Breaking News

BigTv News

ಜ.28 ರಿಂದ ಉತ್ತರಾಖಂಡ್ ದಲ್ಲಿ ರಾಷ್ಟ್ರೀಯ ಕ್ರೀಡೆಗಳು ಆರಂಭ

ನವದೆಹಲಿ: ಮುಂದಿನ (38ನೇ ಆವೃತ್ತಿಯ) ರಾಷ್ಟ್ರೀಯ ಕ್ರೀಡೆಗಳು ಉತ್ತರಾಖಂಡದಲ್ಲಿ ಜನವರಿ 28 ರಿಂದ ಫೆಬ್ರುವರಿ 14ರವರೆಗೆ ನಡೆಯಲಿವೆ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ಪ್ರಕಟಿಸಿದೆ. ವೇಳಾಪಟ್ಟಿಯು ಮುಂದಿನ ತಿಂಗಳ ಸಾಮಾನ್ಯಸಭೆಯಲ್ಲಿ ಸ್ಥಿರೀಕರಣ ಪಡೆಯಬೇಕಾಗಿದೆ ಎಂದು ಐಒಎ ಹೇಳಿದೆ. ಸಂಸ್ಥೆಯ ಸಾಮಾನ್ಯ ಸಭೆ ಅಕ್ಟೋಬರ್ 25ರಂದು ನಿಗದಿಯಾಗಿದೆ. ರಾಷ್ಟ್ರೀಯ ಕ್ರೀಡೆಗಳನ್ನು ಉತ್ತರಾಖಂಡದಲ್ಲಿ ನಡೆಸಲು ಸಂತಸವಾಗುತ್ತಿದೆ. ಈ ರಾಜ್ಯವು ಈ ಪ್ರತಿಷ್ಠಿತ ಕ್ರೀಡೆಗಳ ಆತಿಥ್ಯ ವಹಿಸಲು ಉತ್ಸಾಹ ಮತ್ತು ಬದ್ಧತೆಯನ್ನು …

Read More »

ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಅನುದಾನ ನೀಡುವುದಾಗಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಭರವಸೆ

ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಸರ್ಕಾರಿ ಅನುದಾನದ ನೆರವಿನ ಅಡಿಯಲ್ಲಿ ಹೆಚ್ಚುವರಿ ಕೋರ್ಸ್‍ಗಳನ್ನು ಪ್ರಾರಂಭಿಸಲು ಸೂಕ್ತ ಸಹಕಾರ ನೀಡುವುದಾಗಿ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಭರವಸೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಚೇಂಬರ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‍ನ ಚೇರ್ಮೆನ್ ನಾಗಳ್ಳಿ ರಮೇಶ್ ಅವರು ಸಚಿವರ ಬೆಂಗಳೂರಿನ ಮನೆಯಲ್ಲಿ …

Read More »

ಕೆರೆ ಮತ್ತು ಪರಿಸರ ಸಂರಕ್ಷಣೆ ಶ್ರೇಷ್ಠವಾದುದು: ಸಂಸದ ಜಗದೀಶ ಶೆಟ್ಟರ್‌

ಬೆಳಗಾವಿ: ಸಾಮಾಜಿಕ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುವ ಮೂಲಕ ಧರ್ಮಸ್ಥಳದ ಧರ್ಮಾಧ್ಯಕ್ಷರಾದ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಿಲಜಿ ಗ್ರಾಮ ಪಂಚಾಯಿತಿ, ಶಿಂದೊಳ್ಳಿ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಪುನಃಶ್ಚೇತನಗೊಳಿಸಿದ ಶಿಂದೊಳ್ಳಿ ಸರ್ಕಾರಿ ಕೆರೆ ಹಸ್ತಾಂತರ ಮತ್ತು ಬಾಗಿನ ಅರ್ಪಣೆ ಮಾಡಿ ಮಾತನಾಡಿದರು. ಧರ್ಮಸ್ಥಳ ಯೋಜನೆಯವರು ಜಿಲ್ಲೆಯಲ್ಲಿ ಸುಮಾರು 48 ಕೆರೆಗಳನ್ನು ಹೂಳೆತ್ತಿದ್ದಾರೆ. …

Read More »

ಸರ್ಕಾರದಿಂದ ಬಡವರಿಗೆ ಉಚಿತ ಯೋಜನೆಗಳನ್ನು ನೀಡುವುದು ಸರಿಯಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ : ಬಡವರಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಸೌಲಭ್ಯಗಳಿಗೆ ತಮ್ಮ ವಿರೋಧ ಇದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಉಚಿತ ಯೋಜನೆಗಳ ವೆಚ್ಚವನ್ನು ಸರ್ಕಾರ ಭರಿಸೋಕೆ ಅನೇಕ ಸವಾಲುಗಳು ಎದುರಾಗುತ್ತವೆ. ಹೆಚ್ಚು ದಿನ ಯೋಜನೆಗಳನ್ನು ಬಡವರಿಗೆ ನೀಡಲಾಗುವುದಿಲ್ಲ. ಸಂಪನ್ಮೂಲ ಕೊರತೆಯಿಂದ ಅರ್ಧದಲ್ಲಿಯೇ ಕೆಲವು ಯೋಜನೆಗಳು ನೆಲಕಚ್ಚುತ್ತವೆ ಎಂದು ನಿರ್ಮಲ ಸೀತಾರಾಮನ್ ಹೇಳಿದ್ದಾರೆ. ಯಾವುದೇ ರಾಜ್ಯ ಸರ್ಕಾರ ಉಚಿತವಾಗಿ ಯೋಜನೆಗಳನ್ನು ನೀಡುತ್ತಿದರೆ ಅದಕ್ಕೆ ಪೂರಕವಾಗಿ ಆರ್ಥಿಕ ಸಂಪನ್ಮೂಲ ಅಥವಾ …

