ಉತ್ತರಕಾಶಿ: ಚಳಿಗಾಲದ ಪ್ರಯುಕ್ತ ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ನವೆಂಬರ್ 2 ಮತ್ತು 3 ರಂದು ಮುಚ್ಚಲಾಗುವುದು ಎಂದು ದೇವಸ್ಥಾನ ಮೂಲಗಳು ಹೇಳಿವೆ. ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್ಧಾಮ್ ಎಂದೇ ಪ್ರಸಿದ್ದವಾಗಿರುವ ಈ ದೇಗುಗಳನ್ನು ಚಳಿಗಾಳದಲ್ಲಿ ಮುಚ್ಚಲಾಗುತ್ತದೆ. ನವೆಂಬರ್ 2ರಂದು ಮಧ್ಯಾಹ್ನ 12.14ಕ್ಕೆ ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುವುದು ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಸುರೇಶ್ ಸೇಮ್ವಾಲ್ ತಿಳಿಸಿದ್ದಾರೆ. ನವೆಂಬರ್ 3ರಂದು ಯಮುನೋತ್ರಿ ದೇಗುಲದ ದ್ವಾರಗಳನ್ನು ಮುಚ್ಚಲಾಗುವುದು …
Read More »ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್ ಗೆ ವರ್ಗಾವಣೆ: ಸಚಿವ ಮುನಿಯಪ್ಪ
ಕೋಲಾರ: ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ …
Read More »ರಾಜ್ಯದ ಗ್ರಾಮ ಪಂಚಾಯತಿಯ 2,166 ಪಿಡಿಒಗಳು ಮೇಲ್ದರ್ಜೆಗೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. …
Read More »ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ತೆಲಂಗಾಣದ ಡಿಎಸ್ಪಿಯಾಗಿ ಅಧಿಕಾರ ಸ್ವೀಕಾರ
ಹೈದರಾಬಾದ್ : ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರಿಗೆ ಶುಕ್ರವಾರ ವರದಿ ಮಾಡಿದ ನಂತರ ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ಸ್ವೀಕರಿಸಿದರು. ಮೊಹಮ್ಮದ್ ಸಿರಾಜ್ ಗೆ ಪ್ರತಿಷ್ಠಿತ ಗ್ರೂಪ್ -1 ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘೋಷಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿರಾಜ್ ಇಂದು ತನ್ನ ಕರ್ತವ್ಯಗಳನ್ನು ವಹಿಸಿಕೊಂಡಿದ್ದರಿಂದ ಭರವಸೆ ಈಡೇರಿದೆ. ಇದಕ್ಕೂ ಮುನ್ನ, ರೇವಂತ್ ರೆಡ್ಡಿ ಅವರು …
Read More »ಫೈರಿಂಗ್ ಅಭ್ಯಾಸದ ವೇಳೆ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರರು ಹುತಾತ್ಮ
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಫಿರಂಗಿ ಕೇಂದ್ರದಲ್ಲಿ ಫೈರಿಂಗ್ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್ ನಿಂದ ಬಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್ ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ನಾಸಿಕ್ ರಸ್ತೆ ಪ್ರದೇಶದ ಫಿರಂಗಿ ಕೇಂದ್ರದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿವೀರರಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು …
Read More »ಜಾಗತಿಕ ಸಮಸ್ಯೆಗೆ ಯುದ್ಧ ಭೂಮಿಯಿಂದ ಪರಿಹಾರ ದೊರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
