Breaking News

BigTv News

ಮಮದಾಪುರ ಉದ್ಯಾನಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೆಸರು ಇಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದ ಮೂರನೇ ಬೃಹತ್ ಕೆರೆ ವಿಜಯಪುರದ ಮಮದಾಪುರ ಕೆರೆ ಇಲ್ಲಿ ಒಟ್ಟು 2 ಲಕ್ಷ ಗಿಡಗಳನ್ನು ನೆಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಇನ್ನು ಇಲ್ಲಿನ ಮಮದಾಪುರ ಉದ್ಯಾನಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ರಾಜ್ಯ ಸರ್ಕಾರ ಇಟ್ಟಿದೆ ಎಂದು ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ ಮಾಹಿತಿ ನೀಡಿದರು. ವಿಜಯಪುರ ಜಿಲ್ಲೆಯ ಮಮದಾಪುರದಲ್ಲಿ ಇರುವ 1,494.38 ಎಕರೆ ವಿಸ್ತೀರ್ಣದ …

Read More »

ಕೃಷಿ ಸಂಸ್ಕರಣೆ ಯೋಜನೆಯಡಿ ರೊಟ್ಟಿ ಯಂತ್ರ ಸೇರಿ ವಿವಿಧ ಯಂತ್ರಗಳ ಖರೀದಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಯೋಜನೆಯಡಿ ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ ಗಾಣಗಳು ಸರ್ಕಾರ ಸಹಾಯಧನದಲ್ಲಿ ಲಭ್ಯವಿದ್ದು, ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರಾದ …

Read More »

ಹಾವೇರಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿ: ರೈತರಿಗೆ ಸೂಕ್ತ ಪರಿಹಾರ ನೀಡಲು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ ಮನೆಗಳಿಗೆ ನೀರು ನುಗ್ಗಿದೆ. ಒಂದು ಮಗು ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದೆ ಎಲ್ಲ ತಾಲೂಕುಗಳಲ್ಲಿ ಬೆಳೆ ನಾಶವಾಗಿದೆ ರಾಜ್ಯ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಎಕ್ಸ್ ಮಾಡಿರುವ ಅವರು, ನಿರಂತರ ಮಳೆಯಿಂದಾಗಿ ಮನೆಗಳು ಬಿದ್ದಿದ್ದು, ಮನೆ …

Read More »

ರಾಯಚೂರು ವಿವಿ ಮತ್ತು ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮಹರ್ಷಿ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು. ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು, …

Read More »

ಜಮ್ಮು ಕಾಶ್ಮೀರದ ಪ್ರಗತಿಗಾಗಿ ಕೇಂದ್ರ ಸರ್ಕಾರ ಒಮರ್ ಅಬ್ದುಲ್ಲಾ ಜತೆಗೂಡಿ ಕೆಲಸ ನಿರ್ವಹಿಸಲಿದೆ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಜತೆಗೂಡಿ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಜನರ ಸೇವೆ ಮಾಡುವ ಅವರ ಪ್ರಯತ್ನಕ್ಕೆ …

Read More »

2024 ರಲ್ಲಿ 129 ಮಿಲಿಯನ್ ಭಾರತೀಯರು ತೀವ್ರ ಬಡತನದಲ್ಲಿ ಬದುಕುತ್ತಿದ್ದಾರೆ: ವಿಶ್ವಬ್ಯಾಂಕ್ ವರದಿ

ನವದೆಹಲಿ: 2024 ರಲ್ಲಿ ಸುಮಾರು 129 ಮಿಲಿಯನ್ ಭಾರತೀಯರು ತೀವ್ರ ಬಡತನದಲ್ಲಿ ಬದುಕುತ್ತಿದ್ದಾರೆ ಎಂದು ವಿಶ್ವ ಬ್ಯಾಂಕ್ ವರದಿ ಬಹಿರಂಗಪಡಿಸಿದೆ. ಈ ಜನರು 2.15 ಮಿಲಿಯನ್ ಡಾಲರ್ (ಅಂದಾಜು 181 ರೂ.) ಗಿಂತ ಕಡಿಮೆ ಆದಾಯದಲ್ಲಿ ಬದುಕುತ್ತಿದ್ದಾರೆ ಎಂದು ವರದಿಯಾಗಿದೆ. ವಿಶೇಷವೆಂದರೆ, 1990 ರಲ್ಲಿ 431 ಮಿಲಿಯನ್ ಭಾರತೀಯರು ತೀವ್ರ ಬಡತನದಲ್ಲಿದ್ದರು ಆದಾಗ್ಯೂ, ದಿನಕ್ಕೆ 6.85 ಡಾಲರ್ (ಅಂದಾಜು 576 ರೂ.) ಹೆಚ್ಚಿನ ಬಡತನದ ಮಾನದಂಡವನ್ನು ಪರಿಗಣಿಸಿದರೆ, 1990 ಕ್ಕೆ …