Read More »

ತುರುವನೂರು ರಸ್ತೆಯ ರೈಲ್ವೆ ಕೆಳ ಸೇತುವೆ ಮಾರ್ಗ ಸರಿಪಡಿಸಲು ಸಂಸದ ಗೋವಿಂದ ಕಾರಜೋಳ ಸೂಚನೆ

ಚಿತ್ರದುರ್ಗ: ನಗರದಿಂದ ಹಾದು ಹೋಗುವ ತುರುವನೂರು ರಸ್ತೆಯಲ್ಲಿ ರೈಲು ಮಾರ್ಗವೂ ಕೂಡಾ ಹಾದು ಹೋಗಿದ್ದು, ಈ ಮಾರ್ಗದ ಮೂಲಕ ಬೆಳಗಟ್ಟ – ತುರುವನೂರು- ಜಗಳೂರು ಮತ್ತು ಬೆಳಗಟ್ಟ – ನಾಯಕನಹಟ್ಟಿ – ಚಳ್ಳಕೆರೆ ಮಾರ್ಗಗಲ್ಲಿ ಹಲವಾರು ಹಳ್ಳಿಗಳಿಗೆ ಇದೇ ರೈಲ್ವೆ ಕೆಳ ಸೇತುವೆ ಮೂಲಕವೇ ಹಾದು ಹೋಗಬೇಕು. ಆದರೆ ಈ ಕೆಳಸೇತುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು. ಪ್ರತಿ ಸಾರಿ ಮಳೆ ಬಂದಾಗ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಲ್ಲುತ್ತದೆ. ಅದೇ …

Read More »

ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ 3ನೇ ಘಟಕ ಸ್ಥಾಪನೆ

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ತನ್ನ 3ನೇ ಘಟಕವನ್ನು ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಸ್ಥಾಪಿಸಲು ಮುಂದಾಗಿದೆ. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಕಿಡಿಕಾರಿದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲೇ ನಂಬರ್‌ ಒನ್‌ ಸ್ಥಾನದಲ್ಲಿತ್ತು. ಇದೀಗ ಆ ಸ್ಥಾನವನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುತ್ತಿದೆ. ಜತೆಗೆ 21 ಸಾವಿರ ಕೋಟಿ ರೂ.ಗಳ ಬೃಹತ್‌ ಉದ್ಯಮವನ್ನು ಕೈ ಚೆಲ್ಲಿದೆ ಎಂದು …

Read More »

ಮೈಸೂರು ದಸರಾ: ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳ ಪ್ರದರ್ಶನ

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಕಲೆ, ವಾಸ್ತುಶಿಲ್ಪ, ಪ್ರವಾಸೋದ್ಯಮ, ಜಾನಪದ, ಸಮಾನತೆ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವ ಮೊದಲಾದ ವಿಷಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ದಸರಾ ಸ್ತಬ್ಧಚಿತ್ರ ಉಪ ಸಮಿತಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ನಲ್ಲಿ ಸ್ತಬ್ಧಚಿತ್ರ ನಿರ್ಮಾಣ ಭರದಿಂದ ಸಾಗಿದ್ದು, ಶೇ 80ರಷ್ಟು ಮುಗಿದಿದೆ. ಅ.11ರ ರಾತ್ರಿ ಅರಮನೆ ಆವರಣ ಪ್ರವೇಶಿಸಲಿವೆ. ಪ್ರದರ್ಶನದಲ್ಲಿ ಒಂದು …

Read More »

ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ.ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಪ್ರಧಾನಮಂತ್ರಿ ಕಾರ್ಯಾಲಯದ ಪ್ರಕಾರ, ನಾಗ್ಪುರದ ಬಾಬಾಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲ್ದರ್ಜೆಗೆ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ಮಾಡಲಿದ್ದು, ಒಟ್ಟು ಅಂದಾಜು ಯೋಜನಾ ವೆಚ್ಚ ಸುಮಾರು 7000 ಕೋಟಿ ರೂ. ಇದು …

Read More »

ರಾಷ್ಟ್ರೀಯ ಉಕ್ಕು ಕಾರ್ಖಾನೆ ಪುನರುದ್ಧಾರ: ನಿರ್ಮಲಾ ಸೀತಾರಾಮನ್, ಚಂದ್ರಬಾಬು ನಾಯ್ಡು ಜೊತೆ ಎಚ್ಡಿಕೆ ಚರ್ಚೆ

ನವದೆಹಲಿ: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಉಕ್ಕು ಕಾರ್ಖಾನೆ – ಆರ್ ಎನ್ ಐ ಎಲ್(ವೈಜಾಗ್ ಸ್ಟೀಲ್) ಯನ್ನು ಪುನರುದ್ಧಾರ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ತಡರಾತ್ರಿ ಮಹತ್ವದ ಸಭೆ ನಡೆಸಿದರು. ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದ್ದು, ಈ ಸಭೆಯು ನವದೆಹಲಿಯ ನಾರ್ಥ್ ಬ್ಲಾಕ್ ನಲ್ಲಿರುವ …

Read More »

ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ: ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಸೂಚನೆ

ಚಿತ್ರದುರ್ಗ: ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಡ ಜನರ ಏಳಿಗೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಬೇಕು. …

Read More »