ಕೊಪ್ಪಳ: ಜಿಲ್ಲಾ ವಾರ್ತಾಧಿಕಾರಿಯಾಗಿ ಡಾ.ಸುರೇಶ್ ಜಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗವಿಸಿದ್ದಪ್ಪ ಹೊಸಮನಿ ಅವರು ರಾಯಚೂರು ಜಿಲ್ಲೆಗೆ ವರ್ಗಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಸಹಾಯಕ ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಡಾ.ಸುರೇಶ್ ಜಿ ಅವರು ವಹಿಸಿಕೊಂಡರು ನಿರ್ಗಮಿತ ಅಧಿಕಾರಿಗಳು ನೂತನ ಜಿಲ್ಲಾ ವಾರ್ತಾಧಿಕಾರಿಗಳಿಗೆ ಹೂಗುಚ್ಚ ನೀಡಿ ಅಧಿಕಾರ ಹಸ್ತಾಂತರಿಸಿದರು. ಡಾ.ಸುರೇಶ್ ಜಿ ಅವರು ಬೀದರ್ ಜಿಲ್ಲಾ …
Read More »ಬೆಂಗಳೂರಲ್ಲಿ ಮಳೆ ನೀರು ನಿಲ್ಲುವ ಪ್ರದೇಶಗಳ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಮಿತಿ ರಚನೆ: ಡಿಸಿಎಂ ಡಿಕೆಶಿ
ಬೆಂಗಳೂರು: ನಗರದಲ್ಲಿ ಮಳೆ ನೀರು ನಿಲ್ಲುವ ಪ್ರದೇಶಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸುವುದಾಗಿ ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಳೆ ಬಂದು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸರಿಪಡಿಸಲು ಒಂದು ಸಮಿತಿಯನ್ನು ರಚಿಸಲಾಗುತ್ತಿದೆ. ಭವಿಷ್ಯದಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಹೆಚ್ಚು ಮಳೆ ಬಂದು ಸಮಸ್ಯೆ ಎದುರಾಗುವ ಸ್ಥಳಗಳನ್ನು ನಾಗರಿಕರು ಅಧಿಕೃತವಾಗಿಯೇ ನಮಗೆ ತಿಳಿಸಲು ಅವಕಾಶ …
Read More »ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ನೂರಕ್ಕೆ ನೂರರಷ್ಟು ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ
ಚಿತ್ರದುರ್ಗ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಚಳ್ಳಕೆರೆ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ …
Read More »ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ. ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್ಗೆ ವೆಚ್ಚ 50,000 ರೂ.ಇದ್ದು, ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ 20000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ 25000 …
Read More »545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ, 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಇಂದು ಬಿಡುಗಡೆ ಮಾಡಿದೆ. ದಿನಾಂಕ: 06.06.2020 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. …
Read More »ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ಚಾಲಕ ಸಾವು
ಚಿತ್ತಾಪುರ : ಚಿತ್ತಾಪುರ ತಾಲ್ಲೂಕಿನ ದಂಡೋತಿ ಸಮೀಪದಲ್ಲಿ ಭಾನುವಾರ ತಡ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಗಿಣಾ ನದಿ ಸೇತುವೆಯ ಕೆಳಗೆ ಬಿದ್ದು ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಚಿತ್ತಾಪುರ ಪಟ್ಟಣದ ನಿವಾಸಿ, ಚಾಲಕ ನಿಂಗಪ್ಪ ಪೂಜಾರಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಮೇಶ ಮತ್ತ ಕೃಷ್ಣ ಅವರು ಗಾಯಗೊಂಡಿದ್ದಾರೆ. ಹಳೆಯ ಕಾರು ಖರೀದಿಗಾಗಿ ಚಿಂಚೋಳಿ ತಾಲ್ಲೂಕಿನ ಕೊಂಚಾವರಂಕ್ಕೆ ಹೋಗಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಶಹಾಬಾದ್ …
Read More »ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಹಾಸನ ಮಾಜಿ ಸಂಸದ, ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇನ್ನೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನೂ ಕೋರ್ಟ್ ವಜಾಗೊಳಿಸಿದೆ ಇದೀಗ ಪ್ರಜ್ವಲ್ಗೆ ಜೈಲೇ ಗತಿ ಎನ್ನುವಂತಾಗಿದೆ. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ …
Read More »ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ: ಸಚಿವ ಮಧು ಬಂಗಾರಪ್ಪ
ಬೆಂಗಳೂರು : ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ …
Read More »ಸಂಡೂರು ಉಪಚುನಾವಣೆ: ವಿವಿಧ ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ಕೊಟ್ಟ ಜಿಲ್ಲಾಧಿಕಾರಿ
ಬಳ್ಳಾರಿ: ಜಿಲ್ಲೆಯ ಸಂಡೂರು ಕ್ಷೇತ್ರದ ವಿಧಾನಸಭಾ ಉಪ ಚುನಾವಣೆ 2024ರ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿವಿಧ ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿ, ಚುನಾವಣಾ ಪ್ರಚಾರದ ಕುರಿತು ಪಕ್ಷಗಳಿಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ …
Read More »ಷೇರುಪೇಟೆ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ಸೆನ್ಸೆಕ್ಸ್, ನಿಫ್ಟಿ ಕುಸಿತ
ಮುಂಬೈ: ವಾರದ ಆರಂಭಿಕ ವಹಿವಾಟಿನಲ್ಲೇ ಷೇರುಪೇಟೆಯಲ್ಲಿ ಹಾವುಏಣಿಯಾಟ ಶುರುವಾಗಿದೆ. ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬಳಿಕ ಕುಸಿದಿವೆ. ನಿಫ್ಟಿ 124 ಅಂಶಗಳ ಏರಿಕೆಯೊಂದಿಗೆ 24,978ರಲ್ಲಿ ವಹಿವಾಟು ಆರಂಭಿಸಿದರೆ, ಬಿಎಸ್ಇ ಸೆನ್ಸೆಕ್ಸ್ 545 ಅಂಶಗಳ ಏರಿಕೆಯೊಂದಿಗೆ 81,770ರಲ್ಲಿ ವಹಿವಾಟು ಆರಂಭಿಸಿತ್ತು. ಬಳಿಕ ಸೆನ್ಸೆಕ್ಸ್ 136 ಮತ್ತು ನಿಫ್ಟಿ 100 ಅಂಶಗಳಷ್ಟು ಕುಸಿದವು. ಇಂದು ಸೆನ್ಸೆಕ್ಸ್ನ ಟೈಟಾನ್, ಎಚ್ಡಿಎಫ್ಸಿ ಬ್ಯಾಂಕ್, ಏಷಿಯನ್ ಪೇಟ್ಸ್, ಆಕ್ಸಿಸ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





