ನವದೆಹಲಿ: ಗರೀಬ್ ಕಲ್ಯಾಣ್ ಅನ್ನ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳಾದ ಮಧ್ಯಾಹ್ನದ ಊಟ, ಉಚಿತ ಪಡಿತರ ಯೋಜನೆ, ಪಿಎಂ ಪೋಶಣ್ ಯೋಜನೆಗಳಂತಹ ಎಲ್ಲಾ ಯೋಜನೆಗಳ ಅಡಿಯಲ್ಲಿ ಅಕ್ಕಿಯ ಪೂರೈಕೆಯನ್ನು ಜುಲೈ 2024 ರಿಂದ ಡಿಸೆಂಬರ್ 2028 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರಿಸಿದ್ದಾರೆ. ದೇಶದ ಬಡ ಜನರಿಗೆ ಮುಂದಿನ 4 ವರ್ಷಗಳವರೆಗೆ ಉಚಿತ ಆಹಾರ ಧಾನ್ಯಗಳು ಸಿಗಲಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಉಚಿತ …
Read More »ಒಳಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಅನಿಲ ಸೇವಿಸಿ ಇಬ್ಬರು ಕಾರ್ಮಿಕರು ಸಾವು
ನವದೆಹಲಿ: ದೆಹಲಿಯ ಸರೋಜಿನಿ ನಗರ ಪ್ರದೇಶದಲ್ಲಿನ ಒಳಚರಂಡಿ ಮಾರ್ಗದಲ್ಲಿ ವಿಷಕಾರಿ ಅನಿಲವನ್ನು ಸೇವಿಸಿದ ಕನಿಷ್ಠ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸರೋಜಿನಿ ನಗರದಲ್ಲಿನ ನಿರ್ಮಾಣ ಸ್ಥಳದಲ್ಲಿ ಒಳಚರಂಡಿ ತೊಟ್ಟಿಯೊಳಗೆ ವಿಷಕಾರಿ ಅನಿಲವನ್ನು ಉಸಿರಾಡಿದ ನಂತರ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾರ್ಮಿಕರು ತೊಟ್ಟಿಯೊಳಗೆ ಸ್ವಚ್ಛಗೊಳಿಸಲು ಹೋದಾಗ ಈ ಘಟನೆ ನಡೆದಿದೆ. ವಿಷಾನಿಲ ಸೇವಿಸಿ ಸಾವನ್ನಪ್ಪಿರುವ ಶಂಕೆ ಇದೆ ತೀವ್ರ ಅಸ್ವಸ್ಥ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇರೆ ಯಾರಾದರೂ ಪ್ರಯತ್ನ ನಡೆಸಿದ್ದರೆ ಅದು ಅವರ ವೈಯಕ್ತಿಕ ವಿಚಾರ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರು ಹಾಗೂ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಲ ನಾಯಕರು ಭೇಟಿಯಾಗಿದ್ದಾರೆ. ಅವರವರ ಪ್ರಯತ್ನ, ಆಸೆ …
Read More »ಜ.28 ರಿಂದ ಉತ್ತರಾಖಂಡ್ ದಲ್ಲಿ ರಾಷ್ಟ್ರೀಯ ಕ್ರೀಡೆಗಳು ಆರಂಭ
ನವದೆಹಲಿ: ಮುಂದಿನ (38ನೇ ಆವೃತ್ತಿಯ) ರಾಷ್ಟ್ರೀಯ ಕ್ರೀಡೆಗಳು ಉತ್ತರಾಖಂಡದಲ್ಲಿ ಜನವರಿ 28 ರಿಂದ ಫೆಬ್ರುವರಿ 14ರವರೆಗೆ ನಡೆಯಲಿವೆ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ಪ್ರಕಟಿಸಿದೆ. ವೇಳಾಪಟ್ಟಿಯು ಮುಂದಿನ ತಿಂಗಳ ಸಾಮಾನ್ಯಸಭೆಯಲ್ಲಿ ಸ್ಥಿರೀಕರಣ ಪಡೆಯಬೇಕಾಗಿದೆ ಎಂದು ಐಒಎ ಹೇಳಿದೆ. ಸಂಸ್ಥೆಯ ಸಾಮಾನ್ಯ ಸಭೆ ಅಕ್ಟೋಬರ್ 25ರಂದು ನಿಗದಿಯಾಗಿದೆ. ರಾಷ್ಟ್ರೀಯ ಕ್ರೀಡೆಗಳನ್ನು ಉತ್ತರಾಖಂಡದಲ್ಲಿ ನಡೆಸಲು ಸಂತಸವಾಗುತ್ತಿದೆ. ಈ ರಾಜ್ಯವು ಈ ಪ್ರತಿಷ್ಠಿತ ಕ್ರೀಡೆಗಳ ಆತಿಥ್ಯ ವಹಿಸಲು ಉತ್ಸಾಹ ಮತ್ತು ಬದ್ಧತೆಯನ್ನು …
