ಮುಂಬೈ: ಲೋಖಂಡವಾಲಾ ಕಾಂಪ್ಲೆಕ್ಸ್ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯಿಂದ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ …
Read More »ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ ಪಾಟೀಲ್ ಆರ್ಥಿಕ ನೆರವು
ವಿಜಯಪುರ: ನೀಟ್ ಪರೀಕ್ಷೆ ಉತ್ತೀರ್ಣರಾಗಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟ್ ಪಡೆದರೂ ಶುಲ್ಕ ಭರಿಸಲಾಗದೆ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಿರುವ ಸಂಪೂರ್ಣ ಆರ್ಥಿಕ ನೆರವು ನೀಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮುಂದಾಗಿದ್ದಾರೆ. ವಿಜಯಪುರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ತಿಕೋಟಾ ತಾಲ್ಲೂಕಿನ ಬಾಬಾನಗರದ ವಿಶಾಲ ರಾಯಗೊಂಡ ಕೋರೆಗಾಂವ, ಅರಕೇರಿಯ ಕರಣ ಪಂಡಿತ ಸಿಂಧೆ …
Read More »ನವಿಲುತೀರ್ಥದಲ್ಲಿ ನವೀಕೃತ ಪ್ರವಾಸಿ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸವದತ್ತಿ : ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು. ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು.
Read More »ಪ್ರವಾಹದಿಂದ ಹಾನಿಗೊಳಗಾದ ರೈತರ ಭೂಮಿಯ ದಾಖಲೆ ಸಲ್ಲಿಕೆ ಅವಧಿ ವಿಸ್ತರಣೆಗೆ ಮನವಿ
ನವಲಗುಂದ: ಬೆಣ್ಣೆಹಳ್ಳ ಹಾಗೂ ತುಪ್ಪರಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ರೈತರ ಭೂಮಿಯ ದಾಖಲೆಗಳನ್ನು ಕೃಷಿ ಇಲಾಖೆಗೆ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ತಹಶೀಲ್ದಾರ್ ಕಚೇರಿ ಶಿರಸ್ತೇದಾರ ಕೃಷ್ಣ ಅರೇರ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಗಂಗಪ್ಪ ಮನಮಿ ಮಾತನಾಡಿ, ಪ್ರವಾಹ ಹಾಗೂ ಅತಿವೃಷ್ಟಿಯಾದಾಗ 72 ಗಂಟೆಯ ಒಳಗೆ ದಾಖಲೆ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಕೃಷಿ ಇಲಾಖೆ ರೈತರಿಗೆ ಸಕಾಲದಲ್ಲಿ ತಿಳಿಸಿಲ್ಲ. ಅ.15 ಕೊನೆಯ ದಿನ ಎಂದು ಹೇಳಲಾಗಿದೆ. …
Read More »ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವು
ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದಾರೆ ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ …
Read More »ಹಿಂಗಾರು ಮಳೆಗೆ ನಲುಗಿದ ರಾಜ್ಯ ರಾಜಧಾನಿ ಬೆಂಗಳೂರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಿಂಗಾರು ಮಳೆಗೆ ಅಕ್ಷರಶಃ ನಲುಗಿದ್ದು, ನಿನ್ನೆ ಸೋಮವಾರದಿಂದ ಮಂಗಳವಾರ ಬೆಳಗ್ಗೆವರೆಗೆ ಸುರಿದ ಧಾರಾಕಾರ ಮಳೆಗೆ ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ. ಐಎಂಡಿ ಹೇಳುವ ಪ್ರಕಾರ, ರಾತ್ರಿಯಿಂದ ಈವರೆಗೆ ಬರೋಬ್ಬರಿ 16.2 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದ ವಿವಿಧಡೆ ಮಳೆಯಿಂದಾಗಿ ಅನೇಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಬಿಬಿಎಂಪಿ ಅಲರ್ಟ್ ಆಗಿದೆ. ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನ ಏರ್ಪೋರ್ಟ್ ಪ್ರದೇಶದಲ್ಲಿ 10.5 ಮಿ.ಮೀ. ಹಾಗೂ …
Read More »ವಯನಾಡು ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ: ಕಾಂಗ್ರೆಸ್ ಘೋಷಣೆ
ನವದೆಹಲಿ: ಭಾರತದ ಚುನಾವಣಾ ಆಯೋಗವು (ಇಸಿಐ) ಇಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್ನ ವಿಧಾನಸಭಾ ಚುನಾವಣೆಯ ಜತೆಗೆ 2 ಲೋಕಸಭಾ ಸ್ಥಾನಗಳ ಉಪಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ. 47 ವಿಧಾನಸಭಾ ಕ್ಷೇತ್ರಗಳೊಂದಿಗೆ ಉಪಚುನಾವಣೆ ನಡೆಸಲಾಗುವ ಏಕೈಕ ಲೋಕಸಭಾ ಕ್ಷೇತ್ರ ವಯನಾಡು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ …
Read More »ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವ ಭರವಸೆ ಇದೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬೇಡಿಕೆ, ಹೋರಾಟ ಹಲವು ವರ್ಷಗಳಿಂದ ಮುಂದುವರಿದಿದ್ದು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು ಈ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹಕಚೇರಿಯಲ್ಲಿ ಅ. 18ರಂದು ಸಭೆ ಕರೆದಿದ್ದಾರೆ, ಇದುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಬೇಡಿಕೆಗೆ ಸಮರ್ಪಕವಾಗಿ ಸ್ಪಂದಿಸಿಲ್ಲ. ಅವರು 2 …
Read More »ನವಿಲುತೀರ್ಥ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸವದತ್ತಿ: ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಜಲಾಶಯಗಳು, ಕೆರೆಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಹರ್ಷದ ಹೊನಲು ಮೂಡಿದೆ ಮಲಪ್ರಭಾ ಜಲಾಶಯದಲ್ಲಿ ರೈತರ ಅಗತ್ಯಕ್ಕೆ ತಕಷ್ಟು ನೀರು ಲಭ್ಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ …
Read More »ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಸಿಎಂ ಸೂಚನೆ
ಬೆಂಗಳೂರು: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಆದೇಶ ಹೊರಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಸಮಸ್ಯೆ ಕುರಿತು ಸಿಎಂ ಸಭೆ ನಡೆಸಿದರು. ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್ಟಿ ಸಮುದಾಯದ ಎಮ್ಎಲ್ಎಗಳು, ಸ್ವಾಮೀಜಿಗಳು ಸಮಸ್ಯೆ ಬಗ್ಗೆ ಮನವಿ ಮಾಡಿದ್ದರು. ವಾಲ್ಮೀಕಿ ನಿಗಮದ ಅನುದಾನವನ್ನು ಕಡಿತ ಮಾಡಬಾರದು ಎಂದು ಮನವಿ ಮಾಡಿದ್ದರು. ಎಸ್ಟಿ ಸಮುದಾಯದಲ್ಲಿ ಜಾತಿ ಪ್ರಮಾಣಪತ್ರವನ್ನು ಕೆಲವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





