ರಾಯಚೂರು: ನಗರಸಭೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಇದೇ ಅಕ್ಟೋಬರ್ 12ರಂದು ನಾಡಹಬ್ಬ ದಸರಾ ಹಬ್ಬದ ಆಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳ ವ್ಯವಸ್ಥೆಗಳಾದ ಕಲಾತಂಡಗಳು, ಕುಂಭ ಮೇಳ, ರಥ, ಕುದುರೆಗಳು, ಹೂ, ಹೂವಿನಹಾರಗಳು, ಊಟ ಹಾಗೂ ಉಪಹಾರ, ನೀರು, ಕ್ಯಾನಗಳು, ಸಪ್ಲಾಯರ್, ಮೈಕ್, ಡಿ.ಜೆ, ಆಮಂತ್ರಣ, ಪಗಡಿ, ಸ್ವಾಗತ ಕಮಾನು ಹಾಗೂ ಇತರೆ ಅವಶ್ಯಕ ಸಾಮಾಗ್ರಿಗಳ ಕುರಿತು ಕೊಟೇಷನ್ ಕರೆಯಲಾಗಿದ್ದು, ಆಸಕ್ತರು 3 ದಿನಗಳ ಒಳಗಾಗಿ ನಗರಸಭೆಗೆ ಅರ್ಜಿಯನ್ನು …
Read More »ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ: ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಭ್ಯವಿದ್ದು, ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 …
Read More »ಯಲಹಂಕ ಬಳಿ 153 ಎಕರೆಯಲ್ಲಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ …
Read More »ಟೊಮೆಟೊಗೆ ಬಂಪರ್ ಬೆಲೆ: ರೈತರ ಮೊಗದಲ್ಲಿ ಸಂತಸ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಪ್ರಮುಖ ತೋಟಗಾರಿಕಾ ಬೆಳೆ ಟೊಮೆಟೊಗೆ ಈಗ ಬಂಪರ್ ಬೆಲೆ ಬಂದಿದ್ದು, ಜೂನ್ ಜುಲೈನಲ್ಲಿ ಉತ್ತಮ ದರವಿತ್ತು ಆ ನಂತರ ದರ ಕುಸಿಯಿತು. ಈಗ ಮತ್ತೆ ಉತ್ತಮ ದರ ಬಂದಿದೆ ಇದರಿಂದ ಸಹಜವಾಗಿ ರೈತರ ಮುಖದಲ್ಲಿ ಸಂತಸ ಮೂಡಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಮಧ್ಯಮ ದರ್ಜೆಯ ಒಂದು ಕೆ.ಜಿ ಟೊಮೆಟೊ ಬೆಲೆ ₹ 80ರಿಂದ 85 ಇದೆ. ಗುಣಮಟ್ಟದ ಹಣ್ಣು ಹೊರ ಜಿಲ್ಲೆ ಮತ್ತು ರಾಜ್ಯಗಳಿಗೆ ರವಾನೆ …
Read More »ದೇಸಿ ಸಾಂಪ್ರದಾಯಿಕ ತಳಿ ರಕ್ಷಣೆಗೆ ಬೀಜ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಯೋಜನೆ
ಬೆಂಗಳೂರು: ದೇಸಿ ಹಾಗೂ ಸಾಂಪ್ರದಾಯಿಕ ತಳಿಗಳನ್ನು ಮುಂದಿನ ಪೀಳಿಗೆಗೆ ಕಾಪಾಡುವ ಉದ್ದೇಶದಿಂದ ಸಮುದಾಯ ಬೀಜ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕಾಗಿ ಈ ವರ್ಷ ಐದು ಕೋಟಿ ಮೀಸಲಿಡಲಾಗಿದೆ ಹೈಬ್ರಿಡ್ ತಳಿಗಳ ಹಾವಳಿ ಹೆಚ್ಚಾಗುತ್ತಿದ್ದು, ಭೂಮಿ ಸತ್ವಕ್ಕೆ ರಾಸಾಯನಿಕ ತೊಡಕಾಗಿದೆ. ರೋಗ ನಿರೋಧಕ ಶಕ್ತಿ ಹೊಂದಿರುವ ದೇಸಿ ತಳಿಗಳು ಕಡಿಮೆ ನೀರಿನಲ್ಲಿಯೂ ಬೆಳೆಯುತ್ತವೆ. ಇದಕ್ಕಾಗಿಯೇ ದೇಸಿ ತಳಿಗಳ ಸಂಗ್ರಹ ಸಂರಕ್ಷಣೆ ಉದ್ದೇಶದಿಂದ ರೈತರಿಗೆ ತರಬೇತಿ, ಮಾರುಕಟ್ಟೆಗೆ ಆದ್ಯತೆ ನೀಡಲು …
