Breaking News

BigTv News

ಸಿದ್ದರಾಮಯ್ಯನವರೆ ಸಿಎಂ ಆಗಿ ಮುಂದುವರೆಯುತ್ತಾರೆ: ಸಚಿವ ಸತೀಶ ಜಾರಕಿಹೊಳಿ

ಮೈಸೂರು: ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ, ಸಿ.ಎಂ. ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು‌. ನಗರದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.‌ ಮಹದೇವಪ್ಪ ಅವರನ್ನು ಭೇಟಿ ಮಾಡಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೋ, 3 ವರ್ಷ ಇರುತ್ತಾರೋ ಎನ್ನುವುದನ್ನು ಪಕ್ಷದ ಹೈಕಮಾಂಡ್ ನಲ್ಲಿ ಕೇಳಬೇಕು. ಸದ್ಯಕ್ಕಂತೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದರು. …

Read More »

ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶವು ಬಿಜೆಪಿಗೆ ಕಪಾಳಮೋಕ್ಷ ಆಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದ್ದು, ಬಿಜೆಪಿ ಅಭೂತಪೂರ್ವ ಗೆಲುವು ಗಳಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಎನ್. ಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಒಂದು ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ …

Read More »

ಇಸ್ರೇಲ್ ದಾಳಿ: ಹಿಜ್ಬುಲ್ಲಾ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿ ಹತ್ಯೆ

ದುಬೈ: ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿ ಹತನಾಗಿದ್ದಾನೆ. ಲೆಬನಾನ್‌ ರಾಜಧಾನಿ ಬೈರೂತ್‌ ಪ್ರದೇಶದಲ್ಲಿ ದಾಳಿ ನಡೆಸಿದ್ದು, ಹಿಜ್ಬುಲ್ಲಾ ಪ್ರಧಾನ ಕಚೇರಿಯ ಕಮಾಂಡರ್ ಸುಹೇಲ್ ಹುಸೇನ್ ಹುಸೇನಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ. ಗಾಜಾಪಟ್ಟಿಯಲ್ಲಿ ಇಸ್ರೇಲ್‌ ಸೇನೆಯು ಮಸೀದಿ ಮತ್ತು ಶಾಲಾ ಕಟ್ಟಡವನ್ನು ಗುರಿಯಾಗಿಸಿ ನಡೆಸಿದ ಪ್ರತ್ಯೇಕ ದಾಳಿಯಲ್ಲಿ 23 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. …

Read More »

ಶಾಸಕ ಜಿ.ಎಸ್ ಪಾಟೀಲರಿಗೆ ವೀರಶೈವ ಸಿರಿ ಪ್ರಶಸ್ತಿ ಪ್ರದಾನ

ನರೇಗಲ್:‌ ಸರಳ ವ್ಯಕ್ತಿತ್ವದ ಹಿರಿಯ ರಾಜಕಾರಣಿ, ರೋಣ ಮತಕೇತ್ರದ ಶಾಸಕ ಜಿ.ಎಸ್.‌ಪಾಟೀಲ ಅವರಿಗೆ ಅಬ್ಬಿಗೇರಿಯಲ್ಲಿ ನಡೆದಿರುವ ದಸರಾ ಧರ್ಮ ಸಮ್ಮೇಳನದಲ್ಲಿ ಇಂದು ವೀರಶೈವ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 1983ರಲ್ಲಿ ರಾಜಕೀಯ ಪ್ರವೇಶ ಮಾಡಿದ ಇವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಲಾ ಕಾಲೇಜು, ಧಾರ್ಮಿಕ ಸ್ಥಳ, ಮೂಲಸೌಕರ್ಯಗಳು ಸೇರಿದಂತೆ ಅನೇಕ ಸುಧಾರಣೆಗಳನ್ನು ಮಾಡಿದ್ದಾರೆ. ನದಿ, ಕಾಲುವೆಯ ಜಲಮೂಲಗಳಿಲ್ಲದ ರೋಣ ಮತಕ್ಷೇತ್ರದಲ್ಲಿ ಅನೇಕ ಕೆರೆಗಳನ್ನು ನಿರ್ಮಾಣ ಮಾಡಿದ್ದಾರೆ. ಮಾತೋಶ್ರೀ ಬಸಮ್ಮನವರ …

Read More »

ಬಾಗಲಕೋಟೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಮಾರಾಟ: ನಾಲ್ವರ ನೋಂದಣಿ

ಬಾಗಲಕೋಟೆ: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಮಾರಾಟಕ್ಕೆ ಕೇವಲ ನಾಲ್ವರು ರೈತರು ಹೆಸರು ನೋಂದಾಯಿಸಿದ್ದರೆ, ಸೂರ್ಯಕಾಂತಿ ಮಾರಾಟಕ್ಕೆ 254 ಮಂದಿ ರೈತರು ಹೆಸರು ನೋಂದಾಯಿಸಿದ್ದಾರೆ. ಪ್ರತಿ ಎಕರೆಗೆ 3 ಕ್ವಿಂಟಲ್‍ನಂತೆ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಲ್ ಸೂರ್ಯಕಾಂತಿ, ಪ್ರತಿ ಎಕರೆಗೆ 2 ಕ್ವಿಂಟಲ್‌ನಂತೆ ಪ್ರತಿ ರೈತರಿಂದ 10 ಕ್ವಿಂಟಲ್‌ ಹೆಸರುಕಾಳು ಖರೀದಿ ಮಾಡಲು ಉದ್ದೇಶಿಸಲಾಗಿದೆ. ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್‍ಗೆ …

