ದಾವಣಗೆರೆ: ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನವುಲೆಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಕೃಷಿ-ತೋಟಗಾರಿಕ ಮೇಳದಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ …
Read More »ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ, ಮಹಿಳಾ ಕುಶಲಕರ್ಮಿಗಳಿಗೆ …
Read More »ರೈತರು ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿ ಮಾಡಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸೂಚನೆ
ಚಿತ್ರದುರ್ಗ: ರೈತರು ತಾವು ಬೆಳೆದ ಕೃಷಿ ಹುಟ್ಟುವಳಿಗಳನ್ನು ಕೃಷಿ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ತಂದಂತಹ ಸಂದರ್ಭದಲ್ಲಿ ತಾವುಗಳು ತಪ್ಪದೇ ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿಯನ್ನು ಮಾಡಿಸಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ. ಗೇಟ್ ಎಂಟ್ರಿ ಮಾಡಿಸುವಾಗ ಕಡ್ಡಾಯವಾಗಿ ಅಧಿಕೃತ ರೈತರ ಹೆಸರು, ಹುಟ್ಟುವಳಿಯ ಅಂದಾಜು ಪ್ರಮಾಣ, ರೈತರ ಮೊಬೈಲ್ ಸಂಖ್ಯೆ, ವಿಳಾಸವನ್ನು ಹಾಗೂ ಯಾವ ಅಂಗಡಿಗೆ ಹುಟ್ಟುವಳಿಯನ್ನು ಮಾರಾಟಕ್ಕೆ ಬಿಡಲಾಗಿದೆ ಎಂದು ಕಡ್ಡಾಯವಾಗಿ ತಿಳಿಸಬೇಕು. ಟೆಂಡರ್ …
Read More »ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ, ಮುಂದಿನ 4 ದಿನ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೆಂಗಳೂರು, ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ, ಚಿತ್ರದುರ್ಗದ ಹಿರಿಯೂರು, ದಾವಣಗೆರೆ, ಕೊಪ್ಪಳದ ಗಂಗಾವತಿ, ಮಂಡ್ಯ, ಶಿವಮೊಗ್ಗದ ಆಗುಂಬೆ, ಮಡಿಕೇರಿಯ ನಾಗಮಂಡಲ, ಯಾದಗಿರಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ವರ್ಷಧಾರೆಯಾಗಿದೆ. ಬೆಳಗಾವಿ, ಧಾರವಾಡ, …
Read More »2ಎ ಮೀಸಲಾತಿ ಸಭೆ ವಿಫಲ: ಪಂಚಮಸಾಲಿ ಲಿಂಗಾಯತದಿಂದ ಮತ್ತೆ ಹೋರಾಟಕ್ಕೆ ರಣಕಹಳೆ
ಬೆಂಗಳೂರು: ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಶ್ರೀ ಸೇರಿದಂತೆ ಸಮುದಾಯದ ಘಟನಾನುಘಟಿ ನಾಯಕರು ಭಾಗಿಯಾಗಿದ್ದರು. ಆದ್ರೆ, ಸಿಎಂ ಸಿದ್ದರಾಮಯ್ಯನವರು ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಅಸಮಾಧಾನಗೊಂಡಿದ್ದು, ಡಿಸೆಂಬರ್ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರಾಕ್ಟರ್ ರ್ಯಾಲಿ ನಡೆಸಲು ತೀರ್ಮಾನಿಸಿದೆ. ಸಿಎಂ ಸಭೆ …
Read More »ಅ.23 ರಿಂದ ಮೂರು ದಿನ ಬೆಳಗಾವಿಯಲ್ಲಿ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ್ ಪಾಟೀಲ್ ಘೋಷಣೆ
ಬೆಳಗಾವಿ: ಅಕ್ಟೋಬರ್ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ 5 ಕೋಟಿ ರೂ ಅನುದಾನ ನೀಡಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮರ 200ನೇ ವಿಜಯೋತ್ಸವ ಕಾರ್ಯಕ್ರಮ ಕೂಡ ಮಾಡುತ್ತೇವೆ …
Read More »ಬೆಳಗಾವಿಯಲ್ಲಿ ದಾಖಲೆ ಇಲ್ಲದ 2.73 ಕೋಟಿ ಹಣ ವಶ: ಆರೋಪಿಗಳ ಬಂಧನ
ಬೆಳಗಾವಿ: ದಾಖಲೆಗಳಿಲ್ಲದೇ ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ₹2.73 ಕೋಟಿ ಹಣವನ್ನು ಬೆಳಗಾವಿ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನದಲ್ಲಿ ಈ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ದೊರೆತಿತ್ತು. ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾರ್ಗದರ್ಶನದಲ್ಲಿ, ಸಿಸಿಬಿ ಇನ್ಸ್ಪೆಕ್ಟರ್ ನಂದೀಶ್ವರ ಕುಂಬಾರ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾದು …
Read More »ಪಂಚಾಯತ್ ರಾಜ್ ಇಲಾಖೆಯಲ್ಲಿ ಸರಿಯಾದ ಸಮಯದಲ್ಲಿ ಕೆಲಸಗಳು ಆಗುತ್ತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ
ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯಲ್ಲಿ ಎಲ್ಲ ಸವಲತ್ತು ಇದೆ, ಸಿಬ್ಬಂದಿಯೂ ಇದ್ದಾರೆ ಆದರೆ ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯದಲ್ಲಿ ಕೆಲಸಗಳು ಆಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಪಂಚಾಯತ್ ರಾಜ್ ಅಧಿಕಾರಿಗಳ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿರೀಕ್ಷಿತ ಮಟ್ಟದಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ, ಕೆಲಸವೂ ಆಗುತ್ತಿಲ್ಲ ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬುದನ್ನು …
Read More »ಬೆಣ್ಣೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಮೂವರು ವ್ಯಕ್ತಿಗಳು, ಕುರಿಗಳ ರಕ್ಷಣೆ
ಹುಬ್ಬಳ್ಳಿ: ವ್ಯಾಪಕ ಮಳೆಯಿಂದಾಗಿ ಬೆಣ್ಣೆ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನೂರಾರು ಕುರಿ ಹಾಗೂ ಮೂವರು ಕೊಚ್ಚಿ ಹೋಗಿರುವ ಅವಾಂತರ ಸೃಷ್ಟಿಯಾಗಿತ್ತು. ಬೆಣ್ಣೆ ಹಳ್ಳದ ನೀರಿಗೆ ಸಿಲುಕಿ ಹಾಕಿಕೊಂಡಿದ್ದ ಮೂವರನ್ನು ಹಾಗೂ 150 ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಹತ್ತಿರ ನಡೆದಿದೆ. ಕುರಿಗಳನ್ನು ಮೇಯಿಸಲು ಹೋದ ಹನುಮಂತ ಬೆನಕನಹಳ್ಳಿ, ಮಂಜಪ್ಪ ಬೆನಕನಹಳ್ಳಿ ಮತ್ತು ಇನ್ನೋರ್ವ ವ್ಯಕ್ತಿ …
Read More »ಮಲ್ಪೆ ಬೀಚಿನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ
ಮಲ್ಪೆ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ನಿನ್ನೆ ನಡೆದಿದ್ದು, ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ. ಬೀಚ್ ನಲ್ಲಿ ವಿಹರಿಸುತ್ತಿದ್ದ ಇಬ್ಬರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಮತ್ತು ಸುಬ್ರಮಣ್ಯ ಅವರು ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