Read More »ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಅನುದಾನ ನೀಡುವುದಾಗಿ ಸಚಿವ ಶರಣಪ್ರಕಾಶ್ ಪಾಟೀಲ್ ಭರವಸೆ
ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಸರ್ಕಾರಿ ಅನುದಾನದ ನೆರವಿನ ಅಡಿಯಲ್ಲಿ ಹೆಚ್ಚುವರಿ ಕೋರ್ಸ್ಗಳನ್ನು ಪ್ರಾರಂಭಿಸಲು ಸೂಕ್ತ ಸಹಕಾರ ನೀಡುವುದಾಗಿ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಭರವಸೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಚೇಂಬರ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ಚೇರ್ಮೆನ್ ನಾಗಳ್ಳಿ ರಮೇಶ್ ಅವರು ಸಚಿವರ ಬೆಂಗಳೂರಿನ ಮನೆಯಲ್ಲಿ …
Read More »ಕೆರೆ ಮತ್ತು ಪರಿಸರ ಸಂರಕ್ಷಣೆ ಶ್ರೇಷ್ಠವಾದುದು: ಸಂಸದ ಜಗದೀಶ ಶೆಟ್ಟರ್
ಬೆಳಗಾವಿ: ಸಾಮಾಜಿಕ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುವ ಮೂಲಕ ಧರ್ಮಸ್ಥಳದ ಧರ್ಮಾಧ್ಯಕ್ಷರಾದ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಿಲಜಿ ಗ್ರಾಮ ಪಂಚಾಯಿತಿ, ಶಿಂದೊಳ್ಳಿ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಪುನಃಶ್ಚೇತನಗೊಳಿಸಿದ ಶಿಂದೊಳ್ಳಿ ಸರ್ಕಾರಿ ಕೆರೆ ಹಸ್ತಾಂತರ ಮತ್ತು ಬಾಗಿನ ಅರ್ಪಣೆ ಮಾಡಿ ಮಾತನಾಡಿದರು. ಧರ್ಮಸ್ಥಳ ಯೋಜನೆಯವರು ಜಿಲ್ಲೆಯಲ್ಲಿ ಸುಮಾರು 48 ಕೆರೆಗಳನ್ನು ಹೂಳೆತ್ತಿದ್ದಾರೆ. …
Read More »ಸರ್ಕಾರದಿಂದ ಬಡವರಿಗೆ ಉಚಿತ ಯೋಜನೆಗಳನ್ನು ನೀಡುವುದು ಸರಿಯಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ : ಬಡವರಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಸೌಲಭ್ಯಗಳಿಗೆ ತಮ್ಮ ವಿರೋಧ ಇದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಉಚಿತ ಯೋಜನೆಗಳ ವೆಚ್ಚವನ್ನು ಸರ್ಕಾರ ಭರಿಸೋಕೆ ಅನೇಕ ಸವಾಲುಗಳು ಎದುರಾಗುತ್ತವೆ. ಹೆಚ್ಚು ದಿನ ಯೋಜನೆಗಳನ್ನು ಬಡವರಿಗೆ ನೀಡಲಾಗುವುದಿಲ್ಲ. ಸಂಪನ್ಮೂಲ ಕೊರತೆಯಿಂದ ಅರ್ಧದಲ್ಲಿಯೇ ಕೆಲವು ಯೋಜನೆಗಳು ನೆಲಕಚ್ಚುತ್ತವೆ ಎಂದು ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಯಾವುದೇ ರಾಜ್ಯ ಸರ್ಕಾರ ಉಚಿತವಾಗಿ ಯೋಜನೆಗಳನ್ನು ನೀಡುತ್ತಿದರೆ ಅದಕ್ಕೆ ಪೂರಕವಾಗಿ ಆರ್ಥಿಕ ಸಂಪನ್ಮೂಲ ಅಥವಾ …
