ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ತಾಯಿ ಹಾಗೂ ಮಗಳು ಇಬ್ಬರೂ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ರಾಯಚೂರು ತಾಲೂಕಿನ ಬಿ.ಯದ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಸುಜಾತಾ (27 ಹಾಗೂ ಮಗಳು ಶ್ರಾವಣಿ (10) ಮೃತರು. ತಾಯಿ ಶವ ಪತ್ತೆಯಾಗಿದ್ದು, ಮಗಳ ಶವಕ್ಕಾಗಿ ಶೋಧ …
Read More »ಗೃಹಲಕ್ಷ್ಮೀ ಹಣದಿಂದ ಗ್ರಂಥಾಲಯ ನಿರ್ಮಾಣ ಮಾಡಿದ ಮಹಿಳೆ
ಬೆಂಗಳೂರು: ಗೃಹಲಕ್ಷ್ಮೀ ಹಣದಿಂದ ಟಿವಿ, ಫ್ರಿಜ್ ತೆಗೆದುಕೊಂಡಿದ್ದು ಸುದ್ದಿಯಾಗಿತ್ತು. ಇತ್ತೀಚೆಗೆ ಉತ್ತರ ಕರ್ನಾಟಕದ ಮಹಿಳೆಯೊಬ್ಬಳು ಇಡೀ ಊರಿಗೆ ಹೋಳಿಗೆ ಊಟವ್ನೂ ಹಾಕಿಸಿದ್ದರು. ಎರಡು ದಿನಗಳ ಹಿಂದೆ ಮಹಿಳೆಯೊಬ್ಬಳು ತನ್ನ ಮಗನಿಗೆ ಬೈಕ್ಅನ್ನು ಗೃಹಲಕ್ಷ್ಮೀ ಹಣದಲ್ಲಿ ಖರೀದಿ ಮಾಡಿದ್ದರು. ಈಗ ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಈ …
Read More »ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 5,267 ಹುದ್ದೆಗಳ ನೇಮಕಾತಿ: ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ …
Read More »ಸವದತ್ತಿಯ ಅಭಿವೃದ್ದಿಯ ಪರ್ವಕಾಲ ಈಗ ಆರಂಭವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಭಾಷೆ, ಗಡಿಗಳನ್ನು ಮೀರಿ ನಿಂತಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಕೊರಗು ನಮ್ಮೆಲ್ಲರಲ್ಲಿದೆ. ಆದರೆ ಈ ಕಾಯುವಿಕೆಗೆ ಈಗ ಅಂತ್ಯಕಾಲ ಬಂದಿದೆ ಅಭಿವೃದ್ಧಿಯ ಪರ್ವಕಾಲ ಈಗ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸವದತ್ತಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನವರ ಚಿಂತನೆ ಅಳವಡಿಸಿಕೊಂಡಿದ್ದಾರೆ, …
Read More »ಇಂದು ಯಲ್ಲಮ್ಮನಗುಡ್ಡಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಸವದತ್ತಿ: ತಾಲ್ಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ಮಿಸಿರುವ ವಿವಿಧ ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಯಲ್ಲಮ್ಮನಗುಡ್ಡಕ್ಕೆ ಆಗಮಿಸುತ್ತಿದ್ದು, ಶನಿವಾರ ತಾಲ್ಲೂಕು ಆಡಳಿತ ಭರದ ಸಿದ್ಧತೆ ನಡೆಸಿತು. ವಸತಿ ಸಂಕೀರ್ಣ, ತಂಗುದಾಣ, ಶೌಚಾಲಯ ಸೇರಿದಂತೆ ವಿವಿಧ ಕಟ್ಟಡಗಳ ಲೋಕಾರ್ಪಣೆ ನಡೆಯಲಿದೆ. ಯಲ್ಲಮ್ಮನಗುಡ್ಡದ ಬಸ್ ನಿಲ್ದಾಣದಲ್ಲಿ ಭವ್ಯ ವೇದಿಕೆ ನಿರ್ಮಿಸಲಾಗಿದೆ. ದೇವಿಯ ದರ್ಶನಕ್ಕೆ ಆಗಮಿಸುವ ಸಿದ್ದರಾಮಯ್ಯ ಅವರನ್ನು ಮಂಗಳವಾದ್ಯ ಹಾಗೂ ವೇದಘೋಷಗಳ ಮೂಲಕ ಸ್ವಾಗತಿಸಲಾಗುವುದು. ನಂತರ …
Read More »ಒಳ ಮೀಸಲಾತಿ ಜಾರಿಗೆ ಸರ್ಕಾರಕ್ಕೆ ಸೂಚಿಸಲು ಮಾದಿಗ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ
