Breaking News

BigTv News

ನವಲಿ ಅಣೆಕಟ್ಟು ನಿರ್ಮಾಣ ಕುರಿತು ಆಂಧ್ರ, ತೆಲಂಗಾಣ ಸಿಎಂ ಜೊತೆ ಚರ್ಚೆ: ಡಿಸಿಎಂ ಡಿಕೆಶಿ

ರಾಯಚೂರು : ಶಿವಮೊಗ್ಗ ಜಿಲ್ಲೆ ಬಳಿಯ ನವಲಿ ಎಂಬಲ್ಲಿ ಅಣೆಕಟ್ಟು ನಿರ್ಮಾಣ ಸಂಬಂಧ ಒಂದು ತಿಂಗಳ ಒಳಗಾಗಿ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ರೈತ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ತುಂಗಾಭದ್ರ ಅಣೆಕಟ್ಟಿಗೆ ಪರ್ಯಾಯವಾಗಿ ನವಲಿಯಲ್ಲಿ ಅಣೆಕಟ್ಟು ನಿರ್ಮಿಸಬೇಕೆಂದು ಒತ್ತಾಯವಿದೆ. ಅಲ್ಲದೆ, 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ …

Read More »

ಹರಿಯಾಣ, ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶ : ಸಂತಸ ವ್ಯಕ್ತಪಡಿಸಿದ ಜೋಶಿ

ನವದೆಹಲಿ : ಹರಿಯಾಣ ಮತ್ತು ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವಕ್ಕೆ ನಿದರ್ಶನ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಣ್ಣಿಸಿದ್ದಾರೆ. ಜರ್ಮನಿ ಪ್ರವಾಸದಲ್ಲಿರುವ ಸಚಿವರು, ಚುನಾವಣಾ ಫಲಿತಾಂಶ ಕುರಿತು ಟ್ವಿಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. ಅದರಂತೆ ಜಮ್ಮು-ಕಾಶ್ಮೀರದಲ್ಲೂ ಬಿಜೆಪಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸಿದೆ ಎಂದು ಜೋಶಿ ಹೇಳಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಉಳಿಸಿಕೊಳ್ಳಲು …

Read More »

ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ದಿ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿಪಡಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತೀಯ ಅರಣ್ಯ ಸಮೀಕ್ಷೆ ವರದಿಯಂತೆ ಬೆಂಗಳೂರು ಭಾರತದಲ್ಲಿ ಅತಿ ಹೆಚ್ಚು ಭೂ ಪ್ರದೇಶ ಹೊಂದಿರುವ ಮೂರನೇ ನಗರವಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನಗರದಲ್ಲಿ ಸುಮಾರು 89 ಚದರ …

Read More »

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ತೀರ್ಮಾನವನ್ನು ಇಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾಯಿತು. ಈ ಬಾರಿ ದೀಪಾವಳಿ ಹಬ್ಬವೂ ನ.1ರಂದೇ ಇದೆ ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನ.3ರಂದು ಮೆರವಣಿಗೆ ಆಯೋಜಿಸಬೇಕು ಎಂದು ಯುವಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ರಮೇಶ ಸೊಂಟಕ್ಕಿ ಮತ್ತಿತರರು, ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. …

Read More »

ಗ್ರಾ.ಪಂ ಸಿಬ್ಬಂದಿಗಳ ವಿವಿಧ ಬೇಡಿಕೆಗಳ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ: ಸಚಿವ ಶಿವಾನಂದ ಪಾಟೀಲ್

ವಿಜಯಪುರ: ವಿವಿಧ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತಿ ಪಿಡಿಒ ಸೇರಿದಂತೆ ಸಿಬ್ಬಂದಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಭೇಟಿ ನೀಡಿ ಪ್ರತಿಭಟನಾ ನಿರತರ ಬೇಡಿಕೆ ಆಲಿಸಿದರು. ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಸಮಸ್ಯೆಗಳು ಜೊತೆಗೆ ಸಾಮರಸ್ಯದಿಂದ …

