ಬೆಂಗಳೂರು : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆ ಪರಿಹರಿಸಿ ಬಡ್ತಿ ನೀಡಲಾಗುವುದು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಕ್ಲರ್ಕ್ ಮತ್ತು ಡಾಟಾ ಎಂಟ್ರಿ ಆಪರೇಟರ್ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ …
Read More »ಕಳಸಾ ಬಂಡೂರಿ ಯೋಜನೆಗೆ ತಕ್ಷಣವೇ ಅನುಮೋದನೆ ನೀಡಲು ಕೇಂದ್ರಕ್ಕೆ ಸರ್ಕಾರ ಆಗ್ರಹ
ಬೆಂಗಳೂರು: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜತೆಗೆ, ವಿಳಂಬ ಮಾಡದೆ ಯೋಜನೆಗೆ ಅನುಮೋದನೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಯೋಜನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದೆ. ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಗಿದೆ. …
Read More »ಸಿಎಂ ಸಿದ್ದರಾಮಯ್ಯ ಅ.13 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಅಕ್ಟೋಬರ್ 13 ರಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ, ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ ಧಾರವಾಡಕ್ಕೆ ಆಗಮಿಸಲಿದ್ದಾರೆ. ಧಾರವಾಡದಲ್ಲಿರುವ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಸಂಭ್ರಮ ಹಾಗೂ ಪ್ರಧಾನ ಕಚೇರಿ ನೂತನ ಕಟ್ಟಡದ ಉದ್ಘಾಟನೆ ಮತ್ತು ಎಫ್.ಟಿ.ನಲವಡಿ ಹಾಗೂ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲರ ಪುತ್ಥಳಿಗಳ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಅವರು ಸತ್ತೂರಿನಲ್ಲಿರುವ ಡಿ. …
Read More »ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಚಹಾ, ಭೋಜನದ ನೆಪದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಜಿ. ಪರಮೆಶ್ವರ್ ಅವರು ಗೌಪ್ಯವಾಗಿ ಸಭೆ ಸೇರಿ ಚರ್ಚಿಸಿರುವ ವಿಚಾರ ಸಭೆಯಲ್ಲಿ ಪ್ರಸ್ತಾವವಾಗಿದೆ. ಈ ವೇಳೆ ಮೂವರು ಸಚಿವರೂ, ಜೊತೆಯಾಗಿ ಊಟ ಮಾಡಿರುವುದನ್ನೇ ಮಾಧ್ಯಮಗಳು ಅಪಾರ್ಥ ಕಲ್ಪಿಸಿಕೊಂಡು …
Read More »ಮುಸ್ಲಿಂರಿಗೂ ಒಳ ಮೀಸಲಾತಿ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿ: ಸಿ.ಟಿ ರವಿ
ಚಿತ್ರದುರ್ಗ: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿ ಅವಲೋಕಿಸಿ ಮುಸ್ಲಿಮರಿಗೂ ಒಳ ಮೀಸಲಾತಿ ನೀಡಬೇಕು. ಆ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದರು. ಮುಸ್ಲಿಮರಲ್ಲಿ 48 ಉಪ ಜಾತಿಗಳಿವೆ. ಅವರಲ್ಲಿಯೂ ಬಡವರಿದ್ದಾರೆ. ಪರಿಶಿಷ್ಟ ಜಾತಿ ಅಷ್ಟೇ ಅಲ್ಲ, ಹಿಂದುಳಿದ ವರ್ಗದಲ್ಲೂ ಒಳಮೀಸಲು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಬಿಜೆಪಿ ಮೀಸಲಾತಿ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಜವಾಹರಲಾಲ್ …
Read More »ಸಚಿವರ ನಿರ್ಧಾರದಿಂದ ಸುಖ್ಯಾಂತಗೊಂಡ ಗ್ರಾ.ಪಂ ನೌಕರರ ಮುಷ್ಕರ
ಬೆಂಗಳೂರು: ಕಳೆದ ಆರು ದಿನಗಳಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ತೆಗೆದುಕೊಂಡ ನಿರ್ಧಾರಗಳಿಂದ ಸುಖಾಂತ್ಯವಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿದರು. ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ತಮ್ಮ …