ಕಲಬುರಗಿ : ಒಳ ಮೀಸಲಾತಿ ಸಂಬಂಧ ಇಂದು ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟವು ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಳಮಿಸಲಾತಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಮಾದಿಗರ ಒಕ್ಕೂಟವು ಮನವಿ ಮಾಡಿದೆ. ಒಳ ಮೀಸಲಾತಿ ಜಾರಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಲಾಯಿತು. ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ …
Read More »ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಯೋಜನೆಗಳನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನ
ಬೆಂಗಳೂರು: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ …
Read More »ಮೈಸೂರು ದಸರಾ: ನಂದಿಪೂಜೆ ನೆರವೇರಿಸಿದ ಸಿಎಂ, ಡಿಸಿಎಂ
ಮೈಸೂರು: ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೂ ಮುನ್ನ ನಂದಿ ಪೂಜೆ ನೆರವೇರಿಸಲಾಯಿತು, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಹಾಗೂ ಶಾಸಕರೊಂದಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಲ್ಲಿ ದಸರಾ ಹಬ್ಬದ ಭಾಗವಾಗಿ ಶನಿವಾರ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಬಾರಿ ಕರ್ನಾಟಕದಲ್ಲಿ ಮಳೆ ಉತ್ತಮವಾಗಿ ಜಲಾಶಯಗಳು ತುಂಬಿವೆ. ಉತ್ತಮ ಫಸಲು ಬಂದು ಜನರ ಜೀವನ ಇನ್ನಷ್ಟು ಸುಭಿಕ್ಷವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರು …
Read More »ಕೊಪ್ಪಳದ ಹಿರೇಹಳ್ಳಕ್ಕೆ ಹಾರಿದ ಮಹಿಳೆಯ ರಕ್ಷಣೆ
ಕೊಪ್ಪಳ: ಹಿರೇಹಳ್ಳಕ್ಕೆ ಹಾರಿ ಮಹಿಳೆಯನ್ನು ಗ್ರಾಮದ ಯುವಕರು ರಕ್ಷಿಸಿರುವ ಘಟನೆ ನಗರದ ಭಾಗ್ಯನಗರದಲ್ಲಿ ಶನಿವಾರ ನಡೆದಿದೆ. ಹಳ್ಳಕ್ಕೆ ಹಾರಿದ ಮಹಿಳೆಯನ್ನು ತಾಲೂಕಿನ ಓಜನಹಳ್ಳಿ ಗ್ರಾಮದ ಭರಮಮ್ಮ ಮಡಿವಾಳರ್ ಎಂದು ಗುರುತಿಸಲಾಗಿದೆ. ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿರುವ ಭರಮಮ್ಮ ಕಳೆದೊಂದು ವಾರದಿಂದಲೂ ಭಾಗ್ಯನಗರ ಸಮೀಪದಲ್ಲಿ ಹಿರೇಹಳ್ಳದ ದಡದಲ್ಲಿರುವ ಕರಿಬಸವೇಶ್ವರ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದರು. ಶನಿವಾರ ತಡರಾತ್ರಿಯಿಂದಲೇ ಹಿರೇಹಳ್ಳ ಜಲಾಶಯದಿಂದ ಹಳ್ಳಕ್ಕೆ ನೀರು ಬಿಡುಗಡೆ ಮಾಡಿದ್ದು, ಬೆಳಗ್ಗೆ ಹೊತ್ತಿಗೆ ಹಳ್ಳದ ಎರಡು ದಂಡೆಯ ಮೇಲೆ ನೀರು …
Read More »50 ವರ್ಷಗಳ ಬಳಿಕ ಸಹರಾ ಮರಭೂಮಿಯಲ್ಲಿ ಭಾರೀ ಪ್ರವಾಹ
ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದ್ದು, ಅಚ್ಚರಿಯಾದರೂ ಇದು ಸತ್ಯವಾಗಿದೆ. ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ. ಇನ್ನು ಆಗ್ನೇಯ ಮೊರಾಕೊದಲ್ಲಿ ಕಳೆದ ಎರಡು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