Read More »

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಪ್ರಧಾನಿ ಮೋದಿ ಭೇಟಿಯಾದ ಕೇಂದ್ರ ಸಚಿವ ಸೋಮಣ್ಣ

ನವದೆಹಲಿ: ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸುದೀರ್ಘ 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ದಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ದಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಸೋಮಣ್ಣ ಅವರು ಪ್ರಧಾನಮಂತ್ರಿಗಳಿಗೆ ವಿವರಿಸಿದ್ದಾರೆ. ಬೆಂಗಳೂರು ಸಬ್ ಅರ್ಬನ್ ರೇಲ್ವೆ, …

Read More »

ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ: ಫಾರೂಕ್ ಅಬ್ದುಲ್ಲಾ ಘೋಷಣೆ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿದೆ, ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮುಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. ಜನರು ತಮ್ಮ ಜನಾದೇಶ ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ …

Read More »

ಗುತ್ತಿಗೆ ಆಧಾರದ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಲು ಯುಪಿ ಸರ್ಕಾರ ನಿರ್ಧಾರ

ಲಖನೌ: ಸರ್ಕಾರದ ಹೊರಗುತ್ತಿಗೆ ಹಾಗೂ ಗುತ್ತಿಗೆ ಆಧಾರದ ಉದ್ಯೋಗಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ಜಾರಿಗೊಳಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದ 10 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮೇಲೆ ಕಣ್ಣಿಟ್ಟು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ. ಮೂಲಗಳ ಪ್ರಕಾರ, ಈ ಪ್ರಸ್ತಾಪವನ್ನು ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದಲ್ಲಿ ಮಂಡಿಸಿ, ಒಪ್ಪಿಗೆ ಪಡೆಯಲು ನಿರ್ಧರಿಸಿದೆ. …

Read More »

ಈ ತಿಂಗಳ ಅಂತ್ಯದಲ್ಲಿ ಕೆ ಎಸ್ ಆರ್ ಟಿ ಸಿ ಗೆ 2.0 ಐರಾವತ ಬಸ್ ಗಳ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್ಟಿಸಿಯ ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್‌ಗಳನ್ನು ಈ ತಿಂಗಳ ಕೊನೆಯಲ್ಲಿ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ. 2.0 ಐರಾವತ್ ಕ್ಲಬ್ ಕ್ಲಾಸ್ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಶಕ್ತಿಶಾಲಿ ಹ್ಯಾಲೊಜಿನ್ ಹೆಡ್ಲೈಟ್ಗಳು ಮತ್ತು ಡೇ ರನ್ನಿಂಗ್ ಲೈಟ್ಗಳೊಂದಿಗೆ ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿ ನೇವಿಯನ್ ವಿನ್ಯಾಸ ಹೊಂದಿರುವ ಐಷಾರಾಮಿ ಬಸ್ ಇದಾಗಿದೆ. ಹೊಸಕೋಟೆ ಬಳಿ ಇರುವ ವೋಲ್ವೋ ಬಸ್ ತಯಾರಕ ಕಾರ್ಖಾನೆಗೆ …

Read More »

ಹರಿಯಾಣ ವಿಧಾನಸಭಾ ಚುನಾವಣೆ: ಕುಸ್ತಿಪಟು ವಿನೇಶ್ ಫೋಗಟ್ ಗೆ ಗೆಲುವು

ಹರಿಯಾಣ: ಇಂದು (ಅಕ್ಟೋಬರ್ 08) ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇನ್ನು ಜುಲಾನ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣೆ ಆಯೋಗದ ಪ್ರಕಾರ, ಪ್ರಕಾರ 11 ಸುತ್ತಿನ ಮತ ಎಣಿಕೆಯ ಬಳಿಕ ಜೂಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಕ್ಷೇತ್ರದಿಂದ 50,617 ಮತಗಳನ್ನು ಪಡೆಯುವ ಮೂಲಕ 6,050 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹರಿಯಾಣದ 90 …

Read More »