Breaking News

BigTv News

ಸೇನಾ ಬಳಕೆಗೆ ಭಾರತದ ಗಡಿಯಲ್ಲಿ ಚೀನಾ ಹೊಸ ವಸಾಹತು ನಿರ್ಮಾಣ

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷದ ಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನಗಳು ನಡೆಯುತ್ತಿರುವಾಗಲೇ, ಗಡಿಯಲ್ಲಿರುವ ಪ್ಯಾಂಗಾಂಗ್‌ ಲೇಕ್‌ ಬಳಿ ಚೀನಾ ಹೊಸದಾಗಿ ಸೇನಾ ಬಳಕೆಗೆ ವಸಾಹತು ನಿರ್ಮಾಣ ಮಾಡುತ್ತಿದೆ. 2020ರಲ್ಲಿ ಚೀನಾ ಮತ್ತು ಭಾರತ ನಡುವೆ ಸಂಭವಿಸಿದ ಗಾಲ್ವಾನ್‌ ಸಂಘರ್ಷದ ಸ್ಥಳದಿಂದ 38 ಕಿ.ಮೀ.ದೂರದಲ್ಲಿ ಈ ವಸಾಹತು ನಿರ್ಮಾಣವಾಗುತ್ತಿದೆ. ಪ್ಯಾಂಗಾಂಗ್‌ ತ್ಸೋ ಲೇಕ್‌ ಜಗತ್ತಿನಲ್ಲೇ ಎತ್ತರ ಪ್ರದೇಶದಲ್ಲಿರುವ ಉಪ್ಪು ನೀರಿನ ಸರೋವರವಾಗಿದೆ. ಚೀನಾ ವಸಾಹತು ನಿರ್ಮಾಣ ಚಿತ್ರಗಳನ್ನು ಉಪಗ್ರಹದ ಮೂಲಕ …

Read More »

ಅ.25 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು: ಅಕ್ಟೋಬರ್ 25ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದು ಅ. 25 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ …

Read More »

ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ 2,200 ಕೋಟಿ ರೂ. ಮಂಜೂರು: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಅಮೆರಿಕಾವನ್ನು ಮೀರಿಸುವಂತಹ ಹೆದ್ದಾರಿಗಳನ್ನು ಭಾರತದಲ್ಲಿ ನಿರ್ಮಾಣ ಮಾಡುವುದಾಗಿ ಪಣತೊಟ್ಟಿರುವ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು, ಈಗ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಿಗೆ ಭಾರೀ ಮೊತ್ತವನ್ನು ಮಂಜೂರು ಮಾಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಅವರು ಕೈಗೆತ್ತಿಗೊಂಡಿರುವ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ದಕ್ಷಿಣ ಭಾರತದ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅನೇಕ ಯೋಜನೆಗಳಿಗೆ 2,200 ಕೋಟಿ ರೂ. ಮಂಜೂರು ಮಾಡುವುದಾಗಿ …

Read More »

ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗೌರವಧನ ಬಿಡುಗಡೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಬೇಕಿದ್ದ ಮೂರು ತಿಂಗಳ ಗೌರವಧನದ ಹಿಂಬಾಕಿ ಮತ್ತು ಅಕ್ಟೋಬರ್‌ ತಿಂಗಳ ಗೌರವಧನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಿಡುಗಡೆಗೊಳಿಸಿದೆ. ಜೂನ್‌, ಆಗಸ್ಟ್‌, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳ ಗೌರವಧನಕ್ಕಾಗಿ ₹452 ಕೋಟಿ ಬಿಡುಗಡೆ ಮಾಡಿದೆ. ಜೊತೆಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದ 31 ಜಿಲ್ಲೆಗಳ 204 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಿಬ್ಬಂದಿಯ ವೇತನ, ಬಾಹ್ಯಮೂಲ, ದಿನಗೂಲಿ ಸಿಬ್ಬಂದಿಯ ಸೆಪ್ಟೆಂಬರ್‌ ಮತ್ತು …

Read More »

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಅ.21 ರಂದು ಸಚಿವ ಪರಮೇಶ್ವರ ನೇತೃತ್ವದಲ್ಲಿ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಅಕ್ಟೋಬರ್ 21ರಂದು ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಪರಮೇಶ್ವರ್ ಅವರು ದಲಿತ ಮುಖಂಡರಾಗಿದ್ದು, ಅ. 21 ರಂದು ವಿಧಾನಸೌಧದಲ್ಲಿ ಎಸ್‌ಸಿ ಸಮುದಾಯದ ಶಾಸಕರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಆಹಾರ ಮತ್ತು …

Read More »

ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ನಿಂತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ರಾಜು ಕಾಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಆದರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಕಾಗೆ ಅವರ ಹೇಳಿಕೆ ನಾನು ನೋಡಿಲ್ಲ. ನಮ್ಮ ಸರ್ಕಾರ ಬಂದಾಗಿನಿಂದ ಬರಕ್ಕೆ …

Read More »

ಸಂಡೂರಿನ ನಾರಿಹಳ್ಳ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಬಳ್ಳಾರಿ: ಸಂಡೂರಿನಲ್ಲಿರುವ ನಾರಿಹಳ್ಳ ಕಿರು ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಕಿರು ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. 0.810 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯವನ್ನು 1972 ರಲ್ಲಿ‌ ಲೋಕಾರ್ಪಣೆ ಮಾಡಲಾಗಿತ್ತು. ಆಗಿನ ಸಿಎಂ ದೇವರಾಜು ಅರಸು ಅವರು ಜಲಾಶಯವನ್ನು ಉದ್ಘಾಟಿಸಿದ್ದರು. 615 ಕಿಮೀ ವಿಸ್ತೀರ್ಣ ಹೊಂದಿರುವ ಕಿರು ಜಲಾಶಯ ಸಂಡೂರು ಪಟ್ಟಣ ಸೇರಿ ವಿವಿಧ ಗ್ರಾಮಗಳ ಕುಡಿಯುವ ನೀರಿಗೆ ಆಧಾರವಾಗಿದೆ ಇದು ಐದು ಕ್ರಸ್ಟ್‌ ಗೇಟ್‌ಗಳನ್ನ ಹೊಂದಿದೆ. …

Read More »

ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್: ಪರಮೇಶ್ವರ ಅಚ್ಚರಿ ಹೇಳಿಕೆ

ಬೆಂಗಳೂರು: ಮುಡಾ ಹಗರಣ ಆರೋಪ ತೀವ್ರಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಸ್ ನೀಡಿದ್ದರು. ಅದರ ಬೆನ್ನಲ್ಲೇ ಕೆಐಎಡಿಬಿ ಭೂಮಿ ಹಂಚಿಕೆಯಲ್ಲಿಯೂ ಅಕ್ರಮದ ಆರೋಪ ಕೇಳಿಬಂದಿತ್ತು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಭೂಮಿ ವಾಪಸ್ ಮಾಡಿದ್ದು, ಪರಮೇಶ್ವರ್‌ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿನ ಮಾಧ್ಯಮಗಳ ಜೊತೆಗೆ ಮಾತನಾಡಿ, ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ …

Read More »

ಮಲೆನಾಡು ಭಾಗದಲ್ಲಿ ಹೆಚ್ಚಾದ ಮಂಗಗಳ ಹಾವಳಿ: ಹೈರಾಣಾದ ರೈತರು

ಸಾಗರ: ಬೆಳೆ ಹಾನಿ ಮಾಡುವ ಮಂಗಗಳನ್ನು ಹಿಡಿಯಲು ಮುಂದಾದರೆ ಅದು ವನ್ಯಜೀವಿ ಸಂರಕ್ಷಣೆ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ. ಆದ ನಷ್ಟಕ್ಕೆ ಕಾಯ್ದೆ ಪ್ರಕಾರವೇ ಬೆಳೆ ಪರಿಹಾರ ಕಲ್ಪಿಸಿ ಅಂದರೆ ಮಾತ್ರ ಅಧಿಕಾರಿಗಳಿಂದ ತೀವ್ರ ಮೌನ, ಅರಣ್ಯ ಇಲಾಖೆಯ ಈ ಇಬ್ಬಂದಿತನ ಮಲೆನಾಡಿನ ರೈತರನ್ನು ಹೈರಾಣಾಗಿಸಿದೆ. ಮಲೆನಾಡು ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಂಗ ಹಾಗೂ ಮುಸಿಯಾಗಳ ಹಾವಳಿ ವಿಪರೀತವಾಗಿದೆ. ಬೆಳೆ ಹಾನಿ ಮಾಡಿ ರೈತ ಸಮೂಹಕ್ಕೆ ತೊಂದರೆ ಕೊಡುವ ಜೊತೆಗೆ …

Read More »

ಸಾಲು ಸಾಲು ರಜೆ: ಬಂಡೀಪುರ ಸಫಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರ ಆಗಮನ

ಗುಂಡ್ಲುಪೇಟೆ: ನಾಡಹಬ್ಬ ದಸರಾ ಹಾಗೂ ವಾರಾಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ಪ್ರವಾಸಿಗರು ಬಂಡಿಪುರಕ್ಕೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಸಫಾರಿ ಅವರಣ ತುಂಬಿ ತುಳುಕುತ್ತಿತ್ತು. ತಾಲ್ಲೂಕಿನಲ್ಲಿ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಫಾರಿಗೆ ಅವಕಾಶವಿದ್ದು …

Read More »