Read More »

ಇಂದು ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ ವೈಭವ

ಮಡಿಕೇರಿ: ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷ ತುಲಾ ಲಗ್ನದಲ್ಲಿ ತೀರ್ಥೋದ್ಭವವಾಯಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದು, ಮೂರು ಬಾರಿ ಉಕ್ಕಿ ಬಂದ ನಂತರ ಅರ್ಚಕರು ನೆರೆದಿರುವ ಭಕ್ತರಿಗೆ ಬ್ರಹ್ಮ ಕುಂಡಿಕೆಯಿಂದ ತೀರ್ಥ ಪ್ರೋಕ್ಷಣೆ ಮಾಡಿದರು. ನಿಗದಿಯಂತೆ 7:40ಕ್ಕೆ ಸೂರ್ಯ ಕನ್ಯಾ ಲಗ್ನದಿಂದ ತುಲಾ ಲಗ್ನಕ್ಕೆ ಪ್ರವೇಶಿಸುತ್ತಿದ್ದಂತೆ ತೀರ್ಥೋದ್ಭವ ನೆರವೇರಿತು. ಬೆಳಿಗ್ಗೆ 6 ಗಂಟೆಯಿಂದಲೇ ನಿರಂತರವಾಗಿ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ …

Read More »

ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತದ ಆತಂಕ: ಗ್ರಾಮಸ್ಥರ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರು: ಈ ಭಾಗದ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯ ಸ್ಥಿತಿಯಲ್ಲಿದ್ದು, ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೂಚನೆ ನೀಡಿದೆ. ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ವಿಜ್ಞಾನಿಗಳ ತಂಡ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮಳೆಗಾಲದೊಳಗೆ ಈ ಗ್ರಾಮಗಳ ಜನರನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಾ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ …

Read More »

ವಿಜಯಪುರದ 1,495 ಎಕರೆ ಅರಣ್ಯವನ್ನು ಜೀವವೈವಿಧ್ಯ ಪರಂಪರೆಯ ತಾಣವೆಂದು ರಾಜ್ಯ ಸರ್ಕಾರ ಘೋಷಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಮಮದಾಪುರದ 1495 ಎಕರೆ ಮೀಸಲು ಅರಣ್ಯವನ್ನು ಜೀವವೈವಿಧ್ಯ ಪರಂಪರೆಯ ತಾಣವೆಂದು ರಾಜ್ಯ ಸರ್ಕಾರ ಘೋಷಿಸಿದ್ದು, ಹಲವಾರು ಜಾತಿಯ ಸಸ್ಯ ಮತ್ತು ಪ್ರಾಣಿಗಳಿಗೆ ನೆಲೆಯಾಗಿರುವ ಕುರುಚಲು ಅರಣ್ಯ ಭೂಮಿಯ ವೈಜ್ಞಾನಿಕ ನಿರ್ವಹಣೆಗೆ ವೇದಿಕೆ ಕಲ್ಪಿಸಿದೆ. ಈ ಹಿಂದೆ ವಿವಿಧ ಅಧಿಸೂಚಿತ ಅರಣ್ಯ ಪ್ರದೇಶಗಳಲ್ಲಿ ಘೋಷಿಸಲಾಗಿದ್ದ 1,494 ಎಕರೆ 38 ಗುಂಟೆ ಭೂಮಿಯನ್ನು ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆಯ ತಾಣ ಎಂದು ಘೋಷಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ …

Read More »

ಕೇಂದ್ರ ಸರ್ಕಾರದಿಂದ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಕಾಲಿಕವಾಗಿ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಘೋಷಿಸಿ ರೈತರಿಗೆ ಬಲ ತುಂಬಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ಮಾತನಾಡಿ, ಮುಂಗಾರು, ಹಿಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಪ್ರಧಾನಿ ಮೋದಿ ಅವರು ಅನ್ನದಾತರಿಗೆ ಬೆಳಕು ತೋರಿದ್ದಾರೆ ಎಂದು ಬಣ್ಣಿಸಿದ್ದಾರೆ. 2025-26ಕ್ಕೆ ಹಿಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ …

Read More »