ವಿಯೆಂಟಿಯಾನ್: ಲಾವೋಸ್ನ ವಿಯೆಂಟಿಯಾನ್ನಲ್ಲಿ ನಡೆದ ಆಸಿಯಾನ್-ಭಾರತ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಸಮಸ್ಯೆಗಳಿಗೆ ಯುದ್ಧ ಭೂಮಿಯಿಂದ ಪರಿಹಾರ ದೊರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಸಂಘರ್ಷಗಳು ಜಾಗತಿಕವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಯುರೇಷಿಯಾ ಅಥವಾ ಪಶ್ಚಿಮ ಏಷ್ಯಾವಾಗಿರಲಿ ಶಾಂತಿ ಮತ್ತು ಸ್ಥಿರತೆಯನ್ನು ಆದಷ್ಟು ಬೇಗ ಪುನಃಸ್ಥಾಪಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆಸಿಯಾನ್ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಬಲಪಡಿಸಲು ಲಾವೋಸ್ನಲ್ಲಿ …
Read More »ಮದರಸಾ ಶಿಕ್ಷಕರ ವೇತನ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ
ಮಹಾರಾಷ್ಟ್ರ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ಮುಸ್ಲಿಂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯಗಳನ್ನು ಓಲೈಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಮದ್ರಸಾ ಶಿಕ್ಷಕರ ವೇತನ ಮತ್ತು ಮೌಲಾನಾ ಆಜಾದ್ ಫೈನಾನ್ಶಿಯಲ್ ಕಾರ್ಪೊರೇಶನ್ನ ಕಾರ್ಯ ಬಂಡವಾಳವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಡಿ ಎಡ್ ಪದವಿ ಹೊಂದಿರುವ ಪ್ರಾಥಮಿಕ ಶಿಕ್ಷಕರಿಗೆ ಅವರ …
Read More »ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆಹಳ್ಳ: ರಸ್ತೆ ಸಂಪರ್ಕ ಸ್ಥಗಿತ
ಗದಗ: ಧಾರವಾಡ ಹಾಗೂ ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದ್ದು ಗದಗ ಜಿಲ್ಲೆಯ ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದ ಬಳಿ ಸೇತುವೆ ಜಲಾವೃತವಾಗಿದ್ದು ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಸೇತುವೆ ಜಲಾವೃತಗೊಂಡಿದ್ದು ರೋಣ ಹಾಗೂ ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ …
Read More »ಕೇಂದ್ರ ಸರ್ಕಾರದಿಂದ ವಿವಿಧ ರಾಜ್ಯಗಳಿಗೆ ತೆರಿಗೆ ಪಾಲು ಹಂಚಿಕೆ
ನವದೆಹಲಿ: ಕೇಂದ್ರ ಸರ್ಕಾರ ತನಗೆ ಸಂದಾಯವಾಗಿ ಜಿಎಸ್ಟಿ ತೆರಿಗೆಯಲ್ಲಿ 1,78,173 ಕೋಟಿ ರೂ ಮೊತ್ತವನ್ನು ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಹಬ್ಬದ ಸೀಸನ್ ಇರುವುದರಿಂದ ಹಾಗೂ ರಾಜ್ಯ ಸರ್ಕಾರಗಳು ಅಭಿವೃದ್ಧಿ ಯೋಜನೆಗಳಿಗೆ ವೆಚ್ಚ ಮಾಡಲು ನೆರವಾಗಲು ಕೇಂದ್ರ ಸರ್ಕಾರ ಮುಂಗಡವಾಗಿ ಒಂದು ಕಂತನ್ನು ಹೆಚ್ಚುವರಿಯಾಗಿ ನೀಡಿದೆ. ಇದರಿಂದಾಗಿ ಈ ಬಾರಿ ರಾಜ್ಯಗಳಿಗೆ ಸಿಕ್ಕ ತೆರಿಗೆ ಪಾಲು ಎರಡು ಪಟ್ಟು ಹೆಚ್ಚಿದೆ. ತೆರಿಗೆ ಹಂಚಿಕೆಯಲ್ಲಿ ಉತ್ತರಪ್ರದೇಶಕ್ಕೆ ಸಿಂಹಪಾಲು ಮುಂದುವರಿದಿದೆ. 1.78 ಲಕ್ಷ ಕೋಟಿ …
Read More »ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಅನುಮೋದನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ. ಗರೀಬ್ ಕಲ್ಯಾಣ ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ. ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಟಿಕಾಂಶಯುಕ್ತ, ಸಾರವರ್ಧಿತ ಅಕ್ಕಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





