಡಬೇಕಾಗಿದೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಇಂದು ಹೇಳಿದರು. ರಕ್ಷಣಾ ಇಲಾಖೆಯ ಚಿಂತಕರ ಚಾವಡಿ ಯುಎಸ್‌ಐ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಅವರು ಒಪ್ಪಂದಕ್ಕೆ ಬರಲಾಗಿದೆ ಎಂಬುದನ್ನು ಸೋಮವಾರ ಪ್ರಕಟಿಸಿದ್ದರು. ಗಡಿಯಲ್ಲಿ,ಪೂರ್ವ ಲಡಾಖ್‌ ಬಳಿ …

Read More »

ವಯನಾಡು ಕ್ಷೇತ್ರಕ್ಕೆ ನನ್ನ ಸಹೋದರಿಗಿಂತ ಉತ್ತಮ ಅಭ್ಯರ್ಥಿಯನ್ನು ಉಹಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನವದೆಹಲಿ: ವಯನಾಡ್‌ನ ಜನರಿಗೆ ನನ್ನ ಹೃದಯದಲ್ಲಿ ಬಹಳ ವಿಶೇಷವಾದ ಸ್ಥಾನವಿದೆ. ಆ ಜನರನ್ನು ಪ್ರತಿನಿಧಿಸಲು ನನ್ನ ಸಹೋದರಿಗಿಂತ ಉತ್ತಮರನ್ನು ನಾನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಇಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಯುಡಿಎಫ್‌ ಅಭ್ಯರ್ಥಿಯಾಗಿ ನಾಳೆ(ಬುಧವಾರ) ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ರಾಹುಲ್‌ ಹಾಗೂ …

Read More »

85 ಭಾರತೀಯ ಸೈನಿಕರನ್ನು ಬಿಡುಗಡೆಗೊಳಿಸಿದ ರಷ್ಯಾ ಸೇನೆ: ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ

ನವದೆಹಲಿ: ರಷ್ಯಾ ಸೇನೆಯು ಈವರೆಗೆ ಭಾರತ ಮೂಲದ 85 ಸೈನಿಕರನ್ನು ಬಿಡುಗಡೆ ಮಾಡಿದೆ ಉಳಿದ 20 ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುವ ಪ್ರಯತ್ನ ಮುಂದುವರಿದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದರು. ಬ್ರಿಕ್ಸ್‌ ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಉಳಿದ ಸೈನಿಕರ ವಾಪಸಾತಿ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು. …

Read More »

ಉದ್ಯೋಗವಕಾಶ ಹೆಚ್ಚಿಸಲು ರಾಜ್ಯ ಸರ್ಕಾರದಿಂದ ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ನಿಪುಣ ಕರ್ನಾಟಕ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಘೋಷಿಸಿದ್ದು, ಶೀಘ್ರದಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಬೆಂಗಳೂರು ಟೆಕ್ ಶೃಂಗಸಭೆಗೆ ಮುನ್ನ ಸಚಿವರು ಆರ್ ಅಂಡ್ ಡಿ ಲ್ಯಾಬ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳ‌ ತಜ್ಞರು ಹಾಗೂ ಪ್ರತಿನಿಧಿಗಳ …

Read More »

ರಾಜ್ಯದಲ್ಲಿ ಪರಿಸರಸ್ನೇಹಿ ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ಸೂಕ್ತ ನೀತಿ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಪರಿಸರಸ್ನೇಹಿ ಇಂಧನ (ಗ್ರೀನ್ ಎನರ್ಜಿ) ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ಯಥೇಚ್ಛ ಅವಕಾಶಗಳಿವೆ, ಈ ದೃಷ್ಟಿಯಿಂದ ಸೂಕ್ತ ನೀತಿಯನ್ನು ರೂಪಿಸಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು. ಖನಿಜ ಭವನದಲ್ಲಿ ಆಯೋಜಿಸಿದ್ದ ಗ್ರೀನ್ ಎನರ್ಜಿ ಮತ್ತು ಕೋರ್ ಮ್ಯಾನುಫ್ಯಾಕ್ಚರಿಂಗ್ ವಲಯಗಳಿಗೆ ಸಂಬಂಧಪಟ್ಟ ಸರಕಾರದ ವಿಷನ್ ಗ್ರೂಪ್‌ಗಳ ಚೊಚ್ಚಲ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬೃಹತ್ ಕೈಗಾರಿಕೆ ಇಲಾಖೆ ಮತ್ತು ಇಂಧನ ಇಲಾಖೆ ಎರಡೂ ಜತೆಗೂಡಿ ಈ …

Read More »

ಮಳೆ ಪೀಡಿತ ಪ್ರದೇಶದಲ್ಲಿ ನಮ್ಮ ಅಧಿಕಾರಿಗಳ ತಂಡ ನಿರಂತರ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ: ಡಿಸಿಎಂ ಡಿಕೆಶಿ

ಬೆಂಗಳೂರು: ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಇಂದು ಪ್ರತಿಕ್ರಿಯಿಸಿದರು. ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, …

Read More »

ಜಾತಿಗಣತಿ ವರದಿ ಅಂಗೀಕಾರಕ್ಕೆ ಒತ್ತಾಯಿಸಿ ಗದಗದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಗದಗ: ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು ಈ ವೇಳೆ ಮುಖಂಡರು ಮಾತನಾಡಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

Read More »

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಪ್ರತಿಭಟನೆ

ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಶೀಘ್ರವಾಗಿ ಪೂರೈಸಿ ಜಿಲ್ಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಭದ್ರಾ ಮೇಲ್ದಂಡೆ ಯೋಜನೆಯನ್ನು ತಡ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು. …

Read More »

ವರುಣಾ ಕ್ಷೇತ್ರದಲ್ಲಿ 501.81 ಕೋಟಿ ರೂ. ಮೌಲ್ಯದ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

ಮೈಸೂರು: ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ, ನಿಲ್ಲುವುದೂ ಇಲ್ಲ ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.‌ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ …

Read More »

ವಿಜಯಪುರ ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ: ಮನೆಯಿಂದಾಚೆ ಓಡಿ ಬಂದ ಜನ

ವಿಜಯಪುರ: ಇಂದು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ, ಅಲ್ಲದೇ ಇದರೊಟ್ಟಿಗೆ ಜೋರು ಶಬ್ದ ಕೂಡ ಕೇಳಿ ಬಂದಿದೆ. ಈ ಶಬ್ದಕ್ಕೆ ಬೆಚ್ಚಿ ಬಿದ್ದಂತ ಜನರು ಮನೆಯಿಂದ ಹೊರ ಓಡಿ ಬಂದು ಆತಂಕದಲ್ಲಿ ಕೆಲ ಕಾಲ ಕಳೆಯುವಂತೆ ಆಗಿದೆ ಎನ್ನಲಾಗುತ್ತಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಅಲ್ಲದೇ ಗಡಿ ಭಾಗದ …

Read More »