Breaking News

BigTv News

ಕಿತ್ತೂರಿನಲ್ಲಿ ಅತ್ಯಾಧುನಿಕ ಥೀಮ್ ಪಾರ್ಕ್ ಶೀಘ್ರ ಅನುಷ್ಠಾನ

ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಸಂಸ್ಥಾನ, ರಾಣಿ ಚನ್ನಮ್ಮನ ಶೌರ್ಯ, ಸಾಹಸ, ಜೀವನ ಶೈಲಿ, ರಾಣಿ ಮತ್ತು ಸೇನಾನಿಗಳ ಹೋರಾಟದ ಕಥನವನ್ನು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಿತ್ತರಿಸುವ ಥೀಮ್ ಪಾರ್ಕ್ ಶೀಘ್ರ ಅನುಷ್ಠಾನಗೊಳ್ಳಲಿದೆ. ಇದಕ್ಕಾಗಿ ಕೋಟೆ ಆವರಣದೊಳಗಿರುವ ಸುಮಾರು ಏಳು ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಈಗಿನ ಯುಗದ ಪೀಳಿಗೆ ಅರಿಯುವ ಹಾಗೆ ಆಧುನಿಕ ತಂತ್ರಜ್ಞಾನದ ಈ ಥೀಮ್ ಪಾರ್ಕ್ ಯೋಜನೆ ಜಾರಿ ದೇಶದಲ್ಲಿಯೇ ಪ್ರಥಮ …

Read More »

ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ: ಸಾಂಕ್ರಾಮಿಕ ರೋಗ ಭೀತಿ

ಮುಳಗುಂದ: ಸಮೀಪದ ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಇಲ್ಲಿನ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದೆ ಕೊಳಚೆ ನೀರು ಮುಂದೆ ಸಾಗದೆ, ಅಲ್ಲೇ ನಿಂತು ದುರ್ನಾತ ಬೀರುತ್ತಿದೆ. ಕೆಲವೆಡೆ ಸಿಸಿ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಗ್ರಾಮ ಪಂಚಾಯಿತಿ ಹತ್ತಿರದ ಚರಂಡಿಯಲ್ಲಿ ಹುಲ್ಲು ಬೆಳೆದು ಹಲವು ತಿಂಗಳೇ ಆದರೂ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಮುಂದಾಗಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ …

Read More »

ಶಿವಮೊಗ್ಗದಲ್ಲಿ ಅ.18 ರಿಂದ ಕೃಷಿ ಮತ್ತು ತೋಟಗಾರಿಕಾ ಮೇಳ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2024ನ್ನು ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಎಂಬ ಧೈಯವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು. ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾತನಾಡಿದ ಅವರು …

Read More »

ಮುಂಬೈನಲ್ಲಿ ಅಗ್ನಿ ಅವಘಡ: ಮೂವರ ಸಾವು

ಮುಂಬೈ: ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯಿಂದ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ …

Read More »

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ ಪಾಟೀಲ್ ಆರ್ಥಿಕ ನೆರವು

ವಿಜಯಪುರ: ನೀಟ್ ಪರೀಕ್ಷೆ ಉತ್ತೀರ್ಣರಾಗಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟ್‌ ಪಡೆದರೂ ಶುಲ್ಕ ಭರಿಸಲಾಗದೆ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಿರುವ ಸಂಪೂರ್ಣ ಆರ್ಥಿಕ ನೆರವು ನೀಡಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮುಂದಾಗಿದ್ದಾರೆ. ವಿಜಯಪುರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ತಿಕೋಟಾ ತಾಲ್ಲೂಕಿನ ಬಾಬಾನಗರದ ವಿಶಾಲ ರಾಯಗೊಂಡ ಕೋರೆಗಾಂವ, ಅರಕೇರಿಯ ಕರಣ ಪಂಡಿತ ಸಿಂಧೆ …

Read More »

ನವಿಲುತೀರ್ಥದಲ್ಲಿ ನವೀಕೃತ ಪ್ರವಾಸಿ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸವದತ್ತಿ : ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು. ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು.

Read More »

ಪ್ರವಾಹದಿಂದ ಹಾನಿಗೊಳಗಾದ ರೈತರ ಭೂಮಿಯ ದಾಖಲೆ ಸಲ್ಲಿಕೆ ಅವಧಿ ವಿಸ್ತರಣೆಗೆ ಮನವಿ

ನವಲಗುಂದ: ಬೆಣ್ಣೆಹಳ್ಳ ಹಾಗೂ ತುಪ್ಪರಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ರೈತರ ಭೂಮಿಯ ದಾಖಲೆಗಳನ್ನು ಕೃಷಿ ಇಲಾಖೆಗೆ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ತಹಶೀಲ್ದಾರ್ ಕಚೇರಿ ಶಿರಸ್ತೇದಾರ ಕೃಷ್ಣ ಅರೇರ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಗಂಗಪ್ಪ ಮನಮಿ ಮಾತನಾಡಿ, ಪ್ರವಾಹ ಹಾಗೂ ಅತಿವೃಷ್ಟಿಯಾದಾಗ 72 ಗಂಟೆಯ ಒಳಗೆ ದಾಖಲೆ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಕೃಷಿ ಇಲಾಖೆ ರೈತರಿಗೆ ಸಕಾಲದಲ್ಲಿ ತಿಳಿಸಿಲ್ಲ. ಅ.15 ಕೊನೆಯ ದಿನ ಎಂದು ಹೇಳಲಾಗಿದೆ. …

Read More »

ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವು

ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದಾರೆ ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ …

Read More »

ಹಿಂಗಾರು ಮಳೆಗೆ ನಲುಗಿದ ರಾಜ್ಯ ರಾಜಧಾನಿ ಬೆಂಗಳೂರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಿಂಗಾರು ಮಳೆಗೆ ಅಕ್ಷರಶಃ ನಲುಗಿದ್ದು, ನಿನ್ನೆ ಸೋಮವಾರದಿಂದ ಮಂಗಳವಾರ ಬೆಳಗ್ಗೆವರೆಗೆ ಸುರಿದ ಧಾರಾಕಾರ ಮಳೆಗೆ ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ. ಐಎಂಡಿ ಹೇಳುವ ಪ್ರಕಾರ, ರಾತ್ರಿಯಿಂದ ಈವರೆಗೆ ಬರೋಬ್ಬರಿ 16.2 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ನಗರದ ವಿವಿಧಡೆ ಮಳೆಯಿಂದಾಗಿ ಅನೇಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಬಿಬಿಎಂಪಿ ಅಲರ್ಟ್ ಆಗಿದೆ. ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನ ಏರ್‌ಪೋರ್ಟ್ ಪ್ರದೇಶದಲ್ಲಿ 10.5 ಮಿ.ಮೀ. ಹಾಗೂ …

Read More »

ವಯನಾಡು ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ: ಕಾಂಗ್ರೆಸ್ ಘೋಷಣೆ

ನವದೆಹಲಿ: ಭಾರತದ ಚುನಾವಣಾ ಆಯೋಗವು (ಇಸಿಐ) ಇಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ಜತೆಗೆ 2 ಲೋಕಸಭಾ ಸ್ಥಾನಗಳ ಉಪಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ. 47 ವಿಧಾನಸಭಾ ಕ್ಷೇತ್ರಗಳೊಂದಿಗೆ ಉಪಚುನಾವಣೆ ನಡೆಸಲಾಗುವ ಏಕೈಕ ಲೋಕಸಭಾ ಕ್ಷೇತ್ರ ವಯನಾಡು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ …

Read More »