Read More »ಮಂಡ್ಯದ ಯುವಕನಿಗೆ ಕೇರಳ ಲಾಟರಿಯಿಂದ 25 ಕೋಟಿ ರೂ. ಬಹುಮಾನ
ಮಂಡ್ಯ: ಜಿಲ್ಲೆಯ ವ್ಯಕ್ತಿಯೊಬ್ಬ 500 ರೂಪಾಯಿ ಕೊಟ್ಟು ಕೇರಳದ ಲಾಟರಿ ಟಿಕೆಟ್ ಖರೀದಿಸಿದ್ದರು ಅವರ ಅದೃಷ್ಟ ಖುಲಾಯಿಸಿದೆ. 500 ರೂ ಕೊಟ್ಟು ಖರೀದಿಸಿದಂತ ಲಾಟರಿಗೆ ಬರೋಬ್ಬರಿ 25 ಕೋಟಿ ಬಹುಮಾನ ಬಂದಿದೆ ಈ ಮೂಲಕ ಮಂಡ್ಯದ ಕುವರನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಕೇರಳ ಲಾಟರಿಯಲ್ಲಿ ಮಂಡ್ಯದ ಕುವರನೊಬ್ಬ ಕೋಟಿ ಕೋಟಿ ಗೆದ್ದಿದ್ದಾನೆ. ಪಾಂಡವಪುರ ಪಟ್ಟಣದ ವ್ಯಕ್ತಿಗೆ ಒಲಿದ 25 ಕೋಟಿ ಬಹುಮಾನ ಬಂದಿದೆ. ಪಾಡವಪುರ ನಗರದ ಸ್ಕೂಟರ್ ಮೆಕ್ಯಾನಿಕ್ ಅಲ್ತಾಫ್ …
Read More »ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಿ: ಕೇಂದ್ರ ಸಚಿವ ಸೋಮಣ್ಣ ಆಗ್ರಹ
ತುಮಕೂರು: ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ (ಜಾತಿ ಜನಗಣತಿ) ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು. ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ ಜನಗಣತಿಗೆ ಕಾಂಗ್ರೆಸ್ನಲ್ಲೇ ವಿರೋಧ ವ್ಯಕ್ತವಾಗಿದ್ದು, ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಗಣತಿ ನಡೆಸಬೇಕು ಎಂದು ಆಗ್ರಹಿಸಿದರು. ಜಾತಿ ಜನಗಣತಿ …
Read More »ಸಬ್ ಮರಿನ್ ನಿರ್ಮಾಣ, ಡ್ರೋನ್ ಗಳ ಖರೀದಿಗೆ 80 ಸಾವಿರ ಕೋಟಿ ರೂ: ಕೇಂದ್ರ ರಕ್ಷಣಾ ಸಮಿತಿ ಅನುಮೋದನೆ
ನವದೆಹಲಿ: 2 ಪರಮಾಣು ಸಾಮರ್ಥ್ಯದ ಸಬ್ ಮೇರಿನ್ ನಿರ್ಮಾಣ ಹಾಗೂ 31 ಪ್ರೀಡಿಯೇಟರ್ ಡ್ರೋಣ್ ಗಳ ಖರೀದಿಗೆ 80 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ರಕ್ಷಣಾ ಸಮಿತಿ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರತದ ನೌಕಾಪಡೆ ಬಲವರ್ಧನೆಗೆ ದೊಡ್ಡ ಮೊತ್ತವನ್ನು ವಿನಿಯೋಗಿಸಲು ತೀರ್ಮಾನಿಸಲಾಯಿತು. ಇದರಿಂದ ಭಾರತದ ಬಳಿ ಸಬ್ ಮೇರಿನ್ ಗಳ ಸಂಖ್ಯೆ 5ಕ್ಕೆ ಏರಿಕೆಯಾಗಲಿದೆ, ಸಮುದ್ರದಲ್ಲಿ ಭಾರತ …
Read More »ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿಮಂಡಲ ಸಭೆ
ನವದೆಹಲಿ: ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ ಐತಿಹಾಸಿಕ ವಿಜಯವನ್ನು ದಾಖಲಿಸಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಮಂತ್ರಿಮಂಡಲದ ಸಭೆಯ ಅಧ್ಯಕ್ಷತೆ ವಹಿಸಿದರು ಮತ್ತು ತಮ್ಮ ಸಹೋದ್ಯೋಗಿಗಳಿಗೆ ಉತ್ತಮ ಆಡಳಿತ ಮತ್ತು ಸಾರ್ವಜನಿಕ ಸೇವೆಯ ಸಂದೇಶವನ್ನು ನೀಡಿದರು. ಇದು ಅವರ ಮೂರನೇ ಅವಧಿಯಲ್ಲಿ ಮಂತ್ರಿಮಂಡಲದ ಎರಡನೇ ಸಭೆಯಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ತರಬೇತಿ ವೇದಿಕೆಯಾದ ಐಜಿಒಟಿಯಲ್ಲಿ ಆಯಾ ಇಲಾಖೆಗಳ ಎಲ್ಲಾ ಅಧಿಕಾರಿಗಳು ತಮ್ಮ ತರಬೇತಿ ಮಾಡ್ಯೂಲ್ಗಳನ್ನು ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಸಚಿವರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





