ನವದೆಹಲಿ: ಹುಬ್ಬಳ್ಳಿಯಿಂದ ಅಹ್ಮದಾಬಾದ್ಗೆ ವಿಮಾನಯಾನ ಸೌಲಭ್ಯ ಆರಂಭ ಹಾಗೂ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸದಿರುವ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಜತೆ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚರ್ಚಿಸಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳು, ವ್ಯಾಪಾರಸ್ಥರು ಇನ್ನಿತರರು ಅಹ್ಮದಾಬಾದ್ ಹಾಗೂ ಚೆನ್ನೈನೊಂದಿಗೆ ಹೆಚ್ಚಿನ ಸಂಪರ್ಕ ಹೊಂದಿದ್ದಾರೆ. ಅಹ್ಮದಾಬಾದ್ಗೆ ಹುಬ್ಬಳ್ಳಿಯಿಂದ ವಿಮಾನಯಾನ ಆರಂಭಿಸಿದರೆ ಉದ್ಯಮ-ವ್ಯಾಪಾರ ದೃಷ್ಟಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸಲಾಗುತ್ತಿದೆ ಎನ್ನಲಾಗಿದ್ದು, ಇದನ್ನು ಸ್ಥಗಿತಗೊಳಿಸದೆ …
Read More »ದಾವಣಗೆರೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು 44 ಗ್ರಾಮಗಳ ಆಯ್ಕೆ: ಡಾ.ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಯೋಜನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲೆಯ 44 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಈ ಗ್ರಾಮಗಳಲ್ಲಿನ ಅಭಿವೃದ್ದಿ ಕಾಮಗಾರಿಗಳು ನಡೆಯಬೇಕಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು. ಅವರು ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ …
Read More »ಕಿತ್ತೂರು ಉತ್ಸವ ಅದ್ದೂರಿಯಾಗಿ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ
ಬೆಳಗಾವಿ: ನಗರದಲ್ಲಿ ಕಿತ್ತೂರು ಉತ್ಸವನ್ನು ಅದ್ಧೂರಿಯಾಗಿ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲಿ ಬೃಹತ್ ಸಂಗೀತ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ರಾಷ್ಟ್ರೀಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಈ ಬಾರಿಯ ಕಿತ್ತೂರು ಉತ್ಸವದ ಹಿಂದಿನ ದಿನವಾದ ಅಕ್ಟೋಬರ್ 22 ರಂದು …
Read More »ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಸೌಮ್ಯಾ ರೆಡ್ಡಿ ಇಂದು ಪದಗ್ರಹಣ
ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಇಂದು ಪದಗ್ರಹಣ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಮೊದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಜಯನಗರದಿಂದ ಸೋಲನುಭವಿಸಿದ್ದ ಮಾಜಿ ಶಾಸಕಿ ಸೌಮ್ಯ ರೆಡ್ಡಿ, ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ದಕ್ಷಿಣ ಲೋಕಸಭೆ …
Read More »ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ನೀತಿ ಸಂಹಿತೆ ಜಾರಿ
ಬಳ್ಳಾರಿ: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆ-2024ರ ದಿನಾಂಕ ಘೋಷಣೆ ಮಾಡಿದ್ದು, ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನವೆಂಬರ್ 13ರಂದು ಮತದಾನ ಮತ್ತು ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಬಳ್ಳಾರಿ ಜಿಲ್ಲಾಡಳಿತ ಉಪ ಚುನಾವಣೆಯ ಕುರಿತು ಮಾಹಿತಿಯನ್ನು ನೀಡಿದೆ. ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಂಡೂರು ಉಪ ಚುನಾವಣೆ ಕುರಿತು ಮಾಹಿತಿ ನೀಡಿದರು. …
Read More »ರಾಜ್ಯದ ಹಲವೆಡೆ ವರುಣನ ಅಬ್ಬರ: ಬಿತ್ತನೆ ಕಾರ್ಯಕ್ಕೆ ಅಡಚಣೆ, ರೈತರು ಕಂಗಾಲು
