ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ ಸಾಮಾಜಿಕ ಆರ್ಥಿಕ ಸಮೀಕ್ಷೆ, …
Read More »ನೋಂದಣಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ: ರಾಜ್ಯ ಸರ್ಕಾರದಿಂದ ಮಸೂದೆಗೆ ಅಧಿಸೂಚನೆ
ಬೆಂಗಳೂರು: ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 8ರಂದು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಮಸೂದೆ ಜಾರಿಗೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಈ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು ಅದನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು …
Read More »ಉಪಚುನಾವಣೆಗೆ ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ: ಸಚಿವ ಎಚ್.ಕೆ ಪಾಟೀಲ
ಹಾವೇರಿ: ಉಪ ಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗುತ್ತದೆ ಶಿಗ್ಗಾವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಹೈಕಮಾಂಡ್ ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ ಸೋಮವಾರ (ಅ.21) ಸಂಜೆಯೊಳಗೆ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಸಚಿವ ಎಚ್. ಕೆ.ಪಾಟೀಲ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ತತ್ವ ಸಿದ್ಧಾಂತಗಳನ್ನ ಬಿಡುವುದಿಲ್ಲ ಮುಸ್ಲಿಂ ಸಮುದಾಯದ ಇಬ್ಬರು ಆಕಾಂಕ್ಷಿಗಳ ಬಳಿ ಮಾತಾಡಿ ಅಂತಿಮ ಮಾಡುತ್ತೇವೆ ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸ್ಸು, …
Read More »ಯುದ್ಧಕ್ಕೆ ಸನ್ನದ್ಧರಾಗಿರುವಂತೆ ಸೈನ್ಯಕ್ಕೆ ಚೀನಾ ಅಧ್ಯಕ್ಷ ಜಿನ್ ಪಿಂಗ್ ಕರೆ
ಬೀಜಿಂಗ್: ಈ ವಾರ ಯುದ್ಧಕ್ಕೆ ಸನ್ನದ್ಧರಾಗಿರುವಂತೆ ಸೈನ್ಯಕ್ಕೆ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕರೆ ನೀಡಿದ್ದಾರೆ. ತೈವಾನ್ – ಚೀನಾ ನಡುವೆ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಪೀಪಲ್ಸ್ ಲಿಬರೇಶನ್ ಆರ್ಮಿ ರಾಕೆಟ್ ಫೋರ್ಸ್ನ ಬ್ರಿಗೇಡ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ಸಿ ಈ ಸಲಹೆ ನೀಡಿದ್ದಾರೆ ಎಂದು ಆ ದೇಶದ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಮಿಲಿಟರಿಯು ಸಮಗ್ರವಾಗಿ ತರಬೇತಿ ಮತ್ತು ಯುದ್ಧದ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಪಡೆಗಳು ಯಾವುದೇ ಸಂದರ್ಭದಲ್ಲಿ ಯುದ್ಧ …
Read More »ಗದಗದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು
ಗದಗ : ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗ ನಗರದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ ಗಾಯಗೊಂಡ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣ್ಣಿನಡಿ ಸಿಲುಕಿದ ಕಾರ್ಮಿಕನನ್ನು ನಜೀರ್ ಸಾಬ್ ಬೈಲು ಹುಲಿ ಎಂದು ಗುರುತಿಸಲಾಗಿದ್ದು, ಗದಗ ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.
Read More »ದೇಶದಲ್ಲಿ ಪ್ರಧಾನಿ ಮೋದಿ ಅಭಿವೃದ್ದಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ವೃದ್ಧಿಸಿವೆ: ಬಿ.ಸಿ ಪಾಟೀಲ
ಹಿರೇಕೆರೂರು: ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದ ಅವರು, ಸದೃಢ …
Read More »ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥ: ಆರ್.ಅಶೋಕ್
ಬೆಂಗಳೂರು: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ, ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥವಾಗಿದ್ದಾರೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಬೆಳೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ …
Read More »ರಾಜ್ಯದಲ್ಲಿ ಶೇ.10 ರಷ್ಟು ಸೇವೆಯನ್ನು ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ: ಪ್ರಿಯಾಂಕ್ ಖರ್ಗೆ ಅಸಮಾಧಾನ
ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಸಮನ್ವಯತೆ, ಸಮಯಪ್ರಜ್ಞೆ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಹೊಣೆಗಾರಿಕೆ ಈ ಪಂಚಸೂತ್ರಗಳನ್ನು ಇರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪಂಚಾಯತ್ ರಾಜ್ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರದಲ್ಲಿ ಆಯೋಜಿಸಲಾಗಿದ್ದ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುತ್ತ, ರಾಜ್ಯದ ಜನರಿಗೆ ಸ್ವಾಭಿಮಾನ ಬದುಕು ನೀಡುವ …
Read More »ಅಪಾಯದ ಅಂಚಿನಲ್ಲಿರುವ ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರಿಗೆ ಸೌಲಭ್ಯ: ಕಿಶನ್ ಮಕ್ವಾನ ಭರವಸೆ
ಮೈಸೂರು: ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಪಡೆಯಲು ಸಮಸ್ಯೆ ಎದುರಿಸುತ್ತಿದ್ದು, ಅವರಿಗೆ ಅಗತ್ಯವಿರುವ ಗುರುತಿನ ಚೀಟಿಗಳನ್ನು ದೊರಕಿಸಲಾಗುವುದು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಅಧ್ಯಕ್ಷ ಕಿಶನ್ ಮಕ್ವಾನ ಭರವಸೆ ನೀಡಿದರು. ನಗರದಲ್ಲಿ ಆಶೋದಯ ಸಮಿತಿಯು ಏರ್ಪಡಿಸಿದ್ದ, ಪರಿಶಿಷ್ಟ ಜಾತಿಯ ಲೈಂಗಿಕ ಕಾರ್ಯಕರ್ತೆಯರು ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ದಾಖಲೆಗಳಿಲ್ಲದೆ ಲೈಂಗಿಕ ಕಾರ್ಯಕರ್ತೆಯರು ಕೇಂದ್ರ …
Read More »ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನ
ಬೆಳಗಾವಿ: ಪ್ರಸ್ತಕ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಜಿಲ್ಲೆಯಲ್ಲಿರುವ ಕನಿಷ್ಠ 20 ಕ್ಕಿಂತ ಹೆಚ್ಚು ಕುರಿ ಮೆಕ್ಕೆಗಳನ್ನು ಹೊಂದಿರುವ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸಂಚಾರಿ ಕುರಿಗಾರರು ನಿಗದಿತ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂದಪಟ್ಟ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ತಮ್ಮ ವ್ಯಾಪ್ತಿಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





