Breaking News

BigTv News

ಮುರುಘಾಶ್ರೀ ಜೈಲಿನಿಂದ ಬಿಡುಗಡೆಗೆ ಕೋರ್ಟ್ ಆದೇಶ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾಶ್ರೀಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಈ ಹಿಂದೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷ್ಯ ವಿಚಾರಣೆ ನಡೆಸುವವರೆಗೂ ಮುರುಘಾಶ್ರೀಯನ್ನು ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ …

Read More »

ಮಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲ ಪತ್ತೆ: ಆರೋಪಿ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಬೃಹತ್‌ ಡ್ರಗ್‌ ಜಾಲವೊಂದನ್ನು ಪತ್ತೆ ಮಾಡಿದ್ದು, ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ …

Read More »

ಜಾತಿ ಗಣತಿ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಕ್ಟೋಬರ್ 10ರ ಗುರುವಾರದಂದು ರಾಜ್ಯ ಸಚಿವ ಸಂಪುಟ ಸಭೆ ಇರೋದಿಲ್ಲ, ವಾಲ್ಮೀಕಿ ಜಯಂತಿ ಹಿನ್ನಲೆಯಲ್ಲಿ ಮುಂದೂಡಲಾಗಿದೆ. ಅಕ್ಟೋಬರ್ 18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಅಂದಿನ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ: ಬಿ ವೈ ವಿಜಯೇಂದ್ರ

ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರಕ್ಕೆ ಸಾಕಷ್ಟು ಮುಜುಗರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜ ಯೇಂದ್ರ ಪುನರುಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಸರ್ಕಾರ ಯಾವುದೇ ಸಂದರ್ಭದಲ್ಲೂ ಬೀಳಬಹುದು. ಸಿದ್ದರಾಮಯ್ಯನವರು ಈಗಲಾದರೂ ಬಂಡತನ ಬಿಟ್ಟು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ …

Read More »

ಬಳ್ಳಾರಿಯನ್ನು ಚೀನಾದ ಬೀಜಿಂಗ್ ನಂತೆ ಮಿಂಚಿಸುವ ಕನಸಿದೆ: ಶಾಸಕ ಜನಾರ್ಧನ ರೆಡ್ಡಿ

ಕೂಡ್ಲಿಗಿ: ಹೊಸಪೇಟೆ, ಬಳ್ಳಾರಿ, ಸಂಡೂರು ವ್ಯಾಪ್ತಿಯ 530 ಚ.ಕಿ.ಮೀ. ವ್ಯಾಪ್ತಿಯಲ್ಲಿ ಕೈಗಾರಿಕೆಗಳು, ತರಬೇತಿ ಕೇಂದ್ರಗಳು, ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಚೀನಾದ ಬೀಜಿಂಗ್‌ನಂತೆ ಭಾರತದಲ್ಲಿ ಬಳ್ಳಾರಿಯನ್ನು ಮಿಂಚುವಂತೆ ಮಾಡುವ ಕನಸಿದೆ ಎಂದು ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ತಿಳಿಸಿದರು. ಹಲವು ವರ್ಷಗಳ ನಂತರ ಮೊದಲ ಬಾರಿಗೆ ಕೂಡ್ಲಿಗಿ ಪಟ್ಟಣಕ್ಕೆ ಆಗಮಿಸಿದ ಶಾಸಕ ಜನಾರ್ದನ ರೆಡ್ಡಿ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ನಿವಾಸದಲ್ಲಿ ನಡೆದ ಮುಖಂಡರ ಸಭೆಯಲ್ಲಿ …

Read More »

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವ ಸತೀಶ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿಯೇ ಸತೀಶ್ ಜಾರಕಿಹೊಳಿ ನಡೆ ಸಂಚಲನ ಮೂಡಿಸಿದೆ, ಸತೀಶ್ ಜಾರಕಿಹೊಳಿ ಅವರು ಇದ್ದಕ್ಕಿದ್ದ ಹಾಗೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಬಂದಿದ್ದರು. ಈ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ ಮೊದಲೇ ರಾಜ್ಯ ರಾಜಕಾರಣದಲ್ಲಿ ಏನೇನೋ ಸುದ್ದಿ ಸದ್ದು ಮಾಡುತ್ತಿದೆ. ಅದರಲ್ಲೂ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರುತ್ತಲೇ ಇದೆ. ಈ ಬೆನ್ನಲ್ಲೇ ಜಾರಕಿಹೊಳಿ ನಡೆ ಚರ್ಚೆ ಹುಟ್ಟು ಹಾಕಿದ್ದು, ಇದೀಗ ಡಿಕೆ ಬ್ರದರ್ಸ್ …

Read More »

ಮಳೆಗಾಲ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ

ಹುಬ್ಬಳ್ಳಿ: ಮಳೆಗಾಲ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ರವರ ಹಾಗೂ ಆರೋಗ್ಯಾಧಿಕಾರಿಗಳಾದ ಶ್ರೀಧರ ದಂಡಪ್ಪನವರ ಅವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ವಿವಿಧ ಪ್ರದೇಶದಲ್ಲಿ ಮಳೆ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಎಣ್ಣೆ ಸಿಂಪಡಿಸುವ ಕಾರ್ಯ ಇಂದು ಜರುಗಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಪದ್ಮಾ ತುಂಬಗಿ …

Read More »

ಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ಚಾಲನೆ

ನವಲಗುಂದ: ತಾಲೂಕಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣುಮಗುವಿಗೆ ಹೂವು ತೆಂಗಿನ ಸಸಿ ಹಾಗೂ ತಾಯಿಗೆ ಸಿಹಿ ನೀಡುವ ಮೂಲಕ ಮಗಳನ್ನು ಉಳಿಸಿ ಮಗುವನ್ನು ಓದಿಸಿ ಅಭಿಯಾನಕ್ಕೆ ತಹಶೀಲ್ದಾರ ಸುಧೀರ ಸಾಹುಕಾರ ಚಾಲನೆ ನೀಡಿದರು. ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿದಿರುವುದು ಕಳವಳಕಾರಿ ಸಂಗತಿ. ‘ಬೇಟಿ ಬಚಾವೋ ಬೇಟಿ ಪಡಾವೋ’ ಇನ್ನೂ ಹೆಚ್ಚಾಗಿ ಅನುಷ್ಠಾನಕ್ಕೆ ಬರಬೇಕಿದೆ ಎಂದರು.

Read More »

ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆ : ಜೋಶಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6000 ರೂ. ಧನಸಹಾಯ ನೀಡುವ ಮೂಲಕ …

Read More »

ಗ್ರಾ.ಪಂ ಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆ ಸೃಜಿಸುವ ಬಗ್ಗೆ ಸರ್ಕಾರ ಸಮಿತಿ ರಚನೆ

ಬೆಂಗಳೂರು: ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆ ಸೃಜಿಸುವ ಬಗ್ಗೆ ಸರ್ಕಾರ ಸಮಿತಿ ರಚನೆ ಮಾಡಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿ.ವಿ. ಅಧ್ಯಯನ ಸಮಿತಿ ಸೋಮವಾರದಿಂದ ಆಯ್ದ 32 ಗ್ರಾಮ ಪಂಚಾಯಿತಿಗಳಿಗೆ ಸಮಿತಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದೆ. ಬೆಳಗಾವಿ, ಧಾರವಾಡ, ರಾಯಚೂರು, ಕೂಪ್ಪಳ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಮಂಡ್ಯ ಮತ್ತು ಕೂಡಗು ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಅಧ್ಯಯನ ಸಮಿತಿ ಪ್ರವಾಸ …

Read More »