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ ಬೆಂಗಳೂರಿನಲ್ಲಿ ಸತತ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆ ಸುರಿಯುತ್ತಿರುವುದರಿಂದ ಬಿತ್ತನೆ ಕಾರ್ಯಕ್ಕೆ ಅಡಚಣೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಾಜ್ಯದ ಹಲವೆಡೆ ನಿರಂತರ ಮಳೆ ರೈತರ ಕಣ್ಣಲ್ಲಿ ನೀರು ತರಿಸಿದೆ ತೊಗರಿ ಕಣಜ ಕಲಬುರಗಿ ಜಿಲ್ಲೆಯಾದ್ಯಂತ ಎರಡು ದಿನದಿಂದ ಮಳೆ ಸುರಿಯುತ್ತಿದೆ ಇದರಿಂದಾಗಿ ಜಿಲ್ಲೆಯ ಐದು ಲಕ್ಷ ಹೆಕ್ಟೇರ್ಗೂ ಅಧಿಕ ಪ್ರದೇಶದಲ್ಲಿ …
Read More »ಬೆಳಗಾವಿ ನವಿಲುತೀರ್ಥ ಅಣೆಕಟ್ಟು ಸಂಪೂರ್ಣ ಭರ್ತಿ: ಕೃಷಿ ಚಟುವಟಿಕೆಗಳಿಗೆ ನೀರು, ರೈತರ ಮೊಗದಲ್ಲಿ ಸಂತಸ
ಬೆಳಗಾವಿ: ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ರಾಜ್ಯದ ಎಲ್ಲಾ ಡ್ಯಾಂಗಳು ಭರ್ತಿಯಾಗಿವೆ. ಬೆಳಗಾವಿಯಲ್ಲಿರುವ ನವಿಲುತೀರ್ಥ ಅಣೆಕಟ್ಟು ಭರ್ತಿಯಾಗಿದ್ದು, ಜಲಾಶಯದಿಂದ ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ನೀರು ಲಭ್ಯವಾಗಲಿದೆ. ಆದ್ದರಿಂದ ರೈತರು ಸಂತಸಗೊಂಡಿದ್ದಾರೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಜಲಾಶಯಕ್ಕೆ ಗಂಗೆ ಪೂಜೆ ಮಾಡಿ, ಬಾಗಿನ ಅರ್ಪಿಸಲಾಗಿದೆ. ಮಲಪ್ರಭಾ ನೀರಾವರಿ ಸಲಹಾ ಸಮಿತಿ ನವಿಲುತೀರ್ಥ ಡ್ಯಾಂನಲ್ಲಿ ಗಂಗೆ ಪೂಜೆ, ಬಾಗಿನ ಅರ್ಪಣೆ ಕಾರ್ಯಕ್ರಮ ಆಯೋಜಿಸಿತ್ತು. ಮಹಿಳಾ ಮತ್ತು …
Read More »ಕೆಎಸ್ಆರ್ಟಿಸಿ 63ನೇ ಸಂಸ್ಥಾಪನಾ ಕಾರ್ಯಕ್ರಮ
ಬೆಂಗಳೂರು: ಪರಿಹಾರ ಧನ ಸಿಕ್ಕಿದೆ ಎಂದು ಗೊತ್ತಾದರೆ ಕೆಲವರು ಶೇ 10-15 ಬಡ್ಡಿ ಕೊಡುತ್ತೇವೆ ಎಂದು ಬರುತ್ತಾರೆ ಯಾಮಾರಿದರೆ ಹಣ ಕಳೆದುಕೊಳ್ಳುತ್ತೀರಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೆಎಸ್ಆರ್ಟಿಸಿ ನೌಕರರ ಕುಟುಂಬಗಳಿಗೆ ಎಚ್ಚರಿಸಿದರು. ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ತಲಾ ₹ 1 ಕೋಟಿ, ಅನಾರೋಗ್ಯದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ ₹ 10 ಲಕ್ಷ ಪರಿಹಾರವನ್ನು ಕೆಎಸ್ಆರ್ಟಿಸಿ 63ನೇ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ವಿತರಿಸಿ ಅವರು ಮಾತನಾಡಿದರು. ಪರಿಹಾರದ ಹಣವನ್ನು …
Read More »ರೈತರ ಸಾರ್ವಜನಿಕರ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಜಿಲ್ಲಾಧಿಕಾರಿ ಬಿ.ಫೌಜಿಯಾ
ಚಿತ್ತಾಪುರ: ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ವಿವಿಧ ಗ್ರಾಮಗಳಲ್ಲಿ ರೈತರ ಜಮೀನು ಖರೀದಿಸಿ ಕಲ್ಲು ಗಣಿಗಾರಿಕೆ, ಸಿಮೆಂಟ್ ಉತ್ಪಾದನಾ ಘಟಕ ಸ್ಥಾಪಿಸುವ ಕುರಿತು ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ, ಬೇಡಿಕೆಗಳನ್ನು ಕ್ರೋಢೀಕರಿಸಿ ಪರಿಸರ, ರೈತರು, ಸಾರ್ವಜನಿಕರ ಹಿತಾಸಕ್ತಿಗೆ ಪೂರಕವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು. ತಾಲ್ಲೂಕಿನ ರಾವೂರು ಗ್ರಾಮದ ಡಿವೈನ್ ಭರಹುತ್ ಫಂಕ್ಷನ್ ಹಾಲ್ನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯಿಂದ ನಡೆದ ಅಲ್ಟ್ರಾಟೆಕ್ …
Read More »ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ನಿಗಮಗಳಿಗೆ 5800 ಹೊಸ ಬಸ್ ಗಳ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 5800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಾಂತಿನಗರ ಕೆಎಸ್ಆರ್ಟಿಸಿ ಕೇಂದ್ರೀಯ ವಿಭಾಗ ಘಟಕ 2ರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪುನಶ್ಚೇಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ನಾಲ್ಕು ನಿಗಮಗಳಿಗೆ 5,800 ಹೊಸ ಬಸ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