Read More »ತುರುವನೂರು ರಸ್ತೆಯ ರೈಲ್ವೆ ಕೆಳ ಸೇತುವೆ ಮಾರ್ಗ ಸರಿಪಡಿಸಲು ಸಂಸದ ಗೋವಿಂದ ಕಾರಜೋಳ ಸೂಚನೆ
ಚಿತ್ರದುರ್ಗ: ನಗರದಿಂದ ಹಾದು ಹೋಗುವ ತುರುವನೂರು ರಸ್ತೆಯಲ್ಲಿ ರೈಲು ಮಾರ್ಗವೂ ಕೂಡಾ ಹಾದು ಹೋಗಿದ್ದು, ಈ ಮಾರ್ಗದ ಮೂಲಕ ಬೆಳಗಟ್ಟ – ತುರುವನೂರು- ಜಗಳೂರು ಮತ್ತು ಬೆಳಗಟ್ಟ – ನಾಯಕನಹಟ್ಟಿ – ಚಳ್ಳಕೆರೆ ಮಾರ್ಗಗಲ್ಲಿ ಹಲವಾರು ಹಳ್ಳಿಗಳಿಗೆ ಇದೇ ರೈಲ್ವೆ ಕೆಳ ಸೇತುವೆ ಮೂಲಕವೇ ಹಾದು ಹೋಗಬೇಕು. ಆದರೆ ಈ ಕೆಳಸೇತುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು. ಪ್ರತಿ ಸಾರಿ ಮಳೆ ಬಂದಾಗ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಲ್ಲುತ್ತದೆ. ಅದೇ …
Read More »ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ 3ನೇ ಘಟಕ ಸ್ಥಾಪನೆ
ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಕಂಪನಿ ತನ್ನ 3ನೇ ಘಟಕವನ್ನು ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಸ್ಥಾಪಿಸಲು ಮುಂದಾಗಿದೆ. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಕಿಡಿಕಾರಿದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಆ ಸ್ಥಾನವನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುತ್ತಿದೆ. ಜತೆಗೆ 21 ಸಾವಿರ ಕೋಟಿ ರೂ.ಗಳ ಬೃಹತ್ ಉದ್ಯಮವನ್ನು ಕೈ ಚೆಲ್ಲಿದೆ ಎಂದು …
Read More »ಮೈಸೂರು ದಸರಾ: ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳ ಪ್ರದರ್ಶನ
ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಕಲೆ, ವಾಸ್ತುಶಿಲ್ಪ, ಪ್ರವಾಸೋದ್ಯಮ, ಜಾನಪದ, ಸಮಾನತೆ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವ ಮೊದಲಾದ ವಿಷಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ದಸರಾ ಸ್ತಬ್ಧಚಿತ್ರ ಉಪ ಸಮಿತಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್ನಲ್ಲಿ ಸ್ತಬ್ಧಚಿತ್ರ ನಿರ್ಮಾಣ ಭರದಿಂದ ಸಾಗಿದ್ದು, ಶೇ 80ರಷ್ಟು ಮುಗಿದಿದೆ. ಅ.11ರ ರಾತ್ರಿ ಅರಮನೆ ಆವರಣ ಪ್ರವೇಶಿಸಲಿವೆ. ಪ್ರದರ್ಶನದಲ್ಲಿ ಒಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