Read More »ರಾಜ್ಯದಲ್ಲಿ ಖಾಲಿ ಇರುವ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ನಿಟ್ಟಿನಲ್ಲಿ 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳ ನೇಮಕಾತಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಾತನಾಡಿದ ಅವರು, 371ಜೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿ ಕುರಿತು ಸೂಚನೆ ನೀಡಿದ್ದಾರೆ. 2023ರಲ್ಲಿ ಹೊರಡಿಸಿರುವ ಸುತ್ತೋಲೆ ಅನುಸರಿಸುವ ಕುರಿತು ಕ್ರಮಕ್ಕೆ ಆದೇಶಿಸಿದ್ದಾರೆ. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು …
Read More »ರಾಜ್ಯ ಸರ್ಕಾರ ಜಾತಿಗಣತಿ ಜಾರಿ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಜಾತಿ ಜನಗಣತಿ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗಿಂತ ಮೊದಲಿನಿಂದಲೂ ಹೇಳುತ್ತಾ ಬಂದಿದೆ, ರಾಜ್ಯದಲ್ಲಿ ನಡೆದಿರುವ ವರದಿ ಕುರಿತು ಇಲ್ಲಿನ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಜಾತಿ ಜನಗಣತಿಯಾಗಬೇಕು ಎಂಬ ನಿಲುವನ್ನು ಹೊಂದಿದೆ. ಈ ಬಗ್ಗೆ ಹಲವು ಬಾರಿ ಹೇಳಿಕೆಗಳನ್ನು ನೀಡಲಾಗಿದ್ದು, ರಾಜ್ಯಗಳಿಗೂ ತನ್ನ ಅಭಿಪ್ರಾಯವನ್ನು ರವಾನೆ ಮಾಡಲಾಗಿದೆ. ಕರ್ನಾಟಕ ಸರ್ಕಾರ …
Read More »ಭಾರತ ಮಾಲ್ದೀವ್ಸ್ ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಸಹಿ
ನವದೆಹಲಿ: ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಮಾಲ್ಡೀವ್ಸ್ ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಇಂದು ಸಹಿ ಹಾಕಿದವು. ಈ ಒಪ್ಪಂದದಿಂದಾಗಿ ದ್ವೀಪಸಮೂಹ ರಾಷ್ಟ್ರ ಮಾಲ್ಡೀವ್ಸ್ ಗೆ ವಿದೇಶಿ ವಿನಿಮಯ ಮೀಸಲು ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದು ಸಾಧ್ಯವಾಗಲಿದೆ. ಸುಮಾರು 400 ಮಿಲಿಯನ್ ಡಾಲರ್ (3,000 ಕೋಟಿ ರೂ) ಗಾತ್ರದ ಒಪ್ಪಂದ ಇದಾಗಿದ್ದು, 12 ತಿಂಗಳಿನಿಂದ ಹದಗೆಟ್ಟಿದ್ದ ಭಾರತ- ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧ ಮುಂದಿನ ದಿನಗಳಲ್ಲಿ ಉತ್ತಮಗೊಳ್ಳುವ ನಿರೀಕ್ಷೆ ಇದೆ. ಕಳೆದ ವರ್ಷ ಮಾಲ್ಡೀವ್ಸ್ …
Read More »ಗ್ರಾ.ಪಂ ಗ್ರಾಮಸಭೆಗಳಿಗೆ ಮಾರ್ಗಸೂಚಿ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ ಎಂದು …
Read More »ಪಶ್ಚಿಮ ಬಂಗಾಳದ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 7 ಮಂದಿ ಸಾವು
ಪಶ್ಚಿಮ ಬಂಗಾಳ: ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ. ಬೀರ್ಭೂಮ್ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಕಲ್ಲಿದ್ದಲು ಹೊರತೆಗೆಯಲು ಸ್ಫೋಟ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆಯುವ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ಮತ್ತು ಹಿರಿಯ ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ಓಡಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





