Breaking News

BigTv News

ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್ ಎನ್ನುವಂತೆ 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡದವರು ಕನಿಷ್ಠ 10 ಸದಸ್ಯರು ಇರುವಂತ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ 1.50 ಸಬ್ಸಿಡಿ ಸಹಾಯಧನದೊಂದಿಗೆ 2 ಲಕ್ಷದವರೆಗೆ ಸಾಲ ಮತ್ತು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಘಟಕ ವೆಚ್ಚವಾಗಿ 2.50 ಲಕ್ಷವನ್ನು ಸಾಲ ಮತ್ತು ಸಹಾಯಧನವಾಗಿ ನೀಡಲಾಗುತ್ತದೆ. ಇದರಲ್ಲಿ 1.50 ಲಕ್ಷ ಸಹಾಯಧನವಾಗಿದ್ದರೇ, ರೂ.1 ಲಕ್ಷ …

Read More »

ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಶ್ರೀನಗರ: ಆರು ವರ್ಷಗಳ ನಂತರ ಕೇಂದ್ರಾಡಳಿತ ಪ್ರದೇಶವು ತನ್ನ ಮೊದಲ ಸರಕಾರವನ್ನು ಪಡೆದುಕೊಂಡಿದ್ದು, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ನೌಶೇರಾ ಕ್ಷೇತ್ರದಲ್ಲಿ ಜೆ & ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ರವೀಂದರ್ ರೈನಾ ಅವರನ್ನು ಸೋಲಿಸಿದ್ದ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಸುರೀಂದರ್ ಸಿಂಗ್ ಚೌಧರಿ ಅವರು ಉಪಮುಖ್ಯಮಂತ್ರಿಯಾಗಿ ಹೊಸ ಸರಕಾರದಲ್ಲಿ ಜಮ್ಮುವಿನ ಪ್ರಾತಿನಿಧ್ಯವನ್ನು ತೋರಿಸಿದ್ದಾರೆ. ಲೆಫ್ಟಿನೆಂಟ್ …

Read More »

ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ದೀಪಾವಳಿಗೆ ಮುಂಚಿತವಾಗಿ ರೈತರಿಗೆ ಗಮನಾರ್ಹ ಉತ್ತೇಜನ ನೀಡುವ ಸಲುವಾಗಿ, ಕೇಂದ್ರ ಸರ್ಕಾರವು ಪ್ರಮುಖ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಬುಧವಾರ ನಡೆದ ಕ್ಯಾಬಿನೆಟ್ ಸಭೆಯ ನಂತರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ನಿರ್ಧಾರವನ್ನು ಪ್ರಕಟಿಸಿದರು. ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ 150 ರೂ.ಗಳಿಂದ 2,275 ರೂ.ಗಳಿಂದ 2,425 ರೂ.ಗೆ ಹೆಚ್ಚಿಸಲಾಗಿದೆ. ಸಾಸಿವೆ 300 ರೂ.ಗಳ ಹೆಚ್ಚಳವನ್ನು ಕಂಡಿದ್ದು, …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು ಕಲಬುರಗಿ ನಡುವೆ ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಗೆ ಅನುಗುಣವಾಗಿ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಬೆಂಗಳೂರು ಕಲಬುರಗಿ ಎಕ್ಸ್‌ಪ್ರೆಸ್ ವಿಶೇಷ ರೈಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ನಿಂದ ಅಕ್ಟೋಬರ್ 30 ಮತ್ತು ನವೆಂಬರ್ 2, 2024 ರಂದು ರಾತ್ರಿ 9.15 ಕ್ಕೆ ಹೊರಟು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಅಡೋಣಿ, ಮಂತ್ರಾಲಯ ರಸ್ತೆ, ರಾಯಚೂರು, …

Read More »

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಶೇ.4.70 ರಷ್ಟು ಇಳಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರದಲ್ಲಿ 4.70ರಷ್ಟು ಇಳಿಕೆಯಾಗಿದ್ದು, ಎರಡು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಕಾರಣ ಕಳೆದ ಎರಡು ವಾರದಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹಾದಿಯಲ್ಲಿತ್ತು. ಉತ್ಪಾದನೆ ಮತ್ತು ಸಂಗ್ರಹಾಗಾರಗಳ ಮೇಲೆ ವಾಯು ದಾಳಿ ನಡೆಸುವುದಿಲ್ಲವೆಂದು ಇಸ್ರೇಲ್ ಘೋಷಿಸಿರುವುದಾಗಿ ವರದಿಯಾಗಿದೆ. ಹೀಗಾಗಿ ತೈಲಪೂರೈಕೆ ಸರಪಳಿಗೆ ಎದುರಾಗಿದ್ದ ಆತಂಕ ದೂರವಾಗಿದೆ. ಆಮದು ರಾಷ್ಟ್ರಗಳಿಂದ ಬೇಡಿಕೆ ಕಡಿಮೆಯಾಗಿದ್ದು, ಇದರ ಕಾರಣ ಕಚ್ಚಾ …