Read More »

ರಾಜ್ಯದಲ್ಲಿ 22 ಲಕ್ಷ ಅನರ್ಹ ಪಡಿತರ ಚೀಟಿಗಳ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದೆ. ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ …

Read More »

ಹರಿಯಾಣದಲ್ಲಿ ಕಾಂಗ್ರೆಸ್‌‍ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಭೂಪಿಂದರ್ ಸಿಂಗ್ ಹೂಡಾ

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಭಾರಿ ಕುತೂಹಲ ಕೆರಳಿಸಿದೆ, ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಗಳಿಸಿತ್ತು ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಯಾಚರಣೆ ಕೂಡ ಆರಂಭವಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಟ್ರೆಂಡ್ ಬದಲಾಗಿದ್ದು, ಬಿಜೆಪಿ ಮುನ್ನಡೆ ಗಳಿಸಿದೆ. ಆ ಮೂಲಕ ಹಾವು ಏಣಿಯಾಟ ಮುಂದುವರಿದಿದೆ, ಚುನಾವಣಾ ಆಯೋಗದ ತಾಜಾ ವರದಿಯ ಪ್ರಕಾರ ಬಿಜೆಪಿ 46, ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಏತನ್ಮಧ್ಯೆ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವನ್ನು …

Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಬಗ್ಗೆ ಚರ್ಚೆ: ಕೇಂದ್ರ ಸಚಿವ ಸೋಮಣ್ಣ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂಗವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ಸೋಮವಾರ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಎಲ್ಲಾ …

Read More »

ಮಳೆಯಿಂದಾಗಿ ಅನೇಕ ರಾಜ್ಯಗಳಲ್ಲಿ ಟೊಮೆಟೊ ಬೆಲೆ ಏರಿಕೆ

ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ಟೊಮೆಟೊ ಬೆಳೆಗೆ ಭಾರೀ ಹಾನಿಯಾಗಿದ್ದು, ಹೀಗಾಗಿ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯೂ ಕಮ್ಮಿಯಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಟೊಮೆಟೋ ಬೆಲೆ ಏರಿಕೆಯಾಗಿದೆ, ಮಾರುಕಟ್ಟೆಗೆ ಟೊಮೆಟೋ ಬೇಡಿಕೆ ಜಾಸ್ತಿಯಾಗಿದ್ದು, ಪೂರೈಕೆ ಕಮ್ಮಿಯಾಗಿದೆ. ಇದರಿಂದ ಟೊಮೆಟೋ ಬೆಲೆ ಕೆಲವು ರಾಜ್ಯಗಳಲ್ಲಿ ಕೆಜಿಗೆ 100 ರೂ.ವರೆಗೆ ತಲುಪಿದೆ. ಹೀಗಾಗಿ ನಿರಂತರವಾಗಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಸರ್ಕಾರವು ಟೊಮೆಟೋ ದರ ಕೆಜಿಗೆ 65 ರೂ.ಗೆ ಮಾರಾಟ ಮಾಡಲು ನಿರ್ಧರಿಸಿದೆ. ದೆಹಲಿ …

Read More »

ಕೆಎಂಎಫ್ ಗೆ ಹೆಚ್ಚುವರಿ 250 ಟನ್ ನಂದಿನಿ ತುಪ್ಪ ಪೂರೈಕೆಗೆ ಟಿಟಿಡಿ ಬೇಡಿಕೆ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನ ಕಲಬೆರೆಕೆ ತುಪ್ಪ ಬಳಸಲಾಗಿದೆ ಎಂಬ ವಿಚಾರ ದೇಶದಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನ ಸಮಿತಿ (ಟಿಟಿಡಿ) ಇದೀಗ ಕರ್ನಾಟಕ ಹಾಲು ಒಕ್ಕೂಟಕ್ಕೆ (ಕೆಎಂಫ್) ಮತ್ತೆ ಸುಮಾರು 250 ಟನ್‌ ಶುದ್ಧ ಹಸುವಿನ ತುಪ್ಪ ಪೂರೈಸುವಂತೆ ಕೋರಿದೆ. ಈ ಹಿಂದೆ ತಿರುಪತಿ ಲಡ್ಡು ತಯಾರಿಗೆ ಕೆಎಂಎಫ್ ತುಪ್ಪವನ್ನೇ ಬಳಸಲಾಗುತ್ತಿತ್ತು. ಒಂದೆರಡು ವರ್ಷಗಳ ಹಿಂದೆ ಬೆಲೆ ಹೆಚ್ಚಳ ನೆಪವೊಡ್ಡಿ ಕೆಲವು …

Read More »