Breaking News

BigTv News

ಅಮರಾವತಿ ರಾಜಧಾನಿಯನ್ನಾಗಿ ಅಭಿವೃದ್ದಿಪಡಿಸುವ ಕಾಮಗಾರಿ ಪುನರಾರಂಭಿಸಿದ ಚಂದ್ರಬಾಬು ನಾಯ್ಡು

ಅಮರಾವತಿ: ಅಮರಾವತಿಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವ ರಾಜಧಾನಿ ವಲಯ ಅಭಿವೃದ್ಧಿ ಪ್ರಾಧಿಕಾರ (ಸಿಆರ್‌ಡಿಎ) ಯೋಜನೆಯ ಕಾಮಗಾರಿಗಳನ್ನು ‌ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇಂದು ಪುನರಾರಂಭಿಸಿದ್ದಾರೆ. ಈ ಹಿಂದಿನ ವೈ.ಎಸ್‌.ಆರ್‌.ಕಾಂಗ್ರೆಸ್ ಸರ್ಕಾರವು, ಅಮರಾವತಿಯನ್ನು ರಾಜಧಾನಿಯನ್ನಾಗಿ ನಿರ್ಮಾಣ ಮಾಡುವ ಅವರ ಕನಸಿನ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಇದೀಗ ಐದು ವರ್ಷಗಳ ಬಳಿಕ ರಾಜಧಾನಿ ಪ್ರದೇಶದ ರಾಯಪುಡಿ ಗ್ರಾಮದಲ್ಲಿ ಕಾಮಗಾರಿಗಳನ್ನು ಪುನರಾರಂಭಿಸಲಾಗಿದೆ. 2014-2019ರ ತಮ್ಮ ಹಿಂದಿನ ಅವಧಿಯಲ್ಲಿ ₹160 ಕೋಟಿ ವೆಚ್ಚದಲ್ಲಿ 7 ಅಂತಸ್ತಿನ …

Read More »

ಗಾಜಾದ ಐತಿಹಾಸಿಕ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿ: 33 ಸಾವು, 85 ಮಂದಿಗೆ ಗಾಯ

ಗಾಜಾ: ಗಾಜಾದ ಎಂಟು ಐತಿಹಾಸಿಕ ನಿರಾಶ್ರಿತರ ಶಿಬಿರಗಳಲ್ಲಿ ಅತಿದೊಡ್ಡದಾದ ಜಬಾಲಿಯಾದಲ್ಲಿ ಹಲವಾರು ಮನೆಗಳ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 33 ಜನರು ಸಾವನ್ನಪ್ಪಿದ್ದಾರೆ ಮತ್ತು 85 ಜನರು ಗಾಯಗೊಂಡಿದ್ದಾರೆ. ಹಮಾಸ್ ಆಡಳಿತದ ಗಾಝಾ ಸರ್ಕಾರಿ ಮಾಧ್ಯಮ ಕಚೇರಿಯ ಪ್ರಕಾರ, ಕೆಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದ್ದು, ದಾಳಿಯಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಬಹುದು. ಸಾವಿನ ಸಂಖ್ಯೆಯಲ್ಲಿ ಮಕ್ಕಳೂ ಸೇರಿದ್ದಾರೆ ದಾಳಿಯ ಬಗ್ಗೆ ಇಸ್ರೇಲ್ ಸೇನೆ ಇನ್ನೂ …

Read More »

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ಗುಪ್ತಾ ನೇಮಕಗೊಳಿಸಿ ಸರ್ಕಾರ ಆದೇಶ

ಕೊಪ್ಪಳ: ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದ್ದ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಉದ್ಯಮಿ ಭಾಗ್ಯನಗರದ ಶ್ರೀನಿವಾಸ ಗುಪ್ತಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೂದಲೋದ್ಯಮಿಯಾಗಿ ಹೆಸರು ಮಾಡಿರುವ ಗುಪ್ತಾ ಅವರ ಹೆಸರು ಈ ಸ್ಥಾನಕ್ಕೆ ಹಿಂದೆಯೇ ಕೇಳಿಬಂದಿದ್ದರೂ ಈಗ ಅಧಿಕೃತವಾಗಿ ಘೋಷಣೆಯಾಗಿದೆ. ಪರಿಶಿಷ್ಟ ಪಂಗಡದ ಮಾರ್ಕಂಡೇಶ್ವರ ಕಲ್ಲನವರ, ಲಿಂಗಾಯತ ಸಮುದಾಯದ ಚನ್ನಬಸಯ್ಯ ಚನ್ನವಡಿಯರ ಮಠ, ಮುಸ್ಲಿಂ ಸಮಾಜದ ಅಬ್ದುಲ್‌ ಲತೀಫ್‌ ಖತೀಬ್‌ ಮತ್ತು ಪರಿಶಿಷ್ಟ …

Read More »

ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ: ಆರ್ ಅಶೋಕ್ ವಾಗ್ದಾಳಿ

ಬೆಂಗಳೂರು: 15 ಬಜೆಟ್ ಮಂಡಿಸಿರುವ ಸ್ವಯಂಘೋಷಿತ ಆರ್ಥಿಕ ತಜ್ಞರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರೂ ಸಂಪನ್ಮೂಲ ಸಂಗ್ರಹಣೆಯಲ್ಲಿ ಶೇ.4% ರಷ್ಟು ಹಿನ್ನಡೆಯಾಗಿದ್ದು, ಕಾಂಗ್ರೆಸ್​ ಸರ್ಕಾರ ಬಂದಾಗಿನಿಂದ ಕುಸಿಯುತ್ತಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಕನ್ನಡಿ ಹಿಡಿದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್​.ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರೇ, ತೆರಿಗೆ ಸಂಗ್ರಹ ಕುಸಿತವಾಗಿರುವುದಕ್ಕೆ ಗ್ಯಾರೆಂಟಿ ಫಲಾನುಭವಿಗಳನ್ನು ಯಾಕೆ ಹೊಣೆ ಮಾಡುತ್ತಿದ್ದೀರಿ ಗ್ಯಾರೆಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಈ ಹಿಂದೆ ತಾವೇ …

Read More »

ಶಾಲೆಗಳಲ್ಲಿ ಕಲಿಕೆಯ ಫಲಿತಾಂಶ ಸುಧಾರಿಸಲು ಸರ್ಕಾರದಿಂದ ಶಿಕ್ಷಣ ಕೋಪೈಲಟ್ ಯೋಜನೆ ಜಾರಿಗೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷಣ ಕೋಪೈಲಟ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ 750 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1,000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್‌ – ಎಐ …

Read More »

2ಎ ಮೀಸಲಾತಿ ನೀಡುವ ಕುರಿತು ಸರ್ಕಾರದಿಂದ ಯಾವುದೇ ಭರವಸೆ ಸಿಕ್ಕಿಲ್ಲ: ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡುವ ಸಂಬಂಧ ಸರ್ಕಾರದಿಂದ ಯಾವುದೇ ಭರವಸೆ ಸಿಕ್ಕಿಲ್ಲ. ‌ಈ ಹಿನ್ನೆಲೆ ಮತ್ತೆ ಹೋರಾಟ ರೂಪಿಸುವ ಸಂಬಂಧ ಜಯ ಮೃತ್ಯುಂಜಯ ಸ್ವಾಮೀಜಿ ಸುಳಿವು ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿಂದು ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಜೊತೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿತು. ಸಭೆ ಬಳಿಕ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ಸಿಎಂ ಅವರು ನಮ್ಮ ಬಳಿ ಒಂದೂವರೆ …

Read More »

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ ; ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ …

Read More »

ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 2024-25 ನೇ ಸಾಲಿನ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌ಎಸ್ಪಿ) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ …

Read More »

ರಾಜ್ಯ ಸರ್ಕಾರದಿಂದ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ 1.5 ಕೋಟಿ ಅನುದಾನ: ಸಚಿವ ಮಹದೇವಪ್ಪ

ಮೈಸೂರು: ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅಗತ್ಯವಿರುವ ₹1.5 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿ, ವಾಲ್ಮೀಕಿ ಪ್ರತಿಮೆಯನ್ನು ತಾಲ್ಲೂಕು ಕಚೇರಿ ಎದುರು ನಿರ್ಮಿಸಲು ಪ್ರಸ್ತಾವ ಬಂದಾಗ ಸುಪ್ರೀಂಕೋರ್ಟ್ ಆದೇಶದಂತೆ ಸಾಧ್ಯವಿಲ್ಲವೆಂದು ಬೇರೆಡೆ ಸ್ಥಳ ಸೂಚಿಸಲು ತಿಳಿಸಲಾಗಿತ್ತು ಎಂದರು. ಜಿಲ್ಲಾಧಿಕಾರಿ ಪ್ರಸ್ತಾಪಿಸಿದ ಜಾಗವನ್ನು ವಾಲ್ಮೀಕಿ ಸಮುದಾಯವು ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಸತತ ಮಳೆಯಿಂದಾಗಿ ಧಾರವಾಡದಲ್ಲಿ ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ

ಧಾರವಾಡ: ನಗರದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ ಬಳಿ ಈ ಘಟನೆ ಸಂಭವಿಸಿದೆ. ಹುಬ್ಬಳ್ಳಿಯಿಂದ ಧಾರವಾಡದವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಕಾಮಗಾರಿ ಕಳಪೆ ಇರುವ ಕಾರಣಕ್ಕೆ, ಅಲ್ಲಲ್ಲಿ ಈ ಅವಘಡಗಳು ಸಂಭವಿಸುತ್ತಿದೆ. ಈ ಕಾರಣಕ್ಕೆ ವಾಹನ ಸವಾರರು ಪರದಾಡಿದ್ದಾರೆ ಕಳಪೆ ರಸ್ತೆ ಕಾಮಗಾರಿ ಮಾಡುವುದರಿಂದ, ಪ್ರತೀ ಬಾರಿ ಜೋರಾಗಿ ಮಳೆ ಬಂದಾಗ, ಈ …

Read More »