Read More »

ಕಲಬುರಗಿಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಕಲಬುರಗಿ: ನಗರವೂ ಸೇರಿದಂತೆ ಶಹಾಬಾದ್‌, ಚಿತ್ತಾಪುರ, ಸೇಡಂ, ಕಾಳಗಿ, ಅಫಜಲಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಸುಮಾರು ರಾತ್ರಿ 8 ಗಂಟೆಯಿಂದ ಆರಂಭವಾದ ಮಳೆಯೂ ಧಾರಾಕಾರವಾಗಿ ಸುರಿದಿದೆ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣವಿತ್ತು. ಆದರೆ ಕಲಬುರಗಿ ನಗರದಲ್ಲಿ ಬೆಳಿಗ್ಗೆ 11.10ರ ಸುಮಾರಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿದ್ದವು ಬೆಳಿಗ್ಗೆ 11.15 ಗಂಟೆ ಹೊತ್ತಿಗೆ ಆರಂಭವಾದ ಮಳೆ ಸುಮಾರು 50 ನಿಮಿಷಕ್ಕೂ ಹೆಚ್ಚು ಕಾಲ ಸುರಿಯಿತು. ಬೆಳಿಗ್ಗೆ ಗಾಳಿ, ಬಿರುಸಿನ ಮಳೆಗೆ …

Read More »

ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಇಂದು ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದು ಶೇಕಡ 3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ …

Read More »

ಕಿತ್ತೂರಿನಲ್ಲಿ ಅತ್ಯಾಧುನಿಕ ಥೀಮ್ ಪಾರ್ಕ್ ಶೀಘ್ರ ಅನುಷ್ಠಾನ

ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಸಂಸ್ಥಾನ, ರಾಣಿ ಚನ್ನಮ್ಮನ ಶೌರ್ಯ, ಸಾಹಸ, ಜೀವನ ಶೈಲಿ, ರಾಣಿ ಮತ್ತು ಸೇನಾನಿಗಳ ಹೋರಾಟದ ಕಥನವನ್ನು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಿತ್ತರಿಸುವ ಥೀಮ್ ಪಾರ್ಕ್ ಶೀಘ್ರ ಅನುಷ್ಠಾನಗೊಳ್ಳಲಿದೆ. ಇದಕ್ಕಾಗಿ ಕೋಟೆ ಆವರಣದೊಳಗಿರುವ ಸುಮಾರು ಏಳು ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಈಗಿನ ಯುಗದ ಪೀಳಿಗೆ ಅರಿಯುವ ಹಾಗೆ ಆಧುನಿಕ ತಂತ್ರಜ್ಞಾನದ ಈ ಥೀಮ್ ಪಾರ್ಕ್ ಯೋಜನೆ ಜಾರಿ ದೇಶದಲ್ಲಿಯೇ ಪ್ರಥಮ …

Read More »

ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ: ಸಾಂಕ್ರಾಮಿಕ ರೋಗ ಭೀತಿ

ಮುಳಗುಂದ: ಸಮೀಪದ ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಇಲ್ಲಿನ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದೆ ಕೊಳಚೆ ನೀರು ಮುಂದೆ ಸಾಗದೆ, ಅಲ್ಲೇ ನಿಂತು ದುರ್ನಾತ ಬೀರುತ್ತಿದೆ. ಕೆಲವೆಡೆ ಸಿಸಿ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಗ್ರಾಮ ಪಂಚಾಯಿತಿ ಹತ್ತಿರದ ಚರಂಡಿಯಲ್ಲಿ ಹುಲ್ಲು ಬೆಳೆದು ಹಲವು ತಿಂಗಳೇ ಆದರೂ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಮುಂದಾಗಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ …

Read More »

ಶಿವಮೊಗ್ಗದಲ್ಲಿ ಅ.18 ರಿಂದ ಕೃಷಿ ಮತ್ತು ತೋಟಗಾರಿಕಾ ಮೇಳ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2024ನ್ನು ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಎಂಬ ಧೈಯವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು. ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾತನಾಡಿದ ಅವರು …